Pages

Monday, July 23, 2012

ವಿಶೇಷ ರೀತಿಯ ಹುಟ್ಟುಹಬ್ಬ!

ದಿನಾಂಕ 22.7.2012 ಭಾನುವಾರ ನಮಗೆಲ್ಲಾ ಹಬ್ಬದ ವಾತಾವರಣ. ಎರಡು ಕಾರ್ಯಕ್ರಮಗಳು. ಎರಡರಲ್ಲೂ ತಿಪಟೂರು ಚಿನ್ಮಯಾ ಮಿಷನ್ನಿನ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರು ಪಾಲ್ಗೊಂಡಿದ್ದು ನಮ್ಮೆಲ್ಲರ ಸಂತಸವನ್ನು ಇಮ್ಮಡಿಗೊಳಿಸಿತ್ತು. ಹಾಸನದಲ್ಲಿ ಆರಂಭವಾದ ಚಿನ್ಮಯ ಸತ್ಸಂಗದ ಎರಡನೇ ತಿಂಗಳ ಕಾರ್ಯಕ್ರಮ ಒಂದಾದರೆ, ಎರಡನೆಯದು ಬೆಂಗಳೂರಿನಲ್ಲಿರುವ ಮಗುವಿನ ಹುಟ್ಟುಹಬ್ಬವನ್ನು   ಹಾಸನದ ವೃದ್ಧಾಶ್ರಮದಲ್ಲಿ  ಆಚರಿಸಿದ್ದುದು!! ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜರದ್ದು ಯಾವಾಗಲೂ ವಿಶಿಷ್ಟವಾದ ಚಿಂತನೆ. ಬೆಂಗಳೂರಿನಲ್ಲಿರುವ ಮಗಳು ಬಿಂದು ಅಪ್ಪನಿಗೆ ಹೇಳಿದಳು "ಅಕ್ಷಯಳ ಹುಟ್ಟುಹಬ್ಬಕ್ಕೆ ಏನಾದರೂ ಒಂದಿಷ್ಟು ದಾನ ಕೊಡಬೇಕು, ಯಾವುದಾದರೂ ದೇವಸ್ಥಾನಕ್ಕೆ ಹಣ ಕೊಡೋಣ"
ನಾಗರಾಜ್ ಹೇಳಿದರು, "ನೋಡಮ್ಮಾ  ಜೀವಂತ ದೇವರಿಗೆ ಕೊಟ್ಟರೆ ಸಾರ್ಥಕ ವಾಗುತ್ತೆ!"
"ಏನು ಹಾಗಂದ್ರೆ?" ಮಗಳು ಕೇಳಿದಳು.
"ನೋಡು ಬಿಂದು, ಈ ಸಮಾಜದಲ್ಲಿ ಜನರು ಒಳ್ಳೆಯ ರೀತಿಯಲ್ಲಿಯಲ್ಲಾಗಲೀ, ಕೆಟ್ಟ ರೀತಿಯಲ್ಲಾಗಲೀ  ಬೇಕಾದಷ್ಟು ಹಣ ಮಾಡ್ತಾರೆ, ಸಾಮಾನ್ಯವಾಗಿ ತಾವು ಮಾಡಿದ ಪಾಪ ಹೋಗಿಬಿಡುತ್ತೆ, ಅನ್ನೋ ಭ್ರಮೆಯಲ್ಲಿ ದೇವಸ್ಥಾನಗಳಿಗೆ ಸಾಕಷ್ಟು ಹಣ ಕೊಡ್ತಾರೆ. ಹಾಗಾಗಿ ದೇವಸ್ಥಾನಗಳಿಗೆ ಹಣ ಕೊಡುವ ಜನರು ಸಮಾಜದಲ್ಲಿ ಸಾಕಷ್ಟು ಇದ್ದಾರೆ. ಅದರ ಬದಲು  ನಿನ್ನ ಮಗಳ ಹುಟ್ಟುಹಬ್ಬವನ್ನು ಯಾವುದಾದರೂ  ಅನಾಥಾಶ್ರಮದಲ್ಲೋ, ಅಥವಾ ವೃದ್ಧಾಶ್ರಮದಲ್ಲೋ  ಮಾಡೋಣ. ಅಲ್ಲಿನ ನಿವಾಸಿಗಳೊಡನೆ ಸಂತೋಷ ಹಂಚಿಕೊಳ್ಳೋಣ. ಅವರೆಲ್ಲಾ ಜೀವಂತ ದೇವರುಗಳು. ಈ ದೇವರುಗಳ ಮನಸ್ಸನ್ನು ಸ್ವಲ್ಪ ಸಂತೋಷ ಪಡಿಸಿದರೆ ಭಗವಂತ ಮೆಚ್ಚುತ್ತಾನೆ."
ತಂದೆಯ ಮಾತಿಗೆ ಮಗಳು,ಅಳಿಯ ಒಪ್ಪಿದರು. "ನೀವೇ ಏನು ಬೇಕಾದರೂ ಪ್ಲಾನ್ ಮಾಡಿ, ಹಣ  ನಮ್ಮದು, ಪ್ಲಾನ್ ನಿಮ್ಮದು" ಎಂದರು. ಸರಿ. ಯೋಜನೆ ರೂಪಿಸಿದ್ದಾಯ್ತು. ಹೇಗೂ   ನಮಗೆಲ್ಲಾ ಪರಿಚಿತರಾದ  ಡಾ. ಹೆಬ್ಬಾರ್  ವೃದ್ಧಾಶ್ರಮವನ್ನು ನಡೆಸುತ್ತಿದ್ದಾರೆ, ಮಳೆಗಾಲ ಬೇರೆ!  ಅಲ್ಲಿನ ನಿವಾಸಿಗಳಿಗೆ  ಬೆಚ್ಚಗಿನ ಸ್ವೆಟರ್ ಮತ್ತು ಟವೆಲುಗಳನ್ನು ಕೊಡಲು ತೀರ್ಮಾನಿಸಿ ಕಾರ್ಯಕ್ರಮ ನಿಶ್ಚಯ ಗೊಳಿಸಿದ್ದಾಯ್ತು. ದಿನಾಂಕ 22.7.2012 ರಂದು ಸತ್ಸಂಗ ನಡೆಸಲು ತಿಪಟೂರು ಚಿನ್ಮಯ ಮಿಷನ್ನಿನ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರು ಬರುತ್ತಾರೆ, ಅವರಿಂದ ಅಲ್ಲೂ ಒಂದು ಸತ್ಸಂಗ ಮಾಡಿ  ಸ್ವೆಟರ್ ವಿತರಿಸಿ, ಎಲ್ಲರೊಡನೆ ಸಿಹಿ ಊಟಮಾಡಿಬರಲು ತೀರ್ಮಾನಿಸಿದೆವು.
    ಈಶಾವಾಸ್ಯಮ್ ನಲ್ಲಿ ಸಂಜೆ 6.00 ರಿಂದ 7.00 ರವರಗೆ ಸತ್ಸಂಗ ನಡೆದ ಕೂಡಲೇ ನಾಲ್ಕು ಕಾರುಗಳು ವೃದ್ಧಾಶ್ರಮತ್ತ ಹೊರಟವು. ವೃದ್ಧಾಶ್ರಮದಲ್ಲಿ ಕೆಲವು ಮಕ್ಕಳಿಗೂ  ಆಶ್ರಯ ಕೊಟ್ಟಿದ್ದಾರೆ. ಆ  ಮಕ್ಕಳಂತೂ ಕುಳಿದು ಕುಪ್ಪಳಿಸಿದವು. ಸುಧರ್ಮ ಚೈತನ್ಯರ ಸವಿಯಾದ ಮಾತುಗಳು, ಭಜನೆ, ಮಕ್ಕಳ ಒಡನಾಟದಿಂದ ಎಲ್ಲರೂ ಆನಂದ ಸಾಗರದಲ್ಲಿ ತೇಲಿದೆವು.  'ಅಕ್ಷಯಾ,  ನೀನು ನೂರ್ಕಾಲ ಬಾಳಮ್ಮಾ' ಎಂದು ಎಲ್ಲರೂ ಹರಸುತ್ತಾ ಬಿಂದು ಮತ್ತು  ಅವರ ಪತಿ ರಘು ಅವರ ಉದಾರತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಭಗವಂತನು  ಅವರ ಕುಟುಂಬಕ್ಕೆ ಆಯುರಾರೋಗ್ಯ ಐಶ್ವರ್ಯವನ್ನು ದಯಪಾಲಿಸಲೆಂದು ಹರಸಿದೆವು. ಅಂತೂ  ಒಂದು ವಿಶೇಷ ಕಾರ್ಯಕ್ರಮವನ್ನು ರೂಪಿಸಿದ ಕೀರ್ತಿ ಕವಿನಾಗರಾಜರಿಗೂ ಮತ್ತು ಅವರ  ಪತ್ನಿ ಶ್ರೀಮತಿ ಭಾರತಿಯವರಿಗೂ ಸಲ್ಲುತ್ತದೆ. ವೇದಸುಧೆಯ ಓದುಗ ಮಿತ್ರರೂ ಕೂಡ  ತಮ್ಮ ಮನೆಯ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಈ ಆಶ್ರಮದಲ್ಲಿ ಆಚರಿಸಬಹುದೆಂದು ತಿಳಿಸುತ್ತಾ ಹೀಗೆ ಮುಂದೆ  ಬರುವ ಎಲ್ಲರಿಗೂ ತನ್ನ ಎಲ್ಲಾ ಸಹಕಾರವನ್ನೂ ನೀಡಲು ವೇದಸುಧೆ ಬಳಗ ಮತ್ತು ಹಾಸನದ ಚಿನ್ಮಯ ಸತ್ಸಂಗವು ಸಿದ್ಧವಿದೆ ಎಂದು ತಿಳಿಸಲು ಸಂತೋಷಿಸುತ್ತೇವೆ.

                    ವೃದ್ಧಾಶ್ರಮದಲ್ಲಿ ಒಟ್ಟು ಸುಮಾರು ಅರವತ್ತು ಜನ ನಿವಾಸಿಗಳಿದ್ದು  ಒಂದು ದಿನದ ಊಟೋಪಚಾರಕ್ಕೆ ಐದು ಸಾವಿರ ರೂಗಳನ್ನು ನಿಗದಿಪಡಿಸಿರುತ್ತಾರೆ. 


ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ಅಜ್ಜಿ ನೀವು ಬೆಚ್ಚಗಿರಬೇಕು

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ಬೆಂಗಳೂರಿನಲ್ಲಿರುವ ಮೊಮ್ಮಗಳ ಹುಟ್ಟುಹಬ್ಬವನ್ನು 
 ಹಾಸನದ ವೃದ್ಧಾಶ್ರಮದಲ್ಲಿ ಆಚರಿಸುವಾಗ 
 ಕವಿ ನಾಗರಾಜ್  ತಮ್ಮನ್ನು ತಾವು ಮರೆತಿದ್ದರು.

ವೃದ್ಧಾಶ್ರಮದ ಮಕ್ಕಳೊಡನೆ ಹೆಚ್.ಎಸ್.ರಮೇಶ್








5 comments:

  1. ಆತ್ಮೀಯ ಶ್ರೀಧರ್,
    ಅನಿವಾರ್ಯ ಕಾರಣಗಳಿಂದ ನಾನು ಈ ಸತ್ಸಂಗಕ್ಕೆ ಬರಲಾಗಲಿಲ್ಲ. ಆದರೆ, ಆ ಕೊರಗು ನನ್ನಲ್ಲಿ ಉಳಿಯದ ಹಾಗೆ ಎಲ್ಲವನ್ನು ಕಳುಹಿಸಿದ್ದೀರಿ. ಕೇಳಿ, ನೋಡಿ ಸಂತೋಷವಾಯಿತು. ನಿಮ್ಮ ಮತ್ತು ನಾಗರಾಜ್ ಉತ್ಸಾಹ ಮತ್ತೊಬ್ಬರಿಗೆ ಮಾರ್ಗದರ್ಶಿ.
    ಧನ್ಯವಾದಗಳು

    ReplyDelete
  2. ಇವತ್ತಿಗೆ ಮುಗಿಯಲಿಲ್ಲವಲ್ಲಾ ಪ್ರಕಾಶ್, ಈ ರೀತಿಯ ಕಾರ್ಯಕ್ರಮಗಳಲ್ಲಿ ಜೊತೆ ಜೊತೆಯಲ್ಲಿ ಸಾಗೋಣ.

    ReplyDelete
  3. ಪ್ರಿಯ ಶ್ರೀಧರ್, ಒಳ್ಳೆಯ ರೀತಿಯಲ್ಲಿ ಶೀಘ್ರವಾಗಿ ಪ್ರಕಟಿಸಿರುವ ಆಡಿಯೋಗಳು, ಚಿತ್ರಲೇಖನಗಳು ಚೆನ್ನಾಗಿವೆ. ನಿಮ್ಮ ಮೆಚ್ಚುಗೆಯ ಮಾತುಗಳಿಗೆ ಧನ್ಯವಾದಗಳು.

    ReplyDelete
  4. ವಾಸ್ತವ ಅಂಶಗಳನ್ನು ತಿಳಿಸಿದ್ದೇನಷ್ಟೆ.ಧನ್ಯವಾದಗಳು.

    ReplyDelete
  5. ಅಕ್ಷತಳ ಫೋಟೋ ಹಾಕಿ ಒಳ್ಳೆಯದು ಮಾಡಿದಿರಿ

    ReplyDelete