ಮೊನ್ನೆ ನನ್ನ ಮಗ ಸುಬ್ರಹ್ಮಣ್ಯನ ಸ್ನೇಹಿತ ಅನಂತ ನಮ್ಮ ಮನೆಗೆ ಬಂದು " ಅಂಕಲ್, ನಮ್ಮ ಬಂಧುಗಳೊಬ್ಬರು ಸುಧಾರ್ಥಿ ಅಂತಾ ಇದಾರೆ. ಅವರ ಪರಿಚಯ ನಿಮಗೆ ಮಾಡಿಕೊಡಬೇಕು, ಅವರು "ಸಿರಿಭೂವಲಯ" ಅನ್ನೋ ಒಂದು ದೊಡ್ದ ಗ್ರಂಥದ ಬಗ್ಗೆ ೨೫-೩೦ ವರ್ಷಗಳಿಂದ ಸಂಶೋಧನೆ ಮಾಡ್ತಾ ಇದಾರೆ. ಅವರ ಮನೆಗೆ ಹೋಗೋಣ, ಯಾವಾಗ ಫ್ರೀ ಟೈಮ್ ಸಿಗುತ್ತೆ? ಹೇಳಿ "ಅಂದ. ಸರಿ ಮುಂದಿನ ಗುರುವಾರ ಭೇಟಿ ಮಾಡಲು ಫಿಕ್ಸ್ ಆಯ್ತು.ಈಮಧ್ಯೆ ನನ್ನ ಮಿತ್ರರಾದ ಸಾಹಿತ್ಯ ಸಂಶೋಧಕರಾದ ಡಾ|| ಶ್ರೀವತ್ಸ.ಎಸ್.ವಟಿ ಯವರು ನಿನ್ನೆ ಹಾಸನ ಆಕಾಶವಾಣಿಗೆ ರೆಕಾರ್ಡಿಂಗ್ ಗೆ ಬಂದಿದ್ದವರು ನಮ್ಮ ಮನೆಗೆ ಬಂದಿದ್ದರು. ಅವರೊಡನೆ ಅನೌಪಚಾರಿಕ ಮಾತುಕತೆ ನಡೆಸುವಾಗ ಅವರೊಡನೆ "ಸಿರಿಭೂವಲಯ" ದ ಬಗ್ಗೆ ಪ್ರಸ್ಥಾಪಿಸಿದೆ. ಅವರು ಆಗಾಗಲೇ ೪-೫ ವರ್ಷಗಳಲ್ಲೇ ತರಂಗ ಪತ್ರಿಕೆಯಲ್ಲಿ ಈ ಬಗ್ಗೆ ವಿಶೇಷ ಲೇಖನ ಬರೆದಿದ್ದಾರೆ. ಅವರೊಡನೆ ನಡೆದ ಮಾತು ಕತೆ ವೇದಸುಧೆಯ ಅಭಿಮಾನಿಗಳಿಗಾಗಿ ಹಾಕಿರುವೆ. ಗುರುವಾರ ಶ್ರೀ ಸುಧಾರ್ಥಿಯವರೊಡನೆ ನಡೆಯುವ ಮಾತುಕತೆಯನ್ನೂ ಇಲ್ಲಿ ಅಪ್ ಲೋಡ್ ಮಾಡುವೆ. ಈ ಬಗ್ಗೆ ವೇದಸುಧೆಯ ಬಳಗದ ಇನ್ಯಾರಿಗಾದರೂ ಮಾಹಿತಿ ಇದ್ದರೆ ದಯಮಾಡಿ ತಿಳಿಸಿ. ಬಹಳ ಅಪರೂಪವಾದ ಅದ್ಭುತವಾದ ಈ ಗ್ರಂಥದ ಪೀಠಿಕೆಯ ಪರಿಚಯ ಮಾಡುವುದರಲ್ಲೇ ೨೫-೩೦ ವರ್ಷದ ಸಂಶೋಧನೆ ಕಳೆದಿದೆ, ಅಂತಾರೆ, ಶ್ರೀ ವಟಿಯವರು. ಅವರ ಮಾತುಗಳನ್ನೇ ಕೇಳಿ.
ತರಂಗ ಪತ್ರಿಕೆಯಲ್ಲಿನ ಅವರ ಬರಹವನ್ನು ತೋರಿಸುತ್ತಾ ವಿವರಣೆ ಕೊಡುತ್ತಿರುವ ಡಾ|| ಶ್ರೀವತ್ಸ.ಎಸ್. ವಟಿ, ಜೊತೆಯಲ್ಲಿ ಹೊಯ್ಸಳ ಟೂರಿಸಮ್ ಪತ್ರಿಕೆಯ ವ್ಯವಸ್ಥಾಪಕರಾದ ಶ್ರೀ ದಾಸೇಗೌಡ.
ಅಂತರ್ಜಾದಲ್ಲೂ ಒಂದಷ್ಟಿದೆ. ನೋಡಿ: http://en.wikipedia.org/wiki/Siribhoovalaya
Nice information
ReplyDeleteಕುತೂಹಲಕಾರಿಯಾಗಿದೆ. ಅವಕಾಶವಾದರೆ ಭೇಟಿಯಾಗಬೇಕು.
ReplyDeleteಡಾ|| ಗುರುಮೂರ್ತಿ, ಹಾಗೂ ಶ್ರೀ ನಾಗರಾಜ್
ReplyDeleteಪ್ರತಿಕ್ರಿಯೆಗೆ ಧನ್ಯವಾದಗಳು.
ಸರ್ ನಮಸ್ಕಾರ.
ReplyDeleteತರಂಗದಲ್ಲಿ ಸಿರಿಭೂವಲಯದ ಲೇಖನ ೨-೩ ವಾರ ಮಾತ್ರ ಓದಿದ್ದೆ. ಮತ್ತೆ ನನಗೆ ತರಂಗ ಓದಲು ಆಗಿರಲಿಲ್ಲ. ಕುತೂಹಲಭರಿತವಾದುದು ಸಿರಿಭೂವಲಯ ಎಂದು ಮಾತ್ರ ಬಲ್ಲೆ.
ಧನ್ಯವಾದಗಳು.
ನೈಸ್ info
ReplyDeleteNice Information !
ReplyDeleteನಾಳೆ ಸುಧಾರ್ಥಿಯವರನ್ನು ಭೇಟಿಯಾಗುತ್ತಿರುವೆ.ಇನ್ನೊಂದಿಷ್ಟು ಮಾಹಿತಿ ಲಭ್ಯವಾಗಬಹುದು, ಬರೆಯುವೆ ಅಥವಾ ಆಡಿಯೋ ಕ್ಲಿಪ್ ಹಾಕುವೆ.ಶ್ರೀ ಚಂದ್ರಶೇಖರ್,ಶ್ರೀ ಸೀತಾರಾಮ್ ಮತ್ತು ಭಟ್ಟರೇ ನಿಮಗೆ ಧನ್ಯವಾದಗಳು.
ReplyDeleteThis comment has been removed by the author.
ReplyDelete