Pages

Tuesday, September 14, 2010

ಸಿರಿ ಭೂವಲಯ

ಮೊನ್ನೆ ನನ್ನ ಮಗ ಸುಬ್ರಹ್ಮಣ್ಯನ ಸ್ನೇಹಿತ ಅನಂತ ನಮ್ಮ ಮನೆಗೆ ಬಂದು " ಅಂಕಲ್, ನಮ್ಮ ಬಂಧುಗಳೊಬ್ಬರು ಸುಧಾರ್ಥಿ ಅಂತಾ ಇದಾರೆ. ಅವರ ಪರಿಚಯ ನಿಮಗೆ ಮಾಡಿಕೊಡಬೇಕು, ಅವರು "ಸಿರಿಭೂವಲಯ" ಅನ್ನೋ ಒಂದು ದೊಡ್ದ ಗ್ರಂಥದ ಬಗ್ಗೆ ೨೫-೩೦ ವರ್ಷಗಳಿಂದ ಸಂಶೋಧನೆ ಮಾಡ್ತಾ ಇದಾರೆ. ಅವರ ಮನೆಗೆ ಹೋಗೋಣ, ಯಾವಾಗ ಫ್ರೀ ಟೈಮ್ ಸಿಗುತ್ತೆ? ಹೇಳಿ "ಅಂದ. ಸರಿ ಮುಂದಿನ ಗುರುವಾರ ಭೇಟಿ ಮಾಡಲು ಫಿಕ್ಸ್ ಆಯ್ತು.ಈಮಧ್ಯೆ ನನ್ನ ಮಿತ್ರರಾದ ಸಾಹಿತ್ಯ ಸಂಶೋಧಕರಾದ ಡಾ|| ಶ್ರೀವತ್ಸ.ಎಸ್.ವಟಿ ಯವರು ನಿನ್ನೆ ಹಾಸನ ಆಕಾಶವಾಣಿಗೆ ರೆಕಾರ್ಡಿಂಗ್ ಗೆ ಬಂದಿದ್ದವರು ನಮ್ಮ ಮನೆಗೆ ಬಂದಿದ್ದರು. ಅವರೊಡನೆ ಅನೌಪಚಾರಿಕ ಮಾತುಕತೆ ನಡೆಸುವಾಗ ಅವರೊಡನೆ "ಸಿರಿಭೂವಲಯ" ದ ಬಗ್ಗೆ ಪ್ರಸ್ಥಾಪಿಸಿದೆ. ಅವರು ಆಗಾಗಲೇ ೪-೫ ವರ್ಷಗಳಲ್ಲೇ ತರಂಗ ಪತ್ರಿಕೆಯಲ್ಲಿ ಈ ಬಗ್ಗೆ ವಿಶೇಷ ಲೇಖನ ಬರೆದಿದ್ದಾರೆ. ಅವರೊಡನೆ ನಡೆದ ಮಾತು ಕತೆ ವೇದಸುಧೆಯ ಅಭಿಮಾನಿಗಳಿಗಾಗಿ ಹಾಕಿರುವೆ. ಗುರುವಾರ ಶ್ರೀ ಸುಧಾರ್ಥಿಯವರೊಡನೆ ನಡೆಯುವ ಮಾತುಕತೆಯನ್ನೂ ಇಲ್ಲಿ ಅಪ್ ಲೋಡ್ ಮಾಡುವೆ. ಈ ಬಗ್ಗೆ ವೇದಸುಧೆಯ ಬಳಗದ ಇನ್ಯಾರಿಗಾದರೂ ಮಾಹಿತಿ ಇದ್ದರೆ ದಯಮಾಡಿ ತಿಳಿಸಿ. ಬಹಳ ಅಪರೂಪವಾದ ಅದ್ಭುತವಾದ ಈ ಗ್ರಂಥದ ಪೀಠಿಕೆಯ ಪರಿಚಯ ಮಾಡುವುದರಲ್ಲೇ ೨೫-೩೦ ವರ್ಷದ ಸಂಶೋಧನೆ ಕಳೆದಿದೆ, ಅಂತಾರೆ, ಶ್ರೀ ವಟಿಯವರು. ಅವರ ಮಾತುಗಳನ್ನೇ ಕೇಳಿ.













ತರಂಗ ಪತ್ರಿಕೆಯಲ್ಲಿನ ಅವರ ಬರಹವನ್ನು ತೋರಿಸುತ್ತಾ ವಿವರಣೆ ಕೊಡುತ್ತಿರುವ ಡಾ|| ಶ್ರೀವತ್ಸ.ಎಸ್. ವಟಿ, ಜೊತೆಯಲ್ಲಿ ಹೊಯ್ಸಳ ಟೂರಿಸಮ್ ಪತ್ರಿಕೆಯ ವ್ಯವಸ್ಥಾಪಕರಾದ ಶ್ರೀ ದಾಸೇಗೌಡ.




ಅಂತರ್ಜಾದಲ್ಲೂ ಒಂದಷ್ಟಿದೆ. ನೋಡಿ: http://en.wikipedia.org/wiki/Siribhoovalaya

8 comments:

  1. ಕುತೂಹಲಕಾರಿಯಾಗಿದೆ. ಅವಕಾಶವಾದರೆ ಭೇಟಿಯಾಗಬೇಕು.

    ReplyDelete
  2. ಡಾ|| ಗುರುಮೂರ್ತಿ, ಹಾಗೂ ಶ್ರೀ ನಾಗರಾಜ್
    ಪ್ರತಿಕ್ರಿಯೆಗೆ ಧನ್ಯವಾದಗಳು.

    ReplyDelete
  3. ಸರ್‍ ನಮಸ್ಕಾರ.

    ತರಂಗದಲ್ಲಿ ಸಿರಿಭೂವಲಯದ ಲೇಖನ ೨-೩ ವಾರ ಮಾತ್ರ ಓದಿದ್ದೆ. ಮತ್ತೆ ನನಗೆ ತರಂಗ ಓದಲು ಆಗಿರಲಿಲ್ಲ. ಕುತೂಹಲಭರಿತವಾದುದು ಸಿರಿಭೂವಲಯ ಎಂದು ಮಾತ್ರ ಬಲ್ಲೆ.
    ಧನ್ಯವಾದಗಳು.

    ReplyDelete
  4. ನಾಳೆ ಸುಧಾರ್ಥಿಯವರನ್ನು ಭೇಟಿಯಾಗುತ್ತಿರುವೆ.ಇನ್ನೊಂದಿಷ್ಟು ಮಾಹಿತಿ ಲಭ್ಯವಾಗಬಹುದು, ಬರೆಯುವೆ ಅಥವಾ ಆಡಿಯೋ ಕ್ಲಿಪ್ ಹಾಕುವೆ.ಶ್ರೀ ಚಂದ್ರಶೇಖರ್,ಶ್ರೀ ಸೀತಾರಾಮ್ ಮತ್ತು ಭಟ್ಟರೇ ನಿಮಗೆ ಧನ್ಯವಾದಗಳು.

    ReplyDelete
  5. This comment has been removed by the author.

    ReplyDelete