Pages

Showing posts with label ಚಿಂತನೆ. Show all posts
Showing posts with label ಚಿಂತನೆ. Show all posts

Thursday, February 7, 2013

“ಹಿಂದು” ಈ ದೇಶದ ಹೆಸರು


    ಮತ ಎಂದರೇನು? ಚುನಾವಣೆ ಬಂದಾಗ ಸಹಜವಾಗಿ ಕೇಳುವ ಮಾತು " ನಿಮ್ಮ ಮತ ಯಾರಿಗೆ? " ಅಂದರೆ ನೀವು ಯಾರನ್ನು ಒಪ್ಪುತ್ತೀರಿ? ನಿಮ್ಮ ಅಭಿಪ್ರಾಯವೇನು? ಮತ-ಧರ್ಮದ ಹೆಸರು ಬಂದಾಗಲೂ ಇದೇ ಆಧಾರದಲ್ಲಿ ಅರ್ಥಮಾಡಿಕೊಳ್ಳಬೇಕು. ಮತ ಎಂದೊಡನೆ ಅದಕ್ಕೊಬ್ಬ ಸ್ಥಾಪಕ/ಪ್ರವಾದಿ.          [ ಪ್ರವಾದಿ ಎಂದರೆ   ವಿಶೇಷ ವಾಗಿ ವಿಚಾರ ಮಂಡಿಸುವವನು] ಅದಕ್ಕೊಂದು ಆಧಾರ ಗ್ರಂಥ.
ಹೀಗೆ  ವಿಚಾರ ಮಾಡುವಾಗ ನಮ್ಮ ಮುಂದೆ ಕ್ರೈಸ್ತ, ಇಸ್ಲಾಮ್, ಜೈನ, ಬೌದ್ಧ.......ಹೀಗೆ ಹಲವು ಮತಗಳು ಕಣ್ಣೆದುರು ಬರುತ್ತ್ತವೆ. ಕ್ರೈಸ್ತ ಮತದ ಪ್ರವಾದಿ ಏಸೂಕ್ರಿಸ್ತ, ಆಧಾರ ಗ್ರಂಥ ಬೈಬಲ್,ಅನುಯಾಯಿಗಳು ಕ್ರೈಸ್ತರು,  ಇಸ್ಲಾಮ್ ಸ್ಥಾಪಕ/ಪ್ರವಾದಿ ಮೊಹಮದ್ ಪೈಗಂಬರ್.ಆಧಾರಗ್ರಂಥ ಖುರಾನ್. ಅನುಯಾಯಿಗಳು ಮುಸಲ್ಮಾನರು. ಹೀಗೆಯೇ ಜೈನರು, ಬೌದ್ಧರು, ಸಿಕ್ಖರು.....ಮುಂತಾದ ಉಧಾಹರಣೆಗಳು ಬರುತ್ತವೆ. 
 ಆದರೆ ಹಿಂದು ಹೆಸರು ಬಂದಾಗ ಇದು ಮತವೇ? ಇದರ ಸ್ಥಾಪಕರಾರು? ಇದರ ಧರ್ಮಗ್ರಂಥ ಯಾವುದು? ಎಂದು ವಿಚಾರ ಮಾಡಿದಾಗ  ಒಬ್ಬ ಪ್ರವಾದಿಗೆ ,ಒಂದು  ಮತಗ್ರಂಥಕ್ಕೆ ಇದು ಸೀಮಿತವಾಗುವುದಿಲ್ಲ. ಹಾಗಾಗಿ ಇದು ಒಂದು ಮತವೇ ಅಲ್ಲ   , ನಿಜವಾದ ಮತವೆಂದರೆ ಕ್ರೈಸ್ತ, ಇಸ್ಲಾಮ್ ಉಳಿದವರೇನಿದ್ದರೂ ನೂರಾರು ಜಾತಿಗಳಲ್ಲಿ ಹಂಚಿಹೋಗಿರುವವರು ಎಂದು ವಾದ ಮಾಡುವ ಜನರಿದ್ದಾರೆ. 
ಹಾಗಾದರೆ   " ಹಿಂದು "  ಎಂದರೇನು? 
ಹಿಂದು ಎಂಬುದು ಈ ದೇಶದ ಹೆಸರು, ಇಲ್ಲಿನ ಸಂಸ್ಕೃತಿಯ ಹೆಸರು, ಇಲ್ಲಿನ ಪರಂಪರೆಯ ಹೆಸರು. ಇಲ್ಲಿನ ಧರ್ಮದ ಹೆಸರು. ಧರ್ಮ ಎಂದೊಡನೆ ವಿಚಲಿತರಾಗುವ ಅಗತ್ಯವಿಲ್ಲ. ಧರ್ಮ ಎಂದರೆ ಜೀವನ ಪದ್ದತಿ. ಮಾನವೀಯ ಮೌಲ್ಯಗಳನ್ನು ಧರಿಸಿಕೊಂಡು ನಡೆಸುವ ಜೀವನ ಪದ್ದತಿ ಯೇ ಧರ್ಮ. ಆದರೆ ದುರ್ದೈವ ವೆಂದರೆ ಧರ್ಮದ ಹೆಸರಲ್ಲಿ ಈ ದೇಶದಲ್ಲಿ ಸಂಘರ್ಷ ನಡೆಯುತ್ತದೆ. 
ಸಾವಿರಾರು ಋಷಿಮುನಿಗಳು ತಪಸ್ಸನ್ನು ಮಾಡಿ ಕಂಡುಕೊಂಡ ಜೀವನ ಮಾರ್ಗವೇ ಧರ್ಮ. ಯಾಕೆ ಇದನ್ನು ಹಿಂದು ಧರ್ಮವೆಂದು ಕರೆದರು? ಯಾಕಾಗಿ ಇದನ್ನು ಹಿಂದು ದೇಶವೆಂದು ಕರೆದರು?
ಆಧಾರ ವಿದೆ.......
ಬೃಹಸ್ಪತಿ ಆಗಮದಂತೆ  ಹಿಮಾಲಯ ಪದದ “ಹಿ” ಮತ್ತು ಇಂದು ಸರೋವರದ  “ಇಂದು” ಪದಗಳೆ ಸೇರಿ “ಹಿಂದು” ಆಗಿದೆ. ಇವೆರಡೂ ಕೂಡಿ ನಮ್ಮ ಮಾತೃಭೂಮಿಯ ವಿಸ್ತಾರವನ್ನು ಹೇಳುತ್ತದೆ.
ಹಿಮಾಲಯಮ್ ಸಮಾರ್ಭ್ಯ ಯಾವದಿಂ ದು   ಸರೋವರಮ್
ತಮ್ ದೇವ ನಿರ್ಮಿತಮ್ ದೇಶಂ ಹಿಂದುಸ್ಥಾನಮ್ ಪ್ರಚಕ್ಷತೇ||

ಅಂದರೆ ದೇವತೆಗಳಿಂದ ನಿರ್ಮಿತಿಗೊಂಡು ಉತ್ತರದ ಹಿಮಾಲಯದಿಂದ ದಕ್ಷಿಣದ  ಹಿಂದು ಮಹಾಸಾಗರದ ವರಗೆ ಪಸರಿಸಿರುವ ಈ ನಾಡನ್ನು ಹಿಂದುಸ್ಥಾನ ಎಂದು ಕರೆಯುತ್ತಾರೆ.
ಅಂದರೆ ಈ ದೇಶದ ಹೆಸರು “ಹಿಂದುಸ್ಥಾನ”. ಇಲ್ಲಿರುವವರು “ಹಿಂದುಗಳು” .ಅಷ್ಟೆ. very simple. ಆದರೆ  “ಹಿಂದು” ಎಂಬ ಶಬ್ಧಕ್ಕೆ  ಯಾಕೆ ಇಷ್ಟು ಸಂಘರ್ಷ? ನಮ್ಮ ಒಬ್ಬ ನಾಯಕರಂತೂ ಹೇಳಿಯೇ ಬಿಟ್ಟರು “ ನನ್ನನ್ನು    ಕತ್ತೆ ಎಂದು ಬೇಕಾದರೂ ಕರೆಯಿರಿ, ನನ್ನನ್ನು “ಹಿಂದು” ಎಂದು ಮಾತ್ರ ಕರೆಯಬೇಡಿ. ಅವರನ್ನು ಕತ್ತೆ ಎಂದೇ ಜನರುಬೇಕಾದರೆ ಕರೆದುಕೊಳ್ಳಲಿ. ನಮ್ಮ ಮತ್ತೊಬ್ಬ ನಾಯಕರು ಹೇಳಿದ್ದರು “ Un fortunately I took birt as Hindu” ನಮ್ಮ ಧರ್ಮ ಶಾಸ್ತ್ರಗಳು ಹೇಳುತ್ತವೆ “ “ಇದು ದೇವ ನಿರ್ಮಿತ ದೇಶ-ಹಿಂದುಸ್ಥಾನ”  ಆದರೆ ನಮ್ಮ ನಾಯಕ ಶಿರೋಮಣಿ ಇಲ್ಲಿ ದುರ್ದೈವದಿಂದ ಹುಟ್ಟಿದರಂತೆ.
ಅಂದರೆ ರಾಜಕಾರಣಿಗಳು “ಎಲ್ಲಿ ಮುಸ್ಲಿಮ್ ಮತಗಳು ತಮಗೆ ಬರುವುದಿಲ್ಲವೋ ಎಂದು ಹೆದರಿ ಮುಸಲ್ಮಾನರನ್ನು ಓಲೈಸಲು “ ನಾನು ಹಿಂದುವೇ ಅಲ್ಲ, ನಾನು ಹಿಂದುವಾಗಿರುವುದು ನನ್ನ ದುರ್ದೈವ” ಎನ್ನುವ  ಇವರನ್ನು  ಮುಸಲ್ಮಾನರೂ ನಂಬುವುದಿಲ್ಲವೆಂಬ ಸತ್ಯ ಇವರಿಗೆ ಗೊತ್ತಿಲ್ಲ. “ ನಮ್ಮ ಓಟಿಗಾಗಿ ತಮ್ಮವರನ್ನೇ ಹೀಯಾಳಿಸುವ ಇವನನ್ನು ಗೆಲ್ಲಿಸಿದರೆ  ನಮಗೆ ಒಳ್ಳೆಯದು ಮಾಡುತ್ತಾನೆಂಬ ನಂಬಿಕೆ ಏನು? ಎಂದು ಮುಸಲ್ಮಾನರೂ ಇವನನ್ನು ದೂರವಿಡುವ ಕಾಲ ದೂರವಿಲ್ಲ.
ಓಟಿನ ರಾಜಕಾರಣ ಬದಿಗಿರಲಿ. ಆದರೆ “ನಾನು ಹಿಂದು” ಎನ್ನಲು ನಾಚಿಕೆ ಪಡಬೇಕೇ?
ಈ ವಿಷಯವನ್ನು  ಭಾರತೀಯರೆಲ್ಲರೂ ಗಟ್ಟಿಮಾಡಿಕೊಳ್ಳ  ಬೇಕು.  ಈ ದೇಶದಲ್ಲಿ ಹುಟ್ಟಿರುವ ನಾನು ಮೊದಲು “ಹಿಂದು” ಅಂದರೆ ಹಿಂದುಸ್ಥಾನದ ಪ್ರಜೆ. ಭಾರತೀಯನೆಂದರೂ ತಪ್ಪಿಲ್ಲ. ನಾವೇಕೆ ಭಾರತೀಯರೆಂದು ಕರೆಯಲ್ಪಡುತ್ತೇವೆಂಬುದಕ್ಕೆ  ಇಲ್ಲಿ ನೋಡಿ

ಉತ್ತರಮ್ ಯತ್ಸಮುದ್ರಸ್ಯ  ಹಿಮಾದ್ರೇಶ್ಚೈವ ದಕ್ಷಿಣಮ್
ವರ್ಷಮ್ ತದ್ ಭಾರತಮ್ ನಾಮ ಭಾರತೀ ಯತ್ರ ಸಂತತಿ:

ಸಾಗರದಿಂದ ಉತ್ತರಕ್ಕೆ ಹಿಮಾಲಯದಿಂದ ದಕ್ಷಿಣಕ್ಕೆ ಇರುವ ಭೂಮಿಗೆ ಭಾರತ ಎಂದು ಕರೆಯುತ್ತೇವೆ. ಭಾರತದಲ್ಲಿ ವಾಸಿಸುವವರು ಭಾರತೀಯರು. ಅಷ್ಟೆ.  ಹಿಂದುಸ್ಥಾನವೆಂದರೆ ಭಾರತ ,ಹಿಂದು ಎಂದರೆ ಭಾರತೀಯ. ಅಷ್ಟೆ. very simple.

ಹೀಗೆ ಋಷಿ ಮುನಿಗಳ   ತಪಸ್ಸಿನಿಂದ ದತ್ತವಾದ ಹಿಂದು ಧರ್ಮ ಏನು ಹೇಳುತ್ತದೆ....

"ಏಕಂ ಸತ್ ವಿಪ್ರಾ: ಬಹುದಾ ವದಂತಿ"

ಸತ್ಯ ಎಂಬುದು ಒಂದೇ, ಅದನ್ನು ಪಂಡಿತರು ಬೇರೆ ಬೇರೆ ರೀತಿಯಲ್ಲಿ ಹೇಳುತ್ತಾರೆ. ಬಹಳ ಸರಳವಾದ ಮಾತಿದು. ಅದರರ್ಥ ಭಗವಂತನೆಂಬುವನು ಒಬ್ಬನೇ. ಅವನನ್ನು ಬೇರೆ ಬೇರೆ ಹೆಸರುಗಳಿಂದ ಕರೆಯುವರು."ದೇವನೊಬ್ಬ ನಾಮ ಹಲವು" ಎಂದರೂ ಇದೇ ಅರ್ಥ ತಾನೇ.
 ನಮ್ಮ ಋಷಿ ಮುನಿಗಳು ಕಂಡುಕೊಂಡ   ಸತ್ಯವಿದು.  ದೇವರನ್ನು ಯಾವ ಹೆಸರಿಂದಲಾದರೂ ಕರೆಯಿರಿ. ಅವನನ್ನು ಬ್ರಹ್ಮ, ವಿಷ್ಣು, ಮಹೇಶ್ವರ ನೆನ್ನಿ. ಕ್ರಿಸ್ತನೆನ್ನಿ. ಕೃಷ್ಣನೆನ್ನಿ. ಅಲ್ಲಾ ಎನ್ನಿ,...ಮಾರಮ್ಮನೆನ್ನಿ ಯಾವ ಹೆಸರಿನಲ್ಲಾದರೂ ಕರೆಯಿರಿ  "ಏಕಂ ಸತ್" .ಸತ್ಯ ಮಾತ್ರ ಒಂದೇ. ಆ ಭಗವಂತ ಮಾತ್ರ ಒಬ್ಬನೇ. ಇದು ಹಿಂದುಧರ್ಮದ  ವೈಶಿಷ್ಠ್ಯ. 
ನನ್ನನ್ನು ನಂಬು, ನನ್ನಿಂದ ಮಾತ್ರವೇ ಮೋಕ್ಷ, ಎಂಬ ವಿಚಾರಕ್ಕೆ ಹಿಂದು ಧರ್ಮದಲ್ಲಿ ಆಸ್ಪದವೇ ಇಲ್ಲ.  ವೇದವು ಕರೆ ಕೊಡುತ್ತದೆ......

ಯತ್ ಪೂರ್ವ್ಯಂ  ಮರುತೋ ಯಚ್ಚ ನೂತನಂ ಯದುದ್ಯತೇ  ವಸವೋ ಯಚ್ಚ ಶಸ್ಯತೇ|
ವಿಶ್ವಸ್ಯ ತಸ್ಯ ಭವಥಾ ನವೇದಸ: ಶುಭಂ ಯಾತಾಮನು ರಥಾ ಅವೃತ್ಸತಾ|| 
ಮನುಷ್ಯನು ಸುಖವಾಗಿ ನೆಮ್ಮದಿಯಿಂದ ಸುಂದರ ಬದುಕನ್ನು ಹೊಂದಬೇಕಾದರೆ ಯಾವ ಮಾರ್ಗದಲ್ಲಿ ಹೋಗಬೇಕೆಂಬುದನ್ನು ಈ ವೇದಮಂತ್ರವು ಅತ್ಯಂತ ಮನೋಜ್ಞವಾಗಿ ತಿಳಿಸಿಕೊಡುತ್ತದೆ. ಮಂತ್ರದ ಭಾವಾರ್ಥ ನೋಡಿ… 
ಹೇ ಮನುಜರೇ, ನಿಮ್ಮ ಬದುಕು ಹೇಗೆ ಸಾಗಿದರೆ ಸುಂದರವಾಗಬಲ್ಲದೆಂಬುದಕ್ಕೆ ಈ ಕೆಲವು ವಿಚಾರಗಳನ್ನು ಗಮನವಿಟ್ಟು ಕೇಳಿ….
ಯಾವುದು ಪ್ರಾಚೀನವೋ ಮತ್ತು ಯಾವುದು ನೂತನವೋ?, ಯಾವುದು  ನಿಮ್ಮ ಅಂತ:ಕರಣದಿಂದ ಉದ್ಭವಿಸುವುದೋ, ಹಾಗೂ   ಯಾವುದು ಶಾಸ್ತ್ರರೂಪದಲ್ಲಿ ಉಪದೇಶಿಸಲ್ಪಡುತ್ತದೋ ಎಲ್ಲಕ್ಕೂ ಕಿವಿಗೊಡು….ಆದರೆ ಯಾವುದು ನಿಮ್ಮನ್ನು ಕಲ್ಯಾಣಮಾರ್ಗದಲ್ಲಿ ನಡೆಸುತ್ತದೋ ಅದರ ಹಿಂದೆ ನಿಮ್ಮ ಜೀವನ ರಥಗಳು ಸಾಗಲಿ…..
ವೇದದ ಈ ಕರೆ ಯಾರಿಗೆ ಬೇಡ ?  ಯಾವ ಕಾಲಕ್ಕೆ ಬೇಡ ?  ಯಾವ ದೇಶಕ್ಕೆ ಬೇಡ? .. ಯಾವುದೇ ಮತ ಗ್ರಂಥಗಳು ಕೊಡುವ ಕರೆಗೂ ವೇದದ ಕರೆಗೂ ತುಲನೆ ಮಾಡುವುದು ಕಷ್ಟವೇನಲ್ಲಾ! ಅಲ್ಲವೇ?  ಈ ಮಾರ್ಗದಲ್ಲಿ ಹೋದರೆ ಮಾತ್ರ ನಿನಗೆ ಮುಕ್ತಿ!! ಎಂದು ವೇದವು ಕರೆ ಕೊಡಲಿಲ್ಲವೆಂಬುದನ್ನು ವಿಚಾರವಂತರು ಗಮನಿಸಬೇಕು. ಅಲ್ಲವೇ?
 ವೇದವನ್ನಾಗಲೀ ಇತರ ಯಾವುದೇ ಪ್ರಾಚೀನ ಗ್ರಂಥವನ್ನಾಗಲೀ ನೋಡಿದಾಗ  ಇಡೀ ವಿಶ್ವದ ಜನರು ಒಂದೇ ಕುಟುಂಬದವರು ಎಂದು ಸಾರುತ್ತದೆ. " ಸರ್ವೇ ಭದ್ರಾಣಿ ಪಶ್ಯಂತು ,ಮಾ ಕಷ್ಚಿತ್ ದು:ಖ ಭಾಗ್ಭವೇತ್" ಎಂದು ಕರೆಕೊಡುವ ಮಂತ್ರಗಳಲ್ಲಿನ ಅರ್ಥ ಬಲು ವಿಶಾಲ ಮನೋಭಾವನೆ ಹೊಂದಿದೆ.

“ಹಿಂದು” ಮತವಾಗಿದ್ದು ಯಾವಾಗ?

ನಾನು ಮುಂಚೆಯೇ ತಿಳಿಸಿದಂತೆ  ಹಿಂದು ಎನ್ನುವುದು  ನಮ್ಮ ರಾಷ್ಟ್ರೀಯತೆಯ ಹೆಸರು. ಈ ರಾಷ್ಟ್ರದ ಹೆಸರು. ಹಿಂದುಸ್ಥಾನದಲ್ಲಿ ಹುಟ್ಟಿದವ ಹಿಂದು ಅಷ್ಟೆ.  ಹಾಗಾದರೆ ಇಲ್ಲಿ ಮುಸಲ್ಮಾನರು, ಕ್ರೈಸ್ತರು, ಸಿಕ್ಖರು, ಭೌದ್ಧರು ಮುಂತಾದವರು ಈ ದೇಶದಲ್ಲಿ ಹುಟ್ಟಿಲ್ಲವೇ? ಅವರೆಲ್ಲಾ ಹಿಂದುಗಳೇ?
ಹೌದು , ಮೊದಲು ಎಲ್ಲರೂ ಹಿಂದುವೇ, ಆನಂತರ  ಅವರವರ ಮತವನ್ನು ಹೇಳಿಕೊಳ್ಳುವುದರಲ್ಲಿ ತಪ್ಪಿಲ್ಲ. “ನಾನು ಹಿಂದು” ನನ್ನ ಪೂಜಾಪದ್ದತಿಯಂತೆ ನಾನು ಕ್ರೈಸ್ತ, ನಾನು ಮುಸ್ಲಿಮ್……ಯಾರು ಬೇಡವೆಂದವರು. “ಏಕಂ ಸತ್, ವಿಪ್ರಾ ಬಹುದಾ ವದಂತಿ” ಎಂದು ತಾನೇ ನಮ್ಮ ಋಷಿಮುನಿಗಳು ಹೇಳಿರುವುದು. ಯಾರೇ ಆಗಲೀ ನಾನು  ಕ್ರೈಸ್ತ ಮತೀಯ, ನಾನು ಮುಸ್ಲಿಮ್ ,ಎಂದು ಹೇಳಿಕೊಳ್ಳುವುದರಲ್ಲಿ ತಪ್ಪಿಲ್ಲ. ಅದು ಅವರ ಪೂಜಾ ಪದ್ದತಿ. “ದೇವನೊಬ್ಬ ನಾಮ ಹಲವು, ಅಷ್ಟೆ. ಕೃಷ್ಣನೆನ್ನುವರು ಕೃಷ್ಣ ನೆನ್ನಲಿ, ಕ್ರಿಸ್ತ ನೆನ್ನುವರು ಕ್ರಿಸ್ತ ಎನ್ನಲಿ. ಆದರೆ ಎಲ್ಲರೂ ಭಾರತೀಯ ಎನ್ನಬಹುದು ಅಥವಾ ಹಿಂದು ಎನ್ನಬಹುದು. ಎರಡೂ ಅಷ್ಟೇ ಸಮಾನ ಪದಗಳು.
ಸಾಮಾನ್ಯವಾಗಿ  ಪೂರ್ವದಿಂದಲೂ ನಮ್ಮನ್ನು ಆರ್ಯರು, ಸನಾತನಿಗಳು, ವೈದಿಕರು ಎನ್ನುವ ರೂಢಿ   ಯಿತ್ತು. ಆರ್ಯ ಎಂದರೆ ಶ್ರೇಷ್ಠ ಎಂದು ಅರ್ಥ ಅಷ್ಟೆ. ದೇವನಿರ್ಮಿತ ದೇಶದಲ್ಲಿರುವವರೆಲ್ಲರೂ ಆರ್ಯರೇ ಹೌದು. ನಮ್ಮದು ಅತ್ಯಂತ ಪುರಾತನವಾದ  ಸಂಸ್ಕತಿಯಾದ್ದರಿಂದ “ಸನಾತನಿ” ಎನ್ನುವ ಹೆಸರು ಬಂತು.ವೇದವನ್ನು ನಂಬುವವರಾದ್ದರಿಂದ ವೈದಿಕರೆಂದೂ ಕರೆಯುತ್ತಾರೆ.
ಸರಿ, ಹಾಗಾದರೆ ಹಿಂದು ಮತವಾಗಿದ್ದು, ಯಾವಾಗ?
ಯಾವಾಗ  ಕ್ರೈಸ್ತರು,  ಮುಸ್ಲ್ಮಾನರು, ತಮ್ಮ ತಮ್ಮ ಮತಗಳಿಗೆ ಇಲ್ಲಿನ ಸನಾತನಿಗಳನ್ನು ಮತಾಂತರ ಮಾಡುತ್ತಾ ಹೋದರು, ಆಗ ಅನಿವಾರ್ಯವಾಗಿ ತಮ್ಮನ್ನು ತಾವು “ಹಿಂದು ಮತೀಯ ” ಎಂಬ ಮತದ ಹೆಸರಲ್ಲಿ ಸಂಘಟಿತರಾಗುತ್ತಾ ಹೋದರು. ಆದರೆ ಇಂದು “ಹಿಂದು” ಎಂಬುದು ರಾಷ್ಟ್ರವಾಚಕವಾಗುವುದರ ಬದಲು  ಮತದ ಹೆಸರಲ್ಲಿ ಹೆಚ್ಚು ಉಪಯೋಗವಾಗುತ್ತಿದೆ.
ಆದರೆ ಈ ದೇಶದಲ್ಲಿಹುಟ್ಟಿರುವ ಎಲ್ಲರೂ ಕೂಡ ಅವರ ಪೂಜಾ ಪದ್ದತಿ ಯಾವುದೇ ಇರಲಿ, ತಮ್ಮನ್ನು ತಾವು  ರಾಷ್ಟ್ರವಾಚಕವಾದ “ಹಿಂದು” ಎಂದು ಕರೆದುಕೊಳ್ಳುವುದರಲ್ಲಿ ಹೆಮ್ಮೆ ಪಡಬೇಕು. ಕಾರಣ ಅಂಥಹ ದೇವನಿರ್ಮಿತ ದೇಶದಲ್ಲಿ ನಮ್ಮ ಜನ್ಮ ವಾಗಿದೆ.  ಇಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. 

Wednesday, January 30, 2013

ಭಗವಂತನ ಅವತಾರ

ಭಗವಂತನು ಯಾಕೆ ಅವತಾರವನ್ನು ತಾಳಬೇಕು?ಅದರ ಅವಶ್ಯಕತೆ ಏನಿದೆ?ಸಕಲ ಚರಾಚರಗಳಲ್ಲಿಯೂ ಸ್ವಯಂ ಪ್ರಕಾಶಿತನಾದ ಪರಮಾತ್ಮನು ತಾನು ತನ್ನ ಸಂಕಲ್ಪ ಮಾತ್ರದದಿಂದಲೇ ಸಕಲ ಕಾರ್ಯಗಳನ್ನೂ ಮಾಡಿಸಬಲ್ಲಂಥಹ ಶಕ್ತಿಯೇ ಸ್ವಯಂ ತಾನಾಗಿದ್ದರೂ,ಯಾವುದೋ ಜೀವಿಯಾಗಿ ಮೃತ್ಯುಲೋಕದಲ್ಲಿ ಜನ್ಮ ಎತ್ತಲು ಕಾರಣವೇನು?ಅದರ ಅವಶ್ಯಕತೆ ಇದೆಯೇ?


ಧರ್ಮ ಎನ್ನುವುದು ಒಂದೇ ಅದನ್ನು ಬೇರೆ ಬೇರೆ ಜನ ಸಮುದಾಯಗಳು ತಮ್ಮ ಸಮಾಜಕ್ಕೆ, ದೇಶಕ್ಕೆ ಹಾಗೂ ಅನುಕೂಲಕ್ಕೆ ಹೇಗೆ ಬೇಕೋ, ಅದಕ್ಕೆ ತಕ್ಕಂತೆ ಅಳವಡಿಸಿಕೊಂಡಿದೆ.ಕ್ಷಣಿಕ ಸತ್ಯ, ಅರ್ಧ ಸತ್ಯ, ಪೂರ್ಣ ಸತ್ಯಗಳಲ್ಲಿ, ಸತ್ಯದ ಪ್ರಮಾಣ ಬೇರೆ ಬೇರೆ ಯಾದರೂ, ಅದರ ಸ್ವರೂಪ ಬದಲಾಗುವುದಿಲ್ಲ.ಹಾಗಾಗಿ ಕಲ್ಪನೆಗೂ ಹಾಗೂ ಸತ್ಯಕ್ಕೂ ವ್ಯತ್ಯಾಸವಿದೆ.ದೇವರ ಸ್ವರೂಪ ನಮಗೆ ಕಲ್ಪನೆಗೂ ಸಿಗದಂಥದ್ದು ಇರಬಹುದು.ಆದರೆ,"ನಾಸ್ತಿಕ ಧರ್ಮ" ಎಂಬುದು ಇಲ್ಲ.ಎಲ್ಲರೂ ಒಂದೆಲ್ಲ ಒಂದು ದಿನ ಶುದ್ಧ ನಾಸ್ತಿಕ ತತ್ವಕ್ಕೆ ಹೋಗಿ ತಲುಪಬೇಕಾಗುತ್ತದೆ ಅದೇ ನಶ್ವರ ಸಿದ್ಧಾಂತ.ಆಸ್ತಿಕನಾಗಲೀ,ನಾಸ್ತಿಕನಾಗಲೀ ನಂಬಿಕೆಗಳು ಬೇರೆಯಾದರೂ, ತಲುಪಬೇಕಾದ ಗುರಿ ಒಂದೇ ಆಗಿರುತ್ತದೆ.ನಮ್ಮ ಕುರುಡುತನದಲ್ಲಿ ಆನೆಯ ಸ್ವರೂಪ ವಿವರಿಸಲಾಗದಿದ್ದರೂ ಕೂಡ,ಜ್ಞಾನಿಗಳು, ಋಷಿ, ಮುನಿಗಳು ತಮ್ಮ ಅನ್ಥಶಕ್ತಿಯಿಂದ ಅದನ್ನು ನಮಗೆ ತಿಳಿಯಪಡಿಸಿದ್ದಾರೆ.ಆ ಆಘಾಧತೆಯೂ, ಅತಿ ಸೂಕ್ಷಮವೂ, ಆದಿ, ಅಂತ್ಯ, ರಹಿತವಾದ ದಿವ್ಯ ಶಕ್ತಿಯನ್ನು ಸಾಕಾರ ಮಾಡಿಕೊಂಡವರಿಗೆನೂ ಕಡಿಮೆ ಇರುವುದಿಲ್ಲ ಏಕೆಂದರೆ ಬೇರೆಲ್ಲಾ ದೇಶಗಳು ಕರ್ಮಭೂಮಿಯಾಗಿದ್ದರೆ ಭಾರತ ಧರ್ಮಭೂಮಿ.ಅದಕ್ಕೆ ನಮ್ಮಲ್ಲಿ ಋಷಿ ಪರಂಪರೆ ಇತ್ತು.ಹಾಗೆಯೇ ಅವತಾರಗಳಿಗೂ ಕೂಡ ನಿದರ್ಶನವಿದೆ.ಅದನ್ನು ಆತ್ಮಜ್ನಾನಿಗಳೇ ನಮಗೆ ತಿಳಿಸಿರುತ್ತಾರೆ. "ಅವತಾರ" ಎನ್ನುವುದು ಬರೀ ಕಲ್ಪನೆಯಲ್ಲ.ಆದರೆ ಏಕೆ ಭಗವಂತ ಅವತಾರ ತೆಗೆದುಕೊಳ್ಳುತ್ತಾನೆ? ಎಂದರೆ,ಮನುಷ್ಯಮಾತ್ರರಾಗಿ ರೂಪದಲ್ಲಿದ್ದರೂ,ಮಾನವ ರೂಪದಲ್ಲಿ ನಡೆಸುತ್ತಿರುವ ಅಧರ್ಮಿಗಳಿಗೆ ಮಾನವ ರೂಪದಲ್ಲಿಯೇ ಪಾಠಕಲಿಸಲೆಂದು.ಆಗ ಮಾತ್ರಾ ಅಧರ್ಮಿಗಳ ದುರಹಂಕಾರ ಅಳಿಯಲು ಸಾಧ್ಯ ಎಂದು.ಭಗವಂತನಿಂದಾ ಬೇರೆಯಾದ ಆತ್ಮ ತಾನು ಯಾರೆಂದು ಅರಿತು ಮತ್ತೆ ಅವನಲ್ಲಿ ಸಾಯುಜ್ಯ ಹೊಂದುವವರೆಗೆ, ಪ್ರತಿ ಜೀವಿಯೂ ತಾವು ಹೊಂದಿರುವ ದೇಹದ ಇಂದ್ರಿಯಗಳ ವಾಸನೆಯಿಂದಾ, ಮನಸ್ಸು, ಬುದ್ಧಿಯಿಂದಾ ಮಾಡಲ್ಪಟ್ಟ ಕರ್ಮಾನುಸಾರವಾಗಿ, ಅವರವರ ಫಲಗಳನ್ನು ಅನುಭವಿಸುತ್ತಾರೆ. ಅದರಲ್ಲಿ ಭಗವಂತನ ಹಸ್ತಕ್ಷೇಪ ಇರುವುದೇ ಇಲ್ಲ.ಇಲ್ಲದಿದ್ದರೆ ಅಧರ್ಮ ಮಾಡುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ.ಹಾಗಾಗಿ ಅವತಾರ ಬರೀ ಕಲ್ಪನೆಯಲ್ಲ. ಅದು ನಿಜವಾದ ಸಂಗತಿ.ಮನುಷ್ಯನಿಗೆ ತಾನು ಎಕೆ ಹುಟ್ಟಿದ್ದೇನೆ ಎಂಬ ಅರಿವು ಯಾರಿಗೂ ಇರುವುದಿಲ್ಲ. ಕೇವಲ ಹುಡುಕಾಟ ಇರುತ್ತದೆ ಅಷ್ಟೇ. ಅದಕ್ಕಾಗಿಯೇ ಈ ಮನುಷ್ಯ ಎಂಬ ಪ್ರಾಣಿ ಏನು ಮಾಡಬೇಕೆಂದು ತೋಚದೆ ತೋಚಿದ್ದನ್ನೆಲ್ಲಾ ಮಾಡುತ್ತಿರುತ್ತಾನೆಆದ್ದರಿಂದಲೇ ವೈವೀಧ್ಯತೆ ಇರುತ್ತದೆ.ಏಕೆಂದರೆ ಅದೇ ಪರೋಕ್ಷವಾದ ಹುಡುಕಾಟವಾಗಿರುತ್ತದೆ. ಆದರೆ,ಅವತಾರಿಗಳಲ್ಲಿ ತಮ್ಮ ಜನ್ಮದ ಉದ್ದೇಶದ ಅರಿವು ಸ್ಪಷ್ಟವಾಗಿ ಇರುತ್ತದೆ. ಹಾಗೂ ಪ್ರಕೃತಿಯ ಅಧೀನವಾಗಿ ಇರುವುದಿಲ್ಲ. ಇದೇ ಅವತಾರಿಗಳಿಗೂ ನಮ್ಮ ನಿಮ್ಮಂಥ ಹುಲುಮಾನವರಿಗೂ ಇರುವ ವ್ಯತ್ಯಾಸ.

Saturday, December 1, 2012

ಆ ಸ್ವತಂತ್ರ ಸ್ವರ್ಗಕೆ ನಮ್ಮ ನಾಡು ಏಳಲಿ..



  ಅದೊಂದು ಬಲು ವಿಶೇಷ ಸಂದರ್ಭ! ಈ ಹಾಡು ಕೇಳಿ. ವೇದಿಕೆಯಲ್ಲಿ ಮತ್ತು ಅವರೆದುರು ಕುಳಿತು ಅತ್ಯಂತ ಸ್ಪೂರ್ಥಿಯಿಂದ ಹಾಡುತ್ತಿರುವವರ ಪರಿಚಯ ನಿಮಗಾದರೆ ನೀವು ವಾಹ್ ! ಎನ್ನದೆ ಇರಲಾರಿರಿ. 1975-77 ನಮ್ಮ ದೇಶದ ಮೇಲೆ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ಸಂದರ್ಭ. ಈಗಿನ ಎಷ್ಟೋ ಜನರಿಗೆ ಅದರ ಅರಿವಿಲ್ಲ. ಆದರೆ ಅಂದು ದೇಶದ ನಾಗರೀಕರ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿತ್ತು. ಆರ್.ಎಸ್.ಎಸ್.ಸಹಿತ ಹಲವಾರು ಸಂಘಟನೆಗ     ಳನ್ನು  ನಿಶೇಧಿಸಿ ಅವುಗಳ ನಾಯಕರನ್ನು ಜೈಲಿಗೆ ತಳ್ಳಲಾಗಿತ್ತು. ಆಗ ಆ ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿ ಇನ್ನೂ ನಮ್ಮೊಡನಿರುವ ಹಾಸನ ಜಿಲ್ಲೆಯ ಹಿರಿಯರು ಇವರು!! ವೇದಿಕೆಯಲ್ಲಿ ಆರ್.ಎಸ್.ಎಸ್. ಹಿರಿಯ ಪ್ರಚಾರಕರಾದ ಶ್ರೀ ಸು.ರಾಮಣ್ಣನವರು. ಅಕ್ಕ ಪಕ್ಕದಲ್ಲಿ ಅರಸೀಕೆರೆಯ ಪುರಸಭಾ ಮಾಜಿ ಅಧ್ಯಕ್ಷರಾದ ಶ್ರೀ ದುರ್ಗಪ್ಪಶೆಟ್ಟರು ಮತ್ತು ಅರಸೀಕೆರೆಯ ತಾಲ್ಲೂಕು ಸಂಘಚಾಲಕರಾದ ಶ್ರೀ ಶ್ರೀನಿವಾಸಮೂರ್ತಿಯವರು[ರಾಮಣ್ಣನವರ ಬಲಬದಿ]
ಎದಿರು ಕುಳಿತು ಚಪ್ಪಾಳೆ ತಟ್ಟಿ ಹಾಡುತ್ತಿರುವವರೆಲ್ಲಾ ಅಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ಧೀರರು. ಅಂದಿನ ಹಲವರು ಇಂದು ನಮ್ಮೊಡನಿಲ್ಲ. ಇನ್ನೂ ಬದುಕಿದ್ದು ಭಾರತಮಾತೆಯ ವೈಭವದ ದಿನಗಳಿಗಾಗಿ ಸಮಾಜಕಾರ್ಯದಲ್ಲಿ ಸಕ್ರಿಯರಾಗಿರುವ ಹಿರಿಯರು ತಮ್ಮ ಉತ್ಸಾಹವನ್ನು ಬತ್ತಲು ಬಿಡದೆ ಭಾವುಕರಾಗಿ ಹಾಡುತ್ತಿರುವ ಅಪೂರ್ವ ಕ್ಷಣಗಳು!!
ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜರೂ ಕೂಡ ಅಂದು ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರೀ ಕೆಲಸ ಕಳೆದುಕೊಂಡು ಜೈಲು ವಾಸ ಅನುಭವಿಸಿದವರು. ಅವರು ಬರೆದಿರುವ ತನ್ನ ಹೋರಾಟದ ಅನುಭವ ಕಥನ "ಆದರ್ಶದ ಬೆನ್ನುಹತ್ತಿ.." ಕೃತಿಯ ಬಿಡುಗಡೆಯ ಸಂದರ್ಭದಲ್ಲಿ ಇಂತಹ ಒಂದು ಅಪೂರ್ವ ಅವಕಾಶವು ಹಾಸನದ ಜನತೆಗೆ ಲಭಿಸಿತ್ತು. ಸಮಾರಂಭದ ವರದಿಯನ್ನು ಪ್ರಕಟಿಸಲಾಗುವುದು.


Wednesday, November 21, 2012

ಆದರ್ಶದ ಬೆನ್ನ ಹತ್ತಿ..




-“ಇವರನ್ನು ಯಾಕೆ ಅರೆಸ್ಟ್ ಮಾಡಿದ್ದೀರಿ?”
- “ಇವರು ಕೇಂದ್ರ ಸರ್ಕಾರದ ವಿರುದ್ಧವಾಗಿ ದೇಶದ್ರೋಹದ ಕೆಲಸಮಾಡ್ತಾ ಇದಾರೆ ಸ್ವಾಮಿ”
-“ಇವರು ದೇಶದ್ರೋಹದ ಕೆಲಸ ಮಾಡ್ತಾ ಇದಾರೆ ಅನ್ನೋದಕ್ಕೆ ಸಾಕ್ಷಿ ಇದೆಯಾ?”
-“ಸಾಕ್ಷಿ ಇದೆ ಸ್ವಾಮಿ”
-“ಏನು ಸಾಕ್ಷಿ?”
-“ಇವರ ಮನೆಯಲ್ಲಿ ಮಹಾತ್ಮಗಾಂಧಿಜಿಯ ಫೋಟೋ   ಇರುವ ಕರಪತ್ರಗಳು ಸಿಕ್ಕಿವೆ.
-“ಹಾಸನದಲ್ಲಿ ಎಷ್ಟು ಮನೆಗಳಿವೆ?”
-ಗೊತ್ತಿಲ್ಲ.
-  ಅಂದಾಜಾಗಿ ಹೇಳಿ ಪರವಾಗಿಲ್ಲ.ಇಪ್ಪತ್ತು ಸಾವಿರ ಮನೆಗಳು ಇರಬಹುದಾ? ಅದರಲ್ಲಿ ಎಷ್ಟು ಮನೆಗಳಲ್ಲಿ ಮಹಾತ್ಮಗಾಂಧಿಜಿಯ ಫೋಟೋ ಇರಬಹುದು? ಒಂದು ಐದು ನೂರು ಮನೆಗಳಲ್ಲಿ? ಹೋಗಲೀ ಒಂದು ಇನ್ನೂರು ಮನೆಗಳಲ್ಲಿ?”
“ಇರಬಹುದು.”
“ಹಾಗಾದರೆ ಅವರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಲಿಲ್ಲ? ಇವರನ್ನೇಯಾಕೆ ಮಾಡಿದ್ರೀ?”
“ಫೋಟೋ ಮಾತ್ರಾ ಆಗಿದ್ರೆ ಅವರನ್ನು ಅರೆಸ್ಟ್ ಮಾಡ್ತಿರಲಿಲ್ಲ. ಫೋಟೋದ ಮೆಲೆ  ರಾಷ್ಟ್ರದ್ರೋಹದ ಬರಹ ಇತ್ತು!”
£ÀÄ ಬರಹ ಇತ್ತು?”
-“ಅಸತ್ಯ,ಅಧರ್ಮ,ದಬ್ಬಾಳಿಕೆಗೆ ತಲೆಬಾಗುವುದು ಹೇಡಿತನ ಅಂತಾ ಬರೆದಿತ್ತು.”
“ಅದು ಗಾಂಧೀಜಿ ನೇ ಹೇಳಿದ್ದಲ್ವಾ?
-ಇರಬಹುದು
-ಆ ಮಾತು ರಾಷ್ಟ್ರದ್ರೋಹ ಅನ್ನೋದಾದ್ರೆ , ಇದು ಗಾಂಧೀಜಿ ಹೇಳಿದ ಮಾತು ಅನ್ನೋದು ನಿಮ್ಮ ನೆನಪಿನಲ್ಲಿರಲಿ. ಹೋಗಲೀ ಅದು ಹೇಗೆ    ರಾಷ್ಟ್ರದ್ರೋಹ ಆಗುತ್ತೆ? ಅನ್ನೋದನ್ನು ವಿವರಿಸುತ್ತೀರಾ?.........

    ಇದು ಯಾವುದೋ    ಸಿನೆಮಾ   ಡೈಲಾಗ್ ಅಲ್ಲ. 1975 ನೇ ಇಸವಿಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹಾಸನದಲ್ಲೂ ಕೂಡ ತುರ್ತು ಪರಿಸ್ಥಿತಿ ವಿರುದ್ಧ ನಡೆದ ಹೋರಾಟ ಸಂದರ್ಭದಲ್ಲಿ ಅಂದು ಭಾರತ ರಕ್ಷಣಾ ನಿಯಮ [DIR] ಮತ್ತು ಆಂತರಿಕ ಭದ್ರತಾ ಕಾಯದೆಯನ್ವಯ [MISA] ನೂರಾರು ಜನ ದೇಶ ಭಕ್ತರನ್ನು ಜೈಲಿಗೆ  ಕಳಿಸಲಾಗಿತ್ತು. ಅದರಲ್ಲಿ DUÀ ಫುಡ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಕೆ.ವಿ.ನಾಗರಾಜ್ ರನ್ನು ಅರೆಸ್ಟ್  ಮಾಡಲಾಗಿತ್ತು. ನಾಗರಾಜರ ಕೇಸ್ ನಡೆಸುತ್ತಿದ್ದ  ಶ್ರೀ ಬಿ.ಎಸ್.ವೆಂಕಟೇಶ ಮೂರ್ತಿಯವರು  ನ್ಯಾಯಾಲಯದಲ್ಲಿ  ಪಾಟೀಸವಾಲು ಮಾಡುವಾಗ   ಪೋಲೀಸರಿಗೆ ಹಾಕಿದ ಪ್ರಶ್ನೆಗಳಿವು.
      ಶ್ರೀ ಕೆ.ವಿ.ನಾಗರಾಜರು  ತುರ್ತುಪರಿಸ್ಥಿಯ ತಮ್ಮ ಹೋರಾಟದ ಘಟನೆಗಳನ್ನು  ಮುಂದಿನ ಪೀಳಿಗೆಗೆ ಮರೆಯ ಬಾರದೆಂಬ ಕಾರಣಕ್ಕಾಗಿ ದಾಖಲಿಸಿ ರುವ” ಆದರ್ಶದ ಬೆನ್ನು ಹತ್ತಿ…..” ಪುಸ್ತಕವು  ಇದೇ 29.11.2012 ಗುರುವಾರ ಲೋಕಾರ್ಪಣೆಯಾಗಲಿದೆ. ತುರ್ತುಪರಿಸ್ಥಿತಿಯ ಹೋರಾಟಗಳ ನೆನಪು ಒಂದು ಭಾಗವಾದರೆ ರಾಜ್ಯ ಸರ್ಕಾರೀ ಅಧಿಕಾರಿ/ನೌಕರನಾಗಿ ಸೇವೆ ಮಾಡುವಾಗಿನ ತಮ್ಮ ಅನುಭವಗಳನ್ನು ಇನ್ನೊಂದು ಭಾಗದಲ್ಲಿ ಹಂಚಿಕೊಂಡಿದ್ದಾರೆ. ಬ್ರಷ್ಟಾಚಾರ ಎಂಬುದು ಚರ್ಚಾರ್ಹ ವಿಷಯವೇ ಅಲ್ಲ,ಅದೊಂದು ಸರ್ವೇ ಸಾಮಾನ್ಯ ಎಂಬ ಮಾನಸಿಕತೆಗೆ ಬಂದು ನಿಂತಿರುವ ಈ ದಿನಗಳಲ್ಲಿ  ಶ್ರೀ ನಾಗರಾಜರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸುವಾಗ ಎದುರಾದ ಸಮಸ್ಯೆಗಳು, ಅದನ್ನೆಲ್ಲಾ ದಿಟ್ಟವಾಗಿ ಎದುರಿಸಿದ ರೀತಿ, ಎಲ್ಲವನ್ನೂ ಮನಮುಟ್ಟುವಂತೆ ದಾಖಲಿಸಿದ್ದಾರೆ. ಕೃತಿಯನ್ನು ಓದಲು ಆರಂಭಿಸಿದರೆ ಎಲ್ಲವನ್ನೂ ಮರೆತು ತನ್ನೆಡೆಗೆ ಹಿಡಿದಿಟ್ಟುಕೊಳ್ಳುವ ಅವರ ಬರವಣಿಗೆ ಶೈಲಿ ಓದುಗರನ್ನು ಬೆರಗುಗೊಳಿಸದೆ ಇರದು.
     1970 ರ ನಂತರ ಜನ್ಮ ತಾಳಿರುವ ಇಂದಿನ ಪೀಳಿಗೆಗೆ “ತುರ್ತು ಪರಿಸ್ಥಿತಿಯ ಹೋರಾಟ ಎಂದರೇನೆಂಬುದು UÉÆvÉÛà E®è. ಅಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ಹಲವಾರು ಜನರು ಇಂದು ನಮ್ಮೊಂದಿಗಿಲ್ಲ. ಅಂದು ಎಲ್ಲಾ ಪತ್ರಿಕೆಗಳ ಬಾಯಿ ಮುಚ್ಚಿಸಲಾಗಿತ್ತು.  ಯಾವ ನಾಗರೀಕನೂ ಸರ್ಕಾರದ ವಿರುದ್ಧವಾಗಿ ಮಾತನಾಡು ವಂತಿರಲಿಲ್ಲ. ಅಂತಹ ವಿಷಮ ಸಂದರ್ಭದಲ್ಲೂ  ತುರ್ತುಪರಿಸ್ಥಿತಿಯ ವಿರುದ್ಧವಾಗಿ ಪೋಲೀಸರ ಹದ್ದುಗಣ್ಣನ್ನು ಮರೆಮಾಚಿಸಿ ಪ್ರಕಟವಾಗುತ್ತಿದ್ದ “ಕಹಳೆ” ಪತ್ರಿಕೆಯು ಎಲ್ಲಿ ಮುದ್ರಣವಾಗುತ್ತೆ? ಯಾರು ಪ್ರಸಾರ ಮಾಡುತ್ತಾರೆಂಬುದು ಪೋಲೀಸರಿಗೆ ದೊಡ್ದ ಪ್ರಶ್ನೆಯಾಗಿತ್ತು. ಅನುಮಾನ ಬಂದವರನ್ನು ಸ್ಟೇಶನ್ ಗೆ ಎಳೆದೊಯ್ದು “ಏರೋಪ್ಲೇನ್” ಎತ್ತುತ್ತಿದ್ದ ಕಾಲ. ಇಂದು ಏರೋಪ್ಲೇನ್ ಶಿಕ್ಷೆ ಎಂದರೇನೆಂಬುದು ನಮ್ಮ ಯುಕರಿಗೆ ಗೊತ್ತಿಲ್ಲ. ಆದರೆ ಅಂದು ಹಲವಾರು ದೇಶಭಕ್ತರೂ ಕೂಡ ಪೋಲೀಸರ ಅಮಾನುಷ ಶಿಕ್ಷೆಗೆ ಒಳಗಾಗಿದ್ದ ಕೆಟ್ಟದಿನಗಳು.  ಆರೆಸ್ಸೆಸ್ ಸೇರಿದಂತೆ ೫೦-೬೦ ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಗಿತ್ತು. ಆರೆಸ್ಸೆಸ್ ಮುಂಚೂಣಿಯಲ್ಲಿ ನಿಂತು ಜಯಪ್ರಕಾಶ ನಾರಾಯಣರ ನಾಯಕತ್ವದಲ್ಲಿ ಲೋಕ ಸಂಘರ್ಷ ಸಮಿತಿ ಹೆಸರಿನಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ನಡೆದ ಅಭೂತಪೂರ್ವ ಆಂದೋಲನ ದೇಶದಲ್ಲಿ ಪ್ರಜಾಸತ್ತೆ ಉಳಿಯಲು ಕಾರಣವಾಯಿತು. ಲಕ್ಷಾಂತರ ತರುಣರು ಇದರಲ್ಲಿ ಭಾಗವಹಿಸಿ ಅನೇಕ ಕಷ್ಟ-ನಷ್ಟಗಳನ್ನು ಎದುರಿಸಿದರು. ನೂರಾರು ಜನರು ತಮ್ಮ ಜೀವವನ್ನೇ ತೆತ್ತರು. ಕರ್ನಾಟಕದಲ್ಲೂ ಸಹ ಆಂದೋಲನ ಜನ ಜಾಗೃತಿಗೊಳಿಸುವಲ್ಲಿ, ಸರ್ವಾಧಿಕಾರಿಗಳನ್ನು ಬೆಚ್ಚಿ ಬೀಳಿಸುವಲ್ಲಿ ಯಶಸ್ವಿಯಾಯಿತು. ಹಾಸನ ಜಿಲ್ಲೆಯಲ್ಲೂ ಸಾವಿರಾರು ತರುಣರು ಪ್ರತಿಭಟನೆಯಲ್ಲಿ ಪಾಲುಗೊಂಡದ್ದು ಇತಿಹಾಸ. ೧೩ ಜನರನ್ನು ಯಾವುದೇ ವಿಚಾರಣೆಗೊಳಪಡದೆ 2 ವರ್ಷಗಳ ಕಾಲ ಬಂಧಿಸಿಡಬಹುದಾದ ಮೀಸಾ ಕಾಯದೆಯನ್ವಯ ಬಂಧಿಸಲಾಗಿತ್ತು. ಸುಮಾರು 300 ಜನರನ್ನು ಭಾರತ ರಕ್ಷಣಾ ಕಾಯದೆಯನ್ವಯ ಬಂಧಿಸಿದ್ದರು. ಸಾವಿರಾರು ತರುಣರ ಮೇಲೆ ದಂಡ ಪ್ರಕ್ರಿಯಾ ಸಂಹಿತೆಯ ವಿವಿಧ ಕಲಮುಗಳ ಪ್ರಕಾರ ಮೊಕದ್ದಮೆಗಳನ್ನು ಹೂಡಲಾಗಿತ್ತು. ಕೊನೆಕೊನೆಗೆ ಜೈಲಿನಲ್ಲಿ ಸ್ಥಳವಿರದ ಕಾರಣ ಬಂಧಿಸಿ, ಮುಚ್ಚಳಿಕೆ ಬರೆಯಿಸಿಕೊಂಡು, ಹೊಡೆದು ಬಡಿದು ಬಿಟ್ಟದ್ದೂ ಉಂಟು. ಆ ಸಂದರ್ಭದಲ್ಲಿ ಅನುಭವಿಸಿದ ಕಿರುಕುಳ, ಹಿಂಸೆಗಳಿಂದಾಗಿ ಆಗ ಹಾಸನ ಜಿಲ್ಲೆಯ ಆರೆಸ್ಸೆಸ್ ಪ್ರಚಾರಕರಾಗಿದ್ದ ಶ್ರೀ ಪ್ರಭಾಕರ ಕೆರೆಕೈಯವರು ತಮ್ಮ 30-32  ಕಿರಿಯ ವಯಸ್ಸಿನಲ್ಲೇ ಮತಿವಿಕಲ್ಪತೆಗೆ ಒಳಗಾಗಿ ಕೊನೆಯುಸಿರೆಳೆದದ್ದು ದುರಂತ.
     ಶ್ರೀ ನಾಗರಾಜರು ಬರೆದಿರುವುದು    ಹೋರಾಟಕಾಲದ ಸಮಗ್ರ ಚಿತ್ರಣವಲ್ಲ. ಒಬ್ಬ ಹೋರಾಟಗಾರನಾಗಿ ಅವರ ಅನುಭವಗಳನ್ನು ದಾಖಲಿಸಿದ್ದಾರೆ. ತುರ್ತು ಪರಿಸ್ಥಿಯ ದಿನಗಳನ್ನು ನೆನೆದುಕೊಂಡರೆ ಕಣ್ಣುಗಳು  ತೇವ ವಾಗುತ್ತವೆ. ಹೀಗೂ ಇತ್ತಾ! ಎಂದು ಅಂದಿನ ದಿನಗಳನ್ನು ಕಣ್ಣಾರೆ ಕಂಡ,ಹೋರಾಟದಲ್ಲಿ ನೇರವಾಗಿ ಅಥವಾ ಗುಪ್ತವಾಗಿ ಹೋರಾಡಿದ ನಮ್ಮಂತವರಿಗೇ ಅಚ್ಚರಿಯಾಗುತ್ತದೆ. ಸ್ವಾತಂತ್ರ್ಯ ಆಂಧೋಳನದಲ್ಲಿದ್ದ 99% ಜನರು ಇಂದು ನಮ್ಮೆದಿರು ಇಲ್ಲ. ಎರಡನೆಯ ಸ್ವಾತಂತ್ರ್ಯಹೋರಾಟವೆಂದೇ ಹೇಳಬಹುದಾದ 1975-77 ರ ಹೋರಾಟದಲ್ಲಿ ಪಾಲ್ಗೊಂಡವರಲ್ಲಿ ಕೆಲವರನ್ನಾದರೂ ನೋಡಬೇಕೆ?
ಹಾಗಾದರೆ ಬನ್ನಿ…..
ಸ್ಥಳ: ಶ್ರೀ  ರಾಮಕೃಷ್ಣ ವಿದ್ಯಾಲಯ ಸಭಾಂಗಣ
ದಿನಾಂಕ: 29.11.2012 ಗುರುವಾರ ಸಂಜೆ 6.00 ಕ್ಕೆ.

 ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದ ಕಥನ ಕೇಳ  ಬನ್ನಿ...


Thursday, November 8, 2012

ನಾವೇ ನಿರ್ಮಿಸಿಕೊಂಡಿರುವ ವಿಷ ವರ್ತುಲ!!!

ಲಾಲಯೇತ್ ಪಂಚ ವರ್ಷಾಣಿ ದಶ ವರ್ಷಾಣಿ ತಾಡಯೇತ್ ।
ಪ್ರಾಪ್ತೇಷು ಷೋಡಶೇ ವರ್ಷೇ ಪುತ್ರಂ ಮಿತ್ರ ವದಾಚ್ಜರೇತ್ ॥


ಮಗು ಹುಟ್ಟಿದ ಐದು ವರ್ಷಗಳ    ತನಕ ಮುದ್ದಾಡಬೆಕು, ಹಾಗೆಯೇ ಮುಂದಿನ ಹತ್ತು  ವರ್ಷಗಳು ಹೊಡೆದು ಬುದ್ಧಿ      ಹೇಳಬೇಕು. ಆಮೇಲೆ ಹದಿನಾರನೆಯ ವರ್ಷದಿಂದ ಮಗನನ್ನು ಗೆಳೆಯನಂತೆ ಕಾಣಬೇಕು
.

ಈಗ ಇಂದಿನ ಸಮಾಜಸ್ಥಿತಿಯನ್ನು ಸ್ವಲ್ಪ ವಿಮರ್ಷೆ ಮಾಡೋಣ. ಐದು ವರ್ಷಗಳ ತನಕ ಮಗುವನ್ನು ಮುದ್ದಾಡುತ್ತೇವೆಯೇ? ಇಲ್ಲಾ. ಆ ಮಗುವನ್ನು ಬೇಬಿ ಸಿಟ್ಟಿಂಗ್,ಎಲ್.ಕೆ.ಜಿ,  .ಉ.ಕೆ.ಜಿ ಅಂತಾ  ಮೂರುತರಗತಿಗಳನ್ನು ಆ ಮಗು ತನ್ನ ಐದು ವರ್ಷದೊಳಗೆ ಪೂರೈಸಿರಬೇಕು. ಮಗು ಅತ್ತರೂ ಬಿಡುವುದಿಲ್ಲ!! ಮಕ್ಕಳನ್ನು ಮುದ್ದಾಡುವುದಕ್ಕೆ ನಮಗೆ ಸಮಯವಿಲ್ಲ. ಟಿ.ವಿ. ನೋಡಬೇಕಲ್ಲಾ!!

ಇನ್ನು ಹತ್ತು ವರ್ಷಗಳ    ತನಕ  ಯೂನಿ ಫಾರ್ಮ್ ಹಾಕಿಕೊಂಡು ಬೆನ್ನಮೇಲೆ ಐವತ್ತು ಕೆ.ಜಿ ಭಾರವನ್ನು ಹೊತ್ತು  ಮಕ್ಕಳನ್ನು  ಸ್ಕೂಲಿಗೆ ಕಳಿಸುವ ನಾವು ಆ ಮಗು ಮನೆಗೆ ಬರುವ ಹೊತ್ತಿಗೆ ಸುಸ್ತಾಗಿ  ಟೀಚರ್ ಕೊಟ್ಟಿರುವ ಹೋಮ್ ವರ್ಕ್ ಮಾಡಲಾರದೆ  ಒದ್ದಾಡುವುದನ್ನು ನೋಡಲಾರದೆ  ನಾವೇ ಮಕ್ಕಳ ಹೋಮ್ ವರ್ಕ್ ಬರೆದು  ಮಕ್ಕಳಿಗೆ ಕಾಡಿ ಬೇಡಿ ಊಟ ಮಾಡಿಸುತ್ತೇವೆ. ಇನ್ನು  ಹೊಡೆದು ಬುದ್ಧಿಯನ್ನು ಯಾರಿಗೆ ಕಲಿಸಬೇಕು. ಅದಕ್ಕಿಂತ ಘೋರಶಿಕ್ಷೆಯನ್ನು ಶಾಲೆಯಲ್ಲೇ  ಕೊಡಲು ವ್ಯವಸ್ಥೆ ಆಗಿದೆಯಲ್ಲಾ!

ಮಕ್ಕಳು ಹದಿನಾರು ಸಮೀಪಿಸುತ್ತಿರುವಾಗ ಎಸ್.ಎಸ್.ಎಲ್.ಸಿ ಮುಗಿಸಿ  ಪಿ.ಯು.ಸಿ ಮೆಟ್ಟಿಲು ಹತ್ತುತ್ತಿರುವಾಗ  ಹಗಲು ರಾತ್ರಿ ಟ್ಯೂಶನ್ ಕಾಟ. ಮಗನಂತೂ ಫುಲ್ ಬಿಜಿ*. ಈ ಅವಸ್ಥೆಯಲ್ಲಿ   ಮಾತನಾಡಿಸಲು   ಮಕ್ಕಳಿಗೆ     ಪುರಸೊತ್ತಿಲ್ಲ. ಅವನೊಡನೆ ಹೇಗೆ ನಡೆದುಕೊಳ್ಳಬೇಕೆಂದು ಅಪ್ಪ-ಅಮ್ಮನಿಗೆ ಗೊತ್ತಾಗುವುದೇ ಇಲ್ಲ. ಕಾರಣ  ಅವನು ಇವರ ಕೈಗೆ ಸಿಕ್ಕುವುದೇ ಇಲ್ಲ.

ನಾವೇ ಕಟ್ಟಿಕೊಂಡಿರುವ ಈ ವಿಷ ವರ್ತುಲದಿಂದ ಹೊರಬಾರದೆ ನಾವು ನಮ್ಮ ಮಕ್ಕಳಿಂದ ಏನು ನಿರೀಕ್ಷಿಸಲು ಸಾಧ್ಯ? ಜೊತೆಗೆ  ಟಿವಿ,ಇಂಟರ್ ನೆಟ್, ಮೊಬೈಲ್....ಎಲ್ಲವೂ  ನಮ್ಮ ಸಂಬಂಧಗಳನ್ನು ಹಾಳುಮಾಡಲು ನಾವೇ ನಿರ್ಮಿಸಿಕೊಂಡಿರುವ ವಿಷ ವರ್ತುಲ!!!


ಸೂಕ್ತ: ಶ್ರೀ ಸದ್ಯೋಜಾತರಿಂದ ಪ್ರಕಟಿತ
ಚಿಂತನೆ: ಹರಿಹರಪುರಶ್ರೀಧರ್

Saturday, October 27, 2012

Saturday, August 25, 2012

"ಅಹಂ"ಮತ್ತು "ದುರಹಂಕಾರ"

ಶುದ್ಧ ಅರಿವು ಎಲ್ಲಿ ಇರುತ್ತದೋ ಅಲ್ಲಿ ದುರಹಂಕಾರ ಇರುವುದಿಲ್ಲ.ಅಜ್ಞಾನ ಇರುವಲ್ಲಿ ಮಾತ್ರ ದುರಹಂಕಾರ ಇರುತ್ತದೆ.ಅಹಂಕಾರ ಇನ್ನೊದು ಅರ್ಥದಲ್ಲಿ ಲೌಕಿಕ ಅನುಭೂತಿ ಎಂತಲೂ ಆಗುತ್ತದೆ. ಅದರಲ್ಲೇ ಮುಳುಗಿ ಅದೇ ಸತ್ಯವೆಂಬ ತೀವ್ರವಾದ ನಂಬಿಕೆಯೇ ದುರ-ಅಹಂಕಾರ ಯೆನ್ನಲ್ಪಡುವುವುದು.ಅಲ್ಲಿ ಯಾವುದೇ ಬೇರೆಯ ಅಸ್ತಿತ್ವದ ಬಗ್ಗೆ ವಿಚಾರವಿಲ್ಲದಂತೆ ಕಡಿವಾಣ ಹಾಕಿಕೊಂಡಿರಲಾಗುತ್ತದೆ ಮನಸ್ಸು ಬೇರೆಯದಕ್ಕೆ ತೆರೆದಿರುವುದಿಲ್ಲ. ತಾನು ನಂಬಿರುವುದೇ ಸತ್ಯ ಎಂಬ ಪ್ರಭಲವಾದ ನಂಬಿಕೆಯೇ ದುರ-ಅಹಂಕಾರ ಎಂದು ಕರೆಯಲ್ಪಟ್ಟಿದೆ. 

"ಬದುಕಿನುದ್ದಕ್ಕೂ ಜಂಜಾಟ"

ಬದುಕಿನುದ್ದಕ್ಕೂ ಜಂಜಾಟ ಎನ್ನುವುದು ನಮ್ಮ ಭಾವನೆಗಳಿಗೆ ಸಂಬಂಧಪಟ್ಟದ್ದು.ಇನ್ನು ಬದುಕಬೇಕು ಎನ್ನುವುದು, ಮನಸ್ಸಿನ ಭಾವ. ಎಂಥಹ ಕುರುಡರು, ಕುಂಟರೂ, ಅಂಗವಿಕಲರು, ರೋಗಿಗಳೂ, ಕೂಡ ಬದುಕಬೇಕು ಎಂದು ಬಯಸುವುದು ಅದೇ ಭಾವದಿಂದಾ ಆಗಿರುತ್ತದೆ. ವೈರಾಗ್ಯ ಎನ್ನುವುದು ಬುದ್ಧಿಯ ಭಾವ.ಜೀವ ಎನ್ನುವುದು ವಿಧಿಯ ಸಂಕಲ್ಪ "ವಿಧಿ" ಎಂದರೆ "ಪರಮಾತ್ಮ" ಅಥವ ಪ್ರಕೃತಿ ನಿಯಮ ಎಂದು ಬೇಕಾದರೂ ಕರೆಯಬಹುದು. 

Sunday, August 12, 2012

Tuesday, August 7, 2012

ದಾನಿಗಳಾಗಲು ಹಣ ಮುಖ್ಯವೋ ? ಮನಸ್ಸೋ?


ಮಾರನಯಕನ ಹಳ್ಳಿ ಎಂಬಲ್ಲಿಗೆ ಹೊರಟಿದ್ದ ಒಬ್ಬ ನಗರವಾಸಿಗಳು ಬೇರೆ ಸಂಚಾರ ವ್ಯವಸ್ತೆ ಇಲ್ಲದೆ ಬಸ್ಸಿಂದ ಇಳಿದು ಮರದಡಿ ನಿಂತಿದ್ದರು.  ಘಲ್...ಘಲ್....ಸದ್ದು ಮಾಡುತ್ತಾ ಬಂದ ಜೋಡಿ ಎತ್ತಿನ ಗಾಡಿಯವನು ಮರದ ಕೆಳಗೆ ನಿಂತಿದ್ದ ಈ ನಗರವಾಸಿಗಳನ್ನು ನೋಡಿ "ಎಲ್ಲಿಗೆ ಹೋಗಬೇಕು?" ಎಂದು ಕೇಳಿದ.  " ಸ್ವಲ್ಪ ದೂರದಲ್ಲಿರುವ ಮಾರನಾಯಕನ ಹಳ್ಳಿಗೆ " ಎಂದು ಹೇಳಿ " ನನ್ನ ಅಲ್ಲಿತನಕ ತಲುಪಿಸಿ ಬಿಟ್ಟರೆ ನಿನ್ನ ಬಾಡಿಗೆ ಏನಿದೆಯೋ ಅದನ್ನ ಕೊಡುತ್ತೀನಿ. ಅಷ್ಟು ಮಾಡಿ ಪುಣ್ಯ ಕಟ್ಕೊ" ಎಂದು ಒಂದೇ ಸಮನೆ ಹೇಳಿದರು.  " ಅದಕ್ಕೇನಂತೆ, ನಾನು ಆ ಕಡೆಗೆ ಹೋಗ್ತಾ ಇದೀನಿ. ಬನ್ನಿ ಸ್ವಾಮೀ" ಎಂದು ಸ್ನೇಹದಿಂದ ಕರೆದ. ಎತ್ತಿನ ಗಾಡಿ ಬಹಳ ದಿನದ ನಂತರ ಹತ್ತಿ ಕೂತರು. ಕುಲುಕಾಟದ ಮಣ್ಣಿನ ರಸ್ತೆಯಲ್ಲಿ ಧೂಳು ಅಡರುತ್ತಿತ್ತು ಜೊತೆಗೆ ರಣ ಬಿಸಿಲು.  ಇದನ್ನು ಗಮನಿಸಿದ ಗಾಡಿಯವ " ಸ್ವಾಮೀ,  ಅಲ್ಲೇ  ಛತ್ರಿ ಮಡಗಿವ್ನಿ ಬಿಚ್ಚಿಕೊಳಿ. ಪ್ಯಾಟೆ ಜನಕ್ಕೆ ಈ ಬಿಸಿಲು ಆಗಬರಂಗಿಲ್ಲಾ." ಎಂದು ಸಹಜವಾಗಿ ಅಂದ.

ಗಾಡಿ ಸಾಗುತ್ತ ಇದ್ದಂಗೆ " ಈ ಗ್ರಾಮದಲ್ಲಿ ಒಬ್ಬರು ವೆಂಕಪ್ಪ ನಾಯಕರು ಅಂತ........ ತುಂಬಾ ದೊಡ್ಡ ಮನುಷ್ಯರು, ದೊಡ್ಡ ದಾನಿಗಳು....... ಅವರು ಈಗ ಹೇಗಿದ್ದಾರೆ? ನಿಮಗೇನಾದರೂ ಗೊತ್ತ?  ನಾನು ಅವರನ್ನ ......" ಹೇಳುತ್ತಿರುವ ಮಧ್ಯೆ ಬಾಯಿಹಾಕಿ " ಅವ್ರು ಇನ್ನೆಲ್ಲಿ ಸ್ವಾಮೀ? ಅವರನ್ನ ಆ ಸ್ವಾಮೀ ಕರಕ್ಕಂಡು ಬಿಟ್ಟ.  ಅದಿರ್ಲಿ, ನೀವು ಯಾಕೆ ಅವರನ್ನ ಕೇಳ್ತಾ ಇದ್ದೀರಿ?" ಎಂದು ಮರು ಪ್ರಶ್ನೆ ಹಾಕಿದ. ಈ  ಮಾತು ಕೇಳಿದ ನಗರವಾಸಿಗಳಿಗೆ ಅತ್ಯಂತ ನಿರಾಸೆಯಾಯಿತು.  ಏನೂ ತಿಳಿಯದೆ  ತಲೆ ಕೆಳಕ್ಕೆ ಮಾಡಿ ಕಣ್ಣು ತುಂಬಿಕೊಂಡರು. ಇದನ್ನು ಗಮನಿಸಿದ ಗಾಡಿಯವ " ನಿಮಗೆ ಸಂಬಂಧವಾ? ನಿಮ್ಮ ಕಣ್ಣನೀರು ನೋಡಿದರೆ ನಿಮಗೆ ತುಂಬಾ ಹತ್ತಿರದವರು ಅನಿಸುತ್ತೆ? " ಎಂದು ಅನುಮಾನ ವ್ಯಕ್ತ ಪಡಿಸಿದ.  " ನಾನು ಈ ಊರಿನವನೇ, ಈಗ್ಗೆ 35 ವರ್ಷಗಳ ಹಿಂದೆ ಈ ಊರು ಬಿಟ್ಟು ಪಟ್ನ ಸೇರಿಕೊಂಡವಿ. ವೆಂಕಪ್ಪ ನಾಯಕರು ನನ್ನ ಓದಿಗೆ ಸಹಾಯ ಮಾಡಿ ಚನ್ನಾಗಿ ಓದು ಅಂತ ಪ್ರೋತ್ಸಾಹ ಕೊಟ್ಟರು. ನಾನು ಒಳ್ಳೆ ಕೆಲಸಕ್ಕೆ ಸೇರಿಕೊಂಡು ವಿದೇಶಕ್ಕೆ ಹೋಗಿಬಿಟ್ಟೆ. ಕಳೆದ ಸಾರಿ ಭಾರತಕ್ಕೆ ಬಂದಾಗ ಈ ಹಳ್ಳಿಗೆ  ಬರಲಾಗಲಿಲ್ಲ. ಈ ಸಾರಿ ನಾಯಕರನ್ನ ನೋಡೇ ಹೋಗಬೇಕೆಂದು ಬಂದೆ.  ಆದರೆ, ನಂಗೆ ಅವರನ್ನ ನೋಡಿ ಆಶೀರ್ವಾದ ಪಡೆಯುವ ಭಾಗ್ಯ ಇಲ್ಲವಾಯಿತಲ್ಲ ಎಂದು ದುಃಖ ಆಗ್ತಾ ಇದೆ. " ಎಂದು ಬಿಕ್ಕಳಿಸಿದರು.  ಅಷ್ಟರಲ್ಲಿ ಗಾಡಿ ನಾಯಕರ ಮನೆ ಹತ್ತಿರಕ್ಕೆ ಬಂತು.

" ಸ್ವಾಮೀ......ಇಳೀರಿ. ನಾಯಕರ ಮನೆ ಬಂತು.  ಬನ್ನಿ ಒಳಕ್ಕೆ." ಎಂದು ಆತ್ಮೀಯವಾಗಿ ಒಳಕ್ಕೆ ಕರೆದ.  ಒಳಗೆ ಹೋಗಿ ಕುರ್ಚಿಯ ಮೇಲೆ ಕೂತ ಅವರ ಕಣ್ಣಿಗೆ ಬಿದ್ದದ್ದು ವೆಂಕಪ್ಪ ನಾಯಕರ ದೊಡ್ಡ ಫೋಟೋ. ಕಣ್ಣು ತುಂಬಿ ಬಂತು.  ಎದ್ದು ನಿಂತು ಕೈ ಜೋಡಿಸಿ "ನನ್ನನ್ನ  ಕ್ಷಮಿಸಿ ಬಿಡಿ,  ನಾನು ನಿಮ್ಮನ್ನ ನೋಡಲು ಬಹಳ ವರ್ಷ ಬರಲಿಲ್ಲ. ನೀವು ನನಗೆ ಮಾಡಿದ ಉಪಕಾರ ಹೇಗೆ ತೀರಿಸಲಿ? " ಎಂದು ಗದ್ಗದಿತರಾದರು.  ಅಷ್ಟರಲ್ಲಿ ಮನೆ ಒಳಗಿದ್ದವರೆಲ್ಲ ಹಜಾರಕ್ಕೆ ಬಂದರು.  ಗಾಡಿಯವ "ಇವರು ಅಯ್ಯಂಗೆ ಬೇಕಾದವರು."  ಎಂದು ಪರಿಚಯ ಹೇಳಿದ. ಜೋಬಿಗೆ ಕೈ ಹಾಕಿ ಗಾಡಿ ಬಾಡಿಗೆ ಕೊಡಲು ಪಾಕೆಟ್ ತೆಗಯಲು ಹೋದಾಗ " ಸ್ವಾಮೀ, ನಾನೂ ನಾಯಕರ ಕುಟುಂಬದ ಕುಡಿ. ಏನೋ ಕಾರಣ ಎಲ್ಲವನ್ನು ಕಳೆದುಕೊಂಡು ಈಗ ನಾವೆಲ್ಲಾ ಗತಿ ಕೆಟ್ಟವರಾಗಿದ್ದೇವೆ. ಕೊನೆ ಉಳಿದಿರುವ ಈ ಜೋಡಿ ಎತ್ತು ನಮ್ಮನ್ನ ಸಾಕ್ತಾ ಇತೆ. ನನ್ನ ಹಿರಿಯರು ನಮ್ಮನ್ನ ಕೈ ಬಿಟ್ಟಿಲ್ಲ ಸ್ವಾಮೀ" ಎಂದ .   ಅವರು ದಂಗಾಗಿ ಹೋದರು.  ತಕ್ಷಣ ಅವರ ಮನಸ್ಸಿನಲ್ಲಿ ಇದು ನನಗೆ ಸರಿಯಾದ ಸಮಯ ಇವರಿಗೆ ಸಹಾಯ ಮಾಡಲು ಎಂದು ಜೇಬಿಂದ ಸಾವಿರದ ಹತ್ತು ನೋಟುಗಳನ್ನು ಗಾಡಿಯವನ ಕೈಯಲ್ಲಿಡಲು ಮುಂದೆ ಬಾಗಿದರು.  ಹಾವು ತುಳಿದವನಂತೆ  ನಾಕು ಹೆಜ್ಜ ಹಿಂದೆ ಹೋಗಿ " ನಮ್ಮ ಹಿರಿಯರು ಕೈನೀಡಿ ಕೊಟ್ಟು ಬೆಳೆಸಿದ ನಿಮ್ಮಂತಹವರ ಹತ್ತಿರ ನಾವು ಪಡ ಕೊಂಡರೆ,  ದಾನ ಕೊಟ್ಟಿದ್ದನ್ನ ಮತ್ತೆ ಹಿಂದ್ದಕ್ಕೆ ಪಡೆದ ಪಾಪ ಬರುತ್ತೆ. ನಮ್ಮ ಹಿರಿಯರಿಗೆ ಅವಮಾನ ಮಾಡಿದ ಹಾಗಾಗುತ್ತೆ. ಖಂಡಿತ ಬೇಡ. ನಿಮಗೆ ನಮ್ಮ ಅಯ್ಯನ ಮೇಲೆ ಗೌರವ ಇದ್ರೆ ಇವೆಲ್ಲ ಏನೊ ಬೇಡ." ಎಂದು ಸಾರಾಸಗಟಾಗಿ ತಿರಸ್ಕರಿಸಿದ.  ಇವರ ಬಾಯಿಂದ ಏನೂ ಹೊರಳಲೇ ಇಲ್ಲ.

ದಾನಶೂರರಾಗಲು ಹಣ ಮುಖ್ಯವೋ?  ಮನಸ್ಸು ಮುಖ್ಯವೋ? ನಮ್ಮ ಮನಸ್ಸೇ ಮಿತ್ರ, ನಮ್ಮ ಮನಸ್ಸೇ ಶತ್ರು. ನಾವು ಎಷ್ಟು ದೊಡ್ಡ ಮನಸ್ಸಿನವರು ಆಗಬಹುದು, ಹಾಗೆಯೇ ಚಿಕ್ಕವರೂ ಆಗಬಹುದು.  ನಾವು ಏನು ಚಿಂತಿಸುತ್ತೆವೋ   ಅದೇ ಆಗುತ್ತೇವೆ.  ಎಲ್ಲವು ನಮ್ಮ ಕೈಯಲ್ಲೇ ಇದೆ. ಮನಸ್ಸಿನ ಪ್ರಾಮುಖ್ಯತೆಯನ್ನು ಅರ್ಥ ಮಾಡಿಕೊಂಡರೆ ಬದುಕಿನಲ್ಲಿ ಮೇಲೇರಲು ಸಾಧ್ಯ.  

(ನನ್ನ ಮಿತ್ರರ  ಜೀವನದಲ್ಲಿ ಆದ ಸತ್ಯ ಘಟನೆಯ ಚಿತ್ರಣ )




ಸಿಗರೇಟು ಹೇಳಿದ ಬುದ್ಧಿ


ಒಂದು ಭಾನುವಾರ ಎಂದಿನಂತೆ ಗುರುನಾಥರನ್ನು ನೋಡಲು ಹೋಗಿದ್ದಾಗ ಅಲ್ಲಿ ನಡೆದ ಒಂದು ಘಟನೆಯನ್ನು ತಮ್ಮೊಂದಿಗೆ  ಹಂಚಿಕೊಳ್ಳುತ್ತಿದ್ದೇನೆ. 

ಹಜಾರ ಹೆಚ್ಚುಕಡಿಮೆ ತುಂಬಿಹೋಗಿತ್ತು ಎನ್ನಬಹುದು.  ಗುರುನಾಥರು ಯಾವುದೊ ಹಾಸ್ಯ ಪ್ರಸಂಗದಲ್ಲಿ ಎಲ್ಲರನ್ನು ನಗೆಕಡಲಿನಲ್ಲಿ ಮುಳುಗಿಸಿದ್ದರು.  ನಂತರದ ಕೆಲವು ನಿಮಿಷದಲ್ಲಿ ಒಬ್ಬ ದಂಪತಿಗಳ ಕಡೆ ತಿರುಗಿ " ಏನು ಬಂದಿದ್ದು? " ಎಂದು ಪ್ರಶ್ನಿಸಿದರು.  ಅಲ್ಲಿದ್ದ ಎಲ್ಲ ಗುರುಬಂಧುಗಳ ಗಮನ ಅವರ ಕಡೆಗೆ ಹೊರಳಿತು. ಆ ದಂಪತಿಯಲ್ಲಿ ಒಬ್ಬರು ಮಧ್ಯ ವಯಸ್ಸಿನ ಹೆಂಗಸರು ಎದ್ದು ನಿಂತು " ನಮ್ಮ ಯಜಮಾನರು ತುಂಬಾ ಸಿಗರೇಟು ಸೇದುತ್ತಾರೆ. ಯಾರು ಎಷ್ಟು ಹೇಳಿದರೂ ಕೇಳುವುದೇ ಇಲ್ಲ. ತಾವು ಅವರಿಗೆ ಸರಿಯಾಗಿ ಬುದ್ಧಿ   ಹೇಳಬೇಕು" ಎಂದು ಸ್ವಲ್ಪ ಅಹಂಕಾರ  ಮಿಶ್ರಿತ ದ್ವನಿಯಲ್ಲಿ ಹೇಳಿದರು. " ನಿಮ್ಮ ಯಜಮಾನರು ಸಿಗರೇಟು ಸೇದುತ್ತಾರೆ, ಯಾರು ಹೇಳಿದರು ಕೇಳಿಲ್ಲ. ಇನ್ನು ನಾನು ಹೇಳಿದರೆ ಕೇಳುತ್ತಾರೋ?   ಇರಲಿ.  ಈವರೆಗೆ ನೀವು ಹೇಳಿದ ಎಲ್ಲಾ ಮಾತನ್ನು ಕೇಳಿರುವ ನಿಮ್ಮ ಯೆಜಮಾನರು ಈ ಮಾತನ್ನು ಯಾಕೆ ಕೇಳಿಲ್ಲಾ?" ಎಂದು ಮರು ಪ್ರಶ್ನೆ ಹಾಕಿದರು. " ಯಾವಮಾತು ಕೇಳ್ತಾರೆ? " ಎಂದು ತನ್ನ ಯಜಮಾನರ ಕಡೆಗೆ ಒಮ್ಮೆ ನೋಡಿದರು.  ಆ ಯಜಮಾನರು ಅವಮಾನವಾದವರಂತೆ ತಲೆ ತಗ್ಗಿಸಿ ಬಿಟ್ಟರು.

" ಅಲ್ಲಮ್ಮಾ.....ನೀವು ಹೇಳಿದಿಕ್ಕೆ ತಾನೇ ಅವರ ಅಪ್ಪ ಅಮ್ಮನ್ನ ಊರಲ್ಲೇ ಬಿಟ್ಟು ಬಂದಿರುವುದು. ನೀವು ಹೇಳಿದ್ದಿಕ್ಕೆ ತಾನೇ ಇದ್ದೊಬ್ಬ ತಂಗಿ ಮದುವೆಗೂ ಏನೂ ಸಹಾಯ ಮಾಡದಲೆ ಎಲ್ಲರ ಹತ್ರ ಬೈಸಿಕೊಂಡರು. ನೀವು ಹೇಳಿದ್ದಕ್ಕೆ ತಾನೇ ಊರಿನ ಜಮೀನು  ಮಾರಿ, ನೀವು ಮನೆ ಕಟ್ಟಿಕೊಂಡು ನಿಮ್ಮ ಅತ್ತೆ ಮಾವನ್ನ ಅದೇ ಹಳೆ ಹಂಚಿನ ಮನೆಯಲ್ಲೇ ಉಳಿಸಿದ್ದು. ಇನ್ಯಾವ ಮಾತು ಕೇಳಬೇಕಮ್ಮ?  ಜೀವನ ಪೂರ್ತಿ ನೀವು ಹೇಳಿದ್ದನ್ನ ಚಾಚು ತಪ್ಪದ ಹಾಗೆ ಕೇಳಿಕೊಂಡೆ ಬಂದಿದ್ದಾರೆ........... ಈಗ ಸಿಗರೇಟು ಸೇದೊದುಕ್ಕೆ ನಿಮ್ಮ ಮಾತು ಕೇಳಲಿಲ್ಲ ಅಂತ ಬೇಜಾರೆ?  ಇದೊಂದಾದರೂ ಅವರ ಸ್ವಾತಂತ್ರದಲ್ಲಿ ಮಾಡಲಿ ಬಿಡಿ." ಎಂದು ಹಾಸ್ಯ ಮಿಶ್ರಿತ ದನಿಯಲ್ಲಿ ಹೇಳಿಬಿಟ್ಟರು.   ಆಕೆಗಂತೂ ದಿಕ್ಕೇ ತೋಚಲಿಲ್ಲ.  ಸೆರಗಿನಿಂದ ಬಾಯಿ ಮುಚ್ಚಿಕೊಂಡು ಎದ್ದು ಹೊರಗೆ ನಡೆದೇ ಬಿಟ್ಟರು.   ಆಕೆಯ ಯಜಮಾನರು ಹೊರಡಲು ಎದ್ದಾಗ " ಏನಪ್ಪಾ.......ಸಿಗರೇಟು ಸೇದೋದು ಒಳ್ಳೆದೆನಪ್ಪಾ?  ನಿನಗೆ ಗೊತ್ತಿಲ್ಲವೇ?  ಇರೋ ಅರೋಗ್ಯ ಕೆಡಸಿ ಕೊಂಡರೆ ನಿನ್ನ ಯಾರಯ್ಯ ನೋಡುತ್ತಾರೆ?  ಅವರೂ ಇಲ್ಲ , ಇವರೂ ಇಲ್ಲ ಅನ್ನೋಹಾಗೆ ಅಗ್ತಿಯಲ್ಲಪ್ಪ........ ಸಿಗರೇಟು ಬೇಡ....... ಬಿಟ್ಟುಬಿಡು."  ಎಂದು ತಂದೆ ಮಗನಿಗೆ ಹೇಳುವ ರೀತಿ ಬುದ್ಧಿವಾದ ಹೇಳಿದರು   ಆ ಯಜಮಾನರ ಕಣ್ಣು ತುಂಬಿ ಬಂತು.  ನೇರ ಬಂದು ಗುರುನಾಥರ ಪಾದಕ್ಕೆರಗಿ ಏನೋ ಹೇಳಬೇಕೆಂದು ಇರುವಾಗಲೇ ಗುರುನಾಥರು " ಏನೂ ಹೇಳಬೇಡ, ನಡಿ......." ಎಂದು ಬೆನ್ನು ತಟ್ಟಿದರು.

 ಅಲ್ಲಿ ನೆರೆದ ನಮಗೆಲ್ಲ ಒಂದು ರೀತಿಯ ಹೇಳಲಾಗದ ಸ್ಥಿತಿ.  ಒಂದೆರಡು ನಿಮಿಷದಲ್ಲಿ ಆದ ಈ ಘಟನೆ ಅದೆಷ್ಟು ಪರಿಣಾಮ ಬೀರಿತೆಂದರೆ ಅಲ್ಲಿದ್ದ ಕೆಲವರಿಗೆ ಚಳಿಯಲ್ಲೂ ಬೆವರಿನ ಅನುಭವ.  ಗುರುನಾಥರು ಇನ್ನು ಯಾರನ್ನು ಉದ್ದೇಶಿಸಿ ಏನು ಹೇಳುತ್ತಾರೋ ಎಂಬ ಆತಂಕ ಕೆಲವರಿಗಾದರೆ, ಮತ್ತೆ ಕೆಲವರು ನಮಗೇನೂ ಹೇಳದಿದ್ದರೆ ಸಾಕು  ಎನ್ನುವಂತೆ ಅಲ್ಲಿನ ಸನ್ನಿವೇಶ ಇತ್ತು.  ಗುರುನಾಥರು ಈ ಘಟನೆಯಲ್ಲಿ ಇಬ್ಬರಿಗೂ ಬುದ್ಧಿವಾದವನ್ನು ಅವರವರ ಮಾತಿನಲ್ಲೇ ಹೇಳಿದ್ದರು.  ಅವರ ಗುಣದೋಷಗಳನ್ನು  ಸರಿಯಾದ ಸಮಯದಲ್ಲಿ  ಎತ್ತಿ ಹಿಡಿದಿದ್ದರು.  ಇದು ಕೇವಲ ಅವರಿಗೆ ಮಾತ್ರ ಹೇಳಿದ ಬುದ್ಧಿವಾದವಾಗಿರದೆ ಎಲ್ಲರಿಗು ನೀಡಿದ ಎಚ್ಚರಿಕೆ ಘಂಟೆಯಾಗಿತ್ತು.  ಇಲ್ಲಿ ಸಿಗರೇಟು ನೆಪಮಾತ್ರವಾಗಿತ್ತು.

Monday, August 6, 2012

ಶವ ಸಂಸ್ಕಾರ



ಗಂಗಾದತ್ತ ಒಬ್ಬ ಶಿಸ್ತಿನ ವಾಹನ ಚಾಲಕ .  ಈತ ಪುಣೆಯ ಪ್ರಖ್ಯಾತ ಕೈಗಾರಿಕೊದ್ಯಮಿಯಾದ ಶ್ರೀ ಝಾವೇರಿ ಪೂನವಾಲ ಎಂಬುವರ ದುಬಾರಿ ಕಾರಿನ ಚಾಲಕನಾಗಿದ್ದ.  ಈತ ತನ್ನ ಮಾಲಿಕರಿಗಾಗಿ ಹಗಲೂ ರಾತ್ರಿ ದುಡಿಯುತ್ತಿದ್ದ. ಈತ ಮಾಲಿಕರಿಂದಲೂ  ಒಳ್ಳೆಯ ಹೆಸರು ಗಳಿಸಿದ್ದ.  ಗಂಗಾದತ್ತ ತನ್ನ ವಾಹನ ಚಾಲನೆ ಪ್ರಾರಂಭ ಮಾಡಿದ್ದೆ ದುಬಾರಿ ವಾಹನದಿಂದ.  ಒಮ್ಮೆಯೂ ಯಾವ ಒಂದು ಚಿಕ್ಕ ಗೆರೆಯ ಗುರುತೂ ತನ್ನ ಕಾರಿಗೆ ಬೀಳದಂತೆ ಅತ್ಯಂತ ಜೋಪಾನವಾಗಿ ನೋಡಿಕೊಂಡಿದ್ದ.  ಜೀವನದಲ್ಲೂ ಸಾಕಷ್ಟು ಕಷ್ಟಪಟ್ಟು ತನ್ನ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಿದ್ದ.  ಒಬ್ಬ ಮಗಳನ್ನು ಚಾರ್ಟೆಡ್ ಅಕೌನ್ಟೆಂಟ್ ಕೂಡ ಮಾಡಿದ್ದ.

ಗಂಗಾದತ್ತ ಒಂದು ದಿನ ಹೃದಯಾಘಾತದಿಂದ ನಿಧನಾದ.  ಆ ಸಮಯದಲ್ಲಿ ತನ್ನ ಮಾಲೀಕರು  ಮುಂಬೈನಲ್ಲಿದ್ದರು .  ಈ ವಿಚಾರ ತಿಳಿದ ಮಾಲೀಕರು  ತಕ್ಷಣ ತನ್ನೆಲ್ಲ ಕೆಲಸಗಳನ್ನು ಸ್ತಗಿತಗೊಳಿಸಿ ಮುಂಬೈಗೆ ವಾಪಸು ಬರುವ ಮುಂಚೆ ಗಂಗಾದತ್ತನ ಮನೆಗೆ ಫೋನ್ ಮಾಡಿ ತಾನು ಬರುವವರೆಗೂ ಗಂಗಾದತ್ತನ ಪಾರ್ಥಿವ ಶರೀರವನ್ನು ಇಡಬೇಕೆಂದು ತಾನೇ ಶವಸಂಸ್ಕಾರದ ವ್ಯವಸ್ತೆ ಮಾಡುವುದಾಗಿ ಝಾವೇರಿ ತಿಳಿಸಿದರು .  ಹೆಲಿಕಾಪ್ಟರ್  ಮೂಲಕ ಪೂನಾಕ್ಕೆ ಬಂದರು .

ಬಂದವರೆ  ಗಂಗಾದತ್ತ ಓಡಿಸುತ್ತಿದ ಆ ದುಬಾರಿ ಕಾರಿಗೆ ಪುಷ್ಪಾಲಂಕಾರ ಮಾಡಿಸಿದರು . ಈ ಕಾರಿನಲ್ಲೇ ಗಂಗಾದತ್ತನ ಶವ ಯಾತ್ರೆ ನಡೆಸಬೇಕೆಂದು ಮತ್ತು ಆ ಕಾರಿನ ಚಾಲನೆ ತಾನೇ ಮಾಡುತ್ತೇನೆಂದು ಇದಕ್ಕೆ ಅನುಮತಿ ನೀಡಬೇಕೆಂದು ಝಾವೇರಿ ಗಂಗಾದತ್ತನ ಕುಟುಂಬದವರಲ್ಲಿ ವಿನಂತಿಸಿಕೊಂಡರು .   ಕುಟುಂಬದ ಸದಸ್ಯರು ಮೂಕ ವಿಸ್ಮಿತರಾದರು.  ತಮ್ಮ ಯಜಮಾನ ತನ್ನ ಕಾರಿನ ಚಾಲಕನಿಗೆ ತೋರಿಸುತ್ತಿರುವ ಗೌರವದ ಬಗ್ಗೆ ಏನು ಹೇಳಲೂ ತೊಚದಾದರು.  ಎಲ್ಲರ ಕಣ್ಣುಗಳಲ್ಲಿ  ಧಾರಾಕಾರ ನೀರು ಹರಿಯಿತು. ಗಂಗಾದತ್ತನ ಪಾರ್ಥಿವ ಶರೀರದ ಜೊತೆಯಲ್ಲಿ  ಅಪಾರ ಸಂಖ್ಯೆಯಲ್ಲಿ ಬಂಧು- ಮಿತ್ರರು ಬಂದು ಸಂಸ್ಕಾರ ಕಾರ್ಯ ನೆರವೇರಿಸಲು ಸಹಕರಿಸಿದರು. ಮನ ಮಿಡಿಯುವ  ಮತ್ತು ಗೌರವಪೂರ್ಣ ಅಂತ್ಯ ಸಂಸ್ಕಾರ ನೆರವೇರಿತು.  ಝಾವೇರಿ ತೋರಿಸಿದ ಔದಾರ್ಯ ಎಲ್ಲರ ಬಾಯಲ್ಲೂ ಹರಿದಾಡಿತು.
                           

ಅಲ್ಲಿ ಬಂದಿದ್ದ ಒಬ್ಬ ಗಣ್ಯರು ಝಾವೆರಿಯವರ  ಔದಾರ್ಯವನ್ನು ಮೆಚ್ಚುತ್ತ ಇದು ನಿಮಗೆ ಹೇಗೆ ಸಾಧ್ಯವಾಯಿತು ಎಂದು ಕೇಳಿದರು. ಆಗ ಝಾವೆರಿ ಕೊಟ್ಟ ಉತ್ತರ ಮಾತ್ರ ಅತ್ಯಂತ ಮನೋಜ್ಞವಾಗಿತ್ತು.
" ಗಂಗಾದತ್ತ ಒಬ್ಬ ಆದರ್ಶವ್ಯಕ್ತಿ.  ಆತನು ತನ್ನ ಜೀವನ ಆರಂಭಿಸಿದ್ದು ಈ ಕಾರಿನಲ್ಲೇ, ಅಂತಿಮ ಯಾತ್ರೆಯು ಈ ಕಾರಿನಲ್ಲೇ ಆಗ ಬೇಕೆಂದು  ನನಗನಿಸಿತು.  ಇಷ್ಟು ದಿನ ನನನ್ನು ಕರೆದುಕೊಂಡು ಹೋಗುತ್ತಿದ್ದ ಗಂಗಾದತ್ತನನ್ನು ಈ ದಿನವಾದರೂ ನಾನು  ಆತನನ್ನು ಕರೆದು ಕೊಂಡು ಹೋಗಬೇಕೆಂದು ನನಗೆ ಅನಿಸಿತು .  ಪ್ರತಿಯೊಬ್ಬರೂ ಹಣ ಸಂಪಾದನೆ ಮಾಡುತ್ತಾರೆ, ಇದರಲ್ಲಿ ಯಾವ ದೊಡ್ದಸ್ತಿಕೆಯು ಇಲ್ಲ. ಆದರೆ, ಈ ಹಣ ಸಂಪಾದನೆ ಮಾಡಲು ಸಹಕರಿಸಿದ ಪ್ರತಿಯೊಬ್ಬರನ್ನು ಕೃತಜ್ಞತೆಯಿಂದ ಸ್ಮರಿಸುವುದೇ ದೊಡ್ಡಸ್ತಿಕೆ.  ನಾನು ನನ್ನ ಗಂಗಾದತ್ತನಿಗೆ ಸಲ್ಲಿಸಬಹುದಾದ ಅಂತಿಮ ನಮನ ಮತ್ತು ಗೌರವ ಎಂದರೆ ಇದೆ.  ಇದರಲ್ಲಿ ನನ್ನ ದೊಡ್ಡತನವೇನೂ ಇಲ್ಲ " ಎಂದು ವಿನಯದಿಂದ ಹೇಳಿದರು.

ನಿಜವಾದ ದೊಡ್ಡತನ ಮತ್ತು ಶ್ರೀಮಂತಿಕೆ, ಮಾನವೀಯ ಮೌಲ್ಯಗಳಲ್ಲಿ ಇದೆಯೇ ಹೊರತು ಬಂಗಲೆ, ಕಾರು, ಅಂತಸ್ತು, ಅಧಿಕಾರದಲ್ಲಿ ಖಂಡಿತ ಇಲ್ಲ ಎಂಬ ಸತ್ಯವನ್ನು ಸ್ವತಹ ಮಾಡಿ ತೋರಿಸಿದ ಝಾವೆರಿ ಉನ್ನತ ಸ್ಥಾನದಲ್ಲಿ ನಿಂತ ಆದರ್ಶ ವ್ಯಕ್ತಿ ಯಾಗಿದ್ದಾರೆ.

( ಪುಣೆಯಿಂದ ನನ್ನ ಮಿತ್ರರು  ಈ ವಿಚಾರ ತಿಳಿಸಿದನ್ನು ಓದುಗರ ಗಮನಕ್ಕೆ ತಂದಿದ್ದೇನೆ.)

Friday, August 3, 2012

ಗೃಹಪ್ರವೇಶ


ಒಂದು ಭಾನುವಾರ ನನ್ನ ಗುರುನಾಥರ ಬಳಿಗೆ ಹೋಗಿದ್ದೆವು. ಅಲ್ಲಿ ನಮ್ಮಂತೆಯೇ ಹಲವಾರು ಬಂಧುಗಳು ಬಂದಿದ್ದರು.ಆ ಸಮಯದಲ್ಲಿ ಬೆಂಗಳೂರಿನಿಂದ   ಬಂದ ಗುರು ಬಂಧು ಒಬ್ಬರು ತಮ್ಮ ಮನೆಯ ಗೃಹಪ್ರವೇಶಕ್ಕಾಗಿ ಒಂದು ಒಳ್ಳೆ ದಿನವನ್ನು ನಿಗಧಿ ಮಾಡಿ ಹೋಗಲು ಬಂದಿದ್ದರು.  ಆ ಸಮಯದಲ್ಲಿ ನಡೆದ ಸಂಭಾಷಣೆಯ ಸಾರವಿದು.

ಗುರುನಾಥರು : ಏನ್ಸಾರ್, ಬಂದಿದ್ದು?

ಗುರುಬಂಧು : "ಏನಿಲ್ಲ, ಮನೆಯೆಲ್ಲ ಮುಗಿಯಿತು, ಇನ್ನು ಗೃಹ ಪ್ರವೇಶ ಮಾಡಿದರಾಯಿತು. ಅದಕ್ಕಾಗಿ ತಮ್ಮಲ್ಲಿ ಒಂದು ಒಳ್ಳೆ ದಿನ ನಿಷ್ಕರ್ಷೆ ಮಾಡಿಕೊಂಡು ಹೋಗೋಣ ಎಂದು ಬಂದೆವು." ಎಂದು ಹೇಳಿ ಗಂಡ ಹೆಂಡತಿ ಇಬ್ಬರು ಗುರುನಾಥರ ಪಾದಕ್ಕೆ ನಮಸ್ಕರಿಸಿದರು.

ಗುರುನಾಥರು: " ಗೃಹಪ್ರವೇಶವೇ? ಅದನ್ನು ಈಗಾಗಲೇ ಹಲವಾರು ಜನ ಮಾಡಿದ್ದಾರಲ್ಲ?  ಅಲ್ಲವೇ? " ಎಂದು ನಮ್ಮ ಕಡೆ ನೋಡಿ ಕಣ್ಣು ಮಿಟುಕಿಸಿ ನಸುನಕ್ಕರು.

ಗುರುಬಂಧು   ಪತ್ನಿ : "ಇಲ್ಲ ಗುರುಗಳೇ, ಗೃಹಪ್ರವೇಶ ಇನ್ನು ಆಗಿಲ್ಲಾ." ಎಂದರು ಆತುರದಲ್ಲಿ.

ಗುರುನಾಥರು : " ಏನಮ್ಮಾ ಹೀಗೆ ಹೇಳುತ್ತಾ ಇದ್ದಿಯಾ?  ಗಾರೆ ಕೆಲಸದವನು, ಲೈಟ್   ಕೆಲಸದವನು, ನಲ್ಲಿ ಕೆಲಸದವನು, ಬಣ್ಣ ಬಳಿಯುವವನು, ಇನ್ನು ಪ್ರತಿ ದಿನಾ, ನೀವು ನಿಮ್ಮ ಸ್ನೇಹಿತರು ಎಲ್ಲರು ಆ ಗೃಹದ ಪ್ರವೇಶ ಮಾಡಿದಿರಲ್ಲಾ!  ಇನ್ನ್ಯಾವ ಗೃಹಪ್ರವೇಶನಮ್ಮಾ? " ಎಂದು ಸ್ವಲ್ಪ ನಗೆಯಾಡುತ್ತಲೇ  ಪ್ರಶ್ನೆ ಮಾಡಿದರು.

ಗುರು ಬಂಧು ಮತ್ತು ಪತ್ನಿ : ಏನೂ ಗೊತ್ತಾಗದೆ ಕಕ್ಕಾಬಿಕ್ಕಿಯಾಗಿ ನಿಂತು " ಅವರೆಲ್ಲ ಬರದೆ ಇದ್ದರೆ ಕೆಲಸ ಹೇಗಾಗುತ್ತೆ?"ಎಂದು ನಗುತಂದುಕೊಂಡು  ನಕ್ಕರು.

ಗುರುನಾಥರು : " ಮತ್ತೆ ಇನ್ನು ಯಾರಿಗೆ ಗೃಹಪ್ರವೇಶ? ಎಲ್ಲರು ಬಂದ ಹಾಗೆ ಆಗಿದೆಯಲ್ಲ?" 

ಗುರುಬಂಧು ಪತ್ನಿ : " ನೆಂಟರು ಇಷ್ಟರು, ಬಂಧು ಬಳಗ ಎಲ್ಲರನ್ನು ಒಳ್ಳೆ ದಿನ ಕರೆದು ಊಟ ಹಾಕಬೇಡವೆ?" ಎಂದರು ಆಕೆ.

ಗುರುನಾಥರು  : " ಎಲ್ಲರನ್ನು ಕರೆದು ಊಟ ಹಾಕಬೇಕು!  ಮನೆ ಎಷ್ಟು ದೊಡ್ಡದಾಗಿದೆ, ಎಷ್ಟು ಚಂದವಾಗಿದೆ, ಎಂದು ಎಲ್ಲರಿಗು ತೋರಿಸಿ ಅವರ ಮೆಚ್ಚುಗೆ ಗಳಿಸಬೇಕು. ಅಲ್ಲವೇ ?" ಎಂದು ನಮ್ಮ ಕಡೆ ತಿರುಗಿ ನಗುತ್ತ " ನಿಮ್ಮ ಅತ್ತೆಯವರನ್ನ ಏನು ಮಾಡುತ್ತೀರಿ? " ಎಂದರು. 

ಗುರುಬಂಧು  ಪತ್ನಿ.: " ಅವರನ್ನೂ ಕರೆದುಕೊಂಡು ಬರುತ್ತೇವೆ."

ಗುರುನಾಥರು  " ಅಂದರೆ,  ಅವರು ಈಗ ನಿಮ್ಮ ಜೊತೇಲಿ ಇಲ್ಲವೇ ? " ಎಂದು ಆಶ್ಚರ್ಯ ವ್ಯಕ್ತ ಪಡಿಸಿದರು.

ಗುರುಬಂಧು ಪತ್ನಿ : ಈ ವಿಷಯ ಇವರಿಗೆ ಹೇಗೆ ಗೊತ್ತಾಯಿತು ಎಂದು ಅನುಮಾನಿಸುತ್ತ,   ಸ್ವಲ್ಪ ಮೌನದ ನಂತರ " ಇಲ್ಲ" ಎಂದರು.

ಗುರುನಾಥರು: " ಅಲ್ಲಮ್ಮಾ, ಮನೆದೇವರನ್ನು ಹೊರಗಡೆ ಇಟ್ಟು ಕಲ್ಲಿಗೆ  ಪೂಜೆ ಮಾಡಿದರೆ ಏನು ಭಾಗ್ಯ ಬರುತ್ತಮ್ಮ?  ನಿಮ್ಮ ಅತ್ತೇನ ವೃದ್ಧಾಶ್ರಮಕ್ಕೆ ಸೇರಿಸಿ ನೀವು ತುಂಬಾ ದೊಡ್ಡ ಮನೆ ಗೃಹ ಪ್ರವೇಶ ಮಾಡ್ತೀರಾ? ಹಸು ನಿಮ್ಮ ಮನೆಗೆ ಬಂದರೆ ಒಳ್ಳೇದು, ಆದರೆ ನಿಮ್ಮ ಅತ್ತೆ ?  ಏನು ಅನ್ಯಾಯ? ಮೊದಲು ನಿಮ್ಮ ಅತ್ತೆಯವರನ್ನ ಮನೆಗೆ ಕರೆದುಕೊಂಡು ಬನ್ನಿ. ಅವರಲ್ಲಿ ಕ್ಷಮಾಪಣೆ ಕೇಳಿ ಜೊತೆಯಲ್ಲಿ ಇಟ್ಟು ಕೊಳ್ಳಿ.  ಅವರ ಆಶೀರ್ವಾದ ಮೊದಲು ಪಡೆಯಿರಿ. ಅವರು ನಿಮ್ಮ ಮನಗೆ ಬಂದರೆ ಗೃಹಪ್ರವೇಶ ಆದಂತೆ. ಅದು ಬಿಟ್ಟು ನೀವು ಸಾವಿರ ಜನನ್ನ ಕರೆದು ಊಟ ಹಾಕಿ,ಉಡುಗೊರೆ   ಕೊಟ್ಟರು ಏನೂ ಪ್ರಯೋಜನವಿಲ್ಲ. ನಡೀರಿ, ನಡೀರಿ. " ಎಂದು ಕಟುವಾಗಿ ಹೇಳಿ ಮುಖ ತಿರುಗಿಸಿಬಿಟ್ಟರು.

ಅಲ್ಲಿದ್ದವರಿಗೆಲ್ಲ ಪರಮಾಶ್ಚರ್ಯ ಆಯಿತು.  ಗುರುಬಂಧು ಮತ್ತು ಅವರ ಪತ್ನಿಗೆ ತುಂಬಾ ಅವಮಾನವಾದಂತೆ ಆಯಿತು. ತಲೆ ತಗ್ಗಿಸಿ ನಿಂತು ಬಿಟ್ಟರು.  ಮತ್ತೇನಾದರೂ ಹೇಳಬಹುದೆಂದು ಅವರು ಸ್ವಲ್ಪ ಸಮಯ ಕಾದರು. ಗುರುನಾಥರು ಅವರಕಡೆ ನೋಡಲೇ ಇಲ್ಲ.  ಸ್ವಲ್ಪ ಸಮಯದ ನಂತರ " ಇನ್ನು ಯಾಕೆ ಇಲ್ಲೇ ಇದ್ದೀರಾ? ಹೋಗಿ ಮೊದಲು ಆಕೆಯನ್ನ ಮನೆಗೆ ಕರೆದು ತನ್ನಿ, ಆಮೇಲೆ ಬನ್ನಿ." ಎಂದು ಕಡ್ಡಿ ಎರಡು ತುಂಡು ಮಾಡಿದವರಂತೆ ಹೇಳಿಬಿಟ್ಟರು. ಅವರು ತಲೆ ತಗ್ಗಿಸಿ ಅಲ್ಲಿಂದ  ಹೊರಟರು.

 "ತಂದೆ ತಾಯಿಯ ಸೇವೆ ಮಾಡದೆ, ಏನು ಮಾಡಿದರು ಅದು ಕೇವಲ ಜನ ಮೆಚ್ಚಿಸಲು ಮಾತ್ರ. ಅವರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದರೆ , ದೇವರನ್ನು ಮೆಚ್ಚಿಸಬಹುದು.  ಅಲ್ಲವೇ ಸಾರ್? " ಎಂದರು ಗುರುನಾಥರು.

ಈಗ್ಗೆ ನಾಲ್ಕಾರು ವರ್ಷಗಳ ಹಿಂದೆ ಹೇಳಿದ ಆ ಮಾತು ಇಂದಿಗೂ ನನ್ನನ್ನು ಯಾವಾಗಲು ಎಚ್ಚರಿಸುತ್ತಲೇ ಇರುತ್ತದೆ.  ಯಾರಾದರು ಗೃಹಪ್ರವೇಶದ ಆಮಂತ್ರಣ ನೀಡಲು ಬಂದಾಗ ಈ ಘಟನೆ ತಟ್ಟನೆ ಜ್ಞಾಪಕಕ್ಕೆ ಬರುತ್ತದೆ.

Friday, July 20, 2012

ಮಕ್ಕಳ ಕನಸು



ಸಾಮಾನ್ಯವಾಗಿ ಎಲ್ಲಾ ತಂದೆತಾಯಿಯರು ತಮ್ಮ ಮಕ್ಕಳ ಬಗ್ಗೆ ಅಪಾರವಾದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ತಮ್ಮ ಮಕ್ಕಳು ಹೀಗಾಗಬೇಕು,  ಹಾಗಾಗಬೇಕು ಎಂಬ ಹಲವಾರು ಆಸೆ ಆಕಾಂಕ್ಷೆಗಳನ್ನು ಇರಿಸಿಕೊಂಡು ತಮ್ಮ ಮಕ್ಕಳನ್ನು ಆ ದಿಸೆಯಲ್ಲಿ ನಡೆಸಲು ಶ್ರಮ ಹಾಕುತ್ತಾರೆ.  ತಮ್ಮ ಮಕ್ಕಳು  ತಮಗಿಂತ ಹೆಚ್ಚು ಪುರೋಭಿವೃದ್ಧಿಗೆ  ಬರಬೇಕೆಂದು ತಮ್ಮ ಅಮೂಲ್ಯವಾದ ಸಮಯವನ್ನು ತೊಡಗಿಸಿಕೊಂಡು ಮಕ್ಕಳಿಗೆ ಶಿಕ್ಷಣವನ್ನು ಹಲವಾರು ಪ್ರಾಕಾರಗಳಲ್ಲಿ ಕೊಡಿಸುತ್ತಾರೆ, ಕೊಡುತ್ತಾರೆ. ತಮ್ಮ ಮಕ್ಕಳ ಸ್ವಲ್ಪ ಯಶಸ್ಸು ಕೂಡಾ,  ಅಪ್ಪ ಅಮ್ಮರಿಗೆ ಅಪಾರ ಸುಖವನ್ನು ನೀಡುತ್ತದೆ.  ಆದರೆ, ಕೆಲವೊಮ್ಮೆ ಮಕ್ಕಳ ಮನಸ್ಸು ಬೇರೆಡೆಗೆ ಹೋದಾಗ, ಅಥವಾ ತಂದೆತಾಯಿಯರ ಆಸೆ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಲು ವಿಫಲರಾದಾಗ, ಅಥವಾ ತಮ್ಮ ಕನಸುಗಳು ವಿಭಿನ್ನವಾದಾಗ, ಇನ್ನಿತರ ಯಾವುದೋ ಕಾರಣದಿಂದ ನಿರೀಕ್ಷಿತ ಫಲಿತಾಂಶ ಸಿಗದಾದಾಗ ಮಕ್ಕಳ ಮೇಲೆ ಅಪ್ಪ ಅಮ್ಮರ ನಿರಾಸೆ ಹೆಚ್ಚಾಗುತ್ತದೆ.  ಕೆಲವೊಮ್ಮೆ ಅಸಡ್ಡೆ, ತಿರಸ್ಕಾರ ಮತ್ತು ಸಿಟ್ಟು ಇವುಗಳು ಮಕ್ಕಳ ಮೇಲೆ ದುಬಾರಿಯಾದ ಪರಿಣಾಮ ಬೀರುತ್ತವೆ.     ಇಂತಹ ಜಟಿಲವಾದ  ಸಮಸ್ಯೆಗಳು ಬರುವ ಮುಂಚೆ ಮಕ್ಕಳ ಮನಸನ್ನು ಅರ್ಥಮಾಡಿಕೊಳ್ಳುವುದು ಅವಶ್ಯಕ.  ಮಕ್ಕಳ ಕನಸು, ವಿಚಾರ ಮತ್ತು ಆಸೆಗಳು ತೀರಾ ಬಾಲಿಶವಾಗಿದೆಯೆಂದು ನಮಗೆ ಅನ್ನಿಸಬಹುದು,  ಆದರೆ,ಆ ಚಿಂತನೆಯಲ್ಲೂ  ಸರಿಯಾದ ದಿಕ್ಕು ಇರುತ್ತೆ  ಎಂಬುದನ್ನು   ತಂದೆ ತಾಯಿಯರು ಮರೆಯಬಾರದು.

ನರೇಂದ್ರ ಚಿಕ್ಕ ಹುಡುಗನಾಗಿದ್ದಾಗ ತನ್ನ ತಂದೆ ತಾಯಿಯ ಜೊತೆ ಎರಡು ಕುದುರೆಗಳ ಸಾರೋಟಿನ ಪ್ರಯಾಣವನ್ನು ಬಹಳ ಇಷ್ಟ ಪಡುತ್ತಿದ್ದ.  ಕಲ್ಕೊತ್ತ ನಗರ ಸಂಚಾರ ಮಾಡುವಾಗ ಕುದುರೆಯ ಕಾಲಿನ ಟಕ್ ಟಕ್ ಸದ್ದು, ಕಟ್ಟಿದ ಗೆಜ್ಜೆಯ ನಿನಾದ, ತಂಪಾದ ಗಾಳಿ ಇವೆಲ್ಲವೂ ನರೆಂದ್ರನಿಗೆ ಬಹಳ ಆಪ್ಯಾಯಮಾನವಾಗಿತ್ತು.  ಇಂತಹ ನಗರ ಪ್ರದಕ್ಷಿಣೆ ಮುಗಿಸಿ ಬಂದ ನರೇಂದ್ರನ ತಂದೆ " ನೀನು ದೊಡ್ಡವನಾದ ಮೇಲೆ ಏನು ಆಗಲು ಬಯಸುತ್ತೀ? " ಎಂದು ಪ್ರಶ್ನೆ ಹಾಕಿದರು.  ನರೇಂದ್ರ ಕ್ಷಣ ಮಾತ್ರವೂ ತಡಮಾಡದೆ " ನಾನು ಜೋಡಿ ಕುದರೆಯ ಸಾರೋಟಿನ ಸವಾರನಾಗುತ್ತೀನಿ " ಎಂದು ಉತ್ತರಿಸಿದ.  ಈ ಮಾತು ನರೇಂದ್ರನ ತಂದೆಗೆ ಅತ್ಯಂತ ಸಿಟ್ಟು ಮತ್ತು ನಿರಾಸೆ ಒಮ್ಮೆಲೇ ಆಯಿತು.  ಇದನ್ನು ಗಮನಿಸಿದ ತಾಯಿ ನರೇಂದ್ರನ ಕೈ ಹಿಡಿದುಕೊಂಡು ನೇರಾ ದೇವರಮನೆಗೆ ಕರೆದುಕೊಂಡು ಹೋಗಿ ದೇವರಮುಂದೆ ನಿಲ್ಲಿಸಿ ಅಲ್ಲಿ ಇರಿಸಲಾಗಿದ್ದ ಶ್ರೀ ಕೃಷ್ಣನ ಭಗವದ್ಗೀತಾ ಉಪದೇಶದ ಫೋಟೋ ತೋರಿಸುತ್ತ " ಈ ರೀತಿಯ ಸವಾರನಾಗಲು ಬಯಸಿರುವೆ ಅಲ್ಲವೇ? " ಎಂದು ಕೇಳಿದರು.  ನರೇಂದ್ರನ ಬಾಯಿಂದ ಮಾತು ಬರಲಿಲ್ಲ.  " ನೀನು ಜೋಡಿ ಕುದುರೆಗಳ ಸಾರೋಟಿನ ಸವಾರನೇ ಆಗುವುದಾದರೆ ಶ್ರೀಕೃಷ್ಣನ ತರಹ ಜಗತ್ತಿಗೆ ಬೆಳಕು ಕೊಡುವ ಸವಾರನಾಗು." ಎಂದು ಹುರಿದುಂಬಿಸಿದರು.  ಮುಂದೆ ಆ ಪುಟ್ಟ ನರೇಂದ್ರನೆ,   ಸ್ವಾಮಿ   ವಿವೇಕಾನಂದನಾಗಿ ಜಗತ್ತಿಗೆ ಬೆಳಕು ತೋರಿದ ಸವಾರನಷ್ಟೇ ಅಲ್ಲ ಸರದಾರನು   ಆದರು.

ಮಕ್ಕಳ ಮನಸಿನಲ್ಲಿ ಇರುವ ಆಸೆಗಳು ಅಸ್ಪಷ್ಟವಾಗಿರಬಹುದು, ಕನಸುಗಳು ಬಾಲಿಶ ಎನಿಸಬಹುದು, ವಿಚಾರಗಳು ಅಸಂಬದ್ಧ ಎನಿಸಬಹುದು.  ಆದರೆ ಸ್ವಲ್ಪ ತಾಳ್ಮೆ ವಹಿಸಿ, ಮಕ್ಕಳ ಕನಸಿಗೆ, ಆಸೆಗಳಿಗೆ, ವಿಚಾರಗಳಿಗೆ ಹೇಗೆ ನೀರೆರೆದು ಪೋಷಿಸಿ ಬೆಳೆಸೆಬಹುದು ಎಂಬುದರ ಬಗ್ಗೆ ಚಿಂತಿಸಿದರೆ ಸಾಕು ಮಕ್ಕಳು ಹೆಚ್ಚು ಸಬಲರಾಗುತ್ತಾರೆ.  ತಮ್ಮ  ಮಕ್ಕಳು ಪ್ರತಿಭಾಶಾಲಿಗಳು ಆಗಬೇಕೆಂಬುದು ಪ್ರತಿ ತಂದೆತಾಯರ ಉದ್ದೇಶವು ಅದೇ ತಾನೇ!  ಇದಕ್ಕೆ ನೀವೇನು ಹೇಳುವಿರಿ?

ಹೆಚ್ ಏನ್ ಪ್ರಕಾಶ್

Monday, July 16, 2012

ಓದುವ ವಿಧ್ಯಾರ್ಥಿಗಳಿಗೆ ಸಹಾಯ ಮಾಡಿ, ಅದು ಅವರಿಗೆ ಜೀವನ ಕೊಡುತ್ತೆ



ನಾನು S S L C  ಓದುತ್ತಿದ್ದ ಸಮಯದಲ್ಲಿ ನಮ್ಮ ಮನೆಗೆ ಒಬ್ಬ ವಿಧ್ಯಾರ್ಥಿ ವಾರಾನ್ನಕಾಗಿ ಬರುತ್ತಿದ್ದ.. ವಾರಾನ್ನ ಎಂದರೆ ವಾರದ ಒಂದು ದಿನ, ಒಂದು ಹೊತ್ತಿನ ಅಥವಾ ಎರಡು ಹೊತ್ತಿನ ಊಟವನ್ನು ಮಾಡಿಕೊಂಡು ಹೋಗುವುದು. ಆ ದಿನಗಳಲ್ಲಿ ಹಳ್ಳಿಯಿಂದ   ಬರುವ ಬಡ ಕುಟುಂಬದ ವಿಧ್ಯಾರ್ಥಿಗಳಿಗೆ ವಾಸಮಾಡಲು ಅನಾಥಾಲಯಗಳಲ್ಲಿ ಜಾಗ ಸಿಗುತ್ತಿತ್ತು. ಆದರೆ, ಊಟಕ್ಕೆ ಈ ರೀತಿಯಾಗಿ ತಮ್ಮದೇ ವರ್ಗದ ಮನೆಗಳಲ್ಲಿ ಉಚಿತವಾಗಿ ವಾರದ ಒಂದು ದಿನ ಅಥವಾ ಅರ್ಧ ದಿನದ ಊಟದ ವ್ಯವಸ್ಥೆ ಕೇಳಿಕೊಂಡು ಬರುತ್ತಿದ್ದರು. ಅಂದಿನ ದಿನಗಳಲ್ಲಿ ಹೋಟೆಲ್ಲಿಗೆ ಅಥವಾ ಮೆಸ್ಸಿಗೆ ಹೋಗುವಷ್ಟು ಅನುಕೂಲ ಹೆಚ್ಚಿನವರಲ್ಲಿ ಇರುತ್ತಿರಲಿಲ್ಲ.  ಹೀಗೆ ಕೇಳಿಕೊಂಡು ಬಂದ ವಿಧ್ಯಾರ್ಥಿಗಳ ಕುಲ ಗೋತ್ರ ವಿಚಾರಿಸಿಕೊಂಡು ಯಥಾನುಶಕ್ತಿ ವಿದ್ಯಾರ್ಥಿಗಳಿಗೆ ವಾರನ್ನಕ್ಕೆ ಒಪ್ಪಿಗೆ ನೀಡುತ್ತಿದ್ದರು.  ಆ ವಿಧ್ಯಾರ್ಥಿ ನಿಗದಿತ ವಾರದ ದಿನದಂದು ಬಂದು ಊಟ, ತಿಂಡಿ ಮುಗಿಸಿ ಹೋಗುತ್ತಿದ್ದ.  ಪ್ರತಿ ವಿಧ್ಯಾರ್ಥಿ ಹೀಗೆ ಹತ್ತಾರು ಮನೆಗಳ ವ್ಯವಸ್ಥೆ ಮಾಡಿಕೊಂಡು ತಮ್ಮ ವಿಧ್ಯಾಭ್ಯಾಸ ಮುಗಿಸುತ್ತಿದ್ದರು.

ನಮ್ಮ ಮನೆಯಲ್ಲಿ ಕೂಡ ಮೂವರು ವಿಧ್ಯಾರ್ಥಿಗಳಿಗೆ ಈ ರೀತಿಯ ವಾರಾನ್ನದ ವ್ಯವಸ್ಥೆ ಇತ್ತು. ನಮ್ಮದು ಬಡ ಕುಟುಂಬವೇ.  ನಮ್ಮ ಮನೆಯಲ್ಲೂ ಆರು ಜನ ಮಕ್ಕಳೊಟ್ಟಿಗೆ ನಮ್ಮ ಅಪ್ಪ ಅಮ್ಮ ಸೇರಿ ಎಂಟು ಮಂದಿಯ ಜೊತೆಗೆ ವಾರಾನ್ನದ ವಿಧ್ಯಾರ್ಥಿಯ   ಊಟವು    ಸೇರುತ್ತಿತ್ತು .  ಇಷ್ಟು  ಜನಗಳ   ತುತ್ತಿನ  ಚೀಲ  ತುಂಬುವ   ಹೊಣೆ  ನನ್ನ  ತಂದೆಯ  ಏಕಮಾತ್ರ  ಆದಾಯದಿಂದ  ಸಾಗುತಿತ್ತು.   ಒಮ್ಮೆ ಕೂಡ ನನ್ನ ಅಪ್ಪ ತನಗಾಗುತ್ತಿದ್ದ ಹಣಕಾಸಿನ ಮುಗ್ಗಟ್ಟಿನ ಪರಿಸ್ಥಿಯನ್ನು  ನಮ್ಮೆದುರಿಗೆ ಎಂದಿಗೂ ಹೇಳಿಕೊಂಡವರಲ್ಲ.

ಒಂದು ದಿನ ರಾತ್ರಿ      ಎಲ್ಲ ಎಂಟು ಜನರು ಊಟಕ್ಕೆ ಕೂತಿದ್ದೆವು.  ನನ್ನ ಅಮ್ಮ ಎಲ್ಲರಿಗೂ ಅನ್ನ ಬಡಿಸಲು ಪ್ರಾರಂಭ ಮಾಡಿದರು.  ಅಂದು ಬೆಳಿಗ್ಗೆ ಮಾಡಿ ಉಳಿದ ಅನ್ನವನ್ನು ಸಂಜೆಗೆ ಬಡಿಸಲು ಇಟ್ಟಿದ್ದರು. ಬಿಸಿಬಿಸಿ  ಅನ್ನ ಬಡಿಸುವ  ಬದಲು ಬೆಳಗಿನ ತಂಗಳು ಅನ್ನವನ್ನು ವಾರಾನ್ನದ ಹುಡುಗನ  ಕಡೆಯಿಂದ ಬಡಿಸಲು ಅಮ್ಮ ಪ್ರಾರಂಭಿಸಿದರು.  ಅಮ್ಮನ ಉದ್ದೇಶ ತಣ್ಣನೆಯ ಅನ್ನ ಖಾಲಿಯಾದೊಡನೆ ಬಿಸಿ ಅನ್ನ ಬಡಿಸುವ ಯೋಚನೆ. ಆ ಹುಡುಗ ಮೊದಲಲ್ಲೇ ಕೂತ ಕಾರಣ ಆ ಅನ್ನ ಅವನ ತಟ್ಟೆಗೆ ಅಮ್ಮ ಬಡಿಸಿದರು. ಆಚೆ ಬದಿಯಲ್ಲಿ ಕೂತ ನನ್ನ ಅಪ್ಪ "ಆ ಹುಡುಗನಿಗೆ ಬಿಸಿ ಅನ್ನ ಬಡಿಸು, ಅವನಿಗೆ ತಂಗಳು ಅನ್ನ ಬೇಡ " ಎಂದರು   .  ತಕ್ಷಣ    ಆತನಿಗೆ    ಬಡಿಸಿದ    ತಂಗಳು ಅನ್ನ ತೆಗೆದು    ಬಿಸಿ ಅನ್ನ ಬಡಿಸಿದರು ಅಮ್ಮ.  ಅಮ್ಮನಿಗೆ  ಕೊಂಚ  ಬೇಸರ  ಹಾಗೂ  ಇರಿಸುಮುರುಸು ಆಯಿತು .   ಅವರ  ಮುಖದಲ್ಲಿ  ಆದ   ಬದಲಾವಣೆ  ಇತರರಿಗೆ     ಗೊತ್ತಾಗುತ್ತಿತು  .  ಇದನ್ನು   ಆ ಹುಡುಗನು   ಗಮನಿಸಿದ   ಆತನಿಗೂ   ತುಂಬಾ            ಕಷ್ಟ    ಎನಿಸಿತು   .  ತಕ್ಷಣ  ಆ ಹುಡುಗ "ಇಲ್ಲ,.....  ನನಗೂ ಬೆಳಗಿನ ಅನ್ನವನ್ನೇ  ಹಾಕಿ , ಬಿಸಿ ಅನ್ನ ಬೇಡ" ಎಂದು ಬೇಡಿಕೊಂಡ .   ಪಕ್ಕದಲ್ಲಿ  ಇದ್ದ  ನಮ್ಮೆಲ್ಲರಿಗೂ  ಅಪ್ಪನ  ಮಾತು  ಆ ಸಮಯದಲ್ಲಿ ಸರಿ  ಅನ್ನಿಸಲಿಲ್ಲ .   ಇದನ್ನೆಲ್ಲಾ  ಸೂಕ್ಹ್ಮವಾಗಿ  ಗಮನಿಸಿದ  ನನ್ನ ತಂದೆಯವರು,          " ನೀನು       ಬಿಸಿ ಅನ್ನವನ್ನೇ   ಊಟಮಾಡು .  ಪರೀಕ್ಷೆ   ಸಮಯ  . ನೀನು  ಹುಷಾರು  ತಪ್ಪಿ  ಮಲಗಿದರೆ  ನೋಡಲು   ಯಾರಿದ್ದಾರೆ   .  ಈ ಮಕ್ಕಳಿಗೆ   ನಾನಿದ್ದೇನೆ.   ನಿಂಗೆ  ಇಲ್ಲಿ  ಯಾರಿದ್ದಾರಪ್ಪ ?  ಊಟ ಮಾಡು , ಚನ್ನಾಗಿ  ಓದು "  ಎಂದು ಹೇಳಿದರು.  ಈ ಮಾತು  ಕೇಳಿದ  ಅಮ್ಮನ  ಮುಖದಲ್ಲಿ     ಒಂದು ರೀತಿಯ ಸಮಾಧಾನ  ಕಂಡಿತು ಎಲ್ಲರು  ಊಟ ಮುಗಿಸಿ ಎದ್ದರು  .

ನಂತರದಲ್ಲಿ ನಮ್ಮನ್ನೆಲ್ಲ ಕೂರಿಸಿಕೊಂಡು ವಾರಾನ್ನಕ್ಕೆ ಬರುವ ಹುಡುಗರ ಕಷ್ಟಗಳು ಎಷ್ಟಿರುತ್ತದೆ? ಎಂಬುದನ್ನು ತಮ್ಮ ಜೀವನದಲ್ಲಿ ಆದ ಘಟನೆಗಳನ್ನು ವಿಸ್ತಾರವಾಗಿ ಹೇಳಿದರು. ನಮ್ಮೆಲ್ಲರಿಗೂ ಆಗ ಅಪ್ಪನ ಬಗ್ಗೆ ಹೆಮ್ಮೆ ಎನಿಸಿತು. ಈ ಘಟನೆ ಚಿಕ್ಕದಾಗಿ ಕಾಣಬಹುದು, ಆದರೆ ಇದು ನಮಗೆ ಹೇಳಿದ ಪಾಠ ಮಾತ್ರ ತುಂಬಾ ದೊಡ್ಡದಾಗಿತ್ತು. ಯಾವ ಬೀಜದ ಶಕ್ತಿ ಹೇಗೆ ಇರುತ್ತೆ ಎಂಬುದನ್ನು ಅರಿಯಲು ಕಾಯಬೇಕಾಗುತ್ತದೆ. ಒಮ್ಮೆಲೇ ತೀರ್ಮಾನಿಸಲು ಸಾಧ್ಯವಾಗದು.  ನಮ್ಮ ಮನೆಯಲ್ಲಿ ವಾರಾನ್ನ ಮಾಡಿದ ಒಬ್ಬ ವಿದ್ಯಾರ್ಥಿ ಉನ್ನತ ಹುದ್ದೆಗೆ ಸೇರಿಕೊಂಡಾಗ ನನ್ನ ಅಪ್ಪನ ಆಶೀರ್ವಾದ ಪಡೆದು ಹೋಗಲು ಬಂದಿದ್ದರು. ಆತ " ನಿಮ್ಮ ಉಪಕಾರ ಮರೆಯಲಾರೆ, ನಿಮ್ಮ ಋಣ ಹೇಗೆ ತೀರಿಸಲಿ? " ಎಂದು ಕೇಳಿದಾಗ ನನ್ನ ಅಪ್ಪ ಕೊಟ್ಟ ಉತ್ತರ " ನಿನ್ನಂತೆ ಇರಬಹುದಾದ ವಿದ್ಯಾರ್ಥಿಗೆ ಸರಿಯಾದ ಸಮಯದಲ್ಲಿ ಸಹಾಯ ಮಾಡು, ನಿನ್ನ ಋಣ ತೀರುತ್ತೆ " ಎಂದು ಆಶೀರ್ವಾದ ಮಾಡಿ ಕಳುಹಿಸಿ ಕೊಟ್ಟರು.

ನನ್ನ ಅಪ್ಪ  ನಮಗೂ ಪದೇ ಪದೇ ಹೇಳುತ್ತಿದ್ದರು. " ಓದುವ ವಿಧ್ಯಾರ್ಥಿಗಳಿಗೆ ಸಹಾಯ    ಮಾಡಿ, ಅದು ಅವರಿಗೆ ಜೀವನ ಕೊಡುತ್ತೆ  "  ಈ ಮಾತು ನಮಗೆ ಯಾವಾಗಲು ಜ್ಞಾಪಕಕ್ಕೆ ಬರುತ್ತದೆ.  ಪುಣ್ಯವಶಾತ್ ನಾನೂ ಕೂಡ ಒಂದು ವಿದ್ಯಾ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಭಗವಂತ ಕರುಣಿಸಿದ ಕಾರಣ ಹಲವಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಅವಕಾಶ  ನನ್ನದಾಗಿದೆ. ನನ್ನ ತಂದೆಯವರು  ನನಗೆ ವಿದ್ಯಾಸಂಸ್ಥೆಯಲ್ಲಿ ಕೆಲಸ ಸಿಕ್ಕಿದ್ದು ಕೇಳಿಯೇ ತುಂಬಾ ಖುಷಿ ಪಟ್ಟು, "ಈ ಸದವಕಾಶವನ್ನು ಸರಿಯಾಗಿ ಬಳಸಿಕೋ" ಎಂದು ಹಲವಾರು ಬಾರಿ ನನಗೆ ಹೇಳಿದ್ದುಂಟು.


ಹೆಚ್ ಏನ್ ಪ್ರಕಾಶ್ 

Wednesday, November 24, 2010

ನಮ್ಮ ಚಟಕ್ಕೆ ಬರೆಯುತ್ತೇವೆಯೇ?

ಸಮ: ಶತ್ರೌ ಚ ಮಿತ್ರೇ ಚ  ತಥಾ ಮಾನಾಪಮಾನಯೋ:
ಶೀತೋಷ್ಣ ಸು:ಖ ದು:ಖೇಷು  ಸಮ: ಸಂಗ ವಿವರ್ಜಿತ:|

ಭಗವದ್ಗೀತೆಯಲ್ಲಿ ಕೃಷ್ಣನು   ಹೇಳಿದಂತೆ ಶತ್ರುಗಳನ್ನು-ಮಿತ್ರರನ್ನೂ ಸಮನಾಗಿ ಕಾಣುವ,   ಮಾನಾಪಮನಗಳನ್ನೂ ಸಮನಾಗಿ ಕಾಣುವ,  ಶೀತ-ಉಷ್ಣ, ಸು:ಖ-ದು:ಖ , ಎಲ್ಲವನ್ನೂ ಸಮನಾಗಿ ಕಾಣುವಂತಹ ಮಟ್ಟಕ್ಕೆ ನಾವೇರಬೇಕು.ಇದು ಆದರ್ಶ, ಸರಿ. ಆದರೆ ಆ ಮಟ್ಟವನ್ನು ನಾವು ತಲುಪಲು ಸಾಧ್ಯವೇ? ಹೊರಗಿನ ವಿಚಾರಗಳು ಒಂದೆಡೆ ಇರಲಿ,  ಬ್ಲಾಗ್ ನಲ್ಲಿ ಬರೆಯುವ ನಾವು ನಮ್ಮ  ಬರಹಗಳಿಗೆ    ಮೆಚ್ಚುಗೆ ವ್ಯಕ್ತ ಪಡಿಸಿದವರನ್ನೂ ,ಮತ್ತು  ಖಂಡಿಸಿದವರನ್ನೂ  ಸಮನಾಗಿ ಕಾಣುವ ಮನ: ಸ್ಥಿತಿಯನ್ನು ಹೊಂದಿದ್ದೇವೆಯೇ?  ಅಥವಾ ಯಾರೂ ಒಂದೂ ಪ್ರತಿಕ್ರಿಯೆಗಳನ್ನೂ ಹಾಕದಾಗ! ವೈರಾಗ್ಯದ ಮಾತನಾಡುವವರೂ ಕೂಡ ತಾವು ಬರೆದ ಬರಹವನ್ನು ಜನರು ನೋಡಿ, ಮೆಚ್ಚಿ ಪ್ರತಿಕ್ರಿಯಿಸಿದರೇ! ಎಂದು  ಬ್ಲಾಗ್ ನಲ್ಲಿ ಹುಡುಕುವುದು ಸರ್ವೇ ಸಾಮನ್ಯವಾದ ಸಂಗತಿ. ಯಾರ ಸಹವಾಸ ಬೇಡ ವೆಂದು ತನ್ನಷ್ಟಕ್ಕೆ ಬ್ಲಾಗ್ ನಲ್ಲಿ ಏನೋ ಬರೆದುಕೊಂಡು ಕಾಲ ಹಾಕೋಣವೆನ್ನುವವರೂ ಕೂಡ, ಅವರ ಲೇಖನವನ್ನು ಪೋಸ್ಟ್ ಮಾಡಿದ ನಂತರ ಹಲವಾರು ಭಾರಿ, ತಾನು ಬರೆದ ಲೇಖನವನ್ನೇ ನೋಡದೇ ಇರಲಾರರು. ಎಷ್ಟು ಜನರು ಓದಿದ್ದಾರೆ! ಎಷ್ಟು ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ! ಎಂದು ತಿಳಿದುಕೊಳ್ಳುವ ಕಾತುರ ಎಲ್ಲರಿಗೂ ಇದ್ದದ್ದೇ. ಎಲ್ಲೋ ಒಬ್ಬಿಬರು " ನಾನು ಪೋಸ್ಟ್ ಮಾಡಿದವನು ಮತ್ತೆ  ಬ್ಲಾಗ್ ನೋಡಿಯೇ ಇಲ್ಲ ಎನ್ನುವವರೂ ಇದ್ದಿರಬಹುದು.. ಆದರೆ ಇಂತಹವರು ಬೆರಳೆಣಿಕೆ ಜನರು.
ಅಂತೂ ಜನರು ನಮ್ಮನ್ನು ಹೊಗಳಿದಾಗ ಉಬ್ಬುವ, ತೆಗಳಿದಾಗ ಕುಗ್ಗಿ ಹೋಗುವ ಹುಲುಮಾನವರು ನಾವಲ್ಲವೇ? ಈ ಸ್ಥಿತಿಯಿಂದ ಹೊರಗೆ ಬರಲು ನಿತ್ಯ ಸತತ ಸಾಧನೆ  ಅನಿವಾರ್ಯ.ಆದರೆ  ಬ್ಲಾಗ್ ನಲ್ಲಿ ಬರೆಯುವ ಬಹುಪಾಲು ನಾವು ನಿತ್ಯ ಧ್ಯಾನ, ಪ್ರಾಣಾಯಾಮ, ಯೋಗ, ಅಥವಾ ಇನ್ಯಾವ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇವೆಂದು  ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕಲ್ಲವೇ? ಬ್ಲಾಗ್ ನಲ್ಲಿ ಬರಯುವುದೂ ಒಂದು ಚಟವೆನಿಸುವುದಿಲ್ಲವೇ?
ನನಗನಿಸಿದ್ದು ಜಗತ್ತಿಗೂ ಅನ್ವಯವೆಂದುಕೊಂಡು ಲೇಖನವನ್ನು ಮುಂದುವರೆಸುತ್ತೇನೆ. ನನ್ನ ಕತೆಯಂತೂ ಸನ್ಯಾಸಿಯೊಬ್ಬ ಬೆಕ್ಕು ಸಾಕಿದ ಕತೆಯಂತಯೇ ಆಗಿದೆ. ಬೆಕ್ಕಿಗೆ ಹಾಲು ಬೇಕಲ್ಲವೇ? ಅದಕ್ಕೊಂದು ಹಸು, ಹಸುವಿದ್ದಮೇಲೆ ಅದನ್ನು ಸನ್ಯಾಸಿ ನೋಡಿಕೊಳ್ಳಲು ಸಾಧ್ಯವೇ? ಅದಕ್ಕೊಬ್ಬಳು ಹೆಣ್ಣು, ಸನ್ಯಾಸಿಯ ಆಶ್ರಮಕ್ಕೆ ಹೆಣ್ಣಿನ ಪ್ರವೇಶವಾದಮೇಲೆ  ಇನ್ನು ಕೇಳಬೇಕೆ! ಸಂಪದದಲ್ಲಿ ಆಗೊಂದು ಈಗೊಂದು ಬರೆಯುತ್ತಿದ್ದ ನಾನು ಮೆಚ್ಚುಗೆಯ ಪ್ರತಿಕ್ರಿಯೆ ಬಂದಾಗ ಉಬ್ಬಿ, ತೆಗಳಿಕೆಯ ಮಾತುಗಳು ಬಂದಾಗ ಕುಗ್ಗಿ, ಕಡೆಗೆ ಇವೆಲ್ಲಾ ತಂಟೆ -ತಕರಾರು ಬೇಡವೆಂದು ನೆಮ್ಮದಿಯಾಗಿರಲು ನನ್ನ ಸ್ವಂತ ಬ್ಲಾಗ್ "ನೆಮ್ಮದಿಗಾಗಿ" ಆರಂಭಿಸಿದೆ. ಆನಂತರ ಮೂರುನಾಲ್ಕು ಬ್ಲಾಗ್ ಆರಂಭವಾಗಿ ಕಡೆಗೆ ಈಗ " ವೇದಸುಧೆ" ನನ್ನ ವ್ಯಾಪ್ತಿ ಮೀರಿ ಅದೊಂದು ಬಳಗದ ಬ್ಲಾಗ್ ಆಗಿ ನಡೆಯುತ್ತಿದೆ. ಕೇವಲ ಒಂಬತ್ತು ತಿಂಗಳಲ್ಲಿ ಹದಿನೆಂಟು ಸಾವಿರ ಇಣುಕುಗಳನ್ನು ಕಂಡಿರುವ ಬ್ಲಾಗಿನ ಗೌರವ ಕಾಪಾಡ ಬೇಕಲ್ಲಾ! ಅದಕ್ಕಾಗಿ ಬೇಡವೆಂದರೂ  ನಾಲ್ಕಾರು ಗಂಟೆ ಅಂತರ್ಜಾಲದಮುಂದೆ ಕೂರಲೇ ಬೇಕು! ಇವೆಲ್ಲಾ  ಏತಕ್ಕಾಗಿ? ಜನರ ಮೆಚ್ಚುಗೆಗಾಗಿ ತಾನೆ? ಒಂದು ಸದ್ವಿಚಾರವನ್ನು ಕೊಡುವುದು ನೆಪ! ಆದರೆ ಬ್ಲಾಗ್ ಮುಂದೆ ಕೂರುವುದೊಂದು ಚಟವಾಗಿ ಬಿಟ್ಟಿದೆಯೇ! ಎಂಬ ಅನುಮಾನ ಬಂದು ಬಿಟ್ಟಿದೆ. ಏನಾದರೂ ಮಾಡಿ ಒಂದು ನಿಯಮ ಹಾಕಿಕೊಳ್ಳದಿದ್ದರೆ  ಆರೋಗ್ಯ ಹದಗೆಟ್ಟು  ಅನಿವಾರ್ಯವಾದ " ವಿಶ್ರಾಂತಿ" ಗೆ ಬರಬೇಕಾಗಬಹುದು. ಇದು ನನ್ನ ಸ್ಥಿತಿ! ನಿಮ್ಮದು?ಸ್ವಲ್ಪ ಉತ್ತಮವಾಗಿರಬಹುದಲ್ಲವೇ? 
ಕೊಸರು: ನನ್ನ ಮಿತ್ರ  ಗ್ರಾ.ಬ.ಹರೀಶ್ ಹೇಳುತ್ತಿರುತ್ತಾರೆ-" ನಾವು ಯಾರ ಉದ್ಧಾರಕ್ಕೂ ಬರೆಯುವುದಿಲ್ಲ, ನಮ್ಮ ಚಟಕ್ಕೆ ಬರೆಯುತ್ತೇವೆ"



Tuesday, November 23, 2010

ಭಗವಂತನ ಆಕಾರ-ನಿರಾಕಾರ ಒಂದು ಜಿಜ್ಞಾಸೆ

ದೇವರ ಬಗ್ಗೆ ವಿಮರ್ಶೆ ಮಾಡುವಾಗ ಮೊದಲಿಗೆ ಕೆಲವು ವೈರುಧ್ಯಗಳನ್ನು ಬಿಡಿಸಿಕೊಳ್ಳಬೇಕಾಗಿದೆ. - ಭಗವಂತನನ್ನು ಸರ್ವವ್ಯಾಪಿ ಎಂದು ಹೇಳುವ ಉಸುರಿನಲ್ಲೇ ಭಗವಂತನ ಚಿತ್ರ, ರೂಪ,ಆಕಾರಗಳನ್ನು ಒಪ್ಪುತ್ತೇವೆ. ಆದರೆ, ಯಾವುದೇ ಚಿತ್ರ, ರೂಪ, ಆಕಾರವು ಸರ್ವವ್ಯಾಪಿಯಲ್ಲ ಎಂಬುದು ಸ್ಪಷ್ಟವಾಗಿಯೇ ಇದೆ. ಸರ್ವವ್ಯಾಪಿ ಎನ್ನುವವರು ಚಿತ್ರ, ಆಕಾರಗಳನ್ನು ಸ್ವೀಕರಿಸುವಂತಿಲ್ಲ. ರೂಪ, ಆಕಾರವನ್ನು ಸ್ವೀಕರಿಸುವವರು ದೇವರು ಎಲ್ಲ ಕಡೆಯೂ ಇದ್ದಾನೆ ಎನ್ನುವಂತಿಲ್ಲ. ಈ ಗೊಂದಲವನ್ನು ಮೊದಲು ಬಿಡಿಸೋಣವೇ?
-ಸುಧಾಕರ ಶರ್ಮಾ

-------------------------------------------------------

[ಸರ್ವವ್ಯಾಪಿ ಎನ್ನುವವರು ಚಿತ್ರ, ಆಕಾರಗಳನ್ನು ಸ್ವೀಕರಿಸುವಂತಿಲ್ಲ. ರೂಪ, ಆಕಾರವನ್ನು ಸ್ವೀಕರಿಸುವವರು ದೇವರು ಎಲ್ಲ ಕಡೆಯೂ ಇದ್ದಾನೆ ಎನ್ನುವಂತಿಲ್ಲ]
ಶ್ರೀ ಶರ್ಮಾಜಿ, ನಿಮ್ಮ ಆ ವಾದವನ್ನೇ ನಾನು ಒಪ್ಪುವುದಿಲ್ಲ. ಭಗವಂತನು ಸರ್ವವ್ಯಾಪಿ ಎನ್ನುವವರು ಭಗವಂತನಿಗೆ ಆಕಾರವನ್ನೇಕೆ ಕೊಡಬಾರದು? ಚಿತ್ರದಲ್ಲಿ ಭಗವಂತನಿದ್ದಾನೆಂದರೆ ಬೇರೆಡೆ ಇಲ್ಲವೆಂದೇನೂ ಅಲ್ಲ.ಆದರೆ ಎಲ್ಲೆಡೆ ಇರುವ ಭಗವಂತನನ್ನು ಕಾಣುವುದಾದರೂ ಹೇಗೆ? ಭಗವಚ್ಛಕ್ತಿಯನ್ನು ಒಪ್ಪುವವರು ಅದಕ್ಕೊಂದು ರೂಪವನ್ನು[ನೆಪಮಾತ್ರಕ್ಕೆ]ಕೊಟ್ಟರು.ಇದರಿಂದ ನಮ್ಮ ಗಮನವನ್ನು ಭಗವಂತನೆಡೆ ಕೇಂದ್ರೀಕರಿಸಲು ಸುಲಭವಾಗುವುದಿಲ್ಲವೇ?ಕಾಶಿಯ ವಿಶ್ವನಾಥನ ದೇವಾಲಯದಲ್ಲಿ ಕಾಣುವ ಭಗವಂತನನ್ನು ನಮ್ಮೂರ ಮಾರಮ್ಮನಗುಡಿಯಲ್ಲೂ ,ನಮ್ಮ ತೋಟದ ಅರಳೀಮರದಲ್ಲೂ ,ಮನೆ ಮುಂದಿನ ತುಳಸಿಯಲ್ಲೂ , ಹರಿವ ನದಿ,ಗಿರಿ-ಪರ್ವತ, ಎಲ್ಲೆಲ್ಲೂ ಕಾಣುವಂತಹ ವಿಶಾಲ ದೃಷ್ಟಿಕೋನ ನಮ್ಮ ಹಿಂದೂ ಧರ್ಮದಲ್ಲಿದೆ[ಹಿಂದುವೆಂಬ ಪದವೂ ಚರ್ಚೆಗೊಳಗಾಗುತ್ತದೆಂಬ ಅರಿವಿದೆ]ಹಾಗಾಗಿ ನನ್ನ ನಂಬಿಕೆಯಲ್ಲಿ ನನಗೆ ವಿಶ್ವಾಸವಿದೆ.
-ಹರಿಹರಪುರಶ್ರೀಧರ್
--------------------------------------------------------
ಪ್ರತಿಕ್ರಿಯೆ ಮೇಲುನೋಟಕ್ಕೆ ಸೊಗಸಾಗಿದೆ. ಸೂಕ್ಷ್ಮವಾಗಿ ನೋಡಿದಾಗ ಕೆಲವು ತೊಡಕುಗಳಿವೆ.
ಚಕ್ಕುಬಂದಿಯಿಲ್ಲದೆ ಆಕಾರ ಸಿಗುವುದಿಲ್ಲ. ಚಕ್ಕುಬಂದಿ ಬಂದಾಗ ಸರ್ವವ್ಯಾಪಿ ಎಂಬುದಕ್ಕೆ ಅರ್ಥವೆಲ್ಲಿ ಉಳಿಯಿತು! ಇದನ್ನೇ ವೈರುಧ್ಯವೆಂದು ಕರೆದದ್ದು!
ಇನ್ನು ದೇವರ ಚಿತ್ರವನ್ನು ನೋಡುವಾಗ, ಎಷ್ಟು ಸಲ ಆ ಚಿತ್ರದ ಫ್ರೇಮ್ ನಲ್ಲಿ, ಮೊಳೆಯಲ್ಲಿ, ದಾರದಲ್ಲಿ, ಗೋಡೆಯಲ್ಲಿ ನಾವು ದೇವರನ್ನು ಕಂಡಿದ್ದೇವೆ, ಪ್ರಾಮಾಣಿಕ ಉತ್ತರ ಬರಲಿ.
ಏಕಾಗ್ರತೆ, ಕೇಂದ್ರೀಕರಣ ಎಂಬುದೊಂದು ನೆಪವಾಗಿಯೇ ಕಾಣುತ್ತದೆ. ಏಕೆಂದರೆ ಇದಕ್ಕೆ ಬೇಕಾದ್ದು "ಏಕಾಗ್ರ". ಒಂದು ಚೂಪಾದ ಅತ್ಯಂತ ಕಿರಿದಾದ "Point". ಗಾತ್ರವುಳ್ಳ ಆಕಾರಗಳಲ್ಲ. ಯೋಗಶಾಸ್ತ್ರದಲ್ಲಿ ಮೂಗಿನ ತುದಿ, ಭ್ರೂಮಧ್ಯೆಗಳನ್ನು ಇದಕ್ಕಾಗಿ ಬಳಸಲು ಸಲಹೆ ಕೊಟ್ಟಿದ್ದಾರೆ.
ಇನ್ನು ಭಗವಂತ ಎಂಬ ಅಸ್ತಿತ್ವವನ್ನು ಕಾಣುವುದಲ್ಲ, ಕೇಳುವುದಲ್ಲ, ಮೂಸುವುದಲ್ಲ, ರುಚಿನೋಡುವುದೂ ಅಲ್ಲ, ಮುಟ್ಟುವುದೂ ಅಲ್ಲ. ಅನುಭವಿಸುವುದು.
ಗಮನಿಸಿ. ಇಂದ್ರಿಯಗಳು ಕೇವಲ ಸಂವೇದನೆಗಳನ್ನು ಮಿದುಳಿಗೆ ತಲುಪಿಸುತ್ತವೆ, ಅವು ಸ್ವತಃ ನೋಡುವುದೂ ಇಲ್ಲ, ಕೇಳುವುದೂ ಇಲ್ಲ!! ಮಿದುಳನ್ನು Monitor ಮಾಡುತ್ತಿರುವ ಒಳಗಿನ ಚೇತನವೇ ನಿಜವಾಗಿ ನೋಡುವುದು, ಕೇಳುವುದು. ಅಂತೆಯೇ ಅನುಭವಿಸುವುದೂ ಕೂಡ ಅದೇ!!!
ಹಾಗಾಗಿ ಶರೀರದಲ್ಲಿರುವ ಆ ಚೇತನವು ಅನುಭವಿಸಲು ಯೋಗ್ಯವಾದ ವಿಷಯವೇ ಆ ಭಗವಂತ. ಆ ಅನುಭವವೇ "ಆನಂದ". ಆನಂದದ ಅನುಭವ ಯಾರ್ಯಾರಿಗೆ ಆಗಿದೆಯೋ ಅವರೆಲ್ಲರಿಗೂ ಭಗವಂತನ ಅನುಭವ ಆಗಿಯೇ ಇದೆ!!! (ಆನಂದದ ಸ್ವರೂಪದ ಬಗ್ಗೆ ಮತ್ತೊಮ್ಮೆ ಚರ್ಚಿಸುವ)
ಇದು ಇಡೀ ಹಿಂದೂಧರ್ಮದ ಮೂಲಸ್ರೋತಸ್ಸಾದ ವೇದಗಳ ವೈಜ್ಞಾನಿಕ ಚಿಂತನೆ, ಮಾರ್ಗದರ್ಶನ.
ಎಲ್ಲೆಡೆಯೂ ಇರುವ ಭಗವಂತ ವಿಗ್ರಹದಲ್ಲಿಲ್ಲವೇ? ಇರುವುದು ನಿಜವಾದರೂ ವಿಗ್ರಹಕ್ಕೂ ಭಗವಂತನಿಗೂ ಇರುವ ಸಂಬಂಧ ವ್ಯಾಪ್ಯ-ವ್ಯಾಪಕ ಸಂಬಂಧ.
ಇದರ ವೈಜ್ಞಾನಿಕ ವಿಶ್ಲೇಷಣೆಯನ್ನು ಮತ್ತೊಮ್ಮೆ ನೋಡೋಣ.
(Pending topics = ಆನಂದ ಸ್ವರೂಪ ಮತ್ತು ವ್ಯಾಪ್ಯ-ವ್ಯಾಪಕ ಸಂಬಂಧ)
ಒಪ್ಪುವ,ಒಪ್ಪದಿರುವ ವಿಚಾರದಲ್ಲಿ ಸ್ವಾತಂತ್ರ್ಯ ನಿಮ್ಮದೇ. ಒಪ್ಪಿದರೂ ನೀವು ನಮ್ಮ ಆತ್ಮೀಯರೇ! ಒಪ್ಪದಿದ್ದರೂ ನೀವು ನಮ್ಮ ಆತ್ಮೀಯರೇ!!
-ಸುಧಾಕರ ಶರ್ಮಾ

----------------------------------------------------
ಭಗವಂತನು ಸರ್ವವ್ಯಾಪಿ ಎನ್ನುವವರು ಭಗವಂತನಿಗೆ ಆಕಾರವನ್ನೇಕೆ ಕೊಡಬಾರದು?
ಭಗವಂತನಿಗೆ ಆಕಾರ ಕೊಡಲು ನಾವ್ಯಾರು.ನಾವು ಕೊಡುವ ಆಕಾರ ಭಗವಂತನದ್ದಾಗಿರುವುದಿಲ್ಲ ಅದು ನಮ್ಮ ಬುದ್ಧಿಮಟ್ಟಕ್ಕೆ ತಕ್ಕಂತ ರೂಪವಿರುತ್ತದೆ.
ಮನುಷ್ಯನಿಗೆ ಎಲ್ಲ ಜೀವಿಗಳಿಗಿಂತ ಬುದ್ಧಿ ಹೆಚ್ಚು ಆದರೆ ಆ ಬುದ್ಧಿ ಭಗವಂತನಿಗೆ ಆಕರ ಕೊಡುವಷ್ಟು ಸಮರ್ಥ ಅಂತ ಅನ್ನಿಸುವುದಿಲ್ಲ.

ಆದರೆ ಎಲ್ಲೆಡೆ ಇರುವ ಭಗವಂತನನ್ನು ಕಾಣುವುದಾದರೂ ಹೇಗೆ?
ಭಗವಂತನನ್ನು ನಾವು ಎಲ್ಲೆಡೆ ಕಾಣುತ್ತಿದ್ದೇವೆ ಮತ್ತು ಕಾಣಬಹುದು.ಅವನನ್ನು ನಮ್ಮಂತೆ ರೂಪವಿರುವ ಕಲ್ಲಿನ ಮೂರ್ತಿಯಲ್ಲೇ ಇದ್ದರೆ ಅವನು ಭಗವಂತ ಅಂತ ಹೇಳುವುದು ಸರಿಯೇ.ಭಗವಂತನನ್ನು ಕಣ್ಣಿನಿಂದಲೇ ಕಾಣಬೇಕೆಂದರೆ ಸೂರ್ಯ,ಚಂದ್ರ,ಮರ ಗಿಡ,ಬೆಟ್ಟ,ನೀರು,ಹಣ್ಣುಗಳಲ್ಲಿ ಕಾಣಬಹುದು. ಆದರೆ ಭಗವಂತನನ್ನು ಕಣ್ಣಿನಿಂದ ಕಾಣುವುದಕ್ಕಿಂತ ಅನುಭವಿಸಿದರೆ ಅವನ ಗುಣಗಳನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬಹುದು.
ಇದರಿಂದ ನಮ್ಮ ಗಮನವನ್ನು ಭಗವಂತನೆಡೆ ಕೇಂದ್ರೀಕರಿಸಲು ಸುಲಭವಾಗುವುದಿಲ್ಲವೇ?
ನನ್ನ ಪ್ರಕಾರ ಭಗವಂತ shortcut ಹಾದಿಯಲ್ಲಿ ಸಿಗುವವನಲ್ಲ.ನಮ್ಮ ದೌರ್ಬಲ್ಯವನ್ನು ನಾವು ಸರಿಪಡಿಸಿಕೊಳ್ಳಬೇಕು, ನಮಗೆ ಏಕಾಗ್ರತೆ ಇಲ್ಲ ಅಂದರೆ ಅದು ನಮ್ಮ ಪ್ರಾಬ್ಲಮ್ ಅಲ್ಲವೇ?
ಭಗವಂತನ ನಿಯಮ, ನಮಗೆ ಜೀವನ ಸಿಕ್ಕಿರುವ ಉದ್ದೇಶ, ಅವನ ಸೃಷ್ಟಿಯ ವೈಜ್ಞಾನಿಕತೆ ಮತ್ತು ಕೋಟ್ಯಾನುಕೋಟಿ ಅದ್ಭುತ ಗುಣಗಳನ್ನು ಅರಿತು ಮುನ್ನೆಡೆಯಲು ಆಕಾರ ಬೇಕೆಬೇಕೆ ?

ವಿಶಾಲ್
---------------------------------------------------------
ಸ್ವಾಮೀ ಶರ್ಮರೇ ನಮಸ್ಕಾರ, ನಾನೊಬ್ಬ ಏನೊ ತಿಳಿಯದ ವ್ಯಕ್ತಿ ಎಂದು ತಿಳಿದುಕೊಳ್ಳಿ. ಆಗ ನನಗೆ ನಿರಾಕಾರ ದೇವರನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿರುವುದಿಲ್ಲ. ಇದಕ್ಕೆ ಒಂದು ಕ್ಷುಲ್ಲಕ ಉದಾಹರಣೆ ಕೊಡುತ್ತೇನೆ- ಹದಿಹರೆಯದ ಹುಡುಗನೊಬ್ಬ ಹುಡುಗಿಯೊಬ್ಬಳನ್ನು ನೋಡಿದರಷ್ಟೇ ಅವನಿಗೆ ಅವನಲ್ಲಿನ ವಿಷಯಾಸಕ್ತಿ ಜಾಗ್ರತವಾಗಿ, ಪ್ರೇಮವೋ ಕಾಮವೋ ಘಟಿಸುತ್ತದೆ, ಹುಡುಗಿಯನ್ನೇ ನೋಡದ ಹುಡುಗನಿಗೆ ಯಾರದೋ ವರ್ಣನೆಯಿಂದ ಹುಡುಗಿ ಹೀಗಿದ್ದಾಳೆ ಎಂಬ ಕಲ್ಪನೆ ಬರವುದಿಲ್ಲ ! ಒಂದೊಮ್ಮೆ ಬರುವುದಾದರೂ ಇನ್ನೊಬ್ಬ ಹುಡುಗಿಯನ್ನಾದರೂ ತೋರಿಸಿ ನೋಡಪ್ಪಾ ಹೀಗಿದ್ದಾಳೆ ಎಂದರೆ ಆಗ ಆತನಿಗೆ ರೂಪದ ಕಲ್ಪನೆಯಾಗುತ್ತದೆ. ಇದೇ ರೀತಿ ಹುಟ್ಟಿದಾರಭ್ಯ ತಂದೆಯನ್ನೇ ಕಂಡಿರದ ವ್ಯಕ್ತಿಗೆ ತಂದೆಯ ಛಾಯಾಚಿತ್ರವನ್ನು ತೋರಿಸಿದರೆ ಮಾತ್ರ ಆತ ಈತ ತನ್ನ ತಂದೆ ಎಂಬುದನ್ನು ಮನಗಾಣಬಹುದು.

ಈಗ ನಮ್ಮದನ್ನೇ ತೆಗೆದುಕೊಳ್ಳೋಣ. ಜಗತ್ತಿನ ಅಸಂಖ್ಯ ಜನರಾಶಿಯಲ್ಲಿ ಒಬ್ಬರಂತೇ ಒಬ್ಬರಿಲ್ಲ, ಪ್ರತಿಯೊಬ್ಬರಿಗೂ ಕೊನೇ ಪಕ್ಷ ಏನಾದರೂ ಒಂದು ವ್ಯತ್ಯಾಸ ಇದ್ದೇ ಇರುತ್ತದೆ. [ಅದೇ ಮಾನವ ನಿರ್ಮಿತ ಗಾಡ್ರೆಜ್ ಬೀಗ ತೆಗೆದುಕೊಳ್ಳಿ --ಅಲ್ಲಿ ಒಂದೇ ಥರದ ಬೀಗಗಳು ಇರುತ್ತವೆ ಆದರೆ ಅವು ಅಲ್ಲಲ್ಲಿ ಹಂಚಿಹೋಗಿರುತ್ತವೆ, ಹೀಗಾಗಿ ಗೊತ್ತಾಗುವುದಿಲ್ಲ!] ನಾನು ನಾನಲ್ಲವೆಂದು ನನಗೇ ಅನ್ನಿಸಿದ್ದರೂ ನನ್ನಿಂದ ನಡೆಯುವ ಎಲ್ಲಾ ಲೌಕಿಕ ಕಾರ್ಯಗಳಿಗೆ ನನ್ನ ಪ್ರಸ್ತುತಿ ಅಥವಾ ನನ್ನ ಛಾಯಾಚಿತ್ರದ ಪ್ರಸ್ತುತಿ ಇದ್ದೇ ಇರುತ್ತದೆ. ಅದು ನನ್ನನ್ನು ಇತರರಿಂದ ಬೇರ್ಪಡಿಸಲೋಸುಗ, ಅಲ್ಲವೇ ? ಹೀಗೇ ಪರಮಾತ್ಮ ಸರ್ವವ್ಯಾಪಿಯೇ ಆದರೂ ಅತನ ಆ ನಿರಾಕಾರವನ್ನು ಪರಿಗಣಿಸಿ ನಿರ್ವಿಷಯ ಧ್ಯಾನದಲ್ಲಿ ತಲ್ಲೀನರಾಗಬಲ್ಲ ಜನ ಎಷ್ಟು ಸಿಗುತ್ತಾರೆ? ಇದನ್ನೆಲ್ಲಾ ತಿಳಿದೇ ಹುಡುಗನೊಬ್ಬ ಹುಡುಗಿಯ ಛಾಯಾಚಿತ್ರವನ್ನು ಕಂಡು ಅದರಲ್ಲಿ ತಲ್ಲೀನನಾಗುವಂತೇ ಭಕ್ತನೊಬ್ಬ ಮೂರ್ತಿಯಲ್ಲಿ ಪರಮಾತ್ಮನಿದ್ದಾನೆ ಎಂಬ ಭಾವನೆಯಿಂದ ತಲ್ಲೀನನಾಗಲಿ-ಅಲ್ಲಿಂದ ಮುಂದಕ್ಕೆ ಹಂತ ಹಂತವಾಗಿ ಆತನಿಗೆ ಮುಂದೆ ನಡೆಯಲು ಸಾಧ್ಯ ಎಂಬುದರ ಪರಿವೆಯನ್ನು ತಳೆದು ಕಾಲುಗಟ್ಟಿಯಾಗದ ಹಸುಗೂಸಿಗೆ ಓಡಾಡಲು ಚಿಕ್ಕ ತಳ್ಳುಗಾಡಿಯನ್ನು ಕೊಟ್ಟಂತೇ ನಮಗೆ ಋಷಿಗಳು/ತತ್ಸಮಾನರು ಮೂರ್ತಿಗಳನ್ನು ಕೊಟ್ಟರು ಎಂಬುದು ನನ್ನ ಅಭಿಪ್ರಾಯ. ಎಲ್ಲರೂ ತಮ್ಮ ಮಟ್ಟಕ್ಕೆ ಬೆಳೆಯಲು ತಕ್ಷಣಕ್ಕೆ ಸಾಧ್ಯವೇ ? ಹೀಗಾಗಿ ಜನಸಾಮಾನ್ಯನಿಗೆ ಕಲ್ಪನೆಗಾಗಿ ಮೊದಲಾಗಿ ಕೊಟ್ಟ ಈ ಮೂರ್ತಿಪೂಜೆಯನ್ನು ಮೇಲ್ಮಟ್ಟಕ್ಕೆ ಹೋದಾಗ ವರ್ಜಿಸಬಹುದು ಎಂದು ಶಂಕರರೇ ಹೇಳಿದ್ದಾರಲ್ಲವೇ ? ನಾನು ಅದೇ ತತ್ವಕ್ಕೆ ಆತುಕೊಳ್ಳುತ್ತೇನೆ. ನಾನು ತಮಗೆ ವಿರುದ್ಧವಲ್ಲ, ಆದರೆ ತಾವು ನಮಗಿಂತಾ ಮೇಲ್ಮಟ್ಟಕ್ಕೆ ತಲ್ಪಿದ್ದೀರಿ ಎಂಬುದು ಈ ಮಾತಿನ ಅರ್ಥ, ನಮಸ್ಕಾರ.


ಇತಿಹಾಸ ನಿರ್ಮಾಣ ಮಾಡುವವರು ನೀವೇ ಏಕಾಗಬಾರದು? -ಮಾತಾಜಿ ವಿವೇಕಮಯೀ



[ಮನವಿ: ಲೇಖನ ಒಂದು ಸ್ವಲ್ಪ ಉದ್ದವಾದಾಗ ಓದುವ ತಾಳ್ಮೆ ಇಲ್ಲ ವಾಗುತ್ತೆ. ಆದರೆ ನಿಮಗಾಗಿ, ನಿಮ್ಮ ಮಕ್ಕಳ ಉತ್ತಮ ಭವಿಷ್ಯಕಾಗಿ ಈ ಲೇಖನ ಓದಿ. ನನ್ನ ಒಂದು ಮಾತೂ ಕೂಡ ಇದರಲ್ಲಿಲ್ಲ. ಆದರೆ ಮಾತಾಜಿ ವಿವೇಕಮಯೀ ಅವರ ಕಳಕಳಿಯ ಮಾತುಗಳು ನಮಗೆ ದಾರಿ ದೀಪವಾಗಬಲ್ಲದು. ಆದ್ದರಿಂದ ಬಲವಂತವಾಗಿಯೇ ಈ ಲೇಖನ ಓದಿ, ನಂತರ ಪ್ರತಿಕ್ರಿಯಿಸಿ, ನಿಮ್ಮ ಪ್ರತಿಕ್ರಿಯೆಗಳು ಲೇಖನದ ಪರವಾಗಿಯೇ ಇರಬೇಕೆಂದೇನೂ ಇಲ್ಲ.]

ಇಂದಿನ ಸಮಾಜದಲ್ಲಿ ನಾವು ಚಿಂತಿಸುವ ರೀತಿಯಾದರೂ ಹೇಗಿರುತ್ತೆ? ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸಬೇಕು, ಏಕೆಂದರೆ ಮುಂದೆ ಒಳ್ಳೆಯ ಕಾಲೇಜಿಗೆ ಸೇರಿಸ ಬೇಕು, ಒಳ್ಳೆಯ ಕಾಲೇಜಾದರೂ ಏಕೆಂದರೆ ನಮ್ಮ ಮಕ್ಕಳು ಒಳ್ಳೆಯ ಕೆಲಸಕ್ಕೆ ಸೇರಿ ತುಂಬಾ ಸಂಪಾದಿಸಬೇಕು, ಸುಖವಾದ ಜೀವನ ಮಾಡಬೇಕು, ಅಂತೂ ತುಂಬಾ ಹಣ ಸಂಪಾದಿಸಿದರೆ ನಮ್ಮ ಮಕ್ಕಳ ಜೀವನ ಸುಖವಾಗಿರುತ್ತೆ,ಎಂಬ ಕಲ್ಪನೆ.

ಒಬ್ಬ ವಿದ್ಯಾರ್ಥಿಯು ತನ್ನ ಪದವಿ ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸ್ತಾನೆ. ಅವನ ತಾಯಿಗೆ ವಿಷಯ ತಿಳಿಸಲು ಹೋಗ್ತಾನೆ. ಅವರ ಅಮ್ಮನಿಗೆ ತುಂಬಾ ಆನಂದ ವಾಗುತ್ತೆ -ಎಂದು ಸಹಜವಾಗಿ ಬಯಸಿದ್ದ ವಿದ್ಯಾರ್ಥಿಗೆ ಅವನ ತಾಯಿ " ಸಂತೋಷ " ಎಂದಷ್ಟೇ ಹೇಳಿ ಮೌನವಾಗಿಬಿಡ್ತಾಳೆ.ವಿದ್ಯಾರ್ಥಿಗೆ ಸಹಜವಾಗಿ ಬೇಜಾರಾಗಿ ಬಿಡುತ್ತೆ. ಅವನು ಅಮ್ಮನನ್ನು ಕೇಳ್ತಾನೆ-" ಅಮ್ಮ ನಾನು ಅತ್ಯಂತ ಉನ್ನತ ಶ್ರೇಣಿಯಲ್ಲಿ ನಮ್ಮ ಯೂನಿವರ್ಸಿಟಿಗೆ ಪ್ರಥಮನಾಗಿ ತೇರ್ಗಡೆ ಹೊಂದಿರುವುದು ನಿನಗೆ ಸಂತೋಷದ ವಿಷಯ ವಲ್ಲವೇ?" ಅದಕ್ಕೆ ಅವನ ತಾಯಿ ಹೇಳ್ತಾಳೆ- " ನೋಡು ನೀನು ಪದವಿಯಲ್ಲಿ ಚಿನ್ನದ ಪದಕ ಗಳಿಸಿದ್ದು, ಮುಂದೆ ಒಳ್ಳೆಯ ಕೆಲಸಕ್ಕೆ ಸೇರುವುದು, ಯಾವುದೂ ನನಗೆ ದೊಡ್ದ ವಿಷಯವಲ್ಲ, ನೀನು ಎಷ್ಟು ಸಂಪತ್ತು ಸಂಪಾದಿಸುತ್ತೀಯ ಎಂಬುದು ಮುಖ್ಯವಲ್ಲ,ಆದರೆ ನಿನ್ನ ಬದುಕನ್ನು ಹೇಗೆ ರೂಪಿಸುತ್ತೀಯ -ಎಂಬುದು ಮುಖ್ಯ. ಕೂಲಿ ಕೆಲಸ ಮಾಡಿದರೂ ಚಿಂತೆಯಿಲ್ಲ ನನ್ನ ಮಗ ಪ್ರಾಮಾಣಿಕನಾಗಿ ಜೀವನ ಮಾಡುತ್ತಾನಾ? ಜೀವನದಲ್ಲಿ ಆದರ್ಷವಾಗಿ ಬದುಕಿ ತೋರಿಸ್ತಾನಾ?ಅದು ಮುಖ್ಯ!"

ವಿದ್ಯಾರ್ಥಿ ಜೀವನದಲ್ಲಿ ಅಂತಹ ಒಬ್ಬ ತಾಯಿಯ ಆದರ್ಷದಿಂದ ಇಂದು ಸಮಾಜದಲ್ಲಿ ಸುರೇಶ್ ಕುಲಕರ್ಣಿ ಯವರಂತಹ ಪ್ರಾಮಾಣಿಕ ಚಿಂತಕರನ್ನು ಕಾಣ ಬಹುದಾಗಿದೆ. ಅಂದು ಆರು- ಏಳು ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗೆ ಅವನ ತಾಯಿ ಒಂದು ಒಳ್ಳೆಯ ಕೆಲಸಕ್ಕೆ ಸೇರಿ ಚೆನ್ನಾಗಿ ಹಣ ಸಂಪಾದಿಸು -ಎಂದಷ್ಟೇ ಹೇಳಿದ್ದರೆ ಸಮಾಜಕ್ಕೆ ಇಂತಹ ಮಹನೀಯರು ಸಿಗುತ್ತಿರಲಿಲ್ಲ-ಅಲ್ಲವೇ " ಅಂದು ಸುರೇಶ್ ಕುಲಕರ್ಣಿಯವರಿಗೆ ಗೋಚರವಾಯ್ತು " ಪದವಿಯಲ್ಲಿ ಪಡೆದ ಚಿನ್ನದ ಪದಕಕ್ಕಿಂತಲೂ ಹೆಚ್ಚಿನದು , ಹಣ ಗಳಿಸುವುದಕ್ಕಿಂತ ಹೆಚ್ಚಿನದು ಜೀವನದಲ್ಲಿ ಬೇರೆ ಯೇನೋ ಇದೆ." ಎಂದು.

ಹೌದು ಜೀವನದಲ್ಲಿ ನಾವು ಗಳಿಸುವ ಹಣಕ್ಕಿಂತಲೂ ಹೆಚ್ಚಿನದು ಬೇರೆ ಏನೋ ಇದೆ, ಆದರೆ ನಾವು ಅದಕ್ಕೆ ಅಂತಹ ಸ್ಥಾನವನ್ನು ಕೊಡಬೇಕಷ್ಟೆ.ನಾವು ಜೀವನದಲ್ಲಿ ಮೌಲ್ಯಗಳಿಗೆ ಸ್ಥಾನ ಕೊಡಬೇಕು. ನಿಧಾನವಾಗಿ ನಮ್ಮ ಸಹಜ ಜೀವನ ಹೇಗೆ ಬದಲಾಗುತ್ತಿದೆ ! ನಮ್ಮ ಪರಂಪರಾಗತ ಜೀವನದ ಆದರ್ಶಗಳು ಪಾಶ್ಚಿಮಾತ್ಯ ಪ್ರಭಾವಕ್ಕೊಳಗಾಗಿ ಜೀವನದ ಸುಖಭೋಗಗಳಿಗೆ ಹೆಚ್ಚು ಹೆಚ್ಚು ಪ್ರಾಶಸ್ತ್ಯ ಕೊಡುತ್ತಾ, ನಮ್ಮ ಆದರ್ಶಗಳು ಹೇಗೆ ಮರೆಯಾಗುತ್ತಿವೆ! ನಮ್ಮ ಜೀವನದ ಅಗತ್ಯಗಳು ಹೆಚ್ಚುತ್ತಾ ಹೆಚ್ಚುತ್ತಾ,ಸುಖಭೋಗಗಳು ಹೆಚ್ಚಿನ ಪ್ರಾಶಸ್ತ್ಯ ಗಳಿಸುತ್ತಾ ಮನುಷ್ಯಜೀವನದ ಎಲ್ಲಾ ಶಕ್ತಿ ಸಾಮರ್ಥ್ಯಗಳೂ ಆ ಒಂದೇ ನಿಟ್ಟಿನಲ್ಲಿ ಒಂದು ಚಿಕ್ಕ ಉದ್ದೇಶಕ್ಕಾಗಿ ವ್ಯಯವಾಗುತ್ತಿದೆಯಲ್ಲಾ! ವಿವೇಕಾನಂದರು ಹೇಳುತ್ತಾರೆ- "ಸೃಷ್ಟಿಯಲ್ಲಿ ಅತ್ಯದ್ಭುತವಾದದ್ದೆಂದರೆ ಮನುಷ್ಯ ಜನ್ಮ." ಯಾಕೆಂದರೆ ಒಬ್ಬ ಮನುಷ್ಯನೇ ಬುದ್ಧನಾದದ್ದು, ರಾಮನಾದದ್ದು,ಕೃಷ್ಣನಾದದ್ದು. ಸಾವಿರಾರು ವರ್ಷಗಳು ಕಳೆದರೂ ಜನರು ಅವರನ್ನು ಸ್ಮರಿಸುತ್ತಾರೆಂದರೆ ಅವರು ಆರೀತಿ ಬದುಕಿ ತೋರಿಸಿದರು.ಅವರ ಫೋಟೊಗಳಿಗೆ ನಾವು ನಮಸ್ಕರಿಸುವುದಾದರೂ ಏಕೆ? ಅದಕ್ಕೆ ಉತ್ತರವನ್ನು ವಿವೇಕಾನಂದರು ಕೊಡುತ್ತಾರೆ-" ಪ್ರತಿಯೊಬ್ಬ ಮನುಷ್ಯನೂ ಹುಟ್ಟುವಾಗ ಚೈತನ್ಯವನ್ನು ಇಟ್ಟುಕೊಂಡೇ ಹುಟ್ಟಿದ್ದಾನೆ.ಆದರೆ ಸಾಮಾನ್ಯ ಜನರು ಇದನ್ನು ತಿಳಿಯದೆ ಅತ್ಯಂತ ಸಣ್ಣ ಉದ್ದೇಶಕ್ಕಾಗಿ ಜೀವನವನ್ನು ಸೆವೆಸಿ ಬಿಡುತ್ತಾರೆ.ಅತ್ಯಂತ ನಿಕೃಷ್ಟ ಬದುಕು ಸವೆಸಿ ಬಿಡುತ್ತಾರೆ. ಆ ಬದುಕು ಸಾರ್ಥಕತೆ ಪಡೆಯುವುದಿಲ್ಲ.ಬದುಕಿಗೊಂದು ಉದಾತ್ತ ಧ್ಯೇಯ ವಿರಬೇಕು, ಮಕ್ಕಳ ಮುಂದೆ ಇಂತಹ ಉದಾತ್ತ ಗುರಿಗಳ ಬಗ್ಗೆ ಮಾತನಾಡಬೇಕು. ಓದಿನಲ್ಲಿ ಹೆಚ್ಚು ಅಂಕ ಗಳಿಸಬೇಕು ಎಂಬುದು ಮುಖ್ಯ ಹೌದು, ಆದರೆ ಅದಕ್ಕಿಂತಲೂ ಮುಖ್ಯ ಜೀವನದಲ್ಲಿ ಉದಾತ್ತವಾಗಿ ಬಾಳುವುದು. ಉನ್ನತ ಆದರ್ಶಗಳಿಗಾಗಿ ಬದುಕುವುದನ್ನು ಮಕ್ಕಳಿಗೆ ಕಲಿಸಬೇಕು. ಪುರಾಣದಲ್ಲಿ ಒಂದು ಕಥೆ ಇದೆ. ಮದಾಲಸೆ ಎಂಬ ರಾಣಿ ಇದ್ದಳು. ಅವಳು ಎಂತಹಾ ಮಹಾನ್ ಜ್ಞಾನಿಯಾಗಿದ್ದಳೆಂದರೆ ಮಕ್ಕಳನ್ನು ತೊಟ್ಟಿಲಲ್ಲಿ ಮಲಗಿಸಿ ತೂಗುವಾಗ ಜೋಗುಳ ಹಾಡುತ್ತಿದುದಾದರೂ ಏನು-" ಮಗು ನೀನು ಆತ್ಮ ಸ್ವರೂಪಿ, ಮಗೂ ನೀನು ದುರ್ಬಲನಲ್ಲ.ಮಗೂ ನಿನ್ನ ಜೀವನ ಸಾರ್ಥಕ ವಾಗಬೇಕು, ನೀನು ಏನಾದರೂ ಸಾಧಿಸಬೇಕು, ನೀನು ದುರ್ಬಲನಾಗಿ ಅಳುತ್ತಾ ಅಳುತ್ತಾ ಜೀವನ ಕಳೆಯಬೇಡ.ನೀನು ಧೈರ್ಯಶಾಲಿಯಾಗು,ನೀನು ಶಕ್ತಿಶಾಲಿಯಾಗು,ನಿನ್ನ ನಿಜ ಸ್ವರೂಪವನ್ನು ನೀನು ಕಂಡುಕೋ, " ಹೀಗೆ ತೊಟ್ಟಿಲು ತೂಗುತ್ತಾ ತೂಗುತ್ತಾ ಬೆಳಸಿದ ನಾಲ್ಕು ಮಕ್ಕಳು ದೊಡ್ದವರಾದಾಗ ಯೋಗಿಗಳಾಗಿ ಬಿಡುತ್ತಾರೆ. ಇನ್ನು ಹೀಗೆಯೇ ಆಗಿ ಬಿಟ್ಟರೆ ರಾಜನ ವಂಶ ಬೆಳೆಯುವುದಾದರೂ ಹೇಗೆಂದು ಮತ್ತೊಬ್ಬ ಮಗನನ್ನು ರಾಜನು ಇವಳಿಂದ ಬೇರೆಯೇ ಬೆಳೆಸುತ್ತಾನೆ.ಈಕಥೆಯ ನೀತಿಯಾದರೂ ಏನು? ನಮ್ಮ ಮಕ್ಕಳೆಲ್ಲಾ ಯೋಗಿಳಾಗಬೇಕಿಲ್ಲ. ಆದರೆ ಆ ಮಹಾತಾಯಿ ಚಿಕ್ಕಂದಿನಲ್ಲಿ ಮಕ್ಕಳ ಕಿವಿಯಲ್ಲಿ ಶ್ರೇಷ್ಟ ವಿಚಾರಗಳನ್ನೇ ತಿಳಿಸಿದ್ದರಿಂದ ಮಕ್ಕಳು ಶ್ರೇಷ್ಟವಾದ ಆದರ್ಶವನ್ನು ಕಣ್ಮುಂದೆ ಇಟ್ಟುಕೊಂಡು ಬೆಳೆದರು. ಅಂದರೆ ಚಿಕ್ಕಂದಿನಲ್ಲಿ ಮಕ್ಕಳಿಗೆ ನಾವು ಏನು ಕೊಡುತ್ತೇವೋ ಮಕ್ಕಳು ಅದೇ ಆಗುತ್ತಾರೆ.ಆದ್ದರಿಂದ ನಾವು ಪ್ರತಿನಿತ್ಯ ನಮ್ಮ ಮಕ್ಕಳಿಗೆ ಯಾವ ವಿಚಾರವನ್ನು ಹೇಳುತ್ತೇವೆ, ನಮ್ಮ ದೇಶದಲ್ಲಿ ಆಗಿಹೋದ ಮಹಾಪುರುಷರ ಜೀವನ ದ ಸ್ಪೂರ್ತಿದಾಯಕ ಘಟನೆಗಳನ್ನು ತಿಳಿಸುತ್ತೀವಾ? ಮಕ್ಕಳು ಯಾರಂತೆ ಬೆಳೆಯಬೇಕೆಂದು ಅವರಿಗೆ ಮನಮುಟ್ಟುವಂತೆ ಹೇಳುತ್ತೇವಾ? ರಾಮಕೃಷ್ಣಪರಮಹಂಸರ ತಂದೆಯವರ ಒಂದು ಉದಾಹರಣೆ . ಕಲ್ಕತ್ತಾ ಸಮೀಪ ದೇರಾ ಎಂಬ ಎಂಬ ಒಂದು ಹಳ್ಳಿ ಅಲ್ಲಿ ಕ್ಷುದೀರಾಮ ಚಟ್ಟೋಪಾಧ್ಯಾಯ ಎಂಬ ಬ್ರಾಹ್ಮಣ ನೆಲಸಿರುತ್ತಾರೆ. ಬಹಳ ಪ್ರಾಮಾಣಿಕವಾದ ಜೀವನ.ಶ್ರೇಷ್ಠವಾದ ಆದರ್ಶಗಳಿಂದ ಊರಿನಲ್ಲಿ ಜನಪ್ರಿಯರು.ಬಡತನವಿದ್ದರೂ ಸತ್ಯವಾದಿ. ಆದಿನಗಳಲ್ಲಿ ಇವರ ಸನ್ನಡತೆಯಿಂದ ಊರಿನ ಎಲ್ಲರ ಗೌರವಕ್ಕೆ ಪಾತ್ರರು. ಅದೇ ಊರಿನಲ್ಲಿ ಒಬ್ಬ ಜಮೀನ್ದಾರ. ಮಹಾ ವಂಚಕ. ಊರಿನಲ್ಲಿರುವ ಎಲ್ಲರ ಆಸ್ತಿಯ ಮೇಲೆ ಇವನ ಕಣ್ಣು. ಆಸ್ತಿಯ ವ್ಯಾಜ್ಯ ಒಂದಕ್ಕೆ ಇವನಿಗೆ ಸುಳ್ಳು ಸಾಕ್ಷಿ ಹೇಳುವವರು ಬೇಕಾಗುತ್ತಾರೆ. ಚಟ್ಟೋಪಾಧ್ಯರು ಸಾಕ್ಷಿ ಹೇಳಿಬಿಟ್ಟರೆ ಕೇಸಿನಲ್ಲಿ ಇವನ ಗೆಲವು ಗ್ಯಾರಂಟಿ ಎಂದು ತಿಳಿದು ಜಮೀನ್ದಾರನು ಇವರಲ್ಲಿಗೆ ಬರುತ್ತಾನೆ. ಚಟ್ಟೋಪಾಧ್ಯಾಯರಿಗೆ ಬೆದರಿಕೆ ಒಡ್ಡುತ್ತಾನೆ " ನೀವು ನನ್ನ ಪರವಾಗಿ ಸಾಕ್ಷಿ ಹೇಳಲೇ ಬೇಕು, ಇಲ್ಲದಿದ್ದರೆ ನೀವು ಈ ಊರಿನಲ್ಲಿರಲಾರಿರಿ, ನನ್ನ ಪರವಾಗಿ ಸಾಕ್ಷಿ ಹೇಳಿದರೆ ನಿಮಗೆ ಬೇಕಾದ್ದು ಕೊಡುತ್ತೇನೆ". ಚಟ್ಟೋಪಾಧ್ಯಾಯರು ಜಮೀನ್ದಾರನ ಆಸೆಗೂ ಬಲಿಯಾಗಲಿಲ್ಲ, ಬೆದರಿಕೆಗೂ ಬಗ್ಗಲಿಲ್ಲ.ಕಡೆಗೆ ರಾಮಕೃಷ್ಣರಪರಮಹಂಸರ ತಂದೆಯವರು ಆ ಹಳ್ಳಿಯನ್ನು ತೊರೆಯ ಬೇಕಾಗುತ್ತದೆ.ರಾಮಕೃಷ್ಣ ಪರಮಹಂಸರು ಅಷ್ಟು ದೊಡ್ಡ ವ್ಯಕ್ತಿಯಾಗಿ ಬೆಳೆಯಲು ತಂದೆಯ ಸತ್ಯನಿಷ್ಟ ಜೀವನ, ಆದರ್ಶದ ಬದುಕು ಕಾರಣ ವಾಗುತ್ತದೆ. ಆದ್ದರಿಂದ ಮಕ್ಕಳು ಒಂದು ಉತ್ತಮವಾದ ದಾರಿಯಲ್ಲಿ ಬೆಳೆಯಬೇಕೆಂದರೆ ನಾವು ಉತ್ತಮ ಹಾದಿಯಲ್ಲಿ ನಡೆಯುತ್ತಿದ್ದೀವಾ? ಪ್ರಶ್ನೆ ಹಾಕಿಕೊಳ್ಳಬೇಕು. ನಮ್ಮ ಪ್ರತಿಯೊಂದು ನಡೆಯನ್ನೂ ಮಕ್ಕಳು ಗಮನಿಸುತ್ತಿರುತ್ತಾರೆಂಬುದು ನಮಗೆ ತಿಳಿದಿರಬೇಕು. ವಿವೇಕಾನಂದರ ಬಾಲ್ಯದ ಒಂದು ಘಟನೆ. ನರೇಂದ್ರನನ್ನು ಶಾಲೆಯಲ್ಲಿ ಮೇಸ್ಟ್ರು ಯಾವುದೋ ಒಂದು ಪ್ರಶ್ನೆ ಕೇಳುತ್ತಾರೆ. ನರೇಂದ್ರ ಬುದ್ದಿವಂತ. ಸರಿಯಾದ ಉತ್ತರ ಕೊಟ್ಟಿರುತ್ತಾನೆ. ಮೇಸ್ಟ್ರು ಅದನ್ನು ಒಪ್ಪದೆ ತಪ್ಪು ಎಂದು ಹೇಳುತ್ತಾರೆ.ನರೆಂದ್ರನಿಗೆ ಅದು ಸರಿ ಎಂದು ನೂರಕ್ಕೆ ಇನ್ನೂರರಷ್ಟು ಗೊತ್ತು. ಆದರೂ ಮೇಸ್ಟ್ರು ಸರಿಇಲ್ಲವೆಂದು ಹೇಳುತ್ತಾರೆ. ಇವನು ಮತ್ತೊಮ್ಮೆ ಹೇಳುತ್ತಾನೆ. " ನನ್ನ ಉತ್ತರ ಸರಿಯಿದೆ " ಎಂದು. ಮೇಸ್ಟ್ರಿಗೆ ಸಿಟ್ಟು ಬರುತ್ತೆ. ಬಲವಾಗಿ ಹೊಡೆಯುತ್ತಾರೆ. ಅಳುತ್ತಾ ಬಾಲಕ ನರೇಂದ್ರ ಮನೆಗೆ ಬರುತ್ತಾನೆ. ಅಮ್ಮ ಭುವನೇಶ್ವರಿ ಎಲ್ಲಾ ಕೇಳಿ ತಿಳಿದುಕೊಳ್ಳುತ್ತಾಳೆ. ಮಗುವಿಗೆ ಹೇಳುತ್ತಾಳೆ " ಮಗು ನೀನು ಸರಿಯಾಗಿಯೇ ಹೇಳಿದ್ದೀಯ" ನೀನು ಯಾವಾಗಲೂ ಸುಳ್ಳನ್ನು ಒಪ್ಪಿಕೊಳ್ಳಬೇಡ. ಸುಳ್ಳಿಗೆ ಹೊಂದಾಣಿಕೆ ಮಾಡಿಕೊಳ್ಳಬೇಡ.ಪ್ರಾಣ ಹೋದರೂ ಚಿಂತೆಯಿಲ್ಲ. ಸುಳ್ಳಿಗೆ ಶರಣಾಗ ಬೇಡ. " ನರೆಂದ್ರನ ಕೈಯ ಮೇಲಿನ ಬಾಸುಂಡೆ ನೋಡಿದ ತಾಯಿ " ಮಗು ನೀನು ಒಂದು ಸತ್ಯದ ಮಾತಿಗಾಗಿ ಏಟು ತಿನ್ನುವ ಬದಲು ಮೇಸ್ಟ್ರು ಹೇಳಿದ್ದನ್ನೇ ಒಪ್ಪಿ ಕೊಂಡು ಏಟು ತಪ್ಪಿಸಿಕೊಳ್ಳಬಹುದಿತ್ತು- ಎಂದು ಹೇಳ ಬಹುದಿತ್ತು, ಆದರೆ ಆ ಮಹಾತಾಯಿ ಹಾಗೆ ಮಾಡಲಿಲ್ಲ. ಸತ್ಯಕ್ಕೆ ಅಪಚಾರ ವಾಗುವುದನ್ನು ಎಂದೂ ಸಹಿಸಬೇಡವೆಂದು ಬಾಲ್ಯದಲ್ಲಿಯೇ ತಾಯಿಯು ಕಲಿಸಿದ್ದರಿಂದ ಒಬ್ಬ ಸತ್ಯವಾದಿ ವಿವೇಕಾನಂದ ನಾಗಿ ನರೇಂದ್ರನು ಬೆಳೆಯುತ್ತಾನೆ. ಕಷ್ಟವನ್ನು ತಪ್ಪಿಸಿಕೊಳ್ಳುವುದಕ್ಕೆ ದಾರಿಯನ್ನು ಸ್ವಲ್ಪ ಬದಲಿಸಿ ಸುಗುಮಗೊಳಿಸಲು ಆ ತಾಯಿ ಹೇಳಿಕೊಡಲಿಲ್ಲ.ನೇರವಾದ ದಾರಿಯಲ್ಲಿ ಕಲ್ಲುಮುಳ್ಳು ಇರುತ್ತೆ ಎಂದು ಸ್ವಲ್ಪ ಸುಗುಮವಾದ ದಾರಿ ಹಿಡಿಯೋಣವೆಂದು ಆ ತಾಯಿ ಹೇಳಿಕೊಡಲಿಲ್ಲ.ಮುಂದೆ ವಿವೇಕಾನಂದರು ಹೇಳಿಕೊಳ್ಳುತ್ತಾರೆ " ಇವತ್ತು ನಾನು ಏನಾಗಿದ್ದರೂ ಅದಕ್ಕೆ ನನ್ನ ತಾಯಿ ಕಾರಣ ವೆಂದು".

ಸ್ವಾತಂತ್ರ್ಯ ಪೂರ್ವದಲ್ಲಿ ಇಪ್ಪತ್ತು ದಾಟಿರದ ಯುವಕರು ನಗುನಗುತ್ತಾ ನೇಣುಗಂಬವನ್ನು ಏರಿದ್ದು ಇತಿಹಾಸ ವಾದರೆ ಇಂದಿನ ನಮ್ಮ ಮಕ್ಕಳ ಕಥೆ ಏನು? ಪರೀಕ್ಷೆಯಲ್ಲಿ ಮೊದಲ RANK ಬದಲು ನಾಲ್ಕನೇ RANK ಬಂದರೆ ಮಕ್ಕಳು ಆತ್ಮಹತ್ಯೆಗೆ ಶರಣಾಗುವುದನ್ನು ನಾವು ಕಾಣುತ್ತೇವೆ? ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯವೇ ಇಲ್ಲ. ಮಕ್ಕಳ ಆತ್ಮ ಶಕ್ತಿಯನ್ನು ಜಾಗೃತ ಗೊಳಿಸಬೇಡವೇ? ಮಕ್ಕಳ ಮಾನಸಿಕ ಬೆಳವಣಿಗೆಯಲ್ಲಿ ನಾವು ಎಡವಿದ್ದೆಲ್ಲಿ? ಪ್ರಶ್ನೆ ಹಾಕಿಕೊಳ್ಳ ಬೇಡವೇ? ನಾವು ಈಗ ಲಾದರೂ ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ದಾರಿ ಕಂಡುಕೊಳ್ಳಬೇಡವೇ? ಎಲ್ಲರೂ ಯಾವುದೋ ದಾರಿಯಲ್ಲಿ ಹೋಗುತ್ತಿದ್ದಾರೆಂದರೆ ನಾವೂ ಅದೇ ದಾರಿಯಲ್ಲಿ ಹೋಗಬೇಕೆ? ನಾವು ಕುರಿಮಂದೆಯಲ್ಲಾ! ಅಲ್ಲವೇ?ನಾವು ಜೀವನವನ್ನು ಹೇಗೆಂದರೆ ಹಾಗೆ ತೆಗೆದುಕೊಳ್ಳ ಬಾರದು.ಒಂದು ಕುರಿ ಹಳ್ಳಕ್ಕೆ ಬಿದ್ದರೆ ಎಲ್ಲವೂ ಹಳ್ಳಕ್ಕೆ ಬೀಳುತ್ತವೆ. ಕುರಿಗೂ ನಮಗೂ ವೆತ್ಯಾಸ ಬೇಡವೇ? ಯಾವುದೋ ಭ್ರಮೆಯಲ್ಲಿ ನಾವು ಬದುಕುತ್ತಿದ್ದೇವೆ. ನಮಗೆ ವಿದ್ಯಾಭ್ಯಾಸ ಇರಬಹುದು ಆದರೆ ಸ್ವತಂತ್ರವಾದ ಆಲೋಚನೆಯನ್ನು ಕಳೆದುಕೊಂಡುಬಿಟ್ಟಿದ್ದೇವೆ. ನಮಗೆ ಪ್ರತಿಕ್ರಿಯಿಸುವ ಶಕ್ತಿಯೇ ಇಲ್ಲವಾಗಿದೆ. ಸಮಾಜದಲ್ಲಿರುವ ದೀನ ದರಿದ್ರರ ಸ್ಥಿತಿಗತಿ ನಮಗೆ ಅರ್ಥವಾಗುವುದೇ ಇಲ್ಲ. ನಮ್ಮ ಈ ಸಂಪತ್ತಿಗೆ, ನಮ್ಮ ವಿದ್ಯೆಗೆ ಸಮಾಜದ ಎಷ್ಟು ಜನರ ಕೊಡುಗೆ ಇದೆ ಎಂಬ ಅರಿವು ನಮಗಿದೆಯೇ? ಹಳ್ಳಿಯ ರೈತ ಬೆಳಿಯದಿದ್ದರೆ ನಗರದಲ್ಲಿರುವವರು ಹಣ ಇಟ್ಟುಕೊಂಡು ಏನು ಮಾಡಲು ಸಾಧ್ಯ? ಮನೆಯ ಮುಂದಿನ ಕಸವನ್ನು ಜಾಡಮಾಲಿ ಬಂದು ಗುಡಿಸ ದಿದ್ದರೆ ನಮ್ಮ ನಗರ ಕೊಳೆತು ನಾರುವು ದಿಲ್ಲವೇ? ಹಾಗಾದರೆ ಯಾರಿಗೆ ಮಹತ್ವ ಕೊಡಬೇಕು? ನಾವು ಕೊಡುತ್ತಿದ್ದೇವೆಯೇ? ಎಲ್ಲರಂತಾಗುವುದರಲ್ಲೇನೂ ಅತಿಶಯವಿಲ್ಲ. ಬೇರೆಯದಾಗಿಯೇ ಚಿಂತನೆ ನಡೆಸಿ.ವಿವೇಕಾನಂದರು ಹೇಳುತ್ತಾರೆ" ಇತಿಹಾಸ ನಿರ್ಮಾಣ ಮಾಡುವವರು ಯಾರೋ ಕೆಲವರೇ ಹೌದು, ಆ ಕೆಲವರು ನಾವೇ ಏಕಾಗ ಬಾರದು? ಆಕೆಲವರು ನಮ್ಮ ಮಕ್ಕಳೇ ಏಕಾಗ ಬಾರದು ? ಎಂಬ ಪ್ರಶ್ನೆ ಮಾಡಿಕೊಳ್ಳಬೇಕು.

ಉಪನ್ಯಾಸದ ಎರಡನೆಯ ಭಾಗ: ಮಕ್ಕಳಿಗೆ ಕಷ್ಟ ದು:ಖಗಳ ಅರಿವು ಮೂಡಿಸಿ: ನಮ್ಮ ಮಕ್ಕಳು ಹಾಗೆ ವಿಶೇಷ ವ್ಯಕ್ತಿತ್ವ ಉಳ್ಳ ಪ್ರಜೆಗಳಾಗಿ ಬೆಳೆಯಬೇಕಾದರೆ ಅವರನ್ನು ಹೇಗೆ ಬೆಳೆಸಬೇಕು?ಅದರಲ್ಲಿ ನಮ್ಮ ಹೊಣೆ ಏನು? ನಾವು ಚಿಂತಿಸಬೇಕಾಗುತ್ತದೆ.ನಮ್ಮ ಮಕ್ಕಳು ವಿಶೇಷವಾಗಿ ಬೆಳೆಯ ಬೇಕಾದರೆ ಆನಿಟ್ಟಿನಲ್ಲಿ ನಾವು ಅವರನ್ನು ಬೆಳೆಸಬೇಕಾಗುತ್ತದೆ.ಈಗಿನ ಮಕ್ಕಳನ್ನು ಗಮನಿಸಿದಾಗ ಅವರಲ್ಲಿ ಮನೋಸ್ಥೈರ್ಯ ಕಡಿಮೆ ಇರುವುದನ್ನು ನಾವು ಕಾಣುತ್ತೇವೆ. ಮಕ್ಕಳ ಮನೋದೌರ್ಬಲ್ಯಕ್ಕೆ ಕಾರಣ ಕಂಡುಕೊಂಡಿದ್ದೀವಾ? ನಿಜವಾಗಿ ಮಕ್ಕಳಿಗೆ ಕಷ್ಟದ ಪರಿಕಲ್ಪನೆಯೇ ಇಲ್ಲ. ಅವರಿಗೆ ಕಷ್ಟವೆಂದರೇನು-ಅದರ ಅರಿವಿಲ್ಲ. ಅವರಿಗೆ ಕಷ್ಟದ ಅರಿವಾಗದಂತೆ ಸುಖದಲ್ಲಿ ಬೆಳೆಸಿದ್ದೇವೆ. ನಮ್ಮ ಚಿಂತನೆ ಹೇಗಿದೆ ಎಂದರೆ ಮಕ್ಕಳು ಬಯಸಿದ್ದನ್ನೆಲ್ಲಾ ನಾವು ಅವರಿಗೆ ಒದಗಿಸಿ ಕೊಟ್ಟರೆ ನಮ್ಮ ಮಕ್ಕಳು ಚೆನ್ನಾಗಿ ಓದುತ್ತಾರೆ, ಅದಕ್ಕಾಗಿ ನಾವು ಶಾಲೆಯನ್ನು ಹುಡುಕುತ್ತೇವೆ, ಯಾವ ಶಾಲೆಯಲ್ಲಿ ಸೌಕರ್ಯಗಳು ಹೆಚ್ಚಿದೆ,ಯಾವ ಶಾಲೆಯಲ್ಲಿ ಕಟ್ಟಡ ಚೆನ್ನಾಗಿದೆ,ಯಾವ ಶಾಲೆಗಳಿಗೆ ಶ್ರೀಮಂತ ಮಕ್ಕಳೇ ಹೋಗುತ್ತಾರೆ,ಯಾವ ಶಾಲೆಯಲ್ಲಿ ಅತಿ ಹೆಚ್ಚು ಫೀಸು ವಸೂಲು ಮಾಡುತ್ತಾರೋ ಅಂತಹ ಶಾಲೆಯನ್ನು ಹುಡುಕಿ ಸೇರಿಸುತ್ತೇವೆ. ನಾವಂತೂ ನಮ್ಮ ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟಿದ್ದಾಯ್ತು, ಯಾವ ಅನುಕೂಲಗಳಿಲ್ಲದೆ ಬೆಳೆದಿದ್ದಾಯ್ತು ನಮ್ಮ ಮಕ್ಕಳಾದರೂ ಸುಖವಾಗಿರಲೆಂದು ನಮ್ಮ ಮಕ್ಕಳಿಗೆ ಕಷ್ಟದ ಸೋಂಕೂ ಬಾರದಂತೆ ಬೆಳೆಸುತ್ತೇವೆ, ಪರಿಣಾಮ ಏನಾಗುತ್ತದೆಂದರೆ ದೊಡ್ಡವನಾದಾಗ ಅವನಿಗೆ ಒಂದು ಚಿಕ್ಕ ಕಷ್ಟ ಬಂದರೂ ತತ್ತರಿಸಿ ಹೋಗುತ್ತಾನೆ.ಅವನಿಗೆ ಅದನ್ನು ಎದುರಿಸುವ ಶಕ್ತಿ ಇಲ್ಲ. ಆತ್ಮ ಸ್ಥೈರ್ಯವಿಲ್ಲ.

ಹಾಗಾದರೆ ಮಕ್ಕಳನ್ನು ಹೇಗೆ ಬೆಳೆಸಬೇಕು? ಪೋಷಕರು ಕೆಲವು ಕಟ್ಟುಪಾಡುಗಳನ್ನು ಹಾಕಿಕೊಳ್ಳಬೇಕು, ನಿಮ್ಮಲ್ಲಿ ಈಗ ಸಾಕಷ್ಟು ಸಾಮರ್ಥ್ಯವಿರಬಹುದು, ನಿಮ್ಮ ಸಂಪತ್ತಿನಿಂದ ಮಕ್ಕಳಿಗೆ ನೀವು ಏನು ಬೇಕಾದರೂ ಪೂರೈಸಬಹುದು, ಆದರೂ ಮಕ್ಕಳಿಗೆ ನೀವು ಹೆಚ್ಚು ಹೆಚ್ಚು ಸೌಕರ್ಯಗಳನ್ನು ಒದಗಿಸಿದಾಗಲೂ ನೀವು ಅವರನ್ನು ಹೆಚ್ಚು ಹೆಚ್ಚು ದುರ್ಬಲರನ್ನಾಗಿ ಮಾಡುತ್ತಿದ್ದೀರೆಂಬುದನ್ನು ನೀವು ಮರೆಯ ಬಾರದು, ಅವರು ಮಕ್ಕಳಾಗಿದ್ದಾಗ ನೀವೇನೋ ಎಲ್ಲವನ್ನೂ ಪೂರೈಸಿ ಬಿಡುವಿರಿ, ಆದರೆ ಅವನು ದೊಡ್ದವನಾದಾಗ ಯಾವ ಕಷ್ಟಗಳೂ ಎದುರಾಗಬಹುದು,ಪ್ರತಿಯೊಬ್ಬ ಮನುಷ್ಯನ ಜೀವನ ದಲ್ಲೂ ಸುಖ-ದು:ಖ ಗಳೆಂಬುದು ಬಂದು ಹೋಗುವಂತಹ ಸಾಮಾನ್ಯ ಸಂಗತಿಗಳೆಂಬುದು ನಮಗೆ ತಿಳಿದಿರಬೇಕು.ಅದನ್ನು ಮಕ್ಕಳಿಗೆ ಕಲಿಸಿ ಕೊಡಬೇಡವೇ?ಬಾಲ್ಯದಲ್ಲಿ ಕಷ್ಟವನ್ನೇ ಅರಿಯದವನು ಮುಂದೆ ಬೆಳೆದು ದೊಡ್ದವನಾದಾಗ ಒಂದು ಚಿಕ್ಕ ಕಷ್ಟ ಎದುರಾದರೂ ಕುಸಿದು ಹೋಗುತ್ತಾನೆ.ಆದ್ದರಿಂದ ಚಿಕ್ಕಂದಿನಿಂದಲೇ ಮನಸ್ಸನ್ನು ಗಟ್ಟಿಗೊಳಿಸಬೇಕಿದೆ.ನಿಮ್ಮಲ್ಲಿ ಕೊಡುವ ಶಕ್ತಿ ಇದ್ದರೂ ಕೂಡ ಸ್ವಲ್ಪ ಮಟ್ಟಿಗೆ ನಿರಾಕರಿಸಿ, ನಾವು ಬಯಸಿದ್ದೆಲ್ಲಾ ಎಲ್ಲಾ ಕಾಲಕ್ಕೂ ಸಿಗುವುದಿಲ್ಲವೆಂಬ ನಿಜದ ಅರಿವನ್ನು ನಿಮ್ಮ ಮಕ್ಕಳಿಗೆ ಮಾಡಿ. ಸಮಾಜದಲ್ಲಿ ಸ್ಥಿತಿವಂತರು ಮಾತ್ರವೇ ಇಲ್ಲ, ದೀನ-ದರಿದ್ರರ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿದೆ. ಅವರ ಕಷ್ಟದ ಜೀವನದ ದೃಶ್ಯವನ್ನು ನಿಮ್ಮ ಮಕ್ಕಳಿಗೆ ಪರಿಚಯಿಸಿ.ದುರ್ಬಲರ ಬಗ್ಗೆ ಪ್ರೀತಿ, ಕರುಣೆ, ಸಹಾಯ ಹಸ್ತ ನೀಡುವುದನ್ನು ಕಲಿಸಿ, ಮುಖ್ಯವಾಗಿ ಸರಳ ಬದುಕನ್ನು ಕಲಿಸಿ.

ಭಾಗ-೩:- "ಮನಸ್ಸನ್ನು ಗಟ್ಟಿಗೊಳಿಸಿ"

ಬೆಳವಣಿಗೆಯ ಮುಖ್ಯ ಅಂಶವೆಂದರೆ ಮನಸ್ಸನ್ನು ಗಟ್ಟಿಗೊಳಿಸುವುದು. ಸಾಮಾನ್ಯವಾಗಿ ನಾವೆಲ್ಲಾ ಶರೀರಕ್ಕೆ ಗಮನ ಕೊಡುತ್ತೇವೆ. ಶರೀರ ಗಟ್ಟಿಯಾಗಲು ಅಗತ್ಯವಾದ ಒಳ್ಳೆಯ ಆಹಾರ, ವಿಟಮಿನ್ ಗಳನ್ನು ಮಕ್ಕಳಿಗೆ ಕೊಡುತ್ತೇವೆ. ಆದರೆ ಮನಸ್ಸು ಗಟ್ಟಿಯಾಗಲು ಏನು ಕೊಡುತ್ತೇವೆ? ಹಿಂದಿನ ನಮ್ಮ ಪರಂಪರೆಯಲ್ಲಿ ಮಕ್ಕಳ ಮನಸ್ಸನ್ನು ಗಟ್ಟಿ ಮಾಡಲು ತುಂಬಾ ಗಮನ ಕೊಡುತ್ತಿದ್ದರು. ರಾಜನೂ ಕೂಡ ತನ್ನ ಮಕ್ಕಳನ್ನು ಕಾಡಿನಲ್ಲಿದ್ದ ಗುರುಕುಲಕ್ಕೆಕಳಿಸುತ್ತಿದ್ದ. ಗುರುಕುಲದಲ್ಲಿ ಅತ್ಯಂತ ದೈಹಿಕ ಶ್ರಮದ ಕೆಲಸವನ್ನು ಮಾಡಬೇಕಿತ್ತು, ಹಸುಗಳ ಮೈ ತೊಳೆಯಬೇಕಿತ್ತು, ಕಾಡಿನಲ್ಲಿ ಅಲೆದು ಸಮಿತ್ತು ತರಬೇಕಿತ್ತು, ಅವನು ಯುವರಾಜನಾದರೂ ಕೂಡ ಗುರುವಿನ ಸೇವೆ ಮಾಡಲೇ ಬೇಕಿತ್ತು,ಇತರ ಮಕ್ಕಳೊಂದಿಗೆ ಸರಿಸಮಾನವಾಗಿ ಬದುಕ ಬೇಕಿತ್ತು,ಮಕ್ಕಳೆಲ್ಲಾ ಕೃಷಿಯ ಕೆಲಸ ಮಾಡಬೇಕಿತ್ತು, ಹೀಗೆ ಎಲ್ಲಾ ಬಗೆಯ ಕೆಲಸಗಳನ್ನು ಎಲ್ಲಾ ಮಕ್ಕಳೂ ಮಾಡುತ್ತಾ ಮಾಡುತ್ತಾ, ಕಷ್ಟ ಸುಖಗಳನ್ನು ಒಟ್ಟಾಗಿ ಎದುರಿಸುತ್ತಾ ಎದುರಿಸುತ್ತಾ ಗಟ್ಟಿಯಾಗುತ್ತಿದ್ದರು. ತನ್ಮೂಲಕ ಅವರು ದೊಡ್ದವರಾಗಿ ಬೆಳೆದಾಗ ಕಷ್ಟ ಬರಲಿ ಸುಖವಿರಲಿ ಒಂದೇ ರೀತಿಯಲ್ಲಿ ಎದುರಿಸಲು ಸಮರ್ಥರಾಗುತ್ತಿದ್ದರು.ಜೀವನ ಕಷ್ಟ ಬಂದೇ ಬರುತ್ತದೆ, ಆದರೆ ಕಷ್ಟ ಬಂದಾಗ ಧೈರ್ಯ ಗುಂದದೆ ಎದುರಿಸುತ್ತಿದ್ದರು.ಕಷ್ಟ ಬಂದಾಗ,ದು:ಖ ಬಂದಾಗ ಅದಕ್ಕೆ ಹೆದರದೆ ಧೈರ್ಯ ಗುಂದದೆ ಎದುರಿಸಿ ನಿಂತಾಗ ಅದು ತಾನೇ ತಾನಾಗಿ ಪಲಾಯನ ಮಾಡುತ್ತೆ.

ವಿವೇಕಾನಂದರ ಜೀವನದಲ್ಲಿನ ಒಂದು ಘಟನೆ. ಕಾಶಿಯಲ್ಲಿ ರಸ್ತೆಯಲ್ಲಿ ನಡೆದು ಹೋಗುವಾಗ ಒಂದು ಕೋತಿಗಳ ಹಿಂಡು ವಿವೇಕಾನಂದರನ್ನು ಅಟ್ಟಿಸಿಕೊಂಡು ಬರುತ್ತವೆ, ವಿವೇಕಾನಂದರು ರಸ್ತೆಯಲ್ಲಿ ಓಡಿ ಹೋಗುತ್ತಿರುತ್ತಾರೆ, ಕೋತಿಗಳು ಅಟ್ಟಿಸಿಕೊಂಡು ಬರುತ್ತಲೇ ಇವೆ. ಒಬ್ಬ ಸನ್ಯಾಸಿ ಎದುರಾಗುತ್ತಾನೆ.ಕೇಳುತ್ತಾನೆ." ಏಕೆ ಓಡುತ್ತಿರುವೆ?" ವಿವೇಕಾನಂದರು ಹೇಳುತ್ತಾರೆ " ನೋಡಿ ಅಲ್ಲಿ, ಕೋತಿಗಳ ಹಿಂಡು ಅಟ್ಟಿಸಿಕೊಂಡು ಬರುತ್ತಿವೆ"

ಸನ್ಯಾಸಿ ಹೇಳುತ್ತಾನೆ" ನಿಲ್ಲು, ಹೆದರಿ ಪಲಾಯನ ಮಾಡಬೇಡ, ಎದುರಿಸು"

ವಿವೇಕಾನಂದರು ಕೋತಿಯ ಹಿಂಡಿನ ಎದುರು ನಿಲ್ಲುತ್ತಾರೆ. ಅವರ ಧೀರ-ಗಂಭೀರ ನಿಲುವನ್ನು ಕಂಡ ಕೋತಿಗಳು ಹಿಂದಿರುಗಿ ಓಡುತ್ತವೆ. ಈ ಘಟನೆಯನ್ನು ವಿವೇಕಾನಂದರು ತಮ್ಮ ಶಿಷ್ಯರಿಗೆ ಹೇಳುತ್ತಿರುತ್ತಾರೆ." ಜೀವನದಲ್ಲಿ ಕಷ್ಟಗಳು ಬಂದಾಗ, ದು:ಖ ಬಂದಾಗ ಹೆದರಿ ಪಲಾಯನ ಮಾಡದಿರಿ, ಎದುರಿಸಿ ಮೆಟ್ಟಿನಿಲ್ಲಿ, ಕಷ್ಟಗಳು ನಿಮಗರಿವಿಲ್ಲದಂತೆ ಕರಗಿ ಹೋಗುತ್ತವೆ. ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ನಮ್ಮೊಳಗಿದೆ ಎಂಬುದನ್ನು ನಾವು ತಿಳಿಯ ಬೇಕು,ಕಷ್ಟಗಳು ಬರಲೇ ಬಾರದೆನ್ನಬೇಡಿ, ಸರ್ವಶಕ್ತನಾದ ಪರಮೇಶ್ವರನು ನನ್ನೊಳಗೆ ಇರುವಾಗ ಬಂದ ಕಷ್ಟಗಳನ್ನು ನನ್ನ ಆತ್ಮ ಶಕ್ತಿಯಿಂದ ಎದುರಿಸುತ್ತೇನೆಂಬ ವಿಶ್ವಾಸ ತಾಳಿ, ಮಕ್ಕಳಿಗೂ ಅದನ್ನೇ ಕಲಿಸಿ.ಮಕ್ಕಳಿಗೆ ಸೋಲಿನ ಅನುಭವವನ್ನೂ ಕೂಡ ಕಲಿಸಿ. ಒಂದು ಚಿಕ್ಕ ಘಟನೆ- "ಒಬ್ಬ ವಿದ್ಯಾರ್ಥಿ ಶಾಲೆಯಲ್ಲಿ ಎಲ್ಲಾ ಪರೀಕ್ಷೆಗಳಲ್ಲೂ ಮೊದಲ ಸ್ಥಾನ ಪಡೆಯುತ್ತಾ ಬಂದಿರುತ್ತಾನೆ. ಒಮ್ಮೆ ಅವನಿಗೆ ನಾಲ್ಕನೆಯ ಸ್ಥಾನ ಬಂದುಬಿಡುತ್ತೆ.ಅವನ ತಾಯಿ ನನ್ನೊಡನೆ ಹೇಳುತ್ತಾಳೆ " ಮಾತಾಜಿ ನನಗೆ ತುಂಬಾ ಸಂತೋಷವಾಯ್ತು. ನನ್ನ ಮಗನಿಗೆ ಎಲ್ಲರೀತಿಯ ಅನುಭವವೂ ಆಗಬೇಕು, ಜೀವನ ಒಂದೇ ರೀತಿ ಇರುವುದಿಲ್ಲವೆಂದು ಅವನಿಗೆ ಅರಿವಾಗಬೇಕು. ಮಕ್ಕಳಿಗೆ ಜೀವನದಲ್ಲಿ ನಂಬಿಕೆ,ಶ್ರದ್ಧೆ, ಸಹನೆಗಳನ್ನು ಕಲಿಸಿಕೊಡಿ. ಮಗುವಿಗೆ ತಿಳಿಸಿ " ನೀನು ಸಾಮಾನ್ಯನಲ್ಲ,ನೀನು ಅಸಾಮಾನ್ಯ, ನಮ್ಮ ದೇಶದಲ್ಲಿ ಆಗಿಹೋದ ಅನೇಕ ಮಹಾಪುರುಷರ ಜೀವನ ಚರಿತ್ರೆಯನ್ನು ಅವರಿಗೆ ತಿಳಿಸಿಕೊಟ್ಟು ನಿಮ್ಮ ಮಗುವಿಗೆ ಹೇಳಿ" ನೀನೂ ಮಹಾಪುರುಷ ನಾಗಬೇಕು, ಅದಕ್ಕಾಗಿಯೇ ನಿನ್ನ ಜನ್ಮ ವಾಗಿದೆ" ಜೀವನದಲ್ಲಿನ ಶ್ರೇಷ್ಟ ವಿಚಾರಗಳನ್ನು ಮಕ್ಕಳ ಕಿವಿಯಮೇಲೆ ನಿರಂತರ ಬೀಳುವಂತೆ ಮಾಡಿ.

ನಿಮ್ಮ ಆತ್ಮ ಪರೀಕ್ಷೆ ಮಾಡಿಕೊಳ್ಳಿ: ಮಕ್ಕಳಿಗೆ ಸಂಯಮದ ಪಾಠವನ್ನು ಹೇಳುವ ಮೊದಲು ನೀವು ಸಂಯಮವನ್ನು ಅಭ್ಯಾಸ ಮಾಡಿಕೊಳ್ಳಿ. ಮಕ್ಕಳು ಟಿವಿ ನೋಡಬಾರದೆಂದಾರೆ ನೀವು ಟಿವಿ ನೋಡುವದನ್ನು ನಿಲ್ಲಿಸಿ. ನೀವು ಟಿವಿ ನೋಡುತ್ತಾ ಮಕ್ಕಳನ್ನು "ನೀನು ರೂಮಿನಲ್ಲಿ ಓದು"ಎಂದು ಹೇಳಿದರೆ ಅದು ಯಾವ ನ್ಯಾಯ?ಮೊದಲು ನೀವು ಸಂಯಮ ಕಲಿತುಕೊಳ್ಳಿ.ನೀವು ಟಿವಿ ನೋಡುವುದನ್ನು ಬಿಟ್ಟರೆ ಮಕ್ಕಳೂ ಸಂತೋಷದಿಂದಲೇ ಬಿಡುತ್ತಾರೆ. ಒಳ್ಳೆಯ ಕಾರ್ಯಕ್ರಮ ಒಂದನ್ನು ನೀವು ಟಿವಿ ಯಲ್ಲಿ ನೋಡ ಬೇಕೆಂದರೆ ಮಕ್ಕಳನ್ನೂ ಕೂರಿಸಿಕೊಂಡು ಒಟ್ಟಿಗೇ ನೋಡಿ.ಉತ್ತಮ ಕಾರ್ಯಕ್ರಮಗಳನ್ನೇ ನೋಡಿ. ಮಕ್ಕಳಿಗೆ ಆದರ್ಶಗಳನ್ನು ಹೇಳುವ ಮುಂಚೆ ನಾವು ಜೀವನದಲ್ಲಿ ಅದನ್ನು ಅಳವಡಿಸಿ ಕೊಂಡಿದ್ದೀವಾ? ಯೋಚಿಸಿ. ಸಹನೆಯ ಮಾತನ್ನು ಮಕ್ಕಳಿಗೆ ಹೇಳುವಾಗ ನಾವು ತಂದೆತಾಯಿ ಹೇಗಿದ್ದೇವೆಂದು ಆತ್ಮ ಪರೀಕ್ಷೆ ಮಾಡಿಕೊಳ್ಳಿ. ಮೊದಲು ಆಚರಣೆಗೆ ತಂದು ನಂತರ ಮಕ್ಕಳಿಗೆ ಹೇಳಿದಾಗ ನೀವು ಅದ್ಭುತ ಪರಿಣಾಮವನ್ನು ಕಾಣಬಲ್ಲಿರಿ. ಅಪ್ಪ-ಅಮ್ಮ ಪರಸ್ಪರ ಹೇಗಿರುತ್ತಾರೆ, ಸಿಟ್ಟು ಮಾಡುತ್ತಾರಾ? ಕೆಟ್ಟ ಮಾತನ್ನಾಡುತ್ತಾರಾ? ಮಕ್ಕಳು ನಿಮ್ಮನ್ನು ಸದಾಕಾಲ ನೋಡುತ್ತಲೇ ಇರುತ್ತಾರೆ. ಮಕ್ಕಳು ಹೇಳಿದ್ದನ್ನು ಕಲಿಯುವುದಿಲ್ಲ,ಬದಲಿಗೆ ನೋಡಿದ್ದನ್ನು ಕಲಿಯುತ್ತಾರೆ.ಅಪ್ಪ-ಅಮ್ಮ ಹೇಗೆ ಬದುಕುತ್ತಾರೆ, ಅದರಂತೆ ಮಕ್ಕಳು ಬೆಳೆಯುತ್ತಾರೆ.ನೀವು ಮನೆಯಲ್ಲಿ ಎಷ್ಟು ಪವಿತ್ರವಾತಾವರಣ ವನ್ನುನಿರ್ಮಿಸುತ್ತೀರಿ, ಎಷ್ಟು ಶಾಂತತೆ ಕಾಪಾಡುತ್ತೀರಿ, ಎಷ್ಟು ಆನಂದದ ವಾತಾವರಣ ನಿರ್ಮಿಸುತ್ತೀರಿ, ಅಷ್ಟು ಸುರಕ್ಷಿತವಾಗಿ ನಿಮ್ಮ ಮಕ್ಕಳು ಬೆಳೆಯುತ್ತಾರೆ.ಹಳ್ಳಿಗಳಲ್ಲಿ ಅನೇಕ ಮನೆಗಳಲ್ಲಿ ನಾವು ಗಮನಿಸುತ್ತೇವೆ.ಮನೆ ತುಂಬಾಜನ. ತಾಯಿ ಯಾದವಳು ಹೆಚ್ಚೇನೂ ಓದಿರುವುದಿಲ್ಲ.ಶಾಂತವಾಗಿ ಎಲ್ಲರಿಗೂ ಅಡಿಗೆ ಮಾಡಿ ಪ್ರೀತಿಯಿಂದ ಉಣ ಬಡಿಸಿ,ಎಲ್ಲರಿಗೂ ಪ್ರೀತಿಯಿಂದ ಸೇವೆ ಮಾಡುತ್ತಾ ನಂತರ ಕಟ್ಟಕಡೆಗೆ ತಾನು ಉಳಿದಿದ್ದರೆ ಊಟ ಮಾಡುತ್ತಾಳೆ.ಅಂತಹ ಶಾಂತ ವಾತಾವರಣದಲ್ಲಿ ಬೆಳೆದ ಮಕ್ಕಳು ಅದ್ಭುತ ವ್ಯಕ್ತಿತ್ವ ಪಡೆಯುತ್ತಾ ಬೆಳೆಯುತ್ತಾರೆ. ಶಾಂತ ಸ್ವಭಾವದ ತಾಯಿ, ಪ್ರಭುದ್ಧ ತಂದೆ,ಇಂತಹ ಮನೆಯಲ್ಲಿ ಬೆಳೆಯುವ ಮಕ್ಕಳು ಸಹಜವಾಗಿ ಶ್ರೇಷ್ಟರಾಗಿ ಬೆಳೆಯುತ್ತಾರೆ.ಮಕ್ಕಳು ಗಮನಿಸುತ್ತಿರುತ್ತಾರೆ-ತಂದೆತಾಯಿ ಮನೆಯಲ್ಲಿ ಮಾತನಾಡುವಾಗ ಏನು ಮಾತಾಡ್ತಾರೆ,ದೇವರ ಕುರಿತು ಮಾತಾಡ್ತಾರಾ,ಸಮಾಜದ ಕುರಿತು ಮತಾಡ್ತಾರಾ, ದೇಶದ ಕುರಿತು ಮಾತಾಡ್ತಾರಾ!ಮಕ್ಕಳ ಬೆಳವಣಿಗೆ ಬಹಳ ಸುಲಭ,ಅವರಿಗೆ ನಾವು ಏನೂ ಹೇಳಬೇಕಾಗಿಲ್ಲ, ಅವರು ಮನೆಯಲ್ಲಿ-ಸುತ್ತಮುತ್ತ ಏನು ನೋಡುತ್ತಾರೋ, ಏನು ಗಮನಿಸುತ್ತಾರೋ, ಅದನ್ನು ಕಲಿಯುತ್ತಾರೆ. ಮುದ್ದಿನಜೊತೆಗೆ ಗುದ್ದು: ಒಬ್ಬ ತಾಯಿ ಸ್ವಾಮೀಜಿ ಪುರುಷೋತ್ತಮಾನಂದರ ಬಳಿ ಬಂದು ಸ್ವಾಮೀಜಿಯವರನ್ನು ಕೇಳುತ್ತಾಳೆ-" ಸ್ವಾಮೀಜಿ ನನ್ನ ಮಗ ನನ್ನ ಮಾತನ್ನು ಕೇಳುವುದೇ ಇಲ್ಲ ವಲ್ಲಾ, ಏನು ಮಾಡಲಿ?"

ಸ್ವಾಮೀಜಿ ಹೇಳುತ್ತಾರೆ. " ಚಿಕ್ಕಂದಿನಲ್ಲಿ ನೀನು ಮಗುವನ್ನು ಮುದ್ದುಮಾಡುವುದರ ಜೊತೆಗೆ ಗುದ್ದನ್ನೂ ಕೊಟ್ಟಿದ್ದರೆ ಇಂದು ನಿನ್ನ ಮಗ ನಿನ್ನ ಮಾತು ಕೇಳ್ತಾ ಇದ್ದ. ಆದರೆ ಒಂದು ಮಾತು ನಾವು ತಿಳಿದು ಕೊಳ್ಳ ಬೇಕು-ಸ್ವಾಮೀಜಿ ಹೇಳಿದ್ದು "ಮುದ್ದಿನ ಜೊತೆಗೆ ಗುದ್ದು" ಅಂದರೆ ಕೇವಲ ಮುದ್ದು ಮಾಡಿದರೂ ಸಾಲದು, ಕೇವಲ ಗುದ್ದು ಕೊಟ್ಟರೂ ಸಾಲದು. ಈ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಹೃದಯಪೂರ್ವಕವಾಗಿ ತಾಯಿಯ ಪ್ರೀತಿ ಇದ್ದಾಗ ಮಾತ್ರ ಗುದ್ದು ಮಕ್ಕಳಲ್ಲಿ ಪರಿಣಾಮ ಉಂಟು ಮಾಡುತ್ತೆ.

ಮಕ್ಕಳನ್ನು ಬೆಳೆಸುವುದು ಒಂದು ಕಲೆಯೂ ಹೌದು, ಸವಾಲೂ ಹೌದು:

ನಿಮ್ಮ ಮಕ್ಕಳು ಹೀಗೆ ಬೆಳೆಯ ಬೇಕು ಎಂದು ನೀವು ನಿರೀಕ್ಷಿಸುವ ಮೊದಲು ನೀವು ಹಾಗಾಗಿರಬೇಕು. ಮಕ್ಕಳು ಸತ್ಯ ಹೇಳಬೇಕೆಂದರೆ ಮೊದಲು ನೀವು ಸತ್ಯವಂತರಾಗಿ,ಯಾವ ಸದ್ಗುಣಗಳನ್ನು ನೀವು ನಿಮ್ಮ ಮಕ್ಕಳಲ್ಲಿ ಅಪೇಕ್ಷಿಸುತ್ತೀರೋ ಅವುಗಳನ್ನು ಮೊದಲು ನೀವು ರೂಢಿಸಿಕೊಳ್ಳಿ. ಅತಿಯಾಗಿ ಸಿಹಿತಿನ್ನುತ್ತಿದ್ದ ಒಂದು ಮಗುವಿಗೆ ’ ನೀನು ಅತಿಯಾಗಿ ಸಿಹಿ ತಿನ್ನ ಬೇಡ’ ಎಂದು ಹೇಳಲು ಶ್ರೀ ರಾಮಕೃಷ್ಣ ಪರಮಹಂಸರು ತಾವು ಮೊದಲು ಸಿಹಿ ತಿನ್ನುವುದನ್ನು ನಿಲ್ಲಿಸಿ ತಾವು ಸಿಹಿಯ ಆಸೆ ತ್ಯಜಿಸಿದ ಮೇಲೆ ಮಗುವಿಗೆ " ಮಗು, ನೀನು ಸಿಹಿ ತಿನ್ನ ಬೇಡ" ಎಂದು ಹೇಳಿದ ಕಥೆ ನಮಗೆ ಗೊತ್ತಿರ ಬೇಕು.

ಮಕ್ಕಳಲ್ಲಿ ಹೆದರಿಕೆ ಉಂಟು ಮಾಡಬೇಡಿ: ಮಕ್ಕಳಲ್ಲಿ ಭಯವನ್ನು ಉಂಟು ಮಾಡಲೇ ಬೇಡಿ-" ಕತ್ತಲಿಗೆ ಹೋಗ ಬೇಡ,ಗುಮ್ಮ ಹಿಡಿದುಕೊಂಡು ಬಿಡುತ್ತೆ" -ಹೀಗೆ ಮಕ್ಕಳಲ್ಲಿ ಸಲ್ಲದ ಭಯವನ್ನು ಉಂಟು ಮಾಡುವ ತಾಯಂದಿರಿದ್ದಾರೆ. ಇದರಿಂದ ಮುಂದೆ ಮಕ್ಕಳು ಕಾಣದ ಜಾಗಕ್ಕೆ ಹೋಗುವಾಗ ಭಯ ಭೀತರಾಗುತ್ತಾರೆ.ಅಪರಿಚಿತ ಜಾಗಕ್ಕೆ ಹೋಗುವ ಸಾಹಸವನ್ನೇ ಮಾಡುವುದಿಲ್ಲ. ಬದಲಿಗೆ ಮಕ್ಕಳಿಗೆ ಹೇಳಿ-" ಕತ್ತಲಲ್ಲಿ ಹೋಗು, ಏನಿದೆ,ಪರೀಕ್ಷೆ ಮಾಡಿ ನೋಡು? ಏನೂ ಆಗುವುದಿಲ್ಲ" ಹೀಗೆ ಧೈರ್ಯ ತುಂಬಿ. ಅದರಿಂದ ಮುಂದೆ ನಿಮ್ಮ ಮಗ ಸಾಹಸಿಯಾಗಿ ಬೆಳೆಯುತ್ತಾನೆ.

ಮಕ್ಕಳನ್ನು ಎಡವಲು ಬಿಡಿ: ಮಕ್ಕಳು ತಪ್ಪು ಮಾಡಿದರೂ ಚಿಂತೆಯಿಲ್ಲ, ಅವರಿಗೆ ಮಾಡಲು ಬಿಡಿ. ನಡೆಯುವ ಕಾಲು ಎಡುವದಿರದು-ಎಂಬ ಮಾತಿನಂತೆ ಎಡವಿದರೂ ಪರವಾಗಿಲ್ಲ ಮುಂದೆ ನಡೆಯುವುದನ್ನು ಅವನು ಕಲಿಯುತ್ತಾನೆ ಆದ್ದರಿಂದ ಎಡವಲು ಬಿಡಿ.ಮಕ್ಕಳನ್ನು ಸ್ವತಂತ್ರವಾಗಿ ಬೆಳೆಯಲು ಬಿಡಿ.ಮುಂದೆ ಜೀವನದಲ್ಲಿ ಎಷ್ಟು ಎಡರು ತೊಡರುಗಳು ಬರುತ್ತದೋ ಯಾರಿಗೆ ಗೊತ್ತು, ಮುಂದೆ ಅವುಗಳನ್ನೆಲ್ಲಾ ಎದುರಿಸುವಂತಾಗಲು ಈಗ ಎಡವಲು ಬಿಡಿ, ತಿದ್ದಿಕೊಂಡು ನಡೆಯುವುದನ್ನು ಕಲಿಯುತ್ತಾನೆ.

ಮಗುವಿನ ಬೆನ್ನಿನ ಮೇಲೊಂದು ಲಗ್ಗೇಜು: ಸ್ವಾಮೀಜಿಯೊಬ್ಬರು ಯೂರೋಪ್ ಪ್ರವಾಸ ಮಾಡುವಾಗ ವಿಮಾನ ನಿಲ್ದಾಣದಲ್ಲಿ ತಾಯಿಯೊಬ್ಬಳು ಮಗುವಿನೊಡನೆ ಬರುತ್ತಿರುವುದನ್ನು ನೋಡುತ್ತಾರೆ. ತಾಯಿಯಹತ್ತಿರ ಒಂದು ಲಗ್ಗೇಜ್ ಇದೆ, ಐದು ವರ್ಷದ ಮಗುವಿನ ಬೆನ್ನಿನ ಮೇಲೂ ಒಂದು ಪುಟ್ಟ ಬ್ಯಾಗ್ ಇದೆ. ಆ ಬ್ಯಾಗಿನಲ್ಲಿ ಆ ಮಗುವಿನ ಬಟ್ಟೆಗಳು. ತಂದೆ ಬರುತ್ತಾನೆ. ಮಗುವನ್ನು ಮುದ್ದಾಡುತ್ತಾನೆ," ಅಯ್ಯೋ ಮಗುವಿನ ಬೆನ್ನಿನಮೇಲೆ ಹೊರೆ ಯಿದೆಯಲ್ಲಾ!! ಎಂದು ಸಂಕಟ ಪಟ್ಟು ಬ್ಯಾಗನ್ನು ತಾನು ಪಡೆಯುವುದಿಲ್ಲ ಬದಲಿಗೆ ಅದಕ್ಕೇ ಹೊರಲು ಬಿಡುತ್ತಾನೆ. ತನ್ನ ಜೀವನದ ಜವಾಬ್ದಾರಿ ತಾನೇ ಕಲಿಯಲೆಂಬ ಉದ್ದೇಶ ಅದರ ಹಿಂದೆ ಇರುವುದನ್ನು ಆತಂದೆ ತಿಳಿಸುತ್ತಾನೆ.

ಮಗುವಿಗೆ ಯಾವಾಗಲೂ" ನಿನಗೆ ಆಗುವುದಿಲ್ಲ, ನೀನಿನ್ನೂ ಚಿಕ್ಕವನು ಮಾಡಬೇಡ" ಹೀಗೆ ನಕಾರಾತ್ಮಕ ಮಾತುಗಳನ್ನು ಹೇಳಲೇ ಬೇಡಿ.ಅದು ತಪ್ಪು ಮಾಡಿದರೂ ಚಿಂತೆಯಿಲ್ಲ ಮಾಡಲು ಬಿಡಿ.ಹತ್ತು ಸಲ ತಪ್ಪು ಮಾಡಿದರೂ ಚಿಂತೆಯಿಲ್ಲ. ಹನ್ನೊಂದನೆಯ ಭಾರಿಯೂ ಮಾಡಲು ಬಿಡಿ, ಉತ್ತೇಜನ ಕೊಡಿ,ಆಗ ಸರಿ ಮಾಡುತ್ತಾನೆ.

ಅಮ್ಮ ಹೇಳಿದ್ದೆಲ್ಲಾ ಸತ್ಯ: ಮಕ್ಕಳು ಹೇಗೆ ಭಾವಿಸುತ್ತಾರೆಂದರೆ ಒಂದು ಸತ್ಯ ಘಟನೆಯನ್ನು ಗಮನಿಸಬೇಕು.ಆಕಾಶದಲ್ಲಿ ಮೋಡಕವಿದ ವಾತಾವರಣವಿರುತ್ತದೆ, ತಾಯಿ ಮಗುವಿಗೆ ಹೇಳುತ್ತಾಳೆ " ಮಳೆ ಬರುತ್ತೆ,ಹೊರಗೆ ಹರವಿರುವ ಬಟ್ಟೆಯನ್ನುತೆಗೆದುಕೊಂಡು ಬಾ" ಎಂದು. ಬಟ್ಟೆ ತಂದ ಸ್ವಲ್ಪ ಸಮಯದಲ್ಲಿಯೇ ಮಳೆ ಬಂದು ಬಿಡುತ್ತೆ.ಮಗುವಿಗೆ ಅನ್ನಿಸುತ್ತೆ-ತನ್ನ ತಾಯಿ ಹೇಳಿದಂತೆ ಆಗುತ್ತೆ. ಇನ್ನೊಂದು ದಿನ ಅಪ್ಪ ಕಛೇರಿಯಿಂದ ಫೋನ್ ಮಾಡುವುದಾಗಿ ಮನೆಯಲ್ಲಿ ಹೇಳಿ ಹೋಗಿರುತ್ತಾನೆ.ಫೋನ್ ರಿಂಗಣಿಸುತ್ತದೆ, ತಾಯಿ ಮಗುವಿಗೆ ಹೇಳುತ್ತಾಳೆ " ಅಪ್ಪ ಫೋನ್ ಮಾಡಿರ ಬಹುದು ಫೋನ್ ತೆಗೆದುಕೋ" -ಮಗು ಫೋನ್ ತೆಗೆದುಕೊಳ್ಳುತ್ತೆ. ಹೌದು ಅಪ್ಪನೇ ಫೋನ್ ಮಾಡಿರುವುದು. ಈಗಲೂ ಮಗುವಿಗೆ ಅನ್ನಿಸುತ್ತೆ ನಮ್ಮ ಅಮ್ಮ ಹೇಳೋದೆಲ್ಲಾ ನಿಜ.ಕಾಲಿಂಗ್ ಬೆಲ್ ಆಗುತ್ತೆ.ಬೆಲ್ ಶಬ್ಧ ತಾಯಿಗೆ ಮಾತ್ರ ಕೇಳಿಸಿರುತ್ತೆ, ತಾಯಿ ಮಗುವಿಗೆ ಹೇಳ್ತಾಳೆ " ಹೋಗಿ ಬಾಗಿಲು ತೆಗೆ, ಯಾರೋ ಬಂದಿದ್ದಾರೆ. ಮಗು ಬಾಗಿಲು ತೆಗೆಯುತ್ತೆ. ಹೌದು ಯಾರೋ ಬಂದಿದ್ದಾರೆ. ಮಗುವಿಗೆ ಒಂದು ಸಂಗತಿ ಗ್ಯಾರಂಟಿಯಾಯ್ತು. ಅಮ್ಮ ಹೇಳೋದೆಲ್ಲಾ ನಿಜವಾಗುತ್ತೆ. ಮಗುಸ್ವಲ್ಪ ದೊಡ್ಡದಾಯ್ತು, ಶಾಲೆಗೆ ಹೋಗುವಾಗ ಹಠ ಮಾಡ್ತು, ಆಗ ತಾಯಿ ಹೇಳಿದಳು "ನೀನು ಮೂರ್ಖ, ಶಾಲೆಗೆ ಹೋಗಬೇಡ, ಹಸು ಮೇಯಿಸಲು ಹೋಗು" ಅಮ್ಮ ಹೇಳಿದ್ದೆಲ್ಲಾ ನಿಜವಾಗುತ್ತದೆಂಬುದು ಈಗಾಗಲೇ ಮಗುವಿನ ಮನಸ್ಸಿನಲ್ಲಿ ಇದೆ, ಆಮಗು ತಾನು ಮೂರ್ಖನೇ ಇರಬೇಕು, ಅಂತಾ ಅಂದು ಕೊಂಡ.ಬರಬರುತ್ತಾ ದಡ್ದನೇ ಆಗಿಬಿಟ್ಟ.ಮನ:ಶಾಸ್ತ್ರದಲ್ಲಿ ಸಂಶೋಧನೆ ಮಾಡಿರುವ ಘಟನೆ ಇದು. ಮನೆಯಲ್ಲಿ ನಕಾರಾತ್ಮಕ ಮಾತುಗಳನ್ನು ಆಡಲೇ ಬೇಡಿ.

ಮಕ್ಕಳಿಗೆ ಹಂಚಿಕೊಂಡು ತಿನ್ನುವುದನ್ನು ಕಲಿಸಿ: ಮಕ್ಕಳು ಮನೆಯಲ್ಲಿ ಏನೋ ತಿಂಡಿ ತಿನ್ನುತ್ತಾ ಇರುತ್ತಾರೆ ಯಾರೋ ಬೇರೆ ಮಕ್ಕಳು ಮನೆಗೆ ಬರುವುದು ಗೊತ್ತಾಗುತ್ತೆ, ಆಗ ನಾವು ಸಾಮಾನ್ಯವಾಗಿ ಏನು ಮಾಡ್ತೇವೆ? ಹೋಗು ಒಳಗೆ ಹೋಗಿ ತಿನ್ನು,ಅಂತಾ ಮಕ್ಕಳಿಗೆ ಹೇಳುತ್ತೇವೆ.ಅದರ ಬದಲು ಆ ಮಗುವಿಗೂ ಸ್ವಲ್ಪ ಕೊಡು, ಆಮಗುವೂ ನಿನ್ನಂತ ಮಗುವೇ ಅಲ್ಲವೇ? ಎನ್ನುವ ಒಳ್ಳೆಯ ಮಾತನ್ನು ನಾವು ಹೇಳಿಕೊಡುತ್ತೇವೆಯೇ?

ಕೊನೆಯದಾಗಿ ಒಂದು ಘಟನೆ. ಒಂದು ಹಳ್ಳಿಯಲ್ಲಿ ಒಬ್ಬ ವಿಧವೆ.ಅತೀ ಬಡತನದಿಂದ ಮಗನನ್ನುಪಟ್ಟಣದಲ್ಲಿ ಓದಿಸಿ ದೊಡ್ದವನನ್ನಾಗಿ ಮಾಡುತ್ತಾಳೆ. ಒಂದು ಸರಕಾರಿ ಕೆಲಸ ಸಿಗುತ್ತೆ.ಅಲ್ಲಿಯವರಗಿದ್ದ ಬಡತನವೆಲ್ಲಾ ದೂರವಾಗುತ್ತದೆಂದು ಹಳ್ಳಿಯ ಜನರೆಲ್ಲಾ ಮಾತನಾಡಿಕೊಳ್ಳುತ್ತಾರೆ.ಸಂಬಳದ ಜೊತೆಗೆ ಲಂಚವೂ ಸಿಗುವಂತ ಕೆಲಸವೆಂದು ಜನರಾಡುವ ಮಾತು ಈ ತಾಯಿಯ ಕಿವಿಗೆ ಬೀಳುತ್ತೆ. ಅಮ್ಮನಿಗೆ ವಿಷಯವನ್ನು ತಿಳಿಸಲು ಮಗ ಹಳ್ಳಿಗೆ ಬಂದು ನಮಸ್ಕರಿಸುತ್ತಾನೆ, ಆಗ ತಾಯಿಯು -" ನೀನು ನನ್ನ ಎದೆಹಾಲು ಕುಡಿದು ಬೆಳೆದ ಮಗನೇ ಆಗಿದ್ದಲ್ಲಿ ಸಂಬಳದ ಹೊರತಾಗಿ ಒಂದು ಬಿಡಿಗಾಸನ್ನೂ ಲಂಚವಾಗಿ ಪಡೆಯ ಕೂಡದು, ನನ್ನ ಬಡತನ ಹೀಗೆಯೇ ಇದ್ದರೂ ಚಿಂತೆಯಿಲ್ಲ, ನೀನು ಮಾತ್ರ ಪ್ರಾಮಾಣಿಕನಾಗಿ ಜನರ ಸೇವೆ ಮಾಡಬೇಕು" ಎಂದು ಹರಸುತ್ತಾಳೆ.ಮಗ ಅಮ್ಮನ ಮಾತನ್ನು ಶಿರಸಾ ಪಾಲಿಸುತ್ತಾನೆ.ದೊಡ್ಡ ಅಧಿಕಾರಿಯಾಗಿ ಪ್ರಾಮಾಣಿಕನಾಗಿ ಸೇವೆ ಸಲ್ಲಿಸಿ ಹೆಸರು ಗಳಿಸುತ್ತಾನೆ.ಅಮ್ಮನಿಗೆ ಆನಂದ ವಾಗುತ್ತದೆ. ಸಮಾಜದಲ್ಲಿ ಇಂತಾ ಉದಾಹರಣೆಗಳು ಸಾಕಷ್ಟಿವೆ. ನೀವುಗಳೂ ಕೂಡ ಒಳ್ಳೆಯ ತಂದೆ-ತಾಯಿಯಾಗಿ ಆದರ್ಶ ವಾಗಿ ಬಾಳುತ್ತಾ ನೀವೂ ಬೆಳೆಯಿರಿ ಮಕ್ಕಳನ್ನೂ ಉತ್ತಮರನ್ನಾಗಿ ಬೆಳೆಸಿ.

Friday, November 19, 2010

A Story of Appreciation - A MUST READ FOR EVERYONE!!!


 ಶ್ರೀ ಮಂಜುನಾಥ್,ಇವರು ನನಗೆ ಕಳುಹಿಸಿರುವ ಈಮೇಲ್ ಓದುವಾಗ ನನ್ನ ಕಣ್ಣಲ್ಲಿ ನೀರು ಬಂತು, ಕೂಡಲೇ ವೇದಸುಧೆಗೆ ಹಾಕಿರುವೆ. ನೀವೂ ಓದಿ.....

This is a powerful message in our modern society. We seemed to have lost our bearing & our sense of direction.

One young academically excellent person went to apply for a managerial position in a big company.

He passed the first interview, the director did the last interview, made the last decision.

The director discovered from the CV that the youth's academic achievements were excellent all the way, from the secondary school until the postgraduate research, never had a year when he did not score.

The director asked, "Did you obtain any scholarships in school?" the youth answered "none".

The director asked, " Was it your father who paid for your school fees?" The youth answered, "My father passed away when I was one year old, it was my mother who paid for my school fees.

The director asked, " Where did your mother work?" The youth answered, "My mother worked as clothes cleaner. The director requested the youth to show his hands. The youth showed a pair of hands that were smooth and perfect.

The director asked, " Have you ever helped your mother wash the clothes before?" The youth answered, "Never, my mother always wanted me to study and read more books. Furthermore, my mother can wash clothes faster than me.

The director said, "I have a request. When you go back today, go and clean your mother's hands, and then see me tomorrow morning.*

The youth felt that his chance of landing the job was high. When he went back, he happily requested his mother to let him clean her hands. His mother felt strange, happy but with mixed feelings, she showed her hands to the kid.

The youth cleaned his mother's hands slowly. His tear fell as he did that. It was the first time he noticed that his mother's hands were so wrinkled, and there were so many bruises in her hands. Some bruises were so painful that his mother shivered when they were cleaned with water.

This was the first time the youth realized that it was this pair of hands that washed the clothes everyday to enable him to pay the school fee. The bruises in the mother's hands were the price that the mother had to pay for his graduation, academic excellence and his future.

After finishing the cleaning of his mother hands, the youth quietly washed all the remaining clothes for his mother.

That night, mother and son talked for a very long time.

Next morning, the youth went to the director's office.

The Director noticed the tears in the youth's eyes, asked: " Can you tell me what have you done and learned yesterday in your house?"

The youth answered, " I cleaned my mother's hand, and also finished cleaning all the remaining clothes'

The Director asked, " please tell me your feelings."

The youth said, Number 1, I know now what is appreciation. Without my mother, there would not the successful me today. Number 2, by working together and helping my mother, only I now realize how difficult and tough it is to get something done. Number 3, I have come to appreciate the importance and value of family relationship.

The director said, " This is what I am looking for to be my manager.
I want to recruit a person who can appreciate the help of others, a person who knows the sufferings of others to get things done, and a person who would not put money as his only goal in life. You are hired.

Later on, this young person worked very hard, and received the respect of his subordinates. Every employee worked diligently and as a team. The company's performance improved tremendously.

A child, who has been protected and habitually given whatever he wanted, would develop "entitlement mentality" and would always put himself first. He would be ignorant of his parent's efforts. When he starts work, he assumes that every person must listen to him, and when he becomes a manager, he would never know the sufferings of his employees and would always blame others. For this kind of people, who may be good academically, may be successful for a while, but eventually would not feel sense of achievement. He will grumble and be full of hatred and fight for more. If we are this kind of protective parents, are we really showing love or are we destroying the kid instead?*

You can let your kid live in a big house, eat a good meal, learn piano, watch a big screen TV. But when you are cutting grass, please let them experience it. After a meal, let them wash their plates and bowls together with their brothers and sisters. It is not because you do not have money to hire a maid, but it is because you want to love them in a right way. You want them to understand, no matter how rich their parents are, one day their hair will grow gray, same as the mother of that young person. The most important thing is your kid learns how to appreciate the effort and experience the difficulty and learns the ability to work with others to get things done.

You would have forwarded many mails to many and many of them would have back mailed you too...but try and forward this story to as many as possible...this may change somebody's fate...

-H.N.Manjunath