Pages

Tuesday, December 14, 2010

ಮೂಢ ಉವಾಚ -15


ಕೆಂಡ ಕಾರುವ ಕಣ್ಣು ಗಂಟಿಕ್ಕಿದಾ ಹುಬ್ಬು|
ಅವಡುಗಚ್ಚಿದ ಬಾಯಿ ಮುಷ್ಟಿ ಕಟ್ಟಿದ ಕರವು||
ಕಂಪಿಸುವ ಕೈಕಾಲು ಬುಸುಗುಡುವ ನಾಸಿಕ|
ಕ್ರೋಧಾಸುರಾವಾಹಿತ ನರನೆ ರಕ್ಕಸನು ಮೂಢ||


ಕಣ್ಣಿದ್ದು ಕುರುಡಾಗಿ ಕಿವಿಯಿದ್ದು ಕಿವುಡಾಗಿ|
ವಿವೇಕ ಮರೆಯಾಗಿ ಕ್ರೂರತ್ವ ತಾನೆರಗಿ||
ತಡೆಯಬಂದವರನೆ ತೊಡೆಯಲುದ್ಯುಕ್ತ|
ಕ್ರೋಧಾಸುರಾವಾಹಿತ ನರನೆ ರಕ್ಕಸನು ಮೂಢ||


ಕೋಪದಿಂದಲೆ ವಿರಸ ಕೋಪದಿಂದಲೆ ನಿಂದೆ|
ಕೋಪದಿಂದಲೆ ನಾಶ ಕೋಪದಿಂದಲೆ ಭಯವು||
ತನ್ನ ತಾ ಹಾಳ್ಗೆಡವಿ ಪರರನೂ ಬಾಳಿಸದ|
ಕೋಪಿಷ್ಠರವರು ಪಾಪಿಷ್ಠರೋ ಮೂಢ||

ಸರಸ ಸಂತಸವಿಲ್ಲ ಮನಕೆ ನೆಮ್ಮದಿಯಿಲ್ಲ|
ಮಾತಿಲ್ಲ ಕತೆಯಿಲ್ಲ ನಗುವು ಮೊದಲೇ ಇಲ್ಲ||
ಕೋಪಿಷ್ಠರಾ ಮನೆಯು ಸೂತಕದ ಅಂಗಣವು|
ಕೋಪವದು ನರಕದ್ವಾರವೋ ಮೂಢ||
*****************
-ಕವಿನಾಗರಾಜ್.

2 comments:

  1. ಕೋಪಗೊಂಡಾಗ ಮೂಢನ ನೆನಪಾದರೆ ನೆತ್ತಿಗೇರಿದ್ದ ಪಿತ್ತ ಇಳಿದೀತು!!

    ReplyDelete