ತೋಟದ ಹಾದಿಯಲ್ಲಿ ಹೊರಟವರು ಆಶ್ರಮ ತಲುಪಿದೆವು. ಅಲ್ಲಿನ ಒಬ್ಬ ಕೆಲಸಗಾರ ಎಲ್ಲಾ ತೋರಿಸಿದವನು "ಕಾಫಿ ಮಾಡಿಸಿಕೊಂಡು ಬರಲಾ? ಬುದ್ಧಿಯೋರು ಮಲಗವ್ರೆ, ಅಂದ.
-ಪರವಾಗಿಲ್ಲ ,ನಾವು ಇಲ್ಲೇ ಎಲ್ಲಾ ನೋಡಿಕೊಂಡು ಎಲ್ಲಾ ನೋಡ್ತಾ ಇತೀವಿ..ಆಮೇಲೆ ಸ್ವಾಮೀಜಿ ನೋಡೋಣ, ಎಂದೆವು. ಆ ವ್ಯಕ್ತಿ ಆಶ್ರಮದ ಆವರಣದಲ್ಲಿರುವ ದೇವಾಲಯ, ಧ್ಯಾನ ಮಂದಿರ [ಈಗ ಕಲ್ಯಾಣ ಮಂಟಪವಾಗಿ ಉಪಯೋಗವಾಗುತ್ತಿದೆ] ಮುಕುಂದೂರು ಸ್ವಾಮಿಗಳಗದ್ದುಗೆ. ಸ್ವಾಮಿಗಳು ತಪಸ್ಸು ಮಾಡುತ್ತಿದ್ದ ಗುಹೆ, ಅವರು ಪೂಜಿಸುತ್ತಿದ್ದ ಈಶ್ವರ ವಿಗ್ರಹ..ಎಲ್ಲವನ್ನೂ ನೋಡಿಕೊಂಡು ಸುತ್ತಮುತ್ತ ಇರುವ ಹಿರಿಯ ವ್ಯಕ್ತಿಗಳಿಂದ ಸ್ವಾಮಿಗಳ ಬಗ್ಗೆ ಒಂದಿಷ್ಟು ಮಾಹಿತಿ ಪಡೆಯೋನ ಎಂದು ಆಶ್ರಮದ ಹೊರಗೆ ಹೆಜ್ಜೆ ಹಾಕಿದೆವು. ಆಗ ಭೇಟಿಯಾದ ಮೊದಲ ವ್ಯಕ್ತಿಯನ್ನು ಮಾತನಾಡಿಸಿದಾಗ.......
[ವೀಡಿಯೋ ನೋಡುವುದು ಹಲವು ಭಾರಿ ಪ್ರಯಾಸದ ಕೆಲಸ. ಇದರ ಆಡಿಯೊ ಕೂಡ ಇಲ್ಲೇ ಕೆಳಗಿದೆ. ಆಡಿಯೋ ಕೇಳುವುದು ಸುಲಭ.]
[ವೀಡಿಯೋ ನೋಡುವುದು ಹಲವು ಭಾರಿ ಪ್ರಯಾಸದ ಕೆಲಸ. ಇದರ ಆಡಿಯೊ ಕೂಡ ಇಲ್ಲೇ ಕೆಳಗಿದೆ. ಆಡಿಯೋ ಕೇಳುವುದು ಸುಲಭ.]
ಈ ವ್ಯಕ್ತಿಯೊಡನೆ ಮಾತನಾಡುವಾಗ ಒಂದಂಶವಂತೂ ಸ್ಪಷ್ಟವಾಯ್ತು.ಸ್ವಾಮೀಜಿಯವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿದ ದಿನ ತಮಗೂ ದೇಹಮುಕ್ತಿ ಕೊಡಬೇಕೆಂದು ಪ್ರಾಥಿಸಿದವರು ಗೌರಜ್ಜಿ ಎಂಬ ಅಂಶ ಯೇಗ್ ದಾಗೆಲ್ಲಾ ಐತೆ ಪುಸ್ತಕದಲ್ಲಿ ಪ್ರಕಟಗೊಂದಿದೆ. ಆದರೆ ಆ ವ್ಯಕ್ತಿ ಗೌರಜ್ಜಿಯಲ್ಲಾ ಅವ೫ರು ಶರಣಮ್ಮ ಎಂದು ಅಂದು ಘಟನೆಯನ್ನು ಕಣ್ಣಾರೆ ಕಂಡವರು ಹೇಳಿದ್ದಾರೆ. ಸ್ವಾಮೀಜಿಯವರ ಬಗ್ಗೆ ಇಷ್ಟೆಲ್ಲಾ ವಿಚಾರಗಲನ್ನು ನಮಗೆ ತಿಳಿಯುವಂತೆ ಮಾಡಿರುವ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳ ವಯೋಮಾನದ ಸಹಜ ಕುಂದಿದ ನೆನಪಿನ ಶಕ್ತಿಯ ಪರಿಣಾಮ ಹೆಸರು ಬದಲಾಗಿರಬಹುದು. ಆದರೆ ಧಾಖಲೆಯಲ್ಲಿ ತಪ್ಪಾಗದಿರಲಿ ಎಂದು ಈ ಅಂಶವನ್ನು ಪ್ರಕಟಿಸಿರುವೆ
ಸ್ವಾಮೀಜಿಯವರ ಆಶ್ರಮದ ಭೇಟಿಯ ವಿಚಾರ ತಿಳಿದ ಮಿತ್ರ ಪ್ರಕಾಶ್ ಅವರು ಮಾಡಿರುವ ಪ್ರತಿಕ್ರಿಯೆಗೆ ಓದುಗರಿಗೆ ವಿಷಯ ತಲುಪಲೆಂಬ ಕಾರಣಕ್ಕೆ ಮುಖ್ಯ ಲೇಖನದಲ್ಲಿಯೇ ಪ್ರತಿಕ್ರಿಯಿಸಿರುವೆ.
-ಹರಿಹರಪುರ ಶ್ರೀಧರ್
ಆತ್ಮೀಯ ಪ್ರಕಾಶ್,
ನಿಜವಾಗಿ ನೋಡಲೇ ಬೇಕಾದ ಸ್ಥಳ.ಆದರೆ ಅಲ್ಲಿ ಏನ್ ಆಗಿದೆ ಅಂದ್ರೆ ಯಾವ ವಿಚಾರವನ್ನು ಸ್ವಾಮಿಗಳು ಹೃದಯಂಗಮ ಮಾಡಿಕೊಂದಿದ್ದರೋ ಅದನ್ನು ಬದಿಗಿಟ್ಟು ಅವರ ಆಶ್ರಮ ಅವರ ಹೆಸರಲ್ಲೇ ಒಂದು ಸಂಪ್ರದಾಯದ ಚೌಕಟ್ಟಿನಲ್ಲಿ ನಡೆಯುತ್ತಿದೆ. ಅದು ಅಲ್ಲಿನ ಜನರ ತಪ್ಪೆಂದು ನಾನು ಭಾವಿಸುವುದಿಲ್ಲ. ಆದರೆ ಸ್ವಾಮಿಗಳ ವಿಚಾರವನ್ನು ಒಪ್ಪಿರುವ ಸಹಸ್ರಾರು ಜನರು ಮುಂದೆ ಬಂದರೆ ನಿಜವಾಗಲೂ ಸ್ವಾಮಿಗಳ ವಿಚಾರವನ್ನು ಹರಡುವಂತೆ ಮಾಡಿದರೆ ನಿಜವಾದ ಅಧ್ಯಾತ್ಮದ ಕೆಲಸ ಅದಾಗುವುದರಲ್ಲಿ ಸಂಶಯವಿಲ್ಲ. ಸ್ವಾಮಿಗಳದ್ದು ಸ್ವತ: ತಪೋನುಭವ. ಭಾಷೆಯನ್ನೂ ಕಲಿಯದ ಅವರು ತಮಗೆ ತಿಳಿದಿದ್ದ ಹಳ್ಳಿ ಭಾಷೆಯಲ್ಲಿ ಬಹಳ ಮುಗ್ಧವಾಗಿ ಅಧ್ಯಾತ್ಮವನ್ನು ತಿಳಿಸುವ ಶೈಲಿಯಲ್ಲಿ ನಾವೂ ಕೂಡ ಮಗುವಾಗಿಬಿಡುತ್ತೇವೆ. ಸ್ವಾಮಿಗಳು ಓಡಾಡಿದ ಸ್ಥಳಗಳಲ್ಲಿ ಈಗಲೂ ಅರವತ್ತಕ್ಕಿಂತ ಹೆಚ್ಚು ವಯಸ್ಸಾಗಿರುವ ಹಿರಿಯ ಜೀವಿಗಳಿಂದ ಸ್ವಾಮೀಜಿಯವರ ವಿಚಾರದ ಮೇಲೆ ಬೆಳಕು ಚೆಲ್ಲುವ ಸಂಗತಿಗಳನ್ನು ಸಂಗ್ರಹಿಸಲು ಇದುವೇ ಸಕಾಲ. ವರ್ಷ ಕಳೆದಂತೆ ಹಳಬರು ಇಲ್ಲವಾಗುತ್ತಾರೆ. ಇದುವರೆವಿಗೆ ಪ್ರಕಟವಾಗದೆ ಉಳಿದಿರುವ ಹಲವಾರು ಸಂಗತಿಗಳು ಕಾಲಗರ್ಭ ಸೇರಿಹೋಗುತ್ತವೆ.ಈಗ ಆ ದಿಕ್ಕಿನಲ್ಲಿ ಪ್ರಯತ್ನ ಮಾಡುವುದಾದರೆ ಸಮಾನ ಮಾನಸಿಕರ ಜೊತೆ ಪೂರ್ಣವಾಗಿ ಕೈ ಜೋಡಿಸಲು ನಾನಂತೂ ಸಿದ್ಧ.
------------------------------------------------------------------------
ಕೃಷ್ಣಶಾಸ್ತ್ರಿಗಳು ಶಾಲೆಯಲ್ಲಿ ಪಾಠ ಮಾಡ್ತಾ ಇರ್ತಾರೆ.ಇದ್ದಕ್ಕಿದ್ದಂತೆ ಮುಕುಂದೂರು ಸ್ವಾಮಿಗಳು ಶಾಲೆಗೆ ಬಂದುಬಿಡ್ತಾರೆ."ನಾನೂ ಒಂದಿಷ್ಟು ಪಾಠ ಕೇಳ್ತೀನಿ ಮಗಾ!" ಸ್ವಾಮಿಗಳ ಮಾತು ಕೇಳಿದ ಶಾಸ್ತ್ರಿಗಳಿಗೆ ಏನೂ ಹೇಳಲು ತೋಚಲೇ ಇಲ್ಲ. ಕೊನೆಯ ಬೆಂಚ್ ಮೇಲೆ ಸ್ವಾಮಿಗಳು ಕುಳಿತಿದ್ದು ಆಯ್ತು. " ನಿನ್ನ ಪಾಡಿಗೆ ನೀನು ಪಾಠ ಮಾಡು " ಸ್ವಾಮಿಜಿ ಅಪ್ಪಣೆ ಕೊಡಿಸಿದರು. ತೂಗಿ ಹಾಕಿದ್ದ ಭೂಪಟದಲ್ಲಿ ಬಂಗಾಳಕೊಲ್ಲಿ,ಅರಬ್ಬೀ ಸಮುದ್ರ, ಕಲ್ಕತ್ತಾ, ಬೊಂಬಾಯಿ, ಎಲ್ಲಾ ತೋರಿಸಿ ಪಾಠ ಮಾಡಿ ಮುಗಿಸಿದ್ದಾಯ್ತು. ಸ್ವಾಮೀಜಿ ಜೊತೆ ಶಾಸ್ತ್ರಿಗಳು ಹೊರಗೆ ಹೊರಟರು. ಸ್ವಾಮೀಜಿ " ಚೆನ್ನಾಗಿ ಪಾಠ ಮಾಡ್ತೀಯ." ಎಂದಾಗ ಶಾಸ್ತ್ರಿಗಳು" ಚೆನ್ನಾಗಿ ಮಾಡ್ತೀನಾ? ಸ್ವಾಮಿ ಎಂದು ಮತ್ತೆ ಕೇಳಿದರು. " ಹೌದು, ಸಮುದ್ರ ನೋಡಿದ್ದೀಯಾ? ಅಂತ ಮಕ್ಕಳನ್ನು ಯಾರಾದ್ರೂ ಕೇಳಿದ್ರೆ, ಅವರು ಏನ್ ಹೇಳತಾರೆ? ಇಸ್ಕೂಲಲ್ಲಿ ಪಟ ಹಾಕಿದ್ರು ಅದರಲ್ಲಿ ನೋಡಿದ್ದೀನಿ, ನೀವೂ ಪಟ ಹಾಕಿ, ಅದರಲ್ಲಿ ತೋರಿಸ್ತೀನಿ,ಅಂತಾವೆ ಅಲ್ವಾ? "ಅಂಗೇನೆ ಸನ್ಯಾಸೀನ "ದೇವರು ತೋರಿಸಿ" ಅಂದ್ರೆ ಗುಡಿಬಾಗಿಲು ತೆಗಿ" ಅಂತಾನೆ. ಗುಡಿ ವಿಗ್ರಹದಲ್ಲಿ ದೇವರು ಐತಾ? " ಸ್ವಾಮೀಜಿ ಮಾತಿನ ಅಂತರಾಳ ಅರ್ಥಮಾಡಿಕೊಂಡು ಶಾಸ್ತ್ರಿಗಳು ಬೆಪ್ಪಾಗಿ ನಿಲ್ತಾರೆ. ಮುಂದೆ ಸ್ವಲ್ಪ ದೂರದಲ್ಲಿ ಹೆದ್ದಾರಿ ಕಾಣುತ್ತೆ. " ನೋಡು ನಾವೀಗ ಸಣ್ಣ ದಾರಿಯಿಂದ ದೊಡ್ಡ ರಸ್ತೆ ಸೇರ್ತೀವಿ.ದೊಡ್ಡರಸ್ತೆ ಸಿಕ್ಕಿದ ಕೂಡ್ಲೆ ನಮಗೆ ಊರೇ ಸಿಕ್ತು ಅಂತಾ ಹೇಳಕ್ಕಾಯ್ತದ? ಸರಿಯಾಗಿ ಹೋಗಿಲ್ಲಾ ಅಂದ್ರೆ ಊರು ಸಿಕ್ದೆ ಇನ್ನೆಲ್ಲೋ ಹೋಗ್ ಬಹುದು ಅಲ್ವಾ? ಎಚ್ಚರ ಇರ್ಬೇಕಪ್ಪಾ!! ಸ್ವಾಮೀಜಿ ಮಾತು ಎಷ್ಟು ಅರ್ಥ ಗರ್ಬಿತ ಅಲ್ವಾ? ಇದಕ್ಕೆ ವಿವರಣೆ ಬೇಕಾಗಿಲ್ಲಾ, ಅಲ್ವಾ?

-----------------------------------------------------------------
ಮನವಿ: ಆಶ್ರಮಕ್ಕೆ ನಾವು ಹೋದವರು ಆಶ್ರಮದ ಜೊತೆಗೆ ಸುತ್ತ ಮುತ್ತಲಿನ ಕೆಲವರನ್ನು ಅವರಿಂದ ಮಾಹಿತಿ ಪಡೆಯುವ ಸಲುವಾಗಿ ಮಾತನಾಡಿಸಿದ್ದೇವೆ. ಅಂತಹ ವೀಡಿಯೋ ಗಳನ್ನು ಪ್ರಕಟಿಸುತ್ತಾ ಗ್ರಂಥದ ಕೆಲವು ಆಯ್ದ ಭಾಗಗಳನ್ನು ಇನ್ನೂ ಹಲವು ಭಾಗಗಳಲ್ಲಿ ಪ್ರಕಟಿಸಲಿದ್ದೇವೆ.
ಹಿಂದಿನ ಭಾಗಗಳಿಗಾಗಿ ಕೊಂಡಿ:
ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-2
ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-1
ಹಿಂದಿನ ಭಾಗಗಳಿಗಾಗಿ ಕೊಂಡಿ:
ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-2
ಯೇಗ್ ದಾಗೆಲ್ಲಾ ಐತೆ-ಬೆನ್ನು ಹತ್ತಿ ಹೊರಟಾಗ- ಭಾಗ-1
ಇನ್ನೊಮ್ಮೆ ಅರಸಿಕೆರೆಗೆ ಹೋದಾಗ ಖಂಡಿತ ವಿರಕ್ತ ಮಠಕ್ಕೆ ಹೋಗಬೇಕೆಂದೆನಿಸುವ ಹಾಗೆ ಬರೆದಿದ್ದೀರಿ.
ReplyDeleteವಂದನೆಗಳೊಂದಿಗೆ.
ಸ್ವರ್ಣಾ
ಅರಸೀಕೆರೆ ನಿಮ್ಮ ಪರಿಚಿತ ಸ್ಥಳವೇ? ನೀವು ಹೋಗಬೇಕೆನಿಸಿದಾಗ ಹೇಳಿ ನಾವೂ ಜೊತೆಗೂಡುತ್ತೇವೆ.
ReplyDelete