Pages

Sunday, August 8, 2010

ಮೂಢ ಉವಾಚ -1

ನಿಜಮುಖ
ಅತ್ತಮುಖ ಇತ್ತಮುಖ ಎತ್ತೆತ್ತಲೋ ಮುಖ !
ಏಕಮುಖ ಬಹುಮುಖ ಸುಮುಖ ಕುಮುಖ !!
ಮುಖದೊಳಗೊಂದು ಮುಖ ಹಿಮ್ಮುಖ ಮುಮ್ಮುಖ !
ಮುಖಾಮುಖಿಯಲ್ಲಿ ನಿಜಮುಖವೆಲ್ಲೋ ಮೂಢ ||

ಒಳಿತು - ಕೆಡುಕು
ಸಜ್ಜನನು ಬೇರಲ್ಲ ದುರ್ಜನನು ಬೇರಿಲ್ಲ |
ಬುದ್ಧನೂ ಬೇರಲ್ಲ ಹಿಟ್ಲರನೂ ಬೇರಿಲ್ಲ ||
ಕೆಡುಕದು ಬೇರಲ್ಲ ಒಳ್ಳಿತದು ಬೇರಿಲ್ಲ |
ಎಲ್ಲ ನೀನೆ ಎಲ್ಲವೂ ನಿನ್ನೊಳಗೆ ಮೂಢ ||

ಮಹಿಮೆ
ಅತಿವಿನಯ ತೋರುವರು ಸುಮ್ಮನೆ ಹೊಗಳುವರು |
ಸೇವೆಯನು ಗೈಯುವರು ನಂಬಿಕೆಯ ನಟಿಸುವರು ||
ನೀನೆ ಗತಿ ನೀನೆ ಮತಿ ಪರದೈವವೆನ್ನುವರು |
ಕುರ್ಚಿಯಾ ಮಹಿಮೆಯದು ಉಬ್ಬದಿರು ಮೂಢ ||

ಹಣ - ಗುಣ
ಗತಿಯು ತಿರುಗುವುದು ಮತಿಯು ಅಳಿಯುವುದು|
ಬಂಧುತ್ವ ಮರೆಸುವುದು ಸ್ನೇಹಿತರು ಕಾಣಿಸರು ||
ನಾನತ್ವ ಮೆರೆಯುವುದು ಪೊರೆಯು ಮುಸುಕುವುದು |
ಹಣವು ಗುಣವ ಹಿಂದಿಕ್ಕುವುದು ಕಾಣೋ ಮೂಢ ||

2 comments:

  1. [ಹಣವು ಗುಣವ ಹಿಂದಿಕ್ಕುವುದು]
    ನಿಜ ನಾಗರಾಜ್,
    ಅದರ ಮಧ್ಯದಲ್ಲೇ ಗುಣಕ್ಕೆ ಬೆಲೆಕೊಡುವ ಗಣಿಗಳೂ ಇರುವುದು ಸುಳ್ಳಲ್ಲ.

    ReplyDelete
  2. ಧನ್ಯವಾದಗಳು, ಶ್ರೀಧರ್ ಮತ್ತು ಸೀತಾರಾಮರಿಗೆ.

    ReplyDelete