೧. ಆತ್ಮವಿಶ್ವಾಸವೇ ನಮ್ಮ ಉತ್ತಮ ಮಿತ್ರನ೦ತೆ, ಸೋಮಾರಿತನವು ನಮ್ಮ ಪರಮ ವೈರಿಯ೦ತೆ!
೨. ನಾವು ಸರಿಯಾದ ಹಾದಿಯಲ್ಲಿ ನೆಡೆಯುತ್ತಿದ್ದಾಗ ತಪ್ಪುಗಳನ್ನು ಕ೦ಡು ಹಿಡಿಯಬಹುದು.. ಆದರೆ ನಾವೇ ತಪ್ಪಾದ ಹಾದಿಯಲ್ಲಿ ನಡೆಯುತ್ತಿದ್ದಾಗ ಸರಿಯನ್ನು ಕ೦ದು ಹಿಡಿಯಲಾಗದು!
೩. ನಮ್ಮಿ೦ದ ನಮ್ಮ ಭವಿಷ್ಯವನ್ನು ಬದಲಾಯಿಸಲಾಗದು... ಆದರೆ ನಮ್ಮ ಹವ್ಯಾಸಗಳನ್ನು ಬದಲಿಸಬಹುದು.. ಉತ್ತಮ ಹವ್ಯಾಸಗಳು ನಮ್ಮ ಭವಿಷ್ಯವನ್ನು ಬದಲಾಯಿಸುತ್ತವೆ! – ಡಾ|| ಅಬ್ದುಲ್ ಕಲಾಮ್.
೩. ಆತ್ಮೀಯರ ನಡುವೆ ಪ್ರೇಮದ ಅವಸಾನವಾದಲ್ಲಿ ಕೇವಲ “ಔಪಚಾರಿಕ ನಡೆಗಳು“ ಸೃಷ್ಟಿಯಾಗುತ್ತವೆ... ಔಪಚಾರಿಕತೆಯ ಉದ್ಭವವಾದ ಕೂಡಲೇ ಎಲ್ಲವೂ ಮುಗಿಯಿತೆ೦ದು ಅರ್ಥ..! ನೈಜತೆ ತನ್ನ ಅಸ್ತಿತ್ವವನ್ನು ಕಳೆದುಕೊ೦ಡು.. ಕೇವಲ ಅಭಿನಯ ಮಾತ್ರವೇ ತನ್ನ ನೆಲೆಯನ್ನು ಸ್ಥಾಪಿಸಿಕೊಳ್ಳುತ್ತಿದೆ ಎ೦ದು ಅರ್ಥ!!
೪. ಪ್ರತಿಯೊಬ್ಬರೂ ನಮಗಾಗಿ ಏನನ್ನಾದರೂ ಮಾಡಬಹುದು.. ಆದರೆ ಎಲ್ಲವನ್ನೂ ಅವರೇ ಮಾಡಲಾರರು..!! ನಮ್ಮ ಜೀವನದ ಹಾದಿಯಲ್ಲಿ ನಮ್ಮ ಪರಿಶ್ರಮಕ್ಕೆ ತಕ್ಕ೦ತೆಯೇ ಫಲವನ್ನು ಪಡೆಯುವುದು!
೫. ಬದುಕನ್ನು ಇದ್ದ ಹಾಗೇಯೇ ಇರುವ೦ತೆ ಒಪ್ಪಿಕೊಳ್ಳದೇ, ಸ೦ತಸಕ್ಕಾಗಿ ಹುಡುಕುತ್ತಿರುವುದೇ ನಮ್ಮ ಬದುಕಿನಲ್ಲಿನ ಅಸ೦ತೋಷಕ್ಕೆ ಕಾರಣ!
೬. ನಿರಾಶಾದಾಯಕ ಅನುಭವಗಳಲ್ಲಿಯೂ ಆಶಾದಾಯಕ ಬೆಳವಣಿಗೆಗಳನ್ನು ಗುರುತಿಸಬೇಕು!!
೭. ನಮ್ಮ ಸೋಲಿಗಾಗಿ ಯಾರನ್ನೂ ಕಾರಣಕರ್ತರನ್ನಾಗಿಸ ಕೂಡದು.. ಸೋಲಿಗಾಗಿ ಚಿ೦ತನೆ ನಡೆಸಬೇಕು.. ಜಯದ ಹಾದಿಯತ್ತ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು!
೮. ಹೃದಯವೆ೦ಬುದು ಒ೦ದು ಫಲವತ್ತಾದ ಭೂಮಿಯ೦ತೆ.. ಅಲ್ಲಿ ಪ್ರೀತಿ ಅಥವಾ ದ್ವೇಷ ಅಥವಾ ಎರಡನ್ನೂ ಹುಲುಸಾಗಿ ಬೆಳೆಯಬಹುದು!
೯. “ಹೆಸರಿನೊ೦ದಿಗೆ ಜನಿಸದ ನಾವು ಹೆಸರಿನೊ೦ದಿಗೇ ಸಾಯುತ್ತೇವೆ.. ನಮ್ಮ ಹೆಸರು ಕೇವಲ “ಪದ“ವಾಗಿರದೆ ಒ೦ದು ಇತಿಹಾಸವಾಗಿ ಬದಲಾಗಬೇಕು“ -ಚಾಣಕ್ಯ
೧೦. ಸ್ವತ: ಬಾಯಾರಿದಾಗಲೇ ನೀರಿನ ಮೌಲ್ಯದ ಅರಿವಾಗುವುದು.. ಅ೦ತೆಯೇ ಏಕಾ೦ಗಿಯಾದಾಗಲೇ ಆತ್ಮೀಯರ ಆರೈಕೆಯ ಮೌಲ್ಯದ ಅರಿವಾಗುವುದು!
೧೧. ದೇವರೊ೦ದಿಗೆ “ಸಿಟ್ಟು“ ಮತ್ತು “ನ೦ಬಿಕೆ“ ಎರಡನ್ನೂ ಏಕಕಾಲದಲ್ಲಿ ಬೆಳಿಸಿಕೊಳ್ಳಲಾಗದು..!
೧೨. ದೇವರ ಮೇಲಿನ“ಎಲ್ಲವೂ ನೀನೇ“.. “ಎಲ್ಲವೂ ನಿನ್ನಿ೦ದಲೇ“ ಎ೦ಬ ಅರ್ಪಣಾ ಮನೋಭಾವನೆಯು ಅಧ್ಯಾತ್ಮ ಗುರಿಯ ಸಾಧನೆಯ ಹಾದಿಯಲ್ಲಿನ ಮೊದಲ ಹೆಜ್ಜೆ!
೧೩. ಗೆಳೆತನವೆ೦ಬುದು ಒ೦ದು ಕನ್ನಡಿಯಿದ್ದ೦ತೆ!ಅದು ಒಡೆಯದ೦ತೆ ಕಾಪಿಟ್ಟುಕೊಳ್ಳಬೇಕು.
೧೪. ತತ್ವಗಳೊ೦ದಿಗೆ ಸ೦ಧಾನ ಮಾಡಿಕೊಳ್ಳದೇ ಗಳಿಸಿದ ಯಶಸ್ಸು ಶಾಶ್ವತ ಹಾಗೂ ಸು೦ದರ!
೧೫.ಸಾಧಕರು ಸಮಸ್ಯೆಗಳಿ೦ದ ಸೋಲನ್ನು ಅನುಭವಿಸರು! ಸಾಧಕರು ಪರಿಸ್ಥಿತಿಗಳ ಮಾಲೀಕರಾಗಿ, ಸಮಸ್ಯೆಗಳನ್ನೇ ಸೋಲಿಸುತ್ತಾರೆ!!
///// ಆನೋ ಭದ್ರಾಃ ಕ್ರತವೋ ಯಂತು ವಿಶ್ವತಃ ////// ಕೃಣ್ವಂತೋ ವಿಶ್ವಮಾರ್ಯಂ //// //// ಮಾತಾ ಭೂಮಿಃ ಪುತ್ರೋಹಂ ಪೃಥಿವ್ಯಾಃ /////
Monday, May 9, 2011
ಯೋಚಿಸಲೊ೦ದಿಷ್ಟು...೩೩
Sunday, May 8, 2011
|ಶಿಖರಿಶಿರೋಮಣಿತುಂಗಹಿಮಾಲಯ- ಶೃಂಗನಿಜಾಲಯ-ಮಧ್ಯಗತೇ|

|ಶಿಖರಿಶಿರೋಮಣಿತುಂಗಹಿಮಾಲಯ-
ಶೃಂಗನಿಜಾಲಯ-ಮಧ್ಯಗತೇ|
ಶೃಂಗನಿಜಾಲಯ-ಮಧ್ಯಗತೇ|
ಗಂಗಾನದಿಯಲ್ಲಿ ಮಿಂದು ಪುನೀತರಾದ ಭಗವಾನ್ ಶಂಕರರು ಗಂಗಾತಟಕ್ಕೆ ಮೆಟ್ಟಿಲುಗಳನ್ನೇರಿ ಬರುವಾಗ ಅಸ್ಪೃಷ್ಯನೊಬ್ಬ ದಾರಿಗಡ್ಡಲಾಗಿ ಮಲಗಿಬಿಟ್ಟಿದ್ದ. ದಾರಿ ಕೊಡೆಂದು ಕೇಳಲಾಗಿ ದಾಟಿಹೋಗೆಂದು ಶಂಕರರಿಗೆ ಹೇಳಿದ. ಏನೇ ಮಾಡಿದರೂ ಅಗಲವಾದ ಪಾವಟಿಗೆಗಳನ್ನು ಹತ್ತುವಾಗ ಆತನ ಸ್ಪರ್ಷ್ಯವಾಗುವುದು ಅನಿವಾರ್ಯವಾಗಿತ್ತು. ಆತನಲ್ಲಿ ಏನೇ ಹೇಳಿದರೂ ಆತ ಅತಿಯಾದ ಕೋಪವನ್ನು ತೋರುತ್ತಿದ್ದ. ಶಂಕರರೂ ಸ್ವಲ್ಪ ಗದರಿದರು. ’ತೊಲಗಾಚೆ’ ಎಂದರು. ಆ ಕ್ಷಣ ಆತ ಕೇಳಿದ " ನೀನು ತೊಲಗಾಚೆ ಎಂದಿದ್ದು ನನ್ನ ದೇಹಕ್ಕೋ ಅಥವಾ ನನ್ನ ಆತ್ಮಕ್ಕೋ ? ದೇಹಕ್ಕಾದರೆ ನಿನ್ನದೂ ನನ್ನದೂ ಮತ್ತು ಇತರ ಎಲ್ಲಜೀವಿಗಳದೂ ಜಡಶರೀರವಷ್ಟೇ ? ದೇಹದೊಳಗಿನ ಆತ್ಮಕ್ಕಾದರೆ ನನ್ನೊಳಗೂ ನಿನ್ನೊಳಗೂ ಮತ್ತು ಇತರ ಎಲ್ಲಾ ಜೀವಿಗಳೊಳಗೂ ಇರುವ ಆ ಆತ್ಮವೊಂದೇ ಆಗಿದೆ. " ಶಂಕರರು ತಬ್ಬಿಬ್ಬಾಗಿಬಿಟ್ಟರು. ದಿಟ್ಟಿಸಿ ನೋಡುತ್ತಾರೆ ಆತನಲ್ಲಿ ಸಾಕ್ಷಾತ್ ವಿಶ್ವನಾಥನ ರೂಪ ಗೋಚರಿಸುತ್ತದೆ. ಮಹಾದೇವನೇ ತನ್ನನ್ನು ಪರೀಕ್ಷಿಸಲು ಬಂದಿದ್ದನ್ನು ನೋಡಿದ ಶಂಕರರ ಬಾಯಿಂದ ’ಮನೀಷಾ ಪಂಚಕಮ್’ ಹೊರಡಲ್ಪಟ್ಟಿತು!
ಅಂದಿನ ಗೊಂಡಾರಣ್ಯಗಳಲ್ಲಿ ಕಾಲುದಾರಿಯೂ ಇಲ್ಲದ ಜಾಗಗಳಲ್ಲಿ ತಾವೇ ದಾರಿಯನ್ನು ಕಲ್ಪಿಸಿಕೊಂಡು ಶಂಕರರು ಓಡಾಡುತ್ತಿದ್ದರು. ಮಾರ್ಗಮಧ್ಯೆ ಅವರಿಗೆ ಹಲವು ಅಡೆತಡೆಗಳು ಕಾಣಿಸುತ್ತಿದ್ದವು. ಹೇಳಿಕೇಳಿ ಎಳೆಯ ವಟುವಾಗಿದ್ದ ಅವರ ಜೊತೆಗೆ ಆರಂಭದ ದಿನಗಳಲ್ಲಿ ಸಂಚರಿಸಲು ಯಾರೂ ಇದ್ದಿರಲಿಲ್ಲವೆನಿಸುತ್ತದೆ. ಈ ಸೃಷ್ಟಿಯ ಹಲವು ಅಶರೀರ ರೂಪಗಳು ತಮ್ಮ ಮುಕ್ತಿಗಾಗಿ ಶಂಕರರನ್ನು ಅಡರಿಕೊಳ್ಳುತ್ತಿದ್ದವು. ಪಿಶಾಚಿಗಳು, ದೆವ್ವ-ಭೂತಗಳು, ಬ್ರಹ್ಮರಾಕ್ಷಸಾದಿಗಳು ಮಾರ್ಗದಲ್ಲಿ ಸದಾ ಇರುತ್ತಲೇ ಇದ್ದವು. ಇಂದೂ ಕೂಡ ಅವು ಇರುತ್ತವಾದರೂ ನಮಗೆ ಅವುಗಳ ಗೋಚರಿಸುವಿಕೆ ನೇರವಾಗಿ ಕಾಣದೇ ಪರೋಕ್ಷವಾಗಿ ಕಾಣಿಸುತ್ತದೆ. ಉದಾಹರಣೆಗೆ ಎಲ್ಲವೂ ಸರಿಯಾಗಿದ್ದ ವಾಹನ ಬ್ರೇಕ್ ಫೇಲಾಗುವುದು, ಇದ್ದಕ್ಕಿದ್ದಂತೇ ಯಾವುದೋ ಪ್ರಾಣಿ ಅಡ್ಡಬಂದು ಆಮೇಲೆ ನಾಪತ್ತೆಯಾಗುವುದು, ಚಲಿಸುತ್ತಿರುವ ವಾಹನದಲ್ಲಿ ಭಾರಜಾಸ್ತಿ ಎನಿಸಿ ಅಲ್ಲಾಡಿದಂತಾಗುವುದು, ವಾಹನ ಎಷ್ಟೇ ವೇಗದಲ್ಲಿ ಚಲಿಸಿದರೂ ದಾರಿಸಾಗದೇ ಉಳಿಯುವುದು, ವಾಹನದ ವೇಗ ಮಿತಿಮೀರಿದಂತೆನಿಸಿವುದು ---ಇವೆಲ್ಲಕ್ಕೂ ಕೆಲವೊಮ್ಮೆ ಸ್ಥಾನಿಕ ಅಶರೀರಿಗಳ ಆಕ್ರಮಣ ಅಥವಾ ಉಪದ್ರವ ಕಾರಣವಾಗುತ್ತದೆ. ದಿವ್ಯಶಕ್ತಿಯುಳ್ಳ ಶಂಕರರು ಅವುಗಳಿಗೆಲ್ಲಾ ಉತ್ತರಿಸುತ್ತಿದ್ದರು, ಕಾಲಾನಂತರದಲ್ಲಿ ಮಾರ್ಗಗಳಲ್ಲಿ ಚಲಿಸುವ ಜನರಿಗೆ ಉಪಯುಕ್ತವಾಗಲಿ ಎಂಬ ಕಾರಣಕ್ಕೆ ’ಮಾರ್ಗ ಬಂಧು ಸ್ತೋತ್ರ’ ವನ್ನು ರಚಿಸಿದರು. ಈ ಮಾರ್ಗಬಂಧು ಸ್ತೋತ್ರದ ವೈಶಿಷ್ಟ್ಯವೆಂದರೆ ಇಹದಲ್ಲಿ ಚಲಿಸುವವರಿಗೂ, ಧ್ಯಾನಮಾರ್ಗದಲ್ಲಿ ಪರಾಶಕ್ತಿಯ ಗೋಚರವನ್ನು ಬಯಸಿ ಚಲಿಸುವವರಿಗೂ ಇದು ಉಪಯುಕ್ತವಾಗಿದೆ. ಧ್ಯಾನಕ್ಕೆ ಕುಳಿತಾಗಲೂ ಕೂಡ ಮನಸ್ಸನ್ನು ಕೇಂದ್ರೀಕೃತಗೊಳಿಸಲು ಅಡ್ಡಿಪಡಿಸುವ ಹಲವು ಭಾವತರಂಗಗಳು ಬರುತ್ತವೆ. ಅವುಗಳೆಲ್ಲದರಿಂದ ಮುಕ್ತಿ ಸಿಗಬೇಕಾದರೆ ಶಂಕರರ ’ಮಾರ್ಗ ಬಂಧು ಸ್ತೋತ್ರ’ ವನ್ನು ಪಠಿಸಿದರೆ ಉತ್ತಮ.
ಆದಿ ಶಂಕರರು ಮಾತೆಯ ಬಗ್ಗೆ ಬಹಳ ಕಾಳಜಿ ಉಳ್ಳವರಾಗಿದ್ದರು. ಏಕಮಾತ್ರ ಸಂತಾನವಾದ ಅವರು ಸನ್ಯಾಸಿಯಾಗುತ್ತೇನೆಂದು ಹೊರಟಾಗ ಅವರ ತಾಯಿ ಬಹಳ ಪ್ರಯಾಸದಿಂದ ಒಪ್ಪಿಕೊಳ್ಳಬೇಕಾಯಿತು. ಇದ್ದೊಬ್ಬ ಮಗ ಸನ್ಯಾಸಿಯಾಗಿಬಿಟ್ಟರೆ ಸಂಸಾರಿಯಾದ ತನ್ನನ್ನು ನೋಡಿಕೊಳ್ಳುವವರಾರು?. ಆದರೂ ಆ ಮಹಾತಾಯಿ ತನ್ನ ಸ್ವಾರ್ಥವನ್ನು ಮರೆತು ಜಗದ ಜನತೆಗೆ ಉಪಕಾರವಾಗಲಿ ಎಂಬ ದೃಷ್ಟಿಯಿಂದ ಮಗನನ್ನು ಹರಸಿ ಬೀಳ್ಕೊಟ್ಟರು, ಹೊರಡುವಾಗ ಮಗ ಹೇಳಿದ " ಅಮ್ಮಾ ನಿನ್ನ ಕೊನೆಗಾಲದಲ್ಲಿ ಎಲ್ಲಿದ್ದರೂ ನಾನು ಬಂದು ತಲುಪುತ್ತೇನೆ. " ಹೊರಟ ಶಂಕರರು ದೇಶಾಂತರ ಹಲವು ಪ್ರದೇಶಗಳಲ್ಲಿ ಸಂಚರಿಸಿದರು. ಹೀಗಿರುವಾಗ ಒಮ್ಮೆ ಅವರಿಗೆ ತಾಯಿಯ ಅಂತ್ಯ ಸಮೀಪಿಸಿದ ದೃಷ್ಟಾಂತವಾಯಿತು. ಆ ಕೂಡಲೇ ಹೊರಟುನಿಂತ ಅವರು ಪೂರ್ವಾಶ್ರಮದ ಕಾಲಟಿಯ ಮನೆಗೆ ಓಡೋಡಿ ಹೋದರು. ಶಂಕರರ ಅಮ್ಮ ಕೊನೆಯ ಘಟ್ಟದಲ್ಲಿದ್ದರು. ಮಗ ಬಂದುದನ್ನು ಗ್ರಹಿಸುತ್ತಲೇ ಇಹವನ್ನು ತೊರೆದರು. ತೊಡೆಯಮೇಲೆ ತಲೆಇಟ್ಟು ಇಹವನ್ನು ತ್ಯಜಿಸಿದ ಅಮ್ಮನ ಅಂತ್ಯಕ್ರಿಯೆಗೆ ವ್ಯವಸ್ಥೆಮಾಡಬೇಕಾಗಿತ್ತು. ಸನ್ಯಾಸಿಯಾದವನು ಇಹದ ಬಂಧನವನ್ನು ಕಳಚಿಕೊಳ್ಳುವುದರಿಂದ ಅಮ್ಮನ ಉತ್ತರಕ್ರಿಯೆಗಳನ್ನು ಅವರು ಮಾಡುವಂತಿರಲಿಲ್ಲ. ಆದರೆ ಶಂಕರರು ಅಮ್ಮನಿಗೆ ವಚನವಿತ್ತಿದ್ದರು! ಬಹುಶಃ ಧರ್ಮಸಂಕಟವೆಂದರೇ ಇದು! ಸನ್ಯಾಸಿ ಶಂಕರರು ತಾನೇ ಅಮ್ಮನ ಅಂತ್ಯಕ್ರಿಯೆಯನ್ನು ಪೂರೈಸಲು ನಿಂತರು. ಅಕ್ಕ-ಪಕ್ಕದ ಬ್ರಾಹ್ಮಣರಾದಿಯಾಗಿ ಯಾರೇ ಆಗಲಿ ಅವರ ಸಹಾಯಕ್ಕೆ ಬರಲಿಲ್ಲ-ಏಕೆಂದರೆ ಸನ್ಯಾಸಿ ಉತ್ತರಕ್ರಿಯೆಯನ್ನು ಮಾಡುತ್ತಾನೆ ಎಂಬ ಕಾರಣಕ್ಕಾಗಿ. ಆದರೂ ಶಂಕರರು ಧೃತಿಗೆಡಲಿಲ್ಲ. ಅಲ್ಲಿಲ್ಲಿ ಅಲೆದು ಒಂದಷ್ಟು ಸೌದೆ ಒಟ್ಟುಗೂಡಿಸಿದರು, ಚಿತೆಯನ್ನು ಮನೆಯ ಮಗ್ಗುಲಲ್ಲೇ ನಿರ್ಮಿಸಿದರು. ಗತಿಸಿದ ಅಮ್ಮನ ಶರೀರವನ್ನು ಚಿತೆಯಮೇಲಿಟ್ಟು ದಹಿಸಿದರು. ಅಮ್ಮನ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಿದರು. [ಈ ನೆನಪಿನಲ್ಲಿ ಕೇರಳದಲ್ಲಿ ಇವತ್ತಿಗೂ ಹಲವೆಡೆ ಸತ್ತವ್ಯಕ್ತಿಗಳನ್ನು ಮನೆಗಳ ಮಗ್ಗುಲಲ್ಲೇ ಸುಡುವುದು ವಾಡಿಕೆ.]
ಸನ್ಯಾಸಿಗಳಿಗೆ ಜನ್ಮಕೊಟ್ಟ ಅಪ್ಪನೂ ನಮಸ್ಕರಿಸಬಹುದು. ಆದರೆ ತಾಯಿಯಿಂದ ಮಾತ್ರ ಅವರು ನಮಸ್ಕಾರವನ್ನು ಸ್ವೀಕರಿಸುವುದಿಲ್ಲ! ತಾಯ ಋಣ ಅಂಥದು. ಒಂಬತ್ತು ತಿಂಗಳು ಹೊತ್ತು-ಹೆತ್ತು ಸಲಹುವ ಮಮತಾಮಯಿ ತಾಯಿ ಎಂದೂ ತನ್ನ ಮಗುವಿಗೆ ಕೆಟ್ಟದ್ದನ್ನು ಬಯಸುವುದಿಲ್ಲ. ಗಾದೆಯೊಂದು ಹೀಗಿದೆ ’ತಾಯಿ ಮಗನ ಹೊಟ್ಟೆಯನ್ನು ನೋಡುತ್ತಾಳೆ ಹೆಂಡತಿ ಗಂಡನ ಜೇಬು ನೋಡುತ್ತಾಳೆ’ ಇದರರ್ಥ : ದುಡಿದು ಮರಳಿದ ಮಗನ ಹೊಟ್ಟೆ ಯಾವ ರೀತಿ ಹಸಿದು ಪರಿತಪಿಸಿತ್ತಿರಬಹುದು ಎಂಬುದು ತಾಯಿಯ ಚಿಂತೆ ಆದರೆ ಇಂದಿನ ದುಡಿಮೆ ಎಷ್ಟಾಗಿರಭುದು ಎಂಬುದು ಹೆಂಡತಿಯ ಚಿಂತೆ! ತನ್ನ ಊಟಕ್ಕೂ ಮೊದಲು ಮಗನ/ಮಕ್ಕಳ ಊಟವಾಯಿತೇ ಎಂಬುದನ್ನು ತಾಯಿ ಖಾತ್ರಿಪಡಿಸಿಕೊಳ್ಳುತ್ತಾಳೆ. ಒಮ್ಮೆ ತನಗಿರದಿದ್ದರೂ ಮಕ್ಕಳಿಗೆ ಏನನ್ನಾದರೂ ಒದಗಿಸಲು ಪ್ರಯತ್ನಿಸುವ ಆ ತಾಯ ತಾಯ್ತನದ ಜವಾಬ್ದಾರಿ, ಕಳಕಳಿ ಕೇವಲ ಬಾಯಿಂದ ಹೇಳಿ ತೀರಿಸಲಾಗುವ ಋಣವದಲ್ಲ. ತನ್ನ ತಾಯಿಯಲ್ಲೂ ಜಗನ್ಮಾತೆಯನ್ನೇ ಕಂಡ ಶಂಕರರು ’ ದೇವ್ಯಪರಾಧ ಕ್ಷಮಾಪಣ ಸ್ತೋತ್ರ’ವನ್ನು ರಚಿಸಿದರು. ಅದರಲ್ಲಿ ಹಲವು ಸರ್ತಿ ಹೇಳಿದರು--" ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ " [ಒಬ್ಬ ಕೆಟ್ಟ ಮಗುವಿರಬಹುದೇ ಹೊರತು ಕೆಟ್ಟ ತಾಯಿ ಇರಲಾರಳು]
ಆಶುಕವಿತ್ವದ ಆಚಾರ್ಯ ಶಂಕರರು ಹೋದಲ್ಲೆಲ್ಲಾ ಹಲವು ಕೃತಿಗಳನ್ನು ಸರಳ ಸಂಸ್ಕೃತದಲ್ಲಿ ರಚಿಸಿದರು. ಮನೋಹರವಾದ ಶಬ್ದಲಾಲಿತ್ಯದಿಂದ ಕೂಡಿದ ಸ್ತೋತ್ರಗಳು, ಶ್ಲೋಕಗಳು ಎಷ್ಟೇ ಸರ್ತಿ ಉಚ್ಚರಿಸಿದರೂ ಮತ್ತೆಮತ್ತೆ ತಿನ್ನಬೇಕೆನಿಸುವ [ಉಲಿಯಬೇಕೆನಿಸುವ] ಹಪಹಪಿಕೆಯನ್ನೂ ಮನಶ್ಯಾಂತಿಯನ್ನೂ ಕರುಣಿಸುವ ರಸಪೂರಿತ ಹಣ್ಣುಗಳು! ಆಸೇತು ಹಿಮಾಲಯ ಪರ್ಯಂತ ಹಲವಾರು ಬಾರಿ ತಿರುಗಾಡಿದ ಶಂಕರರು ಇಡೀ ಅಖಂಡ ಭರತಖಂಡವನ್ನೂ [ಅಪಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸಹಿತದ ಭಾರತ] ಒಮ್ಮೆ ಮಾತೆಯಾಗಿಯೂ ಇನ್ನೊಮ್ಮೆ ಪಿತೃವಾಗಿಯೂ ಕಂಡು ಸ್ತೋತ್ರಗಳನ್ನು ಅನುಗ್ರಹಿಸಿದರು. ಜಗತ್ತೇ ಅರ್ಧನಾರೀಶ್ವರ ಶಕ್ತಿಯ ಪ್ರತೀಕವೆಂಬುದು ಅವರ ಅಭಿಮತವಾಗಿತ್ತು.
ಅಯಿ ಜಗದಂಬ ಮದಂಬ ಕದಂಬ-
ವನಪ್ರಿಯವಾಸಿನಿ ಹಾಸರತೇ |
ಶಿಖರಿಶಿರೋಮಣಿತುಂಗಹಿಮಾಲಯ-
ಶೃಂಗನಿಜಾಲಯ-ಮಧ್ಯಗತೇ|
ಮಧುಮಧುರೇ ಮಧುಕೈಟಭಭಂಜಿನಿ
ಕೈಟಭಭಂಜಿನಿ ರಾಸರತೇ |
ಜಯ ಜಯ ಹೇ ಮಹಿಷಾಸುರಮರ್ದಿನಿ
ರಮ್ಯಕಪರ್ದಿನಿ ಶೈಲಸುತೇ ||
ಹಿಮಾಲಯಗಳೂ ಗಿರಿಶಿಖರಗಳೂ ಕದಂಬವನಗಳೂ ಶೃಂಗನಿಜಾಲಯಗಳೂ ಎಲ್ಲೆಲ್ಲೂ ದೇವಿಯ, ಜಗನ್ಮಾತೃಕೆಯ ರೂಪವನ್ನು ಕಂಡ, ಆ ದಿವ್ಯರೂಪದ ಮನಸಾ ಉಂಡ ಮಹಾಮಹೋಪಾಧ್ಯಾಯ ಶಂಕರರು ಮುಂದಿನ ಪೀಳಿಗೆಗೆ ತಾನು ಕಂಡ ಸೌಂದರ್ಯವನ್ನು ಸ್ತೋತ್ರಗಳಲ್ಲಿ ಕಟ್ಟಿಕೊಟ್ಟರು.
ಹಿಂದೊಮ್ಮೆ ತಮಿಳುನಾಡಿನ ಮಧುರೆಯಲ್ಲಿ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನದಲ್ಲಿ ನೆಲೆಸಿರುವ ಮೀನಾಕ್ಷಿ ಅಮ್ಮನವರು ಕಾರಣಾಂತರಗಳಿಂದ ಕ್ರೋಧಗೊಂಡು ರಾತ್ರಿಯಹೊತ್ತು ಕಾಳಿಯಾಗಿ ಸಂಚರಿಸುತ್ತ ಆಲಯವನ್ನು ಪ್ರವೇಶಿಸುವ ಜನರನ್ನೂ ಪ್ರಾಣಿಗಳನ್ನೂ ನುಂಗುತ್ತಾ ತಿರುಗುತ್ತಿದ್ದಳಂತೆ. ಹಲವಾರು ಬಲಿಗಳನ್ನು ತೆಗೆದುಕೊಳ್ಳುತ್ತಿದ್ದ ಮಹಾಕಾಳಿಯ ಆ ರೂಪವನ್ನು ನೆನೆಯುತ್ತಾ ಹಗಲಿನಲ್ಲೂ ಅರ್ಚಕರು ದೇವಸ್ಥಾನಕ್ಕೆ ಹೋಗುವುದಕ್ಕೆ ಹೆದರತೊಡಗಿದರು! ತೀರ್ಥಯಾತ್ರೆಮಾಡುತ್ತಾ ಬಂದ ಶಂಕರರು ಯಾರ ಮಾತನ್ನೂ ಕೇರ್‍ಳದೇ ರಾತ್ರಿಹೊತ್ತು ಅಲ್ಲೇ ತಂಗಿದರು. ಆ ರಾತ್ರಿ ಅಮ್ಮ ಮೀನಾಕ್ಷಿ ಕಾಳಿಯಾಗಿ ಭಯಂಕರವಾಗಿ ಘರ್ಜಿಸುತ್ತಾ ಏಕಾಏಕಿಯಾಗಿ ಕುಳಿತ ಶಂಕರರೆಡೆಗೆ ಬಂದು ತಿನ್ನುವುದಾಗಿ ಹೆದರಿಸಿದಳು. ಶಂಕರರು ಹೇಳಿಕೇಳಿ ೧೬-೧೭ರ ಹರೆಯದ ಬಾಲಕ! ಪುಕ್ಕಲನಾಗಿದ್ದರೆ ಓಡಿಹೋಗಬೇಕಾಗಿತ್ತು. ಆದರೆ ಶಂಕರರ ವಿಷಯದಲ್ಲಿ ಹಾಗಿರಲಿಲ್ಲ, ಅಮ್ಮನ ರೂಪವನ್ನೇ ಬದಲಿಸಲು ಅವರು ಅಲ್ಲುಳಿದಿದ್ದರು! ಮೀನಾಕ್ಷಿಯನ್ನು ಕಂಡು ನಕ್ಕುಬಿಟ್ಟರು! ಭಯಂಕರಳಾದ ತನ್ನನ್ನು ನೋಡಿ ನಗುತ್ತಿರುವ ಹುಡುಗನನ್ನು ಕಂಡು ಅಮ್ಮನಿಗೂ ಆಶ್ಚರ್ಯವಾಯಿತು. " ಜಗತ್ತಿಗೇ ಅಮ್ಮನಾದ ನೀನು ಮಕ್ಕಳನ್ನೆಲ್ಲಾ ಹೀಗೆ ಹೆದರಿಸುವುದೇ ? " ಎಂಬ ಶಂಕರರ ಪ್ರಶ್ನೆಗೆ ಅಮ್ಮನಲ್ಲಿ ಉತ್ತರವಿರಲಿಲ್ಲ. ಅಮ್ಮನ ಆವೇಶ ನಿಧಾನಾವಾಗಿ ಇಳಿಯುತ್ತಾ ಸಾಗಿತು. ಶಂಕರರಲ್ಲಿ ಸುಂದರೇಶ್ವರನ ರೂಪ ಆಕೆಗೆ ಮನದಟ್ಟಾಯಿತು. ಆದರೂ ಆಕೆ ಪಣವೊಂದನ್ನೊಡ್ಡಿ ಅದನ್ನು ಗೆಲ್ಲುವಂತೇ ಆಜ್ಞಾಪಿಸಿದಳು. ಅದರಂತೇ ಆ ರಾತ್ರಿ ಆ ಪಣವನ್ನು ಗೆಲ್ಲುವ ಸಲುವಾಗಿ ಶಂಕರರು ಚಕ್ರಬಂಧವೊಂದನ್ನು ರಚಿಸುತ್ತಾ ಶ್ಲೋಕದಲ್ಲಿ ಅವುಗಳನ್ನು ವಿವರಿಸುತ್ತಾ ಕುಳಿತರು. ಬೆಳಗಾಗುವಷ್ಟರಲ್ಲಿ ದೇವಿಗೆ ಸೌಮ್ಯಕಳೆ ಬಂದಿತ್ತು. ಶಂಕರರನ್ನು ಪ್ರೀತಿಯಿಂದ ಮೈದಡವಿ ವಿಗ್ರಹದಲ್ಲಿ ಐಕ್ಯವಾದವಳು ಮುಂದೆಂದೂ ಮತ್ತೆ ಕಾಳಿಯ ಉಗ್ರಸ್ವರೂಪವನ್ನು ಧರಿಸಲಿಲ್ಲ. ಅಂದಿನದಿನ ರಚಯಿತವಾದ ಆ ಚಕ್ರಬಂಧವೇ ಶ್ರೀಚಕ್ರವೆಂದು ಪ್ರಸಿದ್ಧಿಪಡೆಯಿತು! ಅದರ ಆರಾಧನೆಗೆ ಸೌಂದರ್ಯಲಹರೀ ಮತ್ತು ಲಲಿತಾ ಸಹಸ್ರನಾಮಗಳು ಶಂಕರರಿಂದ ಕೊಡಲ್ಪಟ್ಟವು. ಇಂದಿಗೂ ಆ ಚಕ್ರವನ್ನು ಗೃಹ ಗೋಷ್ಠಗಳಾದಿಯಾಗಿ ಹಲವೆಡೆ ಧನಾಕರ್ಷಕ ಯಂತ್ರವೆಂದು ಇಟ್ಟು ಪೂಜಿಸುವುದನ್ನು ನೋಡಬಹುದು. ಇದೇ ಶ್ರೀಚಕ್ರವನ್ನು ಶಂಕರರು ಆಮೇಲೆ ಹಲವೆಡೆಗಳಲ್ಲಿ ಶಿಲೆಗಳಮೇಲೆ ಕೊರೆದು ಪ್ರತಿಷ್ಠಾಪಿಸಿದರು. ಪ್ರಮುಖವಾಗಿ ತಿರುಪತಿ, ಶೃಂಗೇರಿ ಮುಂತಾದೆಡೆಗಳಲ್ಲಿ ಅವುಗಳನ್ನು ವಿಗ್ರಹಗಳೆಡೆಯಲ್ಲೇ ಬರೆದರು.
ಸನಾತನ ಧರ್ಮ ತನ್ನ ಮೂಲಧ್ಯೇಯಗಳನ್ನು ಕಳೆದುಕೊಂಡು ಕ್ರಮೇಣ ಹಿಂಸಾತ್ಮಕವಾಗಿ ಪರಿವರ್ತವಾಗುತ್ತಿರುವ ಸನ್ನಿವೇಶದಲ್ಲಿ ಪರಶಿವನ ನೇರ ಅವತಾರವಾಗಿ ಶಂಕರನಾಗಿ ಕೇರಳದ ಕಾಲಟಿಯಲ್ಲಿ ಆರ್ಯಾಂಬೆ ಹಾಗೂ ಶಿವಗುರು ಎಂಬ ದಂಪತಿಯ ಮಗುವಾಗಿ ಜನಿಸಿ ಕೇವಲ ೩೨ ವರ್ಷಗಳಕಾಲ ಭೌತಿಕ ಕಾಯದಿಂದ ಜೀವಿಸಿದ್ದ ಶ್ರೀ ಶಂಕರರು ಹಿಮಾಲಯದ ಕೇದಾರನಾಥದಲ್ಲಿ ಶಿಖರಗಾಮಿಯಾಗಿ ನಡೆದು ಅದೃಷ್ಯರಾದರು, ಪ್ರಕೃತಿಯಲ್ಲಿ ಭೌತಿಕವಾಗಿ ಕಾಣದಾದರು. ಆದರೂ ಇಂದಿಗೂ ಅನೇಕ ನಾಸ್ತಿಕ ಜನರಿಗೆ ಅವರ ಪ್ರೌಢಿಮೆಯನ್ನೂ ಪಾಂಡಿತ್ಯವನ್ನೂ, ಎಳವೆಯ ಅನನ್ಯ ಸಾಧನೆಯನ್ನೂ ಅಲ್ಲಗಳೆಯಲಾಗುವುದಿಲ್ಲ. ತತ್ವವೊಂದು ಹೀಗಿದೆ-- ಮೌಂಟ್ ಎವರೆಷ್ಟ್ ಏರಿದವರಿಗೆ ಮಾತ್ರ ಅಲ್ಲಿಂದ ಭೂಮಂಡಲ ಯಾವರೀತಿ ಕಾಣುತ್ತದೆ ಎಂಬುದು ತಿಳಿಯುತ್ತದೆ ಹೇಗೋ ಹಾಗೇ ಅವರವರ ದೃಷ್ಟಿಕೋನದಂತೇ ಮುಂದೆ ಹಲವಾರು ಪಂಥಗಳೂ ಭಕ್ತಿಪಂಥಗಳೂ ಹುಟ್ಟಿಕೊಂಡರೂ ಯಾವುದೇ ಕೊರತೆಯನ್ನಾಗಲೀ ಸಂಶಯವನ್ನಾಗಲೀ ಇಡದೇ ಹಲವು ಜ್ವಲಂತ ಸಾಕ್ಷಿಗಳೊಂದಿಗೆ ಸದಾ ಅ-ದ್ವೈತ ಎಂದು ಸಾರುವ ಪ್ರಕೃತಿಧರ್ಮವನ್ನು ಗಮನಿಸಿದರೆ ಶಂಕರರು ಪ್ರಕೃತಿಯ ಸಹಜ ಧರ್ಮವನ್ನೇ ನಮಗೆ ತಿಳಿಸಿದ್ದಾರೆ ಎಂಬುದು ಗೋಚರವಾಗುತ್ತದೆ. ಕೇವಲ ೩೨ ವಯಸ್ಸೇ ಆಗಿದ್ದರೂ ಹಲವರಿಗೆ ಶಂಕರರು ಮಾತಾ-ಪಿತೃ ಸ್ವರೂಪಿಯಾಗಿ ಕಂಡಿದ್ದಾರೆ; ಕಾಣುತ್ತಾರೆ. ಶಂಕರರಿಗೂ ಮತ್ತು ಅವರಲ್ಲಿರುವ ಮಾತೆಯರೂಪಕ್ಕೂ ನಮಿಸಿದರೆ ಜನ್ಮದಿನವಾದ ಇಂದು ಅವರನ್ನು ನೆನೆದಿದ್ದೂ ಆಗುತ್ತದೆ ಮತ್ತು ಮಾತೆಯರ ದಿನವಾದ ಇಂದು ಅವರನ್ನೂ ಸ್ಮರಿಸಿದ ಹಾಗಾಗುತ್ತದೆ ಎಂಬಕಾರಣದಿಂದ ಹೀಗೆ ನಿಮ್ಮೊಂದಿಗೆ ವಿಷಯ ಪ್ರಸ್ತಾಪಿಸಿದೆ.
ಪದಕಮಲಂ ಕರುಣಾನಿಲಯೇ
ವರಿವಸ್ಯತಿ ಯೋನುದಿನಂ ಸ ಶಿವೇ |
ಅಯಿ ಕಮಲೇ ಕಮಲಾನಿಲಯೇ
ಕಮಲಾನಿಲಯಃ ಸ ಕಥಂ ನ ಭವೇತ್ |
ತವ ಪದಮೇವ ಪರಂಪದಮಿತ್ಯನು-
ಶೀಲಯತೋ ಮಮ ಕಿಂ ನ ಶಿವೇ |

|| ಸಮಸ್ತ ಸನ್ಮಂಗಳಾನೀ ಭವಂತು ||
Saturday, May 7, 2011
ಕನ್ನಡ ಸ್ಲೇಟ್
ಮಿತ್ರರಾದ ವಿಕಾಸ್ ಹೆಗ್ಗಡೆಯವರು ತಮ್ಮ ವಿಕಾಸವಾದ ಬ್ಲಾಗ್ ನಲ್ಲಿ ಕನ್ನಡ ಸ್ಲೇಟ್ ಪ್ರಕಟಿಸಿದ್ದಾರೆ. ವೇದಸುಧೆಯ ಬ್ಲಾಗ್ ನ ಕೆಳತುದಿಯಲ್ಲಿ ಸ್ಲೇಟ್ ಇದೆ. ಕನ್ನಡದಲ್ಲಿ ಇಲ್ಲಿ ಬರೆಯಿರಿ. ಕಾಪಿ ಮಾಡಿಕೊಳ್ಳಿ, ಎಲ್ಲಿಗೆ ಬೇಕೋ ಅಲ್ಲಿಗೆ ಪೇಸ್ಟ್ ಮಾಡಿ. ನಂತರ ಒರೆಸಿ.
ವಾರ್ಷಿಕೋತ್ಸವ ಉಪನ್ಯಾಸಗಳ ಕ್ಲಿಪ್
ವೇದಸುಧೆಯ ಆತ್ಮೀಯ ಅಭಿಮಾನೀ ಬಂಧುಗಳೇ,
ವೇದಸುಧೆಯ ವಾರ್ಷಿಕೋತ್ಸವವವು ಮುಗಿದು ಮೂರ್ನಾಲ್ಕು ತಿಂಗಳಾಗಿದ್ದರೂ ಅದರ ನೆನಪು ಮಾಸಿಲ್ಲ. ಅನೇಕರು ಅಂದಿನ ವಿಚಾರಸಂಕಿರಣದ ಉಪನ್ಯಾಸಗಳನ್ನು ಕೇಳಬೇಕೆಂದು ಅಪೇಕ್ಷೆಪಟ್ಟು ದೂರವಾಣಿ ಕರೆಯನ್ನು ಮಾಡುತ್ತಿದ್ದಾರೆ.ಅವರ ಅಭಿಮಾನಕ್ಕೆ ವೇದಸುಧೆಯು ಸ್ಪಂಧಿಸುತ್ತಾ ಇಂದಿನಿಂದ ಕೆಲವು ಉಪನ್ಯಾಸಗಳ ಕ್ಲಿಪ್ ಗಳನ್ನು ಪ್ರಕಟಿಸುತ್ತಿದೆ.ಮೊದಲನೆಯ ಕಂತು ಶ್ರೀ ದಕ್ಷಿಣಾಮೂರ್ತಿಯವರ ವಿಚಾರ ಮಂಡನೆ. ಕೇಳಿ ನಿಮ್ಮ ಅಭಿಪ್ರಾಯ ತಿಳಿಸಿ.
Saturday, April 30, 2011
ಆತ್ಮೀಯ ವೇದಸುಧೆಯ ಅಭಿಮಾನಿಗಳೇ,
ನಮಸ್ತೆ. ಇತ್ತೀಚೆಗೆ ಪುಟ್ಟಬರ್ತಿಸಾಯಿಬಾಬ ಅವರು ಇಹಲೋಕವನ್ನು ತ್ಯಜಿಸಿದ್ದಾರೆ. ಅವರ ಬಗ್ಗೆ ಲಕ್ಷಾಂತರ ಭಕ್ತರು ತಮ್ಮ ತೀವ್ರ ಶೋಕವನ್ನು ವ್ಯಕ್ತಪಡಿಸಿದ್ದಾರೆ.ಸಾಯಿಬಾಬಾ ಅವರು ಆಂದ್ರದಲ್ಲಿ ಒಂದು ಜಿಲ್ಲೆಗೆ ನೀರುಣಿಸುವ ಹಾಗೂ ಉತ್ತಮವಾದ ಆಸ್ಪತ್ರೆಯನ್ನು ತೆರೆದು ಜನರ ಸೇವೆ ಮಾಡಿದ್ದಾರೆಂಬ ಬಗ್ಗೆ ಅವರ ಬಗ್ಗೆ ಮೆಚ್ಚುಗೆ ಇದೆ. ವೇದಸುಧೆಯಲ್ಲಿ ಬಳಗದ ಹಿರಿಯ ಸದಸ್ಯರಾದ ಶ್ರೀ ವಿ.ಆರ್.ಭಟ್ಟರು ಒಂದು ಉತ್ತಮವಾದ ಲೇಖನವನ್ನು ಬರೆದು ಅದರಲ್ಲಿ ಆರೋಗ್ಯಕರ ಚರ್ಚೆ ನಡೆದು ಶ್ರೀ ಕವಿನಾಗರಾಜ್, ಶ್ರೀಸುಧಾಕರಶರ್ಮರು, ಕವಿ ಸುರೇಶ್ ಇವರುಗಳು ಪಾಲ್ಗೊಂಡು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುತ್ತಾರೆ.ಯಾವಾಗ ಒಂದು ಲೇಖನವು ಹಲವು ಜನರ ಚರ್ಚೆಗೆ ಕಾರಣವಾಗುತ್ತದೋ ಅದು ಸಾರ್ಥಕವಾಯಿತೆಂದೇ ಅದರ ಅರ್ಥ. ಸತ್ಯವೆಂಬುದು ಯಾರೂ ಬದಲಾವಣೆ ಮಾಡಲು ಸಾಧ್ಯವಾಗದಂತಹ ಒಂದು ವಿಷಯ. ಆದರೂ ಜನರು ಅವರರವರ ಮನಸ್ಸಿಗೆ ಹಿತವೆನಿಸಿದ್ದನ್ನು "ಇದು ಸತ್ಯ" ವೆಂದು ಭಾವಿಸುತ್ತಾರೆ. ಇದು ಸಹಜ. ನನ್ನ ಮನ ಒಪ್ಪುವುದು ನನಗೆ ಸತ್ಯವಾಗಿ ತೋರುತ್ತದೆ. ನಿಮ್ಮ ಮನ ಒಪ್ಪುವುದು ನಿಮಗೆ ಸತ್ಯವಾಗಿ ತೋರುತ್ತದೆ. ಆದರೆ ನಿಜವಾಗಿ ಸತ್ಯವು ಬೇರೆಲ್ಲೋ ಇರುತ್ತದೆ. ವೇದಸುಧೆಯ ಮುಖ್ಯವಾದ ಒಂದು ಉದ್ಧೇಶವೆಂದರೆ ಯಾವುದೇ ವಿಚಾರವನ್ನು ಕುರುಡಾಗಿ ಒಪ್ಪಬಾರದು, ಅಲ್ಲದೆ ದೇವರ ಬಗ್ಗೆಯೂ ಕೂಡ ಭಯ ದೂರವಾಗಬೇಕು.ಇಂತಹ ಒಂದು ಮಾನಸಿಕತೆಯ ಜಾಗೃತಿಯಾದರೆ ಸಮಾಜಕ್ಕೆ ಅದು ಒಳ್ಳೆಯದಲ್ಲವೇ? ಪ್ರಸ್ತುತ ಚರ್ಚೆಯಲ್ಲಿರುವ ಶ್ರೀ ವಿ.ಆರ್.ಭಟ್ಟರ ಲೇಖನದ ಕೊಂಡಿ ಇಲ್ಲಿದೆ.http://vedasudhe.blogspot.com/2011/04/blog-post_25.html ಎಲ್ಲರೂ ಓದಲೇ ಬೇಕಾದ ಲೇಖನವಿದು. ದಯಮಾಡಿ ಓದಿ. ನಿಮ್ಮ ನಿಮ್ಮ ಪ್ರತಿಕ್ರಿಯೆಯನ್ನು ಕೊಡಿ. ನಿಮ್ಮ ಪ್ರತಿಕ್ರಿಯೆ ಅದು ನಿಮ್ಮ ವಿಚಾರವೂ ಆಗಬಲ್ಲದು. ಯಾರೂ ಕೂಡ ವಿಚಾರ ಭೇದವನ್ನು ವೈಯಕ್ತಿವಾಗಿ ತೆಗೆದುಕೊಳ್ಳುವುದು ಬೇಡ. ಅಂತೂ ಸತ್ಯಪಥದತ್ತ ಯಾರೂ ಕೊಂಡೊಯ್ಯಬಹುದು. ಎಲ್ಲರಿಗೂ ಬೇಕಾಗಿರುವುದು ಸತ್ಯಪಥ.

Friday, April 29, 2011
ಸಂಪ್ರದಾಯಗಳು ಸಂಕೋಲೆಗಳಾಗದಿರಲಿ
ಕೈ ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ ಮಾಡಿಸಿಕೊಂಡು ಕೆಂಪು ಅಥವಾ ಬಿಳಿ ಸೀರೆ ಉಟ್ಟುಕೊಂಡು ಕೈಗೆ ಬಳೆ ಹಾಕಿಕೊಳ್ಳದೆ ಹಣೆಗೆ ಕುಂಕುಮ ಇಟ್ಟುಕೊಳ್ಳದೆ ಒಂದು ರೀತಿಯ ಒಂಟಿ ಹಾಗೂ ಬಲವಂತದ ವೈರಾಗ್ಯದ ಜೀವನ ನಡೆಸಬೇಕಾಗಿದ್ದ ಕಾಲವಿತ್ತು. ಚಿಕ್ಕ ವಯಸ್ಸಿನಲ್ಲೇ ವಿಧವೆಯಾದವರ ಪಾಡು ಅನುಭವಿಸಿದವರಿಗೇ ಗೊತ್ತು. ಆಕೆಗೆ ಶುಭ ಕಾರ್ಯಗಳಲ್ಲಿ ಆಹ್ವಾನವಿರುತ್ತಿರಲಿಲ್ಲ. ಆಕೆ ಎದುರಿಗೆ ಬಂದರೆ ಅಪಶಕುನವೆಂದು ಭಾವಿಸುವವರಿದ್ದರು. ಹೊಸ ಪೀಳಿಗೆಯವರಿಗೆ ಇಂತಹ ಅನಿಷ್ಟ ಸಂಪ್ರದಾಯದ ಪರಿಚಯ ಇರಲಾರದು. ಪ್ರಾರಂಭದಲ್ಲಿ ಕೇಶಮುಂಡನ ಮಾಡಿಸಿಕೊಳ್ಳುವುದು ನಿಂತರೂ ಕೈಗೆ ಬಳೆ ಹಾಕಿಕೊಳ್ಳಲು, ಹಣೆಗೆ ಕುಂಕುಮ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ, ಸುಧಾರಣೆಯಾಗಿದೆ. ಕಳೆದ ಎರಡು-ಮೂರು ದಶಕಗಳಿಂದೀಚೆಗೆ ಈ ಸಂಪ್ರದಾಯದ ಆಚರಣೆ ಕಂಡು ಬರುತ್ತಿಲ್ಲ. ಒಂದು ಅನಿಷ್ಟ ಸಂಪ್ರದಾಯದ ಅಂತ್ಯವಾಗಿರುವುದು ಸಮಾಧಾನದ ಸಂಗತಿ.
ಸಂಪ್ರದಾಯವೆಂದರೆ ತಲೆ ತಲಾಂತರಗಳಿಂದ ಆಚರಿಸಿಕೊಂಡು ಬರಲಾಗುವ ಆಚರಣೆಗಳು, ನಡವಳಿಕೆಗಳು. ಸರಿಯೋ, ತಪ್ಪೋ ವಿಚಾರ ಮಾಡದೆ ಅದನ್ನು ಮುಂದುವರೆಸಿಕೊಂಡು ಬರುವವರನ್ನು ಸಂಪ್ರದಾಯವಾದಿಗಳು ಎನ್ನುತ್ತಾರೆ. ಕೆಲವನ್ನು ಆಚರಿಸಿ ಕೆಲವನ್ನು ಕೈಬಿಡುವ ಅನುಕೂಲ/ಅವಕಾಶವಾದಿಗಳೂ ಇದ್ದಾರೆ. ಅರ್ಥವಿಲ್ಲದ ಸಂಪ್ರದಾಯಗಳನ್ನು ಧಿಕ್ಕರಿಸಿ ನಡೆಯುವವರೂ ಇದ್ದಾರೆ. ಸ್ವತಃ ಸಂಪ್ರದಾಯಗಳನ್ನು ಆಚರಿಸದಿದ್ದರೂ, ಅರ್ಥವಿಲ್ಲವೆಂದು ತಿಳಿದಿದ್ದರೂ, ಇತರರ ಸಲುವಾಗಿ ಅವನ್ನು ಬೆಂಬಲಿಸುವವರ ಸಂಖ್ಯೆ ಸಹ ಗಣನೀಯವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರನ್ನೂ ಹೊಂದಿಸಿಕೊಂಡು, ಹೊಂದಿಕೊಂಡು ಸಮನ್ವಯ ಮಾಡಿ ಸದ್ವಿಚಾರ ತಿಳಿಸಲು ಹೆಣಗುವವರೂ ಇದ್ದಾರೆ. ಎಲ್ಲಾ ಸಂಪ್ರದಾಯಗಳೂ ಕೆಟ್ಟವಲ್ಲ; ಹಾಗೆಯೇ ಎಲ್ಲವೂ ಒಳ್ಳೆಯವು ಎಂದು ಹೇಳಲಾಗುವುದಿಲ್ಲ. ಯಾವ ಆಚರಣೆಗಳಿಂದ ಯಾರಿಗೂ ತೊಂದರೆಯಿಲ್ಲವೋ, ಯಾವುದರಿಂದ ಮನುಷ್ಯನ ಬೌದ್ಧಿಕ ವಿಕಾಸ, ಅಭಿವೃದ್ಧಿಗೆ ಸಹಕಾರವಾಗುವುದೋ, ಸಂತಸ ಹರಡುವುದೋ, ತಾರತಮ್ಯ ಇಲ್ಲದಿರುವುದೋ ಅಂತಹವುಗಳನ್ನು ಒಳ್ಳೆಯ ಸಂಪ್ರದಾಯಗಳೆನ್ನಬಹುದು. ಇದಕ್ಕೆ ತದ್ವಿರುದ್ಧವಾದ ಸಂಪ್ರದಾಯಗಳನ್ನು ಕೆಟ್ಟವು ಎಂದುಕೊಳ್ಳಬಹುದು. ಒಳ್ಳೆಯದಕ್ಕೋ, ಕೆಟ್ಟದಕ್ಕೋ ಗೊತ್ತಿಲ್ಲ, ಈಗಂತೂ ಹೊಸ ಹೊಸ ಸಂಪ್ರದಾಯಗಳು, ಆಚರಣೆಗಳು ಚಾಲ್ತಿಗೆ ಬರುತ್ತಿವೆ, ಹಿಂದಿನ ಅನುಭವಗಳಿಂದ ಹೇಳುವುದಾದರೆ ಕ್ರಮೇಣ ಅವು ಗಟ್ಟಿಗೊಳ್ಳುತ್ತವೆ.
ಬಾಲ ಗಂಗಾಧರನಾಥ ತಿಲಕರು ಬ್ರಿಟಿಷರ ವಿರುದ್ಧ ಜನರನ್ನು ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರೇಪಿಸುವ ಸಲುವಾಗಿ ಹುಟ್ಟುಹಾಕಿದ ಸಾರ್ವಜನಿಕ ಗಣೇಶ ಉತ್ಸವಗಳು ಇಂದು ಯಾವ ಮಟ್ಟಕ್ಕೆ ತಲುಪಿವೆ ಎಂಬುದು ವಿಚಾರ ಮಾಡಬೇಕಾದ ಸಂಗತಿಯಾಗಿದೆ. ಮೊದಲು ಊರಿಗೆ ಒಂದರಂತೆ ಇದ್ದುದು, ಈಗ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಮೂರ್ತಿಗಳನ್ನು ಇಟ್ಟು ಅಲ್ಲಿ ನಡೆಸುವ ಕಾರ್ಯಕ್ರಮಗಳು, ಪೈಪೋಟಿ, ವಂತಿಕೆ ವಸೂಲಿ, ವಿಸರ್ಜನೆ ಸಮಯದಲ್ಲಿ ಕುಡಿದು ಕುಣಿಯುವ ಯುವಕರು, ಮತೀಯ ಘರ್ಷಣೆಗಳು, ಇತ್ಯಾದಿಗಳನ್ನು ಗಮನಿಸಿದರೆ ಇವೆಲ್ಲಾ ಯಾವ ಪುರುಷಾರ್ಥಕ್ಕಾಗಿ ಎಂದು ಅನ್ನಿಸದೇ ಇರದು. ಒಳ್ಳೆಯ ರೀತಿಯಲ್ಲಿ ಆಚರಿಸುವವರು ಇದ್ದರೂ ಅಂತಹವರ ಸಂಖ್ಯೆ ಬೆರಳೆಣಿಕೆಯಷ್ಟು. ಗಣೇಶೋತ್ಸವಗಳು ಮುಗಿಯುವವರೆಗೂ ಶಾಂತಿ, ಸುವ್ಯವಸ್ಥೆಗಳಿಗಾಗಿ ಸಂಬಂಧಿಸಿದವರು ಹಗಲೂ ರಾತ್ರಿ ಹೆಣಗುವ, ಇಂತಹ ಉತ್ಸವಗಳು (ಗಣೇಶೋತ್ಸವ ಮಾತ್ರ ಅಲ್ಲ, ಎಲ್ಲಾ ಮತೀಯ/ಧಾರ್ಮಿಕ ಉತ್ಸವಗಳು ಸೇರಿ) ಏಕಾದರೂ ಬರುತ್ತವೋ ಎಂದು ಅಂದುಕೊಳ್ಳುವ ಪರಿಸ್ಥಿತಿ ಇಂದು ಇದೆ. ನಾನು ಗಣೇಶೋತ್ಸವವನ್ನಾಗಲೀ, ಇಂತಹ ಇತರ ಉತ್ಸವಗಳನ್ನಾಗಲೀ ವಿರೋಧಿಸುತ್ತಿಲ್ಲ, ಅದನ್ನು ಆಚರಿಸಲಾಗುತ್ತಿರುವ ರೀತಿಯ ಬಗ್ಗೆ ಮಾತ್ರ ಬೆರಳು ತೋರಿಸುತ್ತಿದ್ದೇನೆ.
ಸಂಕಷ್ಟಹರ ಗಣಪತಿ ಪೂಜೆಯನ್ನು ಇಂದು ಸಾಮೂಹಿಕ ಸನ್ನಿಯಂತೆ ಆಚರಿಸಲಾಗುತ್ತಿದೆ. ಆದರೆ ಎಷ್ಟು ಜನರು ಇದನ್ನು ಶ್ರದ್ಧೆಯಿಂದ ಆಚರಿಸುತ್ತಿದ್ದಾರೆ? ಹೆಚ್ಚಿನವರು ಸ್ವಸಹಾಯ ಪದ್ಧತಿಯ ಹೋಟೆಲ್ಲಿನಲ್ಲಿ ಹಣ ಕೊಟ್ಟು ಕಾಫಿ ಕುಡಿದಂತೆ ದೇವಸ್ಥಾನಕ್ಕೆ ಹೋಗಿ ಹಣ ಕೊಟ್ಟು ಚೀಟಿ ಬರೆಸಿ ಹೋಗುತ್ತಾರೆ, ಪ್ರಸಾದ ಕೊಡುವ ಸಮಯಕ್ಕೆ ಬಂದು ಕೈಮುಗಿದು ಪ್ರಸಾದ ಪಡೆದು ಹೋಗುತ್ತಾರೆ. ಪೂಜೆಯ ಸಮಯದಲ್ಲಿ ದೇವಸ್ಥಾನದಲ್ಲಿದ್ದವರೂ ಪರಸ್ಪರ ಮಾತುಕತೆಗಳಲ್ಲಿ ತೊಡಗಿರುತ್ತಾರೆ. ಇಂತಹ ಆಚರಣೆಯಿಂದ ಯಾರಿಗೆ ಪ್ರಯೋಜನ? ಯಾರ ಕಷ್ಟಗಳು ಪರಿಹಾರವಾಗುತ್ತದೆ? ಶ್ರದ್ಧೆಯಿಂದ, ಅರ್ಥ ತಿಳಿದುಕೊಂಡು ಮಾಡುವ ಕ್ರಿಯೆಗಳಿಂದ ಮಾತ್ರ ಫಲ ಸಿಗಲು ಸಾಧ್ಯವಲ್ಲವೇ? ಇಲ್ಲದಿದ್ದರೆ ಅವು ತೋರಿಕೆಗೆ ಮಾಡುವ ಆಚರಣೆಗಳು ಅಷ್ಟೆ. ಇಸ್ಲಾಮ್ ಮತ ಪ್ರಾರಂಭವಾದ ಸಂದರ್ಭದಲ್ಲಿ ಧ್ವನಿವರ್ಧಕವಿರಲಿಲ್ಲ. ಆದರೆ ಇಂದು ಎಲ್ಲಾ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಧ್ವನಿವರ್ಧಿಸಿ ನಮಾಜು, ಉಪದೇಶಗಳನ್ನು ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಅದನ್ನು ಕೇಳಲು ಇಚ್ಛಿಸದವರಿಗೂ ಬಲವಂತವಾಗಿ ಕೇಳುವಂತೆ ಮಾಡುತ್ತಿರುವುದು ಒಂದು ರೀತಿಯ ಶಬ್ದಮಾಲಿನ್ಯವಲ್ಲವೇ?
ಜಾತ್ರೆ, ಪೂಜೆ, ಇತ್ಯಾದಿಗಳ ಹೆಸರಿನಲ್ಲಿ ದೇವರನ್ನು ಸಂತುಷ್ಟಗೊಳಿಸುವ(?) ಕಾರಣದಿಂದ ಪ್ರಾಣಿಬಲಿ ನೀಡುವ ಸಂಪ್ರದಾಯ ಒಳ್ಳೆಯದೆಂದು ಹೇಳಬಹುದೆ? ಇದನ್ನು ಸಮರ್ಥಿಸುವ ಜನರಿಗೆ ಕಡಿಮೆಯೇನಿಲ್ಲ. ಶಿಕಾರಿಪುರದಲ್ಲಿ ತಾಲ್ಲೂಕು ದಂಡಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಜಾತ್ರೆಯ ಸಮಯದಲ್ಲಿ ಕೋಣಬಲಿ ತಡೆಯಲು ಒಂದು ಗ್ರಾಮದಲ್ಲಿ ಪೋಲಿಸರ ನೆರವಿನೊಂದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದರೂ, ಗ್ರಾಮಸರಿಗೆ ಕಾನೂನಿನಲ್ಲಿ ಇರುವ ನಿಷೇಧ, ಉಲ್ಲಂಘಿಸಿದರೆ ಆಗುವ ಪರಿಣಾಮಗಳು, ಇತ್ಯಾದಿ ತಿಳುವಳಿಕೆ ಹೇಳಲು ಮುಂಚಿತವಾಗಿ ನಡೆಸಿದ್ದ ಶಾಂತಿ ಸಮಿತಿ ಸಭೆಯಲ್ಲಿ ಪಶುವೈದ್ಯರ ಸಹಾಯದಿಂದ ಸಿರಿಂಜಿನಲ್ಲಿ ಕೋಣನ ರಕ್ತವನ್ನು ತೆಗೆದು ಸಾಂಕೇತಿಕವಾಗಿ ದೇವಿಗೆ ಅರ್ಪಿಸಲು ಗ್ರಾಮದ ಮುಖ್ಯಸರು ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟಿದ್ದರೂ, ಪೋಲಿಸರ ಕಣ್ಗಾವಲು ಇದ್ದರೂ ಎಲ್ಲರ ಕಣ್ಣುತಪ್ಪಿಸಿ ಕೋಣಬಲಿ ನೀಡಿದ ಪ್ರಸಂಗ ಬೇಸರ, ಮುಜುಗರ ಉಂಟುಮಾಡಿತ್ತು. ಎಲ್ಲಾ ಮಾಧ್ಯಮಗಳಲ್ಲೂ ವಿಷಯ ಅತಿರಂಜಿತವಾಗಿ ಪ್ರಚಾರಗೊಂಡಿತು. ಕೆಲವರ ಮೇಲೆ ಪ್ರಕರಣ ದಾಖಲಿಸಿದರೂ ರಾಜಕೀಯ ನಾಯಕರ ಮಧ್ಯಪ್ರವೇಶ ಪ್ರಕರಣವನ್ನು ದುರ್ಬಲಗೊಳಿಸಿದ್ದು ಸುಳ್ಳಲ್ಲ. ಈ ಪ್ರಕರಣವನ್ನು ರಾಜಕೀಯ ಮಾಡುವ ಸಲುವಾಗಿ ಪರವಾಗಿ ಮತ್ತು ವಿರೋಧವಾಗಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಬಳಸಿಕೊಂಡವು. ಅನಿಷ್ಟ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿದವರೂ ಸಾತ್ವಿಕ ಕಾರಣಕ್ಕೆ ವಿರೋಧಿಸದೆ ವಿರೋಧಿಗಳನ್ನು ವಿರೋಧಿಸಲು ಮಾತ್ರ ಬಳಸಿದ್ದು ನೋವಿನ ವಿಷಯ. ಮಾಧ್ಯಮಗಳೂ ಕೆಸರೆರಚಾಟಕ್ಕೆ ಸಾಥ್ ನೀಡಿದವೇ ಹೊರತು, ಅವುಗಳಿಗೆ ಜನರಲ್ಲಿ ತಿಳುವಳಿಕೆ ಹೆಚ್ಚಿಸುವ ಶಕ್ತಿಯಿದ್ದರೂ ಮಾಡಲಿಲ್ಲ. ಇಂತಹ ಉದಾಹರಣೆಗಳನ್ನು ಸಾಕಷ್ಟು ನೋಡಬಹುದು. ಅಂಧ ಸಂಪ್ರದಾಯಗಳ ಕುರಿತು ತಿಳಿಸುವ ಸಲುವಾಗಿ ಕೆಲವನ್ನು ಮಾತ್ರ ಸಾಂಕೇತಿಕವಾಗಿ ಉದಾಹರಿಸಿದ್ದೇನೆ.
ಸಂಪ್ರದಾಯಗಳನ್ನು ಹೇಗೆ ಆಚರಿಸಬೇಕು ಅನ್ನುವುದಕ್ಕಿಂತ ಕೆಟ್ಟ ಸಂಪ್ರದಾಯಗಳನ್ನು ಗುರುತಿಸಿ ಅವುಗಳಿಂದ ದೂರ ಉಳಿಯಲು ಮತ್ತು ಸಾಧ್ಯವಾದರೆ ತಡೆಯಲು ಪ್ರಯತ್ನಿಸುವುದು ಇಂದಿನ ಅಗತ್ಯ. ಮಠ-ಮಂದಿರಗಳು, ಮಸೀದಿಗಳು, ಚರ್ಚುಗಳು, ಇತ್ಯಾದಿಗಳು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಶ್ರದ್ಧಾ ಕೇಂದ್ರಗಳಾಗಿವೆ. ಈ ಕೇಂದ್ರಗಳು ವಾಸ್ತವವಾಗಿ ಸತ್ಕರ್ಮಗಳನ್ನು ಪೋಷಿಸುವ, ಜ್ಞಾನ ಪಸರಿಸುವ ಕೆಲಸ ಮಾಡಬೇಕು. ವಿಷಾದದ ಸಂಗತಿಯೆಂದರೆ ಹೆಚ್ಚಿನವು ಋಣಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಶೈಕ್ಷಣಿಕ, ವೈದ್ಯಕೀಯ ಸಂಸ್ಥೆಗಳನ್ನು, ಕಲ್ಯಾಣ ಮಂದಿರಗಳನ್ನು ಕಟ್ಟಿ ಹಣ ಮಾಡುವ ಕೇಂದ್ರಗಳಾಗಿವೆ. ತಿರಳಿಗಿಂತ ಸಿಪ್ಪೆಗೆ ಹೆಚ್ಚು ಮಾನ್ಯತೆ ಕೊಡಲಾಗುತ್ತಿದೆ. ನಿಜ, ತಿರುಳಿನ ರಕ್ಷಣೆಗೆ ಸಿಪ್ಪೆಯಿರಬೇಕು, ಆದರೆ ಸಿಪ್ಪೆಯೇ ತಿರುಳಾಗಬಾರದು. ಆ ಕಾರಣದಿಂದಾಗಿ ಉತ್ತರಾಧಿಕಾರಕ್ಕಾಗಿ ಕಚ್ಚಾಡುವ, ಒಡೆತನ ಸಾಧಿಸಬಯಸುವವರ ಕೂಟ ಅಲ್ಲಿ ಮನೆ ಮಾಡಿವೆ. ಮೂಲ ಉದ್ದೇಶ ಮರೆತು ಭೌತಿಕ ಆಸ್ತಿ, ಸಂಪತ್ತು ಕ್ರೋಢೀಕರಿಸಲು ನೀಡುವ ಮಹತ್ವವೇ ಇದಕ್ಕೆ ಕಾರಣವೆಂದರೆ ಅದರಲ್ಲಿ ಅತಿಶಯೋಕ್ತಿಯಿಲ್ಲ.
ನನಗೆ ಬಂದಿದ್ದ ಇ-ಮೇಲ್ ಒಂದರಿಂದ ರೂಢಿಗತ ಸಂಪ್ರದಾಯಗಳಿಗೆ ಹೇಗೆ ಮನಸ್ಸು ಒಗ್ಗಿಕೊಳ್ಳುತ್ತದೆ ಎಂಬುದಕ್ಕೆ ಅತ್ಯತ್ತಮ ಉದಾಹರಣೆ ಸಿಕ್ಕಿತು. ಅದೆಂದರೆ ಬಲಶಾಲಿ ಆನೆಯ ಕಾಲಿಗೆ ಕಬ್ಬಿಣದ ಸರಪಳಿ ಹಾಕಿ ಮರವೊಂದಕ್ಕೆ ಕಟ್ಟಿ ಹಾಕಿದರೆ ಅದು ಬಿಡಿಸಿಕೊಳ್ಳಲು ಪ್ರಯತ್ನವೇ ಮಾಡುವುದಿಲ್ಲ. ಆನೆ ಎಷ್ಟು ಬಲಶಾಲಿಯೆಂದರೆ ಅದಕ್ಕೆ ಆ ಸರಪಳಿ ಮತ್ತು ಮರ ಲೆಕ್ಕವೇ ಅಲ್ಲ. ಅದು ಮನಸ್ಸು ಮಾಡಿದರೆ ಸರಪಳಿ ತುಂಡರಿಸಬಲ್ಲದು ಮತ್ತು ಮರವನ್ನು ಕಿತ್ತು ಬಿಸಾಡಬಲ್ಲದು. ಆದರೂ ಅದು ಮಾಡುವುದಿಲ್ಲ. ಏಕೆಂದರೆ ಆನೆ ಚಿಕ್ಕದಾಗಿದ್ದಾಗ ಅದನ್ನು ಅದೇ ರೀತಿ ಕಟ್ಟಿ ಹಾಕಲಾಗುತ್ತಿತ್ತು. ಚಿಕ್ಕದಾಗಿದ್ದರಿಂದ ಅದರಿಂದ ಬಿಡಿಸಿಕೊಳ್ಳಲು ಅದು ಎಷ್ಟೇ ಪ್ರಯತ್ನಿಸಿದರೂ ಆಗ ಆಗುತ್ತಿರಲಿಲ್ಲ. ಕ್ರಮೇಣ ಅದೇ ಅಭ್ಯಾಸವಾಗಿ ಮರಕ್ಕೆ ಕಟ್ಟಿ ಹಾಕಿದರೆ ಬಿಡಿಸಿಕೊಳ್ಳಲಾಗುವುದಿಲ್ಲವೆಂಬ ಭಾವ ಗಟ್ಟಿಗೊಂಡು ಅದು ದೊಡ್ಡದಾದ ಮೇಲೂ ಹಾಗೆ ಕಟ್ಟಿಹಾಕಿದರೆ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿರಲೇ ಇರಲಿಲ್ಲ. ನಮ್ಮ ಸ್ಥಿತಿ ಸಹ ಅದೇ ರೀತಿ ಇದೆ. ನಮಗೆ ವಿಚಾರ ಮಾಡುವ ಶಕ್ತಿ ದೇವರು ಕೊಟ್ಟಿದ್ದಾನೆ. ಕೆಲವು ಸಂಪ್ರದಾಯಗಳು ಅರ್ಥಹೀನವೆಂದು ನಮಗೆ ತಿಳಿಯುತ್ತದೆ, ಮನಸ್ಸು ಮಾಡಿದರೆ ಅದನ್ನು ಧಿಕ್ಕರಿಸುವ, ಮುಂದುವರೆಸದಿರುವ ಶಕ್ತಿ ನಮಗಿದೆ, ಆದರೂ ನಾವು ಹಾಗೆ ಮಾಡುವುದಿಲ್ಲವೆಂಬುದು ವಿಷಾದದ ಸಂಗತಿ. 'ಅಪ್ಪ ಹಾಕಿದ ಆಲದಮರವೆಂದು ಅದಕ್ಕೆ ನೇಣು ಹಾಕಿಕೊಳ್ಳಲಾಗುವುದೇ' ಎಂಬ ಪ್ರಚಲಿತ ಗಾದೆ ಮಾತು ತಿಳಿಸುವುದೂ ವಿಚಾರ ಮಾಡಿ ಮುಂದುವರೆಯಿರಿ ಎಂದೇ. ಸಾರಾಸಗಟಾಗಿ ಎಲ್ಲವನ್ನೂ ತಳ್ಳಿಹಾಕಬೇಕಾಗಿಲ್ಲ. ಕುಟುಂಬಕ್ಕೆ, ಸುತ್ತಮುತ್ತಲಿನವರಿಗೆ ಹಿತವೆನಿಸುವ ಒಳ್ಳೆಯ ಸಂಪ್ರದಾಯಗಳನ್ನು ಉಳಿಸಿ ಬೆಳೆಸಬಹುದು, ಆದರೆ ಅನಿಷ್ಠ ಸಂಪ್ರದಾಯಗಳನ್ನು ನಿಲ್ಲಿಸುವ ಮತ್ತು ಸದ್ಯಕ್ಕೆ ಒಳ್ಳೆಯದೆನಿಸಿದರೂ ಕಾಲಾನುಕಾಲಕ್ಕೆ ಅದರ ಆಚರಣೆಯಿಂದ ಆಗುವ ಪರಿಣಾಮಗಳನ್ನೂ ಗಮನಿಸಿ ಯೋಗ್ಯತಾನುಸಾರ ನಿರ್ಣಯಿಸಿ ಅಂತಹವುಗಳನ್ನು ಕೈಬಿಡುವ ಬಗ್ಗೆ ನಿರ್ಧರಿಸುವುದು ಇಂದಿನ ಅಗತ್ಯವಾಗಿದೆ. ಸಂಪ್ರದಾಯಗಳು ನಮ್ಮನ್ನು ಕಟ್ಟಿಹಾಕುವ ಸರಪಳಿಗಳಾಗದಿರಲಿ; ನಮ್ಮನ್ನು ಒಳ್ಳೆಯ ದಾರಿಯಲ್ಲಿ ಮುನ್ನಡೆಸುವ ದಾರಿದೀಪಗಳಾಗಲಿ.
***************
-ಕ.ವೆಂ.ನಾಗರಾಜ್.

Subscribe to:
Posts (Atom)