///// ಆನೋ ಭದ್ರಾಃ ಕ್ರತವೋ ಯಂತು ವಿಶ್ವತಃ ////// ಕೃಣ್ವಂತೋ ವಿಶ್ವಮಾರ್ಯಂ //// //// ಮಾತಾ ಭೂಮಿಃ ಪುತ್ರೋಹಂ ಪೃಥಿವ್ಯಾಃ /////
Wednesday, March 31, 2010
ವೇದವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು?
ನಾವು ಯಾವುದೇ ಪದದ ಅರ್ಥ ಗೊತ್ತಿಲ್ಲವೆಂದಾಗ ನಿಘಂಟಿನ ಮೊರೆಹೋಗುವುದು ಸಹಜ. ಸಂಸ್ಕೃತ ಭಾಷೆಗೂ ನಿಘಂಟಿದೆ. ಆದರೆಅದರಲ್ಲಿ ಎರಡುರೀತಿಯ ನಿಘಂಟಿದೆ. ಈ ಸೂಕ್ಷ್ಮ ನಮಗೆ ತಿಳಿದರೆ ವೇದದ ಅರ್ಥ ತಿಳಿಯುವುದು ಸುಲಭವಾಗುತ್ತೆ. ಆಪ್ಟೆ ಅಥವಾಬೇರಾರೋ ಬರೆದಿರುವ ಒಂದು ರೀತಿಯ ಸಂಸ್ಕೃತ ನಿಘಂಟಿನ ಪರಿಚಯ ಎಲ್ಲರಿಗಿದೆ. ಆದರೆ ವೇದಗಳಲ್ಲಿ ಉಪಯೋಗಿಸಿರುವ ಭಾಷೆಸಂಸ್ಕೃತ ಅಲ್ಲ. ವೇದ ಇರುವುದು ವೇದದ್ದೇ ಭಾಷೆಯಲ್ಲಿ.ಇದರಿಂದ ಸಂಸ್ಕೃತ ಹುಟ್ಟಿದೆಯೇ ಹೊರತೂ ವೇದ ವಿರುವುದು ವೇದಭಾಷೆಯಲ್ಲಿ, ಸಂಸ್ಕೃತದಿಂದಲ್ಲ. ಈ ರಹಸ್ಯ ತಿಳಿಯದಾಗ ಆಭಾಸವಾಗುತ್ತೆ. ವೇದದ ಅರ್ಥ ಗೊತ್ತಾಗದಿದ್ದಾಗ ನಾವು ಮಾಡುವುದಾದರೂ ಏನು, ಯಾವುದಾದರೂ ಸಂಸ್ಕೃತ ನಿಘಂಟನ್ನು ನೋಡುವೆವು. ಆಗ ದಾರಿ ತಪ್ಪುತ್ತೇವೆ. ವೇದಗಳು ವೇದಭಾಷೆಯಲ್ಲಿರುವುದರಿಂದ ವೇದದನಿಘಂಟನ್ನೇ ನೋಡಬೇಕೇ ಹೊರತು ಸಂಸ್ಕೃತ ನಿಘಂಟನ್ನಲ್ಲ. ವೇದದ ನಿಘಂಟನ್ನು ಯಾಸ್ಕರರು ನಿರೂಪಿಸಿದ್ದಾರೆ. ಇದನ್ನುನಿರುಕ್ತ ಎಂದು ಕರೆಯುತ್ತೇವೆ. ಉಧಾಹರಣೆಗೆ "ಅಧ್ವರ " ಎಂಬ ಪದಕ್ಕೆ ನಿರುಕ್ತದಲ್ಲಿ ಯಾಸ್ಕರಾಚಾರ್ಯರು ಹೇಳುವರು" ಧ್ವರ ಇತಿಹಿಂಸಾ ಕರ್ಮ".ಧ್ವರ ಎಂದರೆ ಹಿಂಸೆ ಎಂದಾಗ ಅಧ್ವರ ಎಂದರೆ ಅಹಿಂಸೆ." ಅಗ್ನೇಯೆ ಯಜ್ಞಮಧ್ವರಂ" ಯಜ್ಞಕ್ಕೆ ಅಧ್ವರ ವೆಂತಲೂಕರೆಯುವುದರಿಂದ ಯಜ್ಞ ಎಂದರೆ ಅಹಿಂಸೆ ಎಂದಾಯ್ತು. ಆದ್ದರಿಂದ ಯಜ್ಞಯಾಗಾದಿಗಳಲ್ಲಿ ಹಿಂಸೆಗೆ ಅವಕಾಶವೇ ಇಲ್ಲ. ಆದರೆ ಅಶ್ವಮೇಧಯಾಗ ದಲ್ಲಿ ಕುದುರೆಯನ್ನು ಬಲಿಕೊಡುತ್ತಿದ್ದರಂತಲ್ಲಾ ? ಎಂದು ಕೇಳುವವರಿದ್ದಾರೆ. ಆದರೆ ಅಶ್ವಮೇಧಯಾಗದ ಸರಿಯಾದ ಅರ್ಥಮಾಡಿಕೊಳ್ಳದ ದುಶ್ಪರಿಣಾಮ ಇದು. ಸಂಸ್ಕೃತ ನಿಘಂಟಿನಲ್ಲಿ ಅರ್ಥ ಹುಡುಕಿದಾಗ ಆಭಾಸವಾಗುವ ಅವಕಾಶವಿದೆ. ಅಶ್ವ ಎಂದರೆ ಕುದುರೆ, ಮೇಧ ಎಂದರೆ ಬಲಿಕೊಡು ಎಂದಾಗಿಬಿಡುತ್ತದೆ.[ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ ಸಂಕ್ಷಿಪ್ತ ಕನ್ನಡ ನಿಘಂಟಿನ ಪುಟ ೭೯ ರಲ್ಲಿಅಶ್ವಮೇಧ= ಕುದುರೆಯನ್ನು ಬಲಿಕೊಡುವ ಒಂದು ಯಾಗವೆಂದು ಬರೆದಿದೆ] ವೇದದ ಪದಗಳ ಅರ್ಥವನ್ನು ಸಂಸ್ಕೃತ ನಿಘಂಟಿನಲ್ಲಿಹುಡುಕಿದರೆ ಇಂತಹ ಆಭಾಸ ವಾಗುತ್ತದೆ. ಯಜ್ಞ ಎಂದರೆ ಅಹಿಂಸೆ ಎಂದು ವೇದದಲ್ಲಿಯೇ ಹೇಳಿರುವಾಗ ಅಶ್ವಮೇಧ= ಕುದುರೆಯನ್ನುಬಲಿಕೊಡುವ ಒಂದು ಯಾಗವೆಂದು ಅರ್ಥ ಮಾಡಿಕೊಂಡರೆ ವೇದಕ್ಕೆ ನಾವು ಅಪಚಾರ ಮಾಡಿದಂತಲ್ಲವೇ?
ನಾವೀಗ ಯಾಸ್ಕರಾಚಾರ್ಯರ ನಿರುಕ್ತದಲ್ಲಿ ಇದರ ಅರ್ಥ ಹುಡುಕಿದಾಗ ನಮಗೆ ಸರಿಯಾದ ಅರ್ಥ ಸಿಗುತ್ತೆ. ಒಂದೊಂದೂಪದದನಿರ್ಮಾಣ ಹೇಗಾಯ್ತು ಎಂದು ಯಾಸ್ಕರಾಚಾರ್ಯರು ವಿವರಿಸುತ್ತಾರೆ. ಅಶ್ವ ಎಂಬ ಶಬ್ಧ ಯಾವ ಮೂಲದಿಂದ ಬಂತು? ಎಂದಾಗ ಅಶ್ಎಂಬ ಮೂಲ ಧಾತುವಿನಿಂದ ಅಶ್ವ ಪದ ಮೂಡಿಬಂದಿದೆ. ಅಶ್ ಎಂದರೆ ಭಕ್ಷಣೆ [ತಿನ್ನು], ಯಾವುದು ತಿನ್ನುತ್ತದೋಅದಕ್ಕೆ ಅಶ್ವ ವೆಂದುಹೆಸರು. ಇದನ್ನು ನಾವು ಶುದ್ಧ ಯೌಗಿಕ ಅರ್ಥದಲ್ಲಿ ತೆಗೆದುಕೊಂಡಾಗ ನಮಗೆ ಸರಿಯಾಗಿ ಅರ್ಥವಾಗುತ್ತದೆ. ಮೂರು ರೀತಿಯಲ್ಲಿಅರ್ಥವನ್ನು ಹುಡುಕಬೇಕಾಗುತ್ತದೆ.೧]ರೂಢಿಯಲ್ಲಿರುವ ರೂಢಾರ್ಥ ೨] ಧಾತುವಿನಿಂದ ನಿರ್ಮಾಣವಾದ ಯೌಗಿಕಅರ್ಥ ೩]ಇವೆರಡರಬೆರೆಕೆಯಿಂದ ಕಂಡುಕೊಂಡದ್ದು ಯೋಗರೂಢಾರ್ಥ. ಯೋಗರೂಢ ಎಂದರೆ ಧಾತುವಿನಿಂದ ಬಂದ ಅರ್ಥದೊಡನೆ ರೂಢಿಯಿಂದ ಬಂದಅರ್ಥದ ಮಿತಿಯನ್ನು ಹಾಕಿಕೊಂಡು ರೂಢಾರ್ಥವೆನಿಸುತ್ತದೆ. ಆದರೆ ಕೇವಲ ಯೌಗಿಕ ಶಬ್ಧಕ್ಕೆ ಈಮಿತಿಯಿಲ್ಲ. ಒಂದು ಉಧಾಹರಣೆನೋಡೋಣ."ಪಂಕಜ" ಎಂಬ ಪದವನ್ನು ಯೌಗಿಕ ಅರ್ಥದಲ್ಲಿ ತೆಗೆದುಕೊಂಡಾಗ ಪಂಕ ಎಂದರೆಕೆಸರು ಜ ಎಂದರೆ ಹುಟ್ಟಿದ್ದು ಎಂದುಅರ್ಥೈಸಿ ಪಂಕಜ ಎಂದರೆ ಕಮಲ ಎನ್ನುತ್ತೇವೆ. ಆದರೆ ಕೆಸರಿನಲ್ಲಿ ಹುಟ್ಟುವ ಸೊಳ್ಳೆಗಳಿಗೆ ನಾವುಪಂಕಜ ಎಂದು ಕರೆಯುತ್ತೇವೆಯೇ? ಇಲ್ಲ. ಕೆಸರಿನಲ್ಲಿ ಸೊಳ್ಳೆ, ಹುಲ್ಲು, ಕಪ್ಪೆ ಯಾವುದು ಹುಟ್ಟಿದರೂ ಸಹ ರೂಢಿಯ ಬಲದಿಂದಕಮಲಕ್ಕೆ ಮಾತ್ರ ಪಂಕಜ ಕರೆಯುತ್ತೇವೆ.ಅಂದರೆರೂಢಿಯಬಲದಿಂದ ಕೆಸರಿನಲ್ಲಿ ಹುಟ್ಟುವ ಎಲ್ಲಾ ಕ್ರಿಮಿಕೀಟಗಳನ್ನು ಬಿಟ್ಟು ಕಮಲಕ್ಕೆಮಾತ್ರ ಪಂಕಜ ಎಂದು ಕರೆಯಲಾಗಿದೆ. ಇಲ್ಲಿ ಯೌಗಿಕಅರ್ಥವೂ ಇದೆ, ಆದರೆ ರೂಢಿಯಬಲದಿಂದ ಅದನ್ನು ಸಂಕುಚಿತಗೊಳಿಸಿಕೇವಲ ಕಮಲ ಎಂದು ಕರೆಯಲಾಗಿದೆ. ಇದುಯೋಗರೂಢಾರ್ಥಕ್ಕೆ ಉಧಾಹರಣೆ. ಈಗ ಅಶ್ವದ ಅರ್ಥ ನೋಡುವಾಗ ಅಶ್ವ ಎಂದರೆಯಾವುದು ತಿನ್ನುತ್ತದೋ ಅದು , ಎಂದಾಗಕುದುರೆಯು ದಾರಿಯನ್ನುತಿನ್ನುತ್ತದೆ ಅರ್ಥಾತ್ ಕಡಿಮೆ ಮಾಡುತ್ತದೆ , ಹಾಗಾಗಿದಾರಿಯನ್ನು ಕುದುರೆ, ವಾಹನ, ಇತ್ಯಾದಿ ಯಾವುದೇಕಡಿಮೆ ಮಾಡಿದರೂ ಅದನ್ನು ಸಂಕುಚಿತ ಗೊಳಿಸಿ ಅಶ್ವ ಎಂದರೆ ಕುದುರೆಎಂದು ಕರೆಯಲಾಯ್ತು. ಯಾಸ್ಕರು ಹೇಳುತ್ತಾರೆ....ಅಶ್ನಾತಿಅದ್ವಾನಂ ಇತಿ ಅಶ್ವ: , ಅದ್ವಾನ ಎಂದರೆ ರಸ್ತೆ, ಯಾವುದು ರಸ್ತೆಯನ್ನುತಿನ್ನುತ್ತದೋ ಅದು ಅಶ್ವ. ಅಂದರೆ ಕುದುರೆಯು ರಸ್ತೆಯನ್ನುತಿನ್ನುತ್ತದೆ, ಅಂದರೆ ಕ್ರಮಿಸಿ ಕಡಿಮೆ ಮಾಡಿಕೊಡುತ್ತದೆ ಆದ್ದರಿಂದ ಅಶ್ವಎಂದರೆ ಕುದುರೆ ಎಂದು ಅರ್ಥೈಸ ಬಹುದು. ಆದರೆ ಇಷ್ಟಕ್ಕೆನಿಲ್ಲುವಂತಿಲ್ಲ. ನಿಂತರೆ ಪೂರ್ಣ ಅರ್ಥ ವಾಗುವುದಿಲ್ಲ. ತಿನ್ನುವುದೆಲ್ಲವೂಅಶ್ವವೇ. ಅಂದರೆ ಯಾಸ್ಕರಾಚಾರ್ಯರುಹೇಳುತ್ತಾರೆ....ವೇದವನ್ನು ಅರ್ಥಮಾಡಿಕೊಳ್ಳುವಾಗ ಮೂಲ ಧಾತುವಿಗೆ ಹೋಗಬೇಕು, ಯಾವುದು ತಿನ್ನುತ್ತದೋ, ಯಾವುದುಗ್ರಹಿಸುತ್ತದೋ, ಅದು ಅಶ್ವ. ಅಂದರೆ ನಮ್ಮ ಪಂಚೇಂದ್ರಿಯಗಳು. ಕಣ್ಣು ದೃಷ್ಟಿಯನ್ನು, ಕಿವಿಶಬ್ಧವನ್ನು, ಚರ್ಮವು ಸ್ಪರ್ಷವನ್ನು, ನಾಲಿಗೆರುಚಿಯನ್ನು ಮತ್ತು ಮೂಗು ವಾಸನೆಯನ್ನು ಗ್ರಹಿಸುತ್ತವೆ. ಆದ್ದರಿಂದ ಅಶ್ವ ವೆಂದರೆ ನಮ್ಮಪಂಚೇಂದ್ರಿಯಗಳು. ಮೇಧ ಎಂದಾಗ ಒಂದುಅರ್ಥ ಬಲಿಕೊಡು ಎಂದಾದರೆ ಮೇಧೃ ಧಾತುವಿನ ಮತ್ತೊಂದು ಅರ್ಥ ಸಂಗಮೇ. ಅಂದರೆ ಒಟ್ಟುಗೂಡಿಸು. ಅಂದರೆ ಇಂದ್ರಿಯ ನಿಗ್ರಹಿಸುಎಂದರ್ಥ. ಅಂದರೆ ಅಶ್ವಮೇಧ ಯಾಗ ವೆಂದರೆ ನಿಂದ್ರಿಯ ನಿಗ್ರಹ ಮಾಡುವಯಜ್ಞ ಎಂದರ್ಥ. ಅಶ್ವಮೇಧ ಯಾಗದ ಮಂತ್ರಗಳಸರಿಯಾದ ಅರ್ಥವನ್ನು ತಿಳಿದುಕೊಂಡಾಗ ನಮ್ಮ ಇಂದ್ರಿಯ ನಿಗ್ರಹ ಮಾಡಲುಏನು ಮಾಡಬೇಕೆಂಬುದು ಅದರ ಸಾರ. ಇದೇ ಬ್ಲಾಗಿನಲ್ಲಿ ಫೆಬ್ರವರಿ ತಿಂಗಳಲ್ಲಿ ಶರ್ಮರ ಉಪನ್ಯಾಸಗಳಾದ ಯಜ್ಞ ಮತ್ತು ಅಶ್ವಮೇಧಯಾಗ ಬರಹಗಳನ್ನು ನೋಡಿ
Saturday, March 27, 2010
ಪಾಣಿನಿ
ಬಾಲಕನೊಬ್ಬನನ್ನು ಕರೆದು ಅವನ ಹಸ್ತವನ್ನು ತೋರಿಸಿ "ವಿದ್ಯಾರೇಖೆ ಎಂದರೆ ಇದು, ನಿನಗೆ ಅದರ ಲೇಶ ಮಾತ್ರವೂ ಇಲ್ಲ. ನಿನಗೆಲ್ಲಿ ವಿದ್ಯೆ ಹತ್ತಲು ಸಾಧ್ಯ? ಹೊರಟು ಬಿಡು" ಗುರುಗಳು ಸಿಟ್ಟಿನಿಂದಲೇ ಹೇಳುತ್ತಾರೆ.
ಬಾಲಕ ಆಶ್ರಮದಿಂದ ಹೊರಗೆ ಹೋಗುತ್ತಾನೆ.ಸ್ವಲ್ಪ ಸಮಯದ ಬಳಿಕ ಗುರುಗಳಲ್ಲಿಗೆ ಮತ್ತೆ ಬರುತ್ತಾನೆ.ಗುರುಗಳಿಗೆ ಈಗಂತೂ ಅಸಾಧ್ಯವಾದ ಸಿಟ್ಟು ಬರುತ್ತೆ. ಸುಮ್ಮನೆ ನನ್ನ ಕಾಲ ಹರಣ ಮಾಡುತ್ತಿದ್ದಾನಲ್ಲಾ! ಬಾಲಕ ಶಾಂತವಾಗಿಯೇ ಗುರುಗಳಲ್ಲಿ ನಿವೇದಿಸಿಕೊಳ್ಳುತ್ತಾನೆ-" ಗುರುಗಳೇ, ಈಗ ವಿದ್ಯಾರೇಖೆ ಮೂಡಿದೆ ನೋಡಿ" -ಸುರಿಯುತ್ತಿದ್ದ ರಕ್ತವನ್ನು ಲೆಕ್ಕಿಸದೆ ಗುರುಗಳ ಮುಂದೆ ಕೈ ಚಾಚುತ್ತಾನೆ. ಬೆಣಚುಕಲ್ಲಿನಿಂದ ಬಾಲಕ ಕೈ ಮೇಲೆ ಗೆರೆ ಎಳೆದಿರುತ್ತಾನೆ.ಈ ದೃಶ್ಯವನ್ನು ನೋಡಿದ ಗುರುಗಳು ಬಾಲಕನನ್ನು ತಬ್ಬಿಕೊಂಡು " ಕಣ್ಣೀರಿಡುತ್ತಾ ನಿನ್ನಂತಹ ಛಲ ಇರುವ ವಿದ್ಯಾರ್ಥಿಗಲ್ಲದೆ ಇನ್ಯಾರಿಗೆ ನಾನು ವಿದ್ಯಾದಾನ ಮಾಡಲಿ? ನಿನಗೆ ಖಂಡಿತವಾಗಿಯೂ ಹೇಳಿಕೊಡುತ್ತೇನೆಂದು ಶಿಷ್ಯನನ್ನಾಗಿ ಸ್ವೀಕರಿಸುತ್ತಾರೆ. ಈ ಬಾಲಕನೇ ವ್ಯಾಕರಣವನ್ನು ರಚಿಸಿದ ಮಹಾ ಪಂಡಿತ " ಪಾಣಿನಿ"
Monday, March 22, 2010
ಹೊಸ ತಾಣ ವೇದಾಸ್ ಫಾರ್ ಆಲ್
ವೇದಸುಧೆಯು ಆರಂಭವಾಗಿ ಬಹುದಿನಗಳೇನೂ ಆಗಿಲ್ಲ. ಬೇಲೂರಿನ ಮಿತ್ರ ಶ್ರೀ ವಿಶ್ವನಾಥ ಶರ್ಮರು ಹಲವು ವರ್ಷಗಳ ಹಿಂದೆ ಶ್ರೀಸುಧಾಕರಶರ್ಮರು ಮಾಡಿದ್ದ ಉಪನ್ಯಾಸಗಳ ಧ್ವನಿಮುದ್ರಿಕೆಯನ್ನು ನನಗೆ ಕೇಳುವಂತೆ ಮಾಡಿದ ಪರಿಣಾಮವಾಗಿ ಅದನ್ನುಎಂಪಿ-೩ ಕ್ಕೆ ಕನ್ವರ್ಟ್ ಮಾಡಿ ನನ್ನ ಮಿತ್ರರಿಗೆಲ್ಲಾ ಕೇಳಿಸಿ ನಂತರ ಬಿನ್ ಫೈರ್ ಡಾಟ್ ಕಾಮ್ ತಾಣಕ್ಕೆ ಅಪ್ಲೋಡ್ ಮಾಡಿ ಅದರಕೊಂಡಿಗಳನ್ನು ಸಂಪದದಲ್ಲಿ ಪ್ರಕಟಿಸಿದ್ದರಿಂದ ಹಲವರು ಸುಧಾಕರಶರ್ಮರ ಉಪನ್ಯಾಸಗಳನ್ನು ಕೇಳುವಂತಾಯ್ತು. ಉಪನ್ಯಾಸಗಳು ಹಲವರ ಮೆಚ್ಚಿಗೆಯನ್ನೂ ಪಡೆಯಿತು. ಅದೇ ಉಪನ್ಯಾಸಗಳ ಬರಹ ರೂಪವನ್ನು ಸಂಪದದಲ್ಲೂ ಪ್ರಕಟಿಸಿದ್ದೆ. ನಂತರ ಅದಕ್ಕಾಗಿಯೇ "ವೇದಸುಧೆ" ಬ್ಲಾಗ್ ಶುರುವಾಯ್ತು. ಬ್ಲಾಗ್ ಶುರುಮಾಡಿದ ಹಿನ್ನೆಲೆಯನ್ನು ಸುಧಾಕರಶರ್ಮರಿಗೆ ತಿಳಿಸಿ ಆಬಗ್ಗೆ ಬರುವ ಪ್ರಶ್ನೆಗಳಿಗೆ ಶರ್ಮರು ಬ್ಲಾಗ್ ನಲ್ಲಿಯೇ ಉತ್ತರಿಸಲೂ ಒಪ್ಪಿದ್ದರು. ಆದರೆ ಬ್ಲಾಗ್ ನಲ್ಲಿ ಕನ್ನಡದಲ್ಲಿ ಅವರಿಗೆ ಬರೆಯಲುತಾಂತ್ರಿಕ ತೊಡಕುಂಟಾಗಿ ಅವರಿಂದ ಉತ್ತರಗಳನ್ನು ಪ್ರಕಟಿಸಲು ಸಾಧ್ಯವಾಗಲೇ ಇಲ್ಲ. ಈ ಮಧ್ಯೆ ಬೆಂಗಳೂರಿನಲ್ಲಿ ಕಳೆದ೧೮.೩.೨೦೧೦ ರಂದು ಕೆಲವು ಮಿತ್ರರು ಪುಟ್ಟ ಸಭೆಯೊಂದನ್ನು ನಡೆಸಿ ವೇದ ಪ್ರಚಾರಕ್ಕಾಗಿ ವೆಬ್ ಸೈಟ್ ಒಂದನ್ನು ಆರಂಭಿಸುವಬಗ್ಗೆ ಚರ್ಚಿಸಿದೆವು. ಅದರ ಎರಡನೆಯ ಸಭೆಯು ದಿನಾಂಕ ೨೦.೩.೨೦೧೦ ರಂದು ವೇದಾಧ್ಯಾಯೀ ಸುಧಾಕರಶರ್ಮರ ಮನೆಯಲ್ಲಿನಡೆದು ವೆಬ್ಸೈಟ್ ಗಾಗಿ ಒಂದು ಸಮಿತಿಯನ್ನು ರಚಿಸಲಾಯ್ತು. ಎಲ್ಲರ ಅಭಿಮತದಂತೆ www.vedasforall.org ಸೂಚಿಸಲಾಯ್ತು. ವಿಶ್ವದಾದ್ಯಂತ ವೇದವಾಣಿಯು ತಲುಪಲೆಂದು ಆಂಗ್ಲ ಭಾಷೆಯಲ್ಲೂ ಹಾಗೂ ದೇಶೀಯ ಭಾಷೆಯಾಗಿಹಿಂದಿಯಲ್ಲೂ , ನಮ್ಮ ಪ್ರಾದೇಶಿಕ ಭಾಷೆಯಾಗಿ ಕನ್ನಡದಲ್ಲೂ ಮತ್ತು ಸಂಸ್ಕೃತದಲ್ಲೂ ಬರಹಗಳನ್ನು ಪ್ರಕಟಿಸಲು ನಿರ್ಧರಿಸಲಾಯ್ತು. ತಾಣದಲ್ಲಿ ಬರಹಗಳಲ್ಲದೆ ಆಡಿಯೋ,ವೀಡಿಯೋ ಕ್ಲಿಪ್ ಗಳೂ ಇರಬೇಕೆಂಬುದು ಎಲ್ಲರ ಅಭಿಪ್ರಾಯವಾಗಿತ್ತು.
ತಾಣವನ್ನು ರಚಿಸುವ ತಾಂತ್ರಿಕ ಹೊಣೆಯನ್ನು ಶ್ರೀ ವಿಶಾಲ್ ಮತ್ತು ಅವರ ಮಿತ್ರರಿಗೆ ವಹಿಸಲಾಯ್ತು. ಶ್ರೀ ಸುಧಾಕರ ಶರ್ಮರುಬರಹಗಳನ್ನು ಸಂಪಾದಿಸುವ ಹೊಣೆಯನ್ನು ಹೊತ್ತರು. ಅಂತೂ ಒಂದೆರಡು ದಿನಗಳ ಪ್ರಯತ್ನದಿಂದ ಇಂದು ತಾಣವುಆರಂಭಗೊಂಡಿದೆ. ಇದರ ಉಪಯೋಗವನ್ನು ನಾವು ಪಡೆಯುವುದಲ್ಲದೆ ಅದರ ಪರಿಚಯವನ್ನು ನಮ್ಮ ಮಿತ್ರರಿಗೂ ಮಾಡಿಕೊಡುವಹೊಣೆ ನಮ್ಮದಾಗಬೇಕು.
www.vedasforall.org ವೇದ ಸುಧೆ:
ಈ ತಾಣವು ಆರಂಭವಾದರೂ ವೇದಸುಧೆಯು ಮುಂದುವರೆಯುತ್ತದೆ. www.vedasforall.orgವೇದವು ಎಲ್ಲರಿಗಾಗಿ " ಉದ್ಧೇಶವನ್ನು ಹೊಂದಿದ್ದು ಇದರಲ್ಲಿ ವೇದಾಧ್ಯಾಯೀ ಸುಧಾಕರಶರ್ಮರ ಜೊತೆಗೆ ಇನ್ನೂ ಹಲವು ವೇದ ವಿದ್ವಾಂಸರ ಬರಹಗಳುಮತ್ತು ಆಡಿಯೋ ವೀಡಿಯೋ ಕ್ಲಿಪ್ ಗಳಿರುತ್ತವೆ. ಆದರೆ ವೇದಸುಧೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಅಡ್ಡಿಯಾಗದ ಯಾವುದೇವಿಚಾರಗಳ ಚರ್ಚೆ ನಡೆಯುತ್ತದೆ. ವಿಚಾರ ವಿಮರ್ಶೆ ನಡೆಯುತ್ತದೆ.ಇಲ್ಲಿ ಯಾವುದು ವೇದೋಕ್ತ ಅಥವಾ ಯಾವುದು ವೇದೋಕ್ತವಲ್ಲಾಎಂಬುದಕ್ಕಿಂತಲೂ ವ್ಯಕ್ತಿ ಹಾಗೂ ಸಮಾಜದ ನೆಮ್ಮದಿ ಕಾಪಾಡುವ ಯಾವುದೇ ವಿಷಯಗಳ ಬಗ್ಗೆ ವಿಚಾರ ವಿಮರ್ಶೆಮಾಡಲಾಗುವುದು. ಯಾವುದು ಸಮಾಜಕ್ಕೆ ಕಂಟಕವೋ ಅದರ ಬಗ್ಗೆ ಸಮಾಜವನ್ನು ಎಚ್ಚರಿಸುವಂತಾ ಪುಟ್ಟ ಪುಟ್ಟ ಬರಹಗಳನ್ನುಇಲ್ಲಿ ಪ್ರಕಟಿಸಲಾಗುವುದು.
ಅಂತೂ ವೇದಾಸ್ ಫಾರ್ ಆಲ್ ತಾಣವು ವೇದಸುಧೆ ಬ್ಲಾಗ್ ಗೆ ಪ್ರತಿ ಸ್ಪರ್ಧಿಯಾಗಿ ಆರಂಭಗೊಂಡಿಲ್ಲ, ಬದಲಿಗೆ ತಾಣದ ವ್ಯಾಪ್ತಿವಿಶಾಲವಾಗಿದ್ದು ವೇದಸುಧೆಯು ಈ ತಾಣಕ್ಕೆ ಪೂರಕವಾಗಿರುತ್ತದೆ.Thursday, March 11, 2010
ಮಾಮಿ ಕಣ್ಣು ಕುಕ್ಕಿ ಬಿಡುತ್ತಾನೆ!
ಸತ್ಯನಾರಾಯಣ ಕಥೆಯನ್ನು ಯಾರೂ ಪ್ರಶ್ನೆ ಮಾಡಲು ಯತ್ನಿಸುವುದಿಲ್ಲ. ಕಾರಣ ಅದರ ಹಿಂದೆ ಶ್ರದ್ಧೆ- ಭಕ್ತಿಯ ಜೊತೆಗೆ ಭೀತಿಯೂ ಸೇರಿದೆ. ಸತ್ಯನಾರಾಯಣವ್ರತವನ್ನು ಕೇವಲ ಯಾರೋ ಅವಿದ್ಯಾವಂತರು ಆಚರಿಸುತ್ತಾರೆಂದೇನೂ ಅಲ್ಲ. ಬಹುಪಾಲು ಜನರು ಅತ್ಯಂತ ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ. ಅದರಬಗ್ಗೆ ಯಾವ ತಕರಾರೂ ಇಲ್ಲ. ಆದರೆ ಎಲ್ಲರನ್ನೂ ರಕ್ಷಿಸುವ ಭಗವಂತನು ಐಶ್ವರ್ಯವನ್ನು ನಾಶಮಾಡಿದ, ಜೀವಹಾನಿ ಮಾಡಿದ, ಮುಂತಾಗಿ ಕಥೆ ಇದ್ದರೆ ಅದನ್ನು ಇನ್ನೂ ಹೇಳಿಕೊಂಡೇ ಇರಬೇಕೇ?
ಯಾವುದೋ ಒಂದು ಕಾಲದಲ್ಲಿ ಧರ್ಮಕ್ಕೆ ಚ್ಯುತಿ ಬಂದಾಗ ಧರ್ಮಕಾರ್ಯ ನಡೆಯಲು ಅಂದಿನ ಸಾಮಾಜಿಕ ಪರಿಸ್ಥಿತಿಗನುಗುಣವಾಗಿ ಜನರಲ್ಲಿ ಭಯವನ್ನುಂಟು ಮಾಡಿದರೆ ಅವನು ಧರ್ಮಮಾರ್ಗದಲ್ಲಿ ಹೋಗುತ್ತಾನೆಂಬ ಕಾರಣದಿಂದ ಒಂದಿಷ್ಟು ಕಥೆ ಹೆಣೆದಿರಬಹುದು. ಇದನ್ನು ಇಂದಿನ ದಿನಗಳಲ್ಲಿ ಪುರೋಹಿತರು ಅವರ ಹೊಟ್ಟೆ ತುಂಬಿಸಿಕೊಳ್ಳಲು ಮಾಡಿದ ಪ್ಲಾನ್ ಅಂತಾ ಹೇಳುವ ಜನರಿದ್ದಾರೆ. ದೇವರನ್ನು ನಂಬದ ನಾಸ್ತಿಕನ ವಿಚಾರ ಬೇರೆ. ವಿಚಾರವಾದದ ಹೆಸರಲ್ಲಿ ಹಿಂದು ಪರಂಪರೆ, ಹಿಂದು ಧಾರ್ಮಿಕ ಆಚರಣೆಗಳನ್ನು ಖಂಡಿಸುವವರ ವಿಚಾರ ಬೇರೆ. ಆದರೆ ಭವಂತನನ್ನು ನಂಬುವ ಹಿಂದು ಆಚಾರ-ವಿಚಾರಗಳನ್ನು ಪ್ರೀತಿಸುವ ಪ್ರಗತಿಪರ ಆಸ್ತಿಕನ ವಿಚಾರ ಬಂದಾಗ ಇಂತಾ ಕಥೆಗಳನ್ನು ಹೇಳದೆ ಮನಸ್ಸಿನ ನೆಮ್ಮದಿಗಾಗಿ ಯಾವುದೇ ದೇವರ ಪೂಜೆಯನ್ನು ಅವನ ಇಚ್ಛೆಯಂತೆ ಮಾಡುವುದರಲ್ಲಿ ತಪ್ಪಿಲ್ಲವೆಂದು ನನ್ನ ಭಾವನೆ. ಅಷ್ಟೇ ಅಲ್ಲ ಕುರುಡು ನಂಬಿಕೆಗಳು, ಅಂಧಾಚರಣೆಗಳನ್ನು ಬಿಡುವ ಧೈರ್ಯ ನಮಗೆ ಬರಬೇಕು. ನೀವುಏನಂತೀರಾ?
Wednesday, March 10, 2010
ಆತ್ಮೀಯ ಹಾರೈಕೆ
ನಮಸ್ಕಾರ ತಮಗೆ,
ತಮ್ಮ ಬಗ್ಗೆ ತಿಳಿದುಕೊಂಡೆ, ಬಹಳ ಸಂತೋಷವಾಯಿತು.
ಇನ್ನು ನೀವು ಹೇಳಿದ ಹಾಗೇ ವೃತ್ತಿ ಜೀವನ ಒಂದು ಇರಲೇಬೇಕು, ಅದರ ಹಕ್ಕು-ಬಾಧ್ಯತೆಗಳು ನಮ್ಮನ್ನು ಬಾಧಿಸುತ್ತಲೇ ಇರುತ್ತವೆ. ಮನೆ-ಕುಟುಂಬ ಇದರ ಜವಾಬ್ದಾರಿ ಇನ್ನೊದು ಕಡೆಗೆ. ಇವುಗಳ ಜೊತೆಗೇ ಇಂದಿನದಿನ ಸಮಾಜ ಸೇವೆ ಮಾಡುವುದು ಬಹಳ ಕಷ್ಟಸಾಧ್ಯದ ಮಾತೇ ಸರಿ. ಹಲ್ಲುಗಳ ಮಧ್ಯೆಯ ನಾಲಿಗೆಯಂತೆ, ಕಷ್ಟಗಳ ಮಧ್ಯೆಯೇ ನಮ್ಮನ್ನು ಮರೆತು ಉಳಿದ ಸಹಯಾತ್ರಿಕರಿಗೆ [ಜೀವನವೇ ಯಾತ್ರೆ ಅಂತ ತಿಳಿದರೆ] ಮಾರ್ಗದರ್ಶಿಸುವಲ್ಲಿ, ಒಳ್ಳೆಯ ಗುರು-ಹಿರಿಯ ತತ್ವಬೋಧಕರನ್ನು ತೋರಿಸುವಲ್ಲಿ ತಾವು ಮಾಡಿರುವ ಕೆಲಸ ಶ್ಲಾಘನೀಯ, ನಮ್ಮ ಬಾಯಿಮಾತಿನ ಶ್ಲಾಘನೆ ಬೇಡ ಬಿಡಿ, ಇದು ಬೂಟಾಟಿಕೆಯಾದೀತು, ನಿಮಗೆ ದೇವರೇ ನಿರ್ಮಿಸಿಕೊಡುವ ಬಹುದೊಡ್ಡ ಶ್ಲಾಘನೆ ಜನ್ಮಾಂತರಕ್ಕೂ ಸಿಗಲಿದೆ; ಇದರಲ್ಲಿ ಯಾವುದೇ ಸಂಶಯವಿಲ್ಲ.
ರಾ.ಸ್ವ.ಸಂಘದ ಬಗ್ಗೆ ಬಹಳ ಕುತೂಹಲ-ಆಸಕ್ತಿ ಇದ್ದ ನನಗೆ, ನಮ್ಮೂರಿನಲ್ಲಿ ನಾನು ಚಿಕ್ಕವನಿರುವಾಗಲೇ ನಮ್ಮ ಮನೆಯಲ್ಲಿ ಬೈಠಕ್ ನಡೆದಿತ್ತು, ಹೀಗಾಗಿ ಅದರ ಕಾರ್ಯತತ್ಪರತೆ ಗೊತ್ತಿರುವ ವಿಷಯ, ಅದಿಲ್ಲದಿದ್ದರೆ ನಮ್ಮ ಹಿಂದೂಗಳನ್ನೆಲ್ಲಾ ಕುತ್ಸಿತ ರಾಜಕಾರಣಿಗಳು ಏನುಮಾಡುತ್ತಿದ್ದರು ಎನ್ನುವುದು ಊಹಿಸಲೂ ಕಷ್ಟ. ಅದರಲ್ಲಿ ತೊಡಗಿದವರು ಒಂಥರಾ ರಾಮಕೃಷ್ಣಾಶ್ರಮದಲ್ಲಿ ತರಬೇತಿ ಪಡೆದಂತೆ ಇರುತ್ತಾರೆ ಎಂದು ಬೇರೆ ಹೇಳಬೇಕೇ?
ನಮ್ಮಲ್ಲಿ ವರದಹಳ್ಳಿಯ ಭಾಗವನ್ ಶ್ರೀಧರರ ಬಗ್ಗೆ ತಾವು ಕೇಳಿರಬಹುದು, ಅಂಥ ಮಹಾತ್ಮರ ಹೆಸರನ್ನು ಪಡೆದಿದ್ದೀರಿ, ನನಗೆ ಅದೂ ಬಹಳ ಸಲ ನೆನಪಿಗೆ ಬಂತು.ಹೀಗಾಗಿ ನಿಮ್ಮನ್ನು ಅರಿತುಕೊಂಡು ಬಹಳ ಆಭಾರಿಯಾಗಿದ್ದೇನೆ, ನಿಮಗೆ ಪ್ರಜ್ಞಾನಮೂಲ ಪರಬ್ರಹ್ಮ ಸುದೀರ್ಘ ಅಕ್ಷಯ ಆಯುರಾರೋಗ್ಯ ,ನಿರ್ವಿಘ್ನತೈಶ್ವರ್ಯ, ಜ್ಞಾನ-ಸಂಪತ್ ಸಮೃದ್ಧಿ ಕರುಣಿಸಲೆಂದು ಅವನಲ್ಲಿ ಪ್ರಾರ್ಥಿಸಿ ಶುಭಾಹಾರೈಸುತ್ತಿದ್ದೇನೆ .
ಧನ್ಯವಾದಗಳು, ಶುಭದಿನ
ವಿ.ಆರ್.ಭಟ್
Monday, March 8, 2010
ಬೆಳಕಿನ ಕಿಂಡಿ
Friday, March 5, 2010
ಕೃತಜ್ಞತೆಗಳು
ಯಾವ ಕಾಲಕೂ ಬರುವ ಪುಣ್ಯ ಸಂಚಯನ
ಜೀವಿತಾವಧಿಯುದ್ದ ಮಾಡು ವೇದಾಧ್ಯಯನ
ಜವನ ಧಿಕ್ಕರಿಸುತಲಿ | ಜಗದಮಿತ್ರ
ಸನ್ಮಿತ್ರರಾಗಿ ನಮ್ಮೆಲ್ಲಾ ಓದುಗ ಮಿತ್ರರಿಗೆ ನಿಸ್ವಾರ್ಥರಾಗಿ ವೇದಸುಧೆಯನ್ನು ಹರಿಸುತ್ತಿರುವ ಶ್ರೀ ಶ್ರೀಧರ್ ಅವರಿಗೆ ಧನ್ಯತಾಪೂರ್ವಕ ಅರ್ಪಿಸಿದ ಸಾಲುಗಳು, ಓದುಗ ಸ್ನೇಹಿತ ಬಂಧುಗಳೇ, ಬನ್ನಿ ವೇದಸುಧೆಯಲ್ಲಿ, ವೇದದ ಸೇವಾ ಕೈಂಕರ್ಯದಲ್ಲಿ ಕೈಜೋಡಿಸೋಣ
--ವಿ.ಆರ್.ಭಟ್